ಮುಡಿಪು ಅಕ್ರಮ ಗಣಿಗಾರಿಕಾ ಪ್ರದೇಶಕ್ಕೆ ಸಚಿವ ಸಿ.ಸಿ. ಪಾಟೀಲ್ ಭೇಟಿ

Thursday, January 7th, 2021
CC Pateel

ಕೊಣಾಜೆ : ಕರ್ನಾಟಕ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ. ಪಾಟೀಲ್ ರವರು ಮುಡಿಪು ಸಮೀಪದ ಬಾಳೆಪುಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಂಡಿಕಟ್ಟ ಗಣಿಗಾರಿಕೆ ಚಟುವಟಿಕೆ ಪ್ರದೇಶಕ್ಕೆ  ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದು ಗ್ರಾಮೀಣ ಪ್ರದೇಶವಾಗಿದ್ದು, ಈಗಾಗಲೇ ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಲಾಗಿದೆ. ನೆಲಸಮತಟ್ಟು ಮಾಡಲು ಪರವಾನಿಗೆ ಪಡೆದುಕೊಂಡು ಅದಕ್ಕಿಂತ ವಿಸ್ತಾರವಾದ ಜಾಗದಲ್ಲಿ ಸಮತಟ್ಟು ಮಾಡಿ, ಮಣ್ಣು ಸಾಗಾಟ ಮಾಡಿದ ಆರೋಪ‌ ಕೇಳಿ ಬಂದಿದೆ. ಅದಕ್ಕಾಗಿ ಕಾನೂನು ಕ್ರಮ ತೆಗೆದುಕೊಂಡು […]

ಮುಡಿಪು ಭಾಗದಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರು ಶಾಸಕ ಯು.ಟಿ.ಖಾದರ್ ಸಂಬಂಧಿಗಳು !

Monday, October 19th, 2020
Rajesh Naik

ಮಂಗಳೂರು: ಮಾಜಿ ಸಚಿವರಾದ ಬಿ.ರಮಾನಾಥ ರೈ  ಆರೋಪಕ್ಕೆ ಉತ್ತರಿಸಿದ ಬಂಟ್ವಾಳ ಶಾಸಕ ಉಳಿಪಾಡಿಗುತ್ತು ರಾಜೇಶ್ ನಾಯ್ಕ್,  ನಾನು ಕೆಂಪು ಕಲ್ಲು ಗಣಿಗಾರಿಕೆ ಮಾಡುತ್ತಿಲ್ಲ. ನನ್ನ ಸಂಬಂಧಿಕರು ಕೂಡಾ ಅಂತಹ ವ್ಯವಹಾರದಲ್ಲಿ ತೊಡಗಿಸಿಕೊಂಡಿಲ್ಲಎಂದು ಹೇಳಿದ್ದಾರೆ. ಅವರು ಸೋಮವಾರ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಡಿಪು ಪ್ರದೇಶ ಬಂಟ್ವಾಳ ತಾಲೂಕು ಸರಹದ್ದಿನಲ್ಲಿದ್ದರೂ ಮಂಗಳೂರು ವಿಧಾನ ಸಭಾ ಕ್ಷೇತ್ರಕ್ಕೆ ಒಳಪಟ್ಟಿದೆ. ಅದು ನನ್ನ ಕ್ಷೇತ್ರದಲ್ಲಿ ಇಲ್ಲ,  ಬಿ.ರಮಾನಾಥ ರೈಯವರು ಸುದ್ದಿಗೋಷ್ಠಿಯಲ್ಲಿ ಆಡಳಿತ ಪಕ್ಷದ ಶಾಸಕರೊಬ್ಬರು ಅಕ್ರಮ ಕೆಂಪು ಕಲ್ಲು ಗಣಿಗಾರಿಕೆಯಲ್ಲಿ ತೊಡಗಿದ್ದಾರೆ. […]

ಬಿಜೆಪಿಯ ದಕ್ಷಿಣ ಭಾರತದ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ ಭಾನುವಾರ ಪದತ್ಯಾಗ

Friday, July 29th, 2011
cm Yeddyurappa/ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು : ಲೋಕಾಯುಕ್ತ ವರದಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪವಾದ ಬಳಿಕ ಹುದ್ದೆ ತೊರೆಯುವಂತೆ ಹೈಕಮಾಂಡ್‌ನಿಂದ ಸೂಚನೆ ಬಂದ ಬಳಿಕ ಅವರು ಮೊದಲ ಬಾರಿ ಮೌನ ಮುರಿದು ಪಕ್ಷದ ನಿರ್ದೇಶನಕ್ಕೆ ಮಣಿದು ಭಾನುವಾರ (ಜು.31)ರಂದು ಪದತ್ಯಾಗ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು ಶೂನ್ಯದಿಂದ ಕಟ್ಟಿ ಬೆಳೆಸಿದ್ದೇನೆ ಮತ್ತು ಭವಿಷ್ಯದಲ್ಲಿ ಕೂಡ ಪಕ್ಷಕ್ಕಾಗಿ ದುಡಿಯಲು ಸಿದ್ಧ ಎಂದು ಹೇಳಿದ್ದಾರೆ. ತಾನು ಬಿಜೆಪಿಯ ಶಿಸ್ತಿನ ಸಿಪಾಯಿಯಾಗಿದ್ದು, ಆಷಾಢ ಮಾಸವು ಜು.30ರಂದು ಕೊನೆಗೊಳ್ಳುತ್ತದೆ. ಅದರ ಬಳಿಕ ಆ.31ರಂದು ರಾಜೀನಾಮೆ ನೀಡುವುದಾಗಿ […]

ಬಿ.ಎಸ್.ಯಡಿಯೂರಪ್ಪ ಉತ್ತರ ಸಮಾಧಾನ ತಂದಿಲ್ಲ : ಹಂಸರಾಜ್

Monday, December 20th, 2010
ರಾಜ್ಯಪಾಲ ಹಂಸರಾಜ್ ಮತ್ತು ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ರಾಜ್ಯಪಾಲರು ಅಕ್ರಮ ಗಣಿಗಾರಿಕೆ ಮತ್ತು ಭೂ ಹಗರಣದ ಕುರಿತು ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಉತ್ತರ ಸಮಾಧಾನ ತಂದಿಲ್ಲ. ಹಾಗಾಗಿ ಸ್ಪಷ್ಟ ಉತ್ತರಕ್ಕಾಗಿ ಮತ್ತೆ ಪತ್ರ ಬರೆಯುವುದಾಗಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿದ್ದಾರೆ. ಒಂದೆಡೆ ಅಕ್ರಮ ಗಣಿಗಾರಿಕೆ ನಡೆದಿಲ್ಲ ಅಂತಾರೆ. ಆದರೆ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದ ಕೋಟಿ, ಕೋಟಿ ಲೂಟಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಹೇಳುತ್ತಾರೆ. ಆ ನಿಟ್ಟಿನಲ್ಲಿ ನಾನು ರಾಜ್ಯದ ರಾಜ್ಯಪಾಲನಾಗಿ ಉತ್ಸವ ಮೂರ್ತಿಯಂತಿರಲು ಸಾಧ್ಯವಿಲ್ಲ. ಸಂವಿಧಾನಬದ್ಧವಾಗಿ ನಾನು ಕರ್ತವ್ಯ […]