Blog Archive

ದಯವಿಟ್ಟು ನಿಮ್ಮ ಹಣ ತೆಗೆದುಕೊಂಡುಬಿಡಿ : ವಿಜಯ್ ಮಲ್ಯ

Saturday, February 15th, 2020
vijay

ಲಂಡನ್ : ವಿವಿಧ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂ ಸಾಲದ ಬಾಕಿ ಉಳಿಸಿಕೊಂಡು ಬ್ರಿಟನ್ ದೇಶಕ್ಕೆ ಹೋಗಿ ನೆಲಸಿರುವ ವಿಜಯ್ ಮಲ್ಯ ಈಗ ಬ್ಯಾಂಕುಗಳಿಗೆ ಹಣ ವಾಪಸ್ ಕೊಡುವುದಾಗಿ ಮತ್ತೊಮ್ಮೆ ಹೇಳಿದ್ಧಾರೆ. ವಿಜಯ್ ಮಲ್ಯ ಈ ಹಿಂದೆಯೂ ತಾನು ಬ್ಯಾಂಕುಗಳ ಬಾಕಿ ಹಣ ಹಿಂದಿರುಗಿಸುತ್ತೇನೆ ಎಂದು ಕೆಲ ಬಾರಿ ಹೇಳಿದ್ದುಂಟು. ನಿನ್ನೆ ಅವರು ಬ್ರಿಟನ್ ಉಚ್ಚ ನ್ಯಾಯಾಲಯದ ಬಳಿ ಈ ವಿಚಾರವನ್ನು ಅರಿಕೆ ಮಾಡಿಕೊಂಡಿದ್ದಾರೆ. ಭಾರತಕ್ಕೆ ಹಸ್ತಾಂತರಿಸಬೇಡಿ ಎಂದು ಅವರು ಬ್ರಿಟಿಷ್ ಹೈಕರ್ಟ್ಗೆ ಮನವಿ ಮಾಡಿಕೊಂಡಿದ್ದರು. ಅವರ […]

ಜನರ ಪ್ರೀತಿ, ಪೂಜೆ, ಹರಕೆಯಿಂದ ಫಲ ಸಿಕ್ಕಿದೆ : ಡಿ.ಕೆ ಶಿವಕುಮಾರ್

Friday, November 15th, 2019
DKShiv-Kumar

ನವದೆಹಲಿ : ಕಾನೂನು ಮತ್ತು ಸಮಯ ಉತ್ತರ ಕೊಡುತ್ತೆ ಅಂತಾ ಮೊದಲೇ ಹೇಳಿದ್ದೆ. ನ್ಯಾಯಬದ್ಧ ವ್ಯವಹಾರಗಳನ್ನು ಮಾಡಿದ್ದೇವೆ, ಹೀಗಾಗಿ ನ್ಯಾಯವಾಗಿ ಹೋರಾಡಿದ್ದೇವೆ. ರಾಜ್ಯದ ಜನರ ಪ್ರೀತಿ, ಪೂಜೆ, ಹರಕೆಗೆ ಈಗ ಫಲ ಸಿಕ್ಕಿದೆ ಎಂದು ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಲಯದ ಬಗ್ಗೆ ನಂಬಿಕೆ ಇದೆ. ಇಡಿ ಅವರು ಪ್ರಯತ್ನ ಮಾಡ್ತಿದ್ದಾರೆ. ಅವರು ತಪ್ಪು ಎಂದು […]

ಐಎಂಎ ವಂಚನೆ ಪ್ರಕರಣ : ಜಾಮೀನು ಪಡೆದು ಹೊರ ಬಂದ ಆರೋಪಿಗೆ ಅದ್ಧೂರಿ ಸ್ವಾಗತ; ಸಾರ್ವಜನಿಕರಿಂದ ತೀವ್ರ ಟೀಕೆ

Wednesday, October 16th, 2019
muzaahiddin

ಬೆಂಗಳೂರು : ಐಎಂಎ ವಂಚನೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮುಜಾಹಿದ್ದೀನ್ ಜಾಮೀನು ಪಡೆದು ಹೊರ ಬಂದ ಬಳಿಕ ಅದ್ಧೂರಿ ಸ್ವಾಗತ ದೊರೆತಿದೆ. ಮುಜಾಹಿದ್ದೀನ್ಗೆ ಸ್ವಾಗತ ಮಾಡುವ ವೇಳೆ ಬೆಂಬಲಿಗರು ಸಂಭ್ರಮಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದಕ್ಕೆ ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ಬೆಂಬಲಿಗರು ಫ್ರೆಜರ್ ಟೌನ್ ನಲ್ಲಿ ಪಟಾಕಿ‌ ಸಿಡಿಸಿ ಹಾರ ಹಾಕಿ ಸ್ವಾಗತಿಸಿದ್ದಾರೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೈಕೋರ್ಟ್ ಏಕಸದಸ್ಯ ಪೀಠ ಮುಜಾಹಿದ್ದೀನ್ ಗೆ ಜಾಮೀನು ನೀಡಿತ್ತು. ಆತ ಅ.11ರಂದು ಜೈಲಿನಿಂದ ಬಿಡುಗಡೆಯಾಗಿದ್ದ. […]

ಡಿ.ಕೆ.ಶಿವಕುಮಾರ್​ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

Monday, October 14th, 2019
DKShivkumar

ನವ ದೆಹಲಿ : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಾಳೆಗೆ ಮುಂದೂಡಿದ್ದು ಅಲ್ಲಿಯವರೆಗೆ ಅವರು ತಿಹಾರ್ ಜೈಲಿನಲ್ಲಿಯೇ ಇರಬೇಕಾಗಿದೆ. ವಕೀಲ ಅಭಿಷೇಕ್ ಮನುಸಿಂಘ್ವಿ ಕೋರ್ಟ್ಗೆ ತೆರಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮಧ್ಯಾಹ್ನ 3.30 ಕ್ಕೆ ಮುಂದೂಡಲಾಯಿತು. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ಇದ್ದಾರೆ. ಇಡಿ ವಿಶೇಷ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದ ಹಿನ್ನೆಲೆಯಲ್ಲಿ ಈಗ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.  

ಇಂದು ದೆಹಲಿ ಹೈಕೋರ್ಟ್ ನಲ್ಲಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ

Monday, October 14th, 2019
DKShi

ನವ ದೆಹಲಿ : ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ದೆಹಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಡಿ ಕೆ ಶಿವಕುಮಾರ್ ಸದ್ಯ ತಿಹಾರ್ ಜೈಲಿನಲ್ಲಿದ್ದಾರೆ. ಸೋಮವಾರ ಬೆಳಿಗ್ಗೆ ದೆಹಲಿ ಉಚ್ಛ ನ್ಯಾಯಾಲಯದ ಎದುರು ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಗೆ ಬರಲಿದ್ದು, ಮಾಜಿ ಸಚಿವರ ಪರ ಮೂರು ಹಿರಿಯ ವಕೀಲರು ವಾದ ಮಂಡಿಸುವ ಸಾಧ್ಯತೆ ಇದೆ […]

ಐಎನ್ ಎಕ್ಸ್ ಮೀಡಿಯಾ ಪ್ರಕರಣ : ಚಿದಂಬರಂ ಜಾಮೀನು ಅರ್ಜಿ ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್

Monday, September 30th, 2019
P.Chidambaram

ನವದೆಹಲಿ : ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ವಿತ್ತ ಸಚಿವ ಪಿ.ಚಿದಂಬರಂಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ಕಳೆದ ಒಂದು ತಿಂಗಳಿನಿಂದ ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಚಿದಂಬರಂ ತಿಹಾರ್ ಜೈಲಿನಲ್ಲಿ ಕಾಲಕಳೆಯುತ್ತಿದ್ದಾರೆ. ಪ್ರಕರಣದ ಕುರಿತಂತೆ ಸಿಬಿಐ ಚಿದಂಬರಂ ವಿಚಾರಣೆ ಪೂರ್ಣಗೊಂಡ ನಂತರ ತಿಹಾರ್ ಜೈಲಿನಲ್ಲಿದ್ದು, ಈವರೆಗೆ ಜಾಮೀನು ಸಿಕ್ಕಿಲ್ಲ. ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆಯನ್ನು ತಳ್ಳಿಹಾಕಿರುವ ಹೈಕೋರ್ಟ್, ಮಿ.ಚಿದಂಬರಂ ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ […]

ಕರ್ನಾಟಕ ಹೈಕೋರ್ಟ್ ಗೆ ಉಗ್ರರಿಂದ ಬಾಂಬ್ ಬೆದರಿಕೆ ಪತ್ರ

Saturday, September 21st, 2019
high-court

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಉಗ್ರರು ಬೆದರಿಕೆ ಪತ್ರ ರವಾನಿಸಿದ್ದಾರೆ. ಕೇವಲ ಒಂದು ತಿಂಗಳ ಹಿಂದೆ ಬೆಂಗಳೂರಿಗೆ ಉಗ್ರರು ಬಂದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು. ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿತ್ತು. ಇದೀಗ ಕರ್ನಾಟಕ ಹೈಕೋರ್ಟ್‌ಗೆ ಬಾಂಬ್ ಇಡುವುದಾಗಿ ಉಗ್ರರು ಬೆದರಿಕೆ ಪತ್ರವೊಂದನ್ನು ರವಾನಿಸಿದ್ದಾರೆ. ಹೈಕೋರ್ಟ್ ರಿಜಿಸ್ಟ್ರಾರ್ಗೆ ಇತ್ತೀಚೆಗೆ ಪತ್ರ ಒಂದು ಬಂದಿತ್ತು. ಪತ್ರದಲ್ಲಿ ‘ಹೈಕೋರ್ಟ್ ಕಟ್ಟಡ ಸೇರಿ ಬೆಂಗಳೂರಿನ ಹಲವು ಕಡೆಗಳಲ್ಲಿ ಬಾಂಬ್ ಸ್ಫೋಟ ಮಾಡುತ್ತೇವೆ. ನಾನು ಅಂತಾರಾಷ್ಟ್ರೀಯ […]

ಸಮನ್ಸ್ ಗೆ ಸಂಬಂಧಿಸಿದಂತೆ ಮಧ್ಯಂತರ ರಕ್ಷಣೆ ಕೊಡಿ : ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಡಿಕೆ ಶಿವಕುಮಾರ್

Friday, August 30th, 2019
DK-shiv-kumar

ಬೆಂಗಳೂರು : ಆದಾಯ ತೆರಿಗೆ ಇಲಾಖೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಇ.ಡಿ. ಸಮನ್ಸ್ ನೀಡಿದ್ದು, ಮೇಲ್ಮನವಿ ಸಲ್ಲಿಸಲು ನಮಗೆ ಕಾಲಾವಕಾಶ ಬೇಕು. ಅಲ್ಲಿವರೆಗೆ ಡಿಕೆ ಶಿವಕುಮಾರ್ ಅವರನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಬೇಕೆಂದು ಕೋರಿ ಡಿಕೆಶಿ ಪರ ವಕೀಲರಾದ ಬಿವಿ ಆಚಾರ್ಯ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಜಾರಿಗೊಳಿಸಿದ್ದ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ನ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿತ್ತು. […]

ಅ. 31ರೊಳಗೆ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ : ಹೈಕೋರ್ಟ್‌ ನಿರ್ದೇಶನ

Wednesday, August 28th, 2019
mangalore

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಪ್ರಕ್ರಿಯೆಯನ್ನು ಅ. 31ರೊಳಗೆ ಪೂರ್ಣಗೊಳಿಸಿ, ನ. 15ರೊಳಗೆ ಹೊಸ ಆಡಳಿತ ವ್ಯವಸ್ಥೆ ಜಾರಿಗೆ ತರಲು ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ಮಂಗಳವಾರ ನಿರ್ದೇಶನ ನೀಡಿದೆ. ಮಂಗಳೂರಿನ ಅಬ್ದುಲ್‌ ಫಾರೂಕ್‌ ಮತ್ತು ಇತರರು ಹೈಕೋರ್ಟ್‌ಗೆ ಸಲ್ಲಿಸಿದ ಪಿಐಎಲ್‌ ವಿಚಾರಣೆ ನಡೆಸಿ ಹೈಕೋರ್ಟ್‌ ಈ ನಿರ್ದೇಶನ ನೀಡಿದೆ. ಸರಕಾರ ಪ್ರಕಟಿಸಿದ ಮೀಸಲಾತಿ ಸರಿಯಾಗಿದೆ ಎಂದು ಹೈಕೋರ್ಟ್‌ ದ್ವಿಸದಸ್ಯ ಪೀಠ ಈಗಾಗಲೇ ಆದೇಶ ನೀಡಿದ್ದರೂ ಆಯೋಗ ಪಾಲಿಕೆ ಚುನಾವಣೆ ನಡೆಸಿಲ್ಲ. ಪಾಲಿಕೆಗೆ ಆಡಳಿತಾಧಿಕಾರಿ […]

ಮಂಗಳೂರು ಪಾಲಿಕೆಯ ಮೀಸಲಾತಿ ಅಧಿಸೂಚನೆ ರದ್ದುಗೊಳಿಸಿದ ಹೈಕೋರ್ಟ್‌

Tuesday, January 15th, 2019
mcc election

ಮಂಗಳೂರು  : ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ವಾರು ಮೀಸಲಾತಿ ನಿಗದಿಗೊಳಿಸಿ ರಾಜ್ಯ ಸರಕಾರ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಗೊಳಿಸಿ ಹೈಕೋರ್ಟ್‌ ಆದೇಶ ಹೊರಡಿಸಿರುವುದರ ಪರಿಣಾಮ, ಇದೀಗ ಪಾಲಿಕೆಯ ಚುನಾವಣೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯ ಸರಕಾರ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್‌ ಜನವರಿ 28ರೊಳಗೆ ಮೀಸಲಾತಿ ಮರು ನಿಗದಿಗೊಳಿಸುವಂತೆ ಸರಕಾರಕ್ಕೆ ಸೋಮವಾರ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಸರಕಾರವು ಮುಂದಿನ ಎರಡು ವಾರಗಳೊಳಗೆ ಈ ವಾರ್ಡ್‌ವಾರು ಮೀಸಲಾತಿ ವಿಚಾರದಲ್ಲಿ ಒಂದು ಮಹತ್ವದ ತೀರ್ಮಾನಕ್ಕೆ ಬರಬೇಕಾಗಿದೆ. […]