ಬಂಟರ ಮಾತೃ ಸಂಘದಿಂಧ ಮಾಧ್ಯಮ ಅಕಾಡೆಮಿ ಪುರಸ್ಕೃತ ಬಾಳರಿಗೆ ಸನ್ಮಾನ

Friday, May 25th, 2018
sathish-patla

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ ಆಶ್ರಯದಲ್ಲಿ ಇತ್ತೀಚೆಗೆ ಅಡ್ಯಾರ್ ಗಾರ್ಡನ್‌ನಲ್ಲಿ ನಡೆದ ವಾರ್ಷಿಕ ಸರ್ವ ಸದಸ್ಯರ ಸಭೆ ಮತ್ತು ಬಹಿರಂಗ ಅಧಿವೇಶನ ಸಮಾರಂಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಅವರನ್ನು ಮಾಜಿ ಲೋಕಾಯುಕ್ತ ಜಸ್ಟೀಸ್ ಎನ್ ಸಂತೋಷ್ ಹೆಗ್ಡೆ ಅವರು ಚಿನ್ನದ ಪದಕ ನೀಡಿ ಸನ್ಮಾನಿಸಿದರು. ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಉಪಾಧ್ಯಕ್ಷ ಕೆಂಚನೂರು ಸೋಮಶೇಖರ […]

ಪುತ್ತೂರು ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ, ಕಾಂಗ್ರೆಸ್ಸ್ ಕಾರ್ಯಕರ್ತರು ತಟಸ್ಥ

Friday, May 4th, 2018
hemanath shetty

ಪುತ್ತೂರು : ಈ ಬಾರಿ ಪುತ್ತೂರು ಕಾಂಗ್ರೆಸ್ಸ್ ನಲ್ಲಿ ಎರಡು ಬಣಗಳಾಗಿದ್ದು, ಪಕ್ಷದೊಳಗೆ ಶಕುಂತಳಾ ಶೆಟ್ಟಿಯವರನ್ನು ಸೋಲಿಸಲು ರಣತಂತ್ರ ನಡೆಯುತ್ತಿದೆ. ಅದನ್ನು ಸರಿಪಡಿಸಲು ಪುತ್ತೂರು ಚುನಾವಣಾ ಕಚೇರಿಯಲ್ಲಿ ಗುರುವಾರ ನಡೆದ ಸಭೆಗೆ ದ.ಕ ಜಿಲ್ಲಾ ಕಾಂಗ್ರೆಸ್ಸ್ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ, ಮೈಸೂರು ವಿಭಾಗದ ಉಸ್ತುವಾರಿ ವಿಷ್ಣುನಾಥನ್ ಆಗಮಿಸಿದ್ದರು. ಅದರೂ ಭಿನ್ನಮತೀಯರು ಬಾರದೆ ಸಂಧಾನ ವಿಫಲಗೊಂಡಿದೆ. ಕಾವು ಹೇಮನಾಥ ಶೆಟ್ಟಿಯವರು ಹಾಗೂ ಪುತ್ತೂರು ನಗರಸಭೆಯ ಸದಸ್ಯರು ಶಕುಂತಳಾ ಶೆಟ್ಟಿಯವರನ್ನು ಬೆಂಬಲಿಸದೆ, ಪಚಾರಕ್ಕೂ ಹೋಗದೆ […]

ಅಡಿಕೆ ಕ್ಯಾನ್ಸರ್‌ ಕಾರಕ ವರದಿ ಹಿಂಪಡೆವ ತನಕ ಹೋರಾಟ: ಐವನ್‌ ಡಿ’ಸೋಜಾ

Friday, March 9th, 2018
ivan-desouza

ಸುಳ್ಯ: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ವರದಿಯನ್ನು ಹಿಂಪಡೆಯುವ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿಕೆ ನೀಡಬೇಕು. ಈ ಕುರಿತು ಸ್ಪಷ್ಟ ನಿಲುವು ವ್ಯಕ್ತಪಡಿಸದೇ ಇದ್ದರೆ ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಅಡಿಕೆ ಬೆಳೆಗಾರರನ್ನು ಸೇರಿಸಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್‌ ಡಿ’ಸೋಜಾ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡಿಕೆ ವಿಷಕಾರಕ ಎಂದು ಕೇಂದ್ರ ಆರೋಗ್ಯ ಸಚಿವರು ಲೋಕಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಈ ಬಗ್ಗೆ […]