ಮಂಗಳೂರು : ಹೆದ್ದಾರಿ ದುರಸ್ತಿ ಬಗ್ಗೆ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲು ನಳಿನ್‌ ಕುಮಾರ್‌ ಕಟೀಲು ಸೂಚನೆ

Wednesday, October 16th, 2019
nalin-kumar

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮತ್ತು ಇತರ ಕಾರಣಗಳಿಗೆ ಗುಂಡಿ ಬಿದ್ದಿರುವ ಹೆದ್ದಾರಿಯನ್ನು ತತ್‌ಕ್ಷಣವೇ ದುರಸ್ತಿ ಗೊಳಿಸುವ ಜತೆಗೆ ಈ ಕುರಿತ ಪ್ರಗತಿ ಪರಿಶೀಲನ ವರದಿಯನ್ನು ಜಿಲ್ಲಾಧಿಕಾರಿಗೆ ನೀಡುವಂತೆ ಸಂಸದ ನಳಿನ್‌ ಕುಮಾರ್‌ ಕಟೀಲು ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಂಗಳವಾರ ನಡೆದ ರಾಷ್ಟ್ರೀಯ ಹೆದ್ದಾರಿ ಮತ್ತು ಇತರ ರಸ್ತೆಗಳ ದುರಸ್ತಿ ಬಗ್ಗೆ ಇಲಾಖಾಧಿಕಾರಿಗಳ ಸಭೆಯಲ್ಲಿ ಸಂಸದರು ಈ ಸೂಚನೆ ನೀಡಿದ್ದಾರೆ. ಬಿ.ಸಿ. ರೋಡ್‌ನಿಂದ ಸುರತ್ಕಲ್‌ವರೆಗಿನ ಹೆದ್ದಾರಿ ಹದಗೆಟ್ಟಿದ್ದು, ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಳೆ ಕಡಿಮೆಯಾದರೂ […]

ದ.ಕ. ಬಸ್ಸು ಮಾಲಕರ ಸಂಘ ಹಾಗೂ ಕೆನರಾ ಬಸ್ಸು ಮಾಲಕರ ಸಂಘದಿಂದ ಹೆದ್ದಾರಿ ದುರಸ್ತಿಗೆ ಆಗ್ರಹ

Monday, October 25th, 2010
ದ.ಕ. ಬಸ್ಸು ಮಾಲಕರ ಸಂಘ ಹಾಗೂ ಕೆನರಾ ಬಸ್ಸು ಮಾಲಕರ ಸಂಘ

ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಪಂಪುವೆಲ್ ನಿಂದ ತಲಪಾಡಿವರೆಗೆ ರಸ್ತೆಗಳಲ್ಲಿ ಭಾರಿ ಗಾತ್ರದ ಹೊಂಡಗಳು ಬಿದ್ದಿದ್ದು ರಸ್ತೆಗಳು ಹೆಚ್ಚು ಕಡಿಮೆ ಸಂಪೂರ್ಣ ಕೆಟ್ಟು ಹೋಗಿವೆ. ಮಾತ್ರವಲ್ಲದೆ ನೇತ್ರಾವತಿ ಸೇತುವೆ ಮೇಲಿನ ಕಾಂಕ್ರೀಟ್ ಅಲ್ಲಲ್ಲಿ ಹೊಂಡ ಬಿದ್ದು ಕಬ್ಬಿಣದ ರಾಡ್ಗಳು ಮೇಲೆ ಬಂದು ಮಳೆ ನೀರು ಕಾಂಕ್ರೀಟ್ನ ಒಳ ಭಾಗಕ್ಕೆ ಹರಿಯುತ್ತಿದ್ದು ಯಾವುದೇ ಸಂದರ್ಭದಲ್ಲಿ. ಸೇತುವೆ ಬಿರುಕು ಬಿದ್ದು ಅಪಾಯವಾಗುವ ಸಂಭವವಿದೆ ಎಂದು ಕೆನರಾ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾದ ಶ್ರೀ ರಾಜವರ್ಮ ಬಲ್ಲಾಳ್ ಇಂದು ನಗರದ ವುಡ್ ಲ್ಯಾಂಡ್ಸ್ […]