ಪ್ರತಿಫಲಾಪೇಕ್ಷೆ ಇಲ್ಲದೇ ಕಾಡಿನಲ್ಲಿ ಗಿಡ ಬೆಳೆಸಿ ಹಸಿರು ಕ್ರಾಂತಿ ಮಾಡಿದ ಹೊನ್ನಳ್ಳಿಯ ತುಳಸಿ ಗೌಡ ನಿಧನ

Monday, December 16th, 2024
Tulasi-gowda

ಕಾರವಾರ : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ ಅವರು ಸೋಮವಾರ ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ತುಳಸಿ ಗೌಡ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಹಾಲಕ್ಕಿ ಬುಡಕಟ್ಟು ಜನಾಂಗದ ಮಹಿಳೆಯಾಗಿರುವ ಇವರಿಗೆ ಸುಬ್ರಾಯ ಮತ್ತು ಸೋಮಿ ಎಂಬ ಇಬ್ಬರು ಮಕ್ಕಳಿದ್ದಾರೆ. ನಾಲ್ಕು ಜನ ಮೊಮ್ಮಕ್ಕಳನ್ನು ಅಗಲಿದ್ದಾರೆ. ವರ್ಷಕ್ಕೆ ಮೂವತ್ತು ಸಾವಿರಕ್ಕೂ ಹೆಚ್ಚು ಸಸಿಗಳನ್ನು ತುಳಸಿ ಗೌಡ ಅವರು ನೆಟ್ಟು ಬೆಳಸುತ್ತಿದ್ದರು. ಈವರೆಗೆ ಲಕ್ಷಾಂತರ […]