ಮಂಗಳವಾರ ಹಾಳಕೆರೆಯಲ್ಲಿ ಡಾ. ಸಂಗನಬಸವ ಮಹಾಸ್ವಾಮಿಗಳ ಸಮಾಧಿ

Monday, November 22nd, 2021
Sanganabasava

ಬೆಂಗಳೂರು  : ಕನ್ನಡ ನಾಡು ಕಂಡ ಅಪ್ರತಿಮ ಸಂತ-ಮಹಾಂತರಾಗಿ 8 ದಶಕಗಳ ಕಾಲ ನಾಡು -ನುಡಿಯ ಉದ್ದಾರಕ್ಕಾಗಿ ಶ್ರಮಿಸಿದ  ಗದಗ ಜಿಲ್ಲೆ ಗಜೇಂದ್ರಗಡದ ಹಾಲಕೆರೆಯ ಶ್ರೀ  ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಎಂಬತ್ತೈದು ವಯಸ್ಸಿನ ಡಾ. ಸಂಗನಬಸವ ಮಹಾಸ್ವಾಮಿಗಳು ಈ ದಿನ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಬೆಳಗಿನ ಜಾವ 5 ಗಂಟೆಗೆ  ಅನಾರೋಗ್ಯದಿಂದ ಲಿಂಗೈಕ್ಯರಾಗಿದ್ದಾರೆ. ಪರಮ ಪೂಜ್ಯ ಶ್ರೀಮದ ವೀರಶೈವ ಶಿವಯೋಗಿ ಮಂದಿರ ಅಧ್ಯಕ್ಷರು, ತಮ್ಮ ಜೀವನದದುದ್ದಕ್ಕೂ ಬಸವ ತತ್ವಗಳನ್ನು ಅನುಷ್ಠಾನಕ್ಕೆ ತರಲು ಆಹರ್ನಿಶಿ ಶ್ರಮಿಸಿದರು. […]

ಸಂಚಾರಿ ವಿಜಯ್‌ಗೆ ಕೋಮಾದಲ್ಲಿ, ಚಿಕಿತ್ಸೆ ಮುಂದುವರೆದಿದೆ ಎಂದ ಅಪೋಲೋ ಆಸ್ಪತ್ರೆ ವೈದ್ಯರು

Monday, June 14th, 2021
Sanchari Vijay

ಬೆಂಗಳೂರು : ಬೈಕ್ ಅಪಘಾತಕ್ಕೀಡಾಗಿ ನಟ ಸಂಚಾರಿ ವಿಜಯ್ ಕೋಮಾದಲ್ಲಿ ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಯ  ಐಸಿಯು ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಮೂಲತಃ ರಂಗಭೂಮಿ ಕಲಾವಿದರಾಗಿರುವ ಸಂಚಾರಿ ವಿಜಯ್, ‘ನಾನು ಅವನಲ್ಲ, ಅವಳಲ್ಲ’ ಸಿನಿಮಾ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಸಿನಿಮಾ ಜೊತೆಯಲ್ಲಿ `ಉಸಿರು’ ಹೆಸರಿನ ತಂಡವನ್ನು ಕಟ್ಟಿಕೊಂಡು ಲಾಕ್‍ಡೌನ್ ನಲ್ಲಿ ಸಂಕಷ್ಟ ಸಿಲುಕಿದವರಿಗೆ ಸಹಾಯ ಮಾಡುತ್ತಿದ್ದರು. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ಶನಿವಾರ ರಾತ್ರಿ  ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ […]

107 ವರ್ಷದ ಈ ಅಜ್ಜಿ ಕೊರೊನಾ ಜಯಿಸಿದ್ದು ಹೇಗೆ ಗೊತ್ತಾ?

Tuesday, May 25th, 2021
kalamma

ಬೆಂಗಳೂರು : ಚಿಕ್ಕಬಳ್ಳಾಪುರ ಮೂಲದ 107 ವರ್ಷದ ವೃದ್ಧೆಯೊಬ್ಬರು ಸೋಂಕಿನ ವಿರುದ್ಧ ಹೋರಾಡಿ ಸಂಪೂರ್ಣ ಗುಣಮುಖರಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟತಾಲೂಕಿನ ಯನ್ನೂರು ಗ್ರಾಮದ ಕಾಳಮ್ಮ (107) ಸೋಂಕು ಗೆದ್ದವರು. ನಗರದ ಶೇಷಾದ್ರಿಪುರದ ಅಪೋಲೋ ಆಸ್ಪತ್ರೆಯಲ್ಲಿ ಶತಾಯುಷಿ ಕಾಳಮ್ಮ ಅವರಿಗೆ ಚಿಕಿತ್ಸೆ ನೀಡಿದ್ದು, ಸೋಂಕಿನಿಂದ ಸಂಪೂರ್ಣ ಗುಣಮುಖರಾದ ಹಿನ್ನೆಲೆಯಲ್ಲಿ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾಜ್‌ ಮಾಡಿ ಮನೆಗೆ ಕಳುಹಿಸಲಾಯಿತು. ವೈದ್ಯರ ಚಿಕಿತ್ಸೆ ಹಾಗೂ ಇಚ್ಛಾಶಕ್ತಿಯಿಂದ ಸೋಂಕಿನ ವಿರುದ್ಧ ಹೋರಾಡಿ ಗುಣಮುಖರಾಗಿರುವ ಕಾಳಮ್ಮ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಯನ್ನೂರಿನಲ್ಲಿ ನೆಲೆಸಿರುವ ಕಾಳಮ್ಮ ಅವರಿಗೆ […]