ವೆನ್ ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ 19 ಬಗ್ಗೆ ಮಾಹಿತಿ ನೀಡಲು ಅಲ್ಲಲ್ಲಿ ಹೆಲ್ಪ್ ಡೆಸ್ಕ್
Tuesday, March 24th, 2020ಮಂಗಳೂರು : ವೆನ್‍ಲಾಕ್ ಆಸ್ಪತ್ರೆಯಲ್ಲಿ ಕೋವಿಡ್-19 ಸಂಶಾಯಾಸ್ಪದ ಪ್ರಕರಣಗಳಿಗೆ 8 ವಿಶೇಷ ಪ್ರತ್ಯೇಕ ಕೊಠಡಿಗಳನ್ನು ಕಾದಿರಿಸಲಾಗಿದೆ. ಸಂಶಯಾಸ್ಪದ ಪ್ರಕರಣಗಳು ಬಂದರೆ, ಅಂತಹ ರೋಗಿಗಳನ್ನು ಈ ಕೊಠಡಿಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬೊಬ್ಬರನ್ನು ಒಂದೊಂದು ಕೊಠಡಿಗೆ ಕಾದಿರಿಸಿ ದಾಖಲಿಸಲಾಗುತ್ತಿದೆ. ಅವರ ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಪರೀಕ್ಷೆ ನೆಗೆಟಿವ್ ಬಂದರೆ ಅವರಿಗೆ 14 ದಿನಗಳ ನಿಗಾವಣೆಯಲ್ಲಿರಲು ಸೂಚನೆ ನೀಡಿ ಮನೆಗೆ ಕಳುಹಿಸಲಾಗುತ್ತಿದೆ. ಪೊಸಿಟಿವ್ ಬಂದರೆ, ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗದರ್ಶಿಯಂತೆ ಚಿಕಿತ್ಸೆ ಕೊಡಲಾಗುತ್ತದೆ. ಇದಕ್ಕಾಗಿ ಮಾನ್ಯ ಜಿಲ್ಲಾಧಿಕಾರಿಗಳ ಆದೇಶದಂತೆ, […]