ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ‌ ಡಾ.ಎಚ್.ಎಲ್.ನಾಗರಾಜ್

Wednesday, November 10th, 2021
HLNagaraj

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ‌ ಹಿರಿಯ ಕೆಎಎಸ್ ಅಧಿಕಾರಿ ಡಾ.ಎಚ್.ಎಲ್.ನಾಗರಾಜ್ ಅವರನ್ನು ನೇಮಕ‌ ಮಾಡಿ‌ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಾಗರಾಜ್ ಅವರು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಸ್ತುತ ಅಪರ‌ ಜಿಲ್ಲಾಧಿಕಾರಿಯಾಗಿರುವ ಡಾ. ಪ್ರಜ್ಞಾ ಅಮ್ಮೆಂಬಳ ಅವರ‌ ಸ್ಥಾನವನ್ನು ನಾಗರಾಜ್ ವಹಿಸಲಿದ್ದಾರೆ. ಪ್ರಜ್ಞಾ ಅವರಿಗೆ ಇನ್ನಷ್ಟೇ ಹುದ್ದೆ ನಿಯೋಜನೆಯಾಗಬೇಕಿದೆ.

ವಿಕಲಚೇತನರು ಸರ್ಕಾರದ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು -ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪಾ

Saturday, December 5th, 2020
vikachethanara

ಮಂಗಳೂರು : ಸರ್ಕಾರ ವಿಕಲಚೇತನರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರ ಸದ್ಭಳಕೆಯನ್ನು ಮಾಡಿಕೊಳ್ಳುವುದರೊಂದಿಗೆ ಸ್ವಾವಲಂಭಿಗಳಾಗಬೇಕೆಂದು ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪಾ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲಯನ್ಸ್ ಕ್ಲಬ್ ಗಾಂಧಿನಗರ ಹಾಗೂ ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ವಿಶ್ವ ವಿಕಲಚೇತನರ ದಿನಾಚರಣೆಯನ್ನು […]

ಅಪರ ಜಿಲ್ಲಾಧಿಕಾರಿ ಡಾ ಕುಮಾರ್ – ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ

Thursday, January 24th, 2019
Dr. Kumar

ಮಂಗಳೂರು : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2018 ರ ಪ್ರಕ್ರಿಯೆಯಲ್ಲಿ ಅತ್ಯುತ್ತಮವಾಗಿ ಚುನಾವಣಾ ಕಾರ್ಯವನ್ನು ನಿರ್ವಹಿಸಿದ್ದಕ್ಕಾಗಿ, ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಡಾ ಕುಮಾರ್ ಕೆ.ಎ.ಎಸ್ ರವರು ಅತ್ಯುತ್ತಮ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಎಂಬ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜನವರಿ 25 ರಂದು ಬೆಂಗಳೂರಿನಲ್ಲಿ ಗೌರವಾನ್ವಿತ ಘನತೆವೆತ್ತ ರಾಜ್ಯಪಾಲರು ಡಾ. ಕುಮಾರ್ ಕೆ.ಎ.ಎಸ್ ರವರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ಜನಗಣತಿ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ: ಅಪರ ಜಿಲ್ಲಾಧಿಕಾರಿ

Wednesday, February 2nd, 2011
ಪ್ರಭಾಕರ ಶರ್ಮಾ

ಮಂಗಳೂರು : ಫೆಬ್ರವರಿ 9 ರಿಂದ ಫೆಬ್ರವರಿ 28 ರವರೆಗೆ ಭಾರತ ಜನಗಣತಿ-2011 ನಡೆಯಲಿದ್ದು, ಎಲ್ಲ ಇಲಾಖೆಗಳ ಸಹಕಾರವನ್ನು ಜನಗಣತಿ ನಿರ್ದೇಶಾನಲಯ ಕೋರಿದೆ ಎಂದು ಅಪರ ಜಿಲ್ಲಾಧಿಕಾರಿ ಶ್ರೀ ಪ್ರಭಾಕರ ಶರ್ಮಾ ಅವರು ಹೇಳಿದರು. ಅವರಿಂದು ಜನಗಣತಿ ನಿರ್ದೇಶಾನಲಯದ ಸೂಚನೆಯಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದರು. ಜನಗಣತಿಯ ಉದ್ದೇಶ ಕೇವಲ ಜನಸಂಖ್ಯಾ ಮಾಹಿತಿಯನ್ನು ಸಂಗ್ರಹಿಸುವವುದಷ್ಟೇ ಅಲ್ಲ; ಜನಗಣತಿ ಸಂಖ್ಯಾಶಾಸ್ತ್ರ, ಆರ್ಥಿಕ ಚಟುವಟಿಕೆ, ಸಾಕ್ಷರತೆ ಮತ್ತು ಶಿಕ್ಷಣ ಮತ್ತು ಕುಟುಂಬಗಳಿಗೆ ಲಭ್ಯವಿರುವ ಸೌಲಭ್ಯಗಳು, ನಗರೀಕರಣ, […]