ರಾಜ್ಯಕ್ಕೆ ಅಪ್ಪಳಿಸಲಿರುವ ‘ತೌಕ್ತೇ’ ಚಂಡಮಾರುತ: ಅನಾಹುತ ತಪ್ಪಿಸಲು ಸರ್ಕಾರದಿಂದ ಹೈ ಅಲರ್ಟ್

Saturday, May 15th, 2021
R Ashoka

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ತೌಕ್ತೇ ಚಂಡಮಾರುತವು ರಾಜ್ಯದ ಕಡೆಗೆ ಆಗಮಿಸಲಿದ್ದು, ಈ ಕುರಿತಂತೆ ಸಂಭವನೀಯ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರಾದ ಕಂದಾಯ ಸಚಿವ ಆರ್ ಅಶೋಕ್ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತುರ್ತು ಸಭೆ ಕರೆದು ಮುನ್ನೆಚ್ಚರಿಕಾ ಕ್ರಮಗಳ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಸಭೆಯ ವಿವರಗಳನ್ನ ಹಂಚಿಕೊಂಡು ಸಚಿವ ಆರ್ ಅಶೋಕ್ ಅವರು,”ರಾಜ್ಯದಿಂದ ಕೇವಲ 200 ಕಿ.ಮೀ. ದೂರದಲ್ಲಿರುವ ಚಂಡಮಾರುತ ತೌಕ್ತೇ ರಾಜ್ಯಕ್ಕೆ […]

ಚಂಡಮಾರುತ ಪರಿಣಾಮ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆ

Wednesday, December 9th, 2020
Mangalore Rain

ಮಂಗಳೂರು : ಆಗ್ನೇಯ ಅರಬ್ಬಿ ಸಮುದ್ರ ಮತ್ತು ಹಿಂದೂ ಮಹಾ ಸಾಗರ ಸಮಭಾಜಕ ವೃತ್ತದ ಬಳಿ ಸಮುದ್ರ ಮಟ್ಟಕ್ಕಿಂತ 3.1 ಕಿ.ಮೀ.ಎತ್ತರದಲ್ಲಿ ಕೇಂದ್ರೀಕೃತವಾಗಿ ಚಂಡಮಾರುತ  ಉಂಟಾಗಿದ್ದುಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಗುಡುಗು ಸಹಿತ ಭಾರೀ ಗಾಳಿ-ಮಳೆಯಾಗಿದೆ. ಮಂಗಳೂರು, ಬೆಳ್ತಂಗಡಿ, ಕಡಬ, ಸುಳ್ಯ, ಪುತ್ತೂರು ತಾಲೂಕು ಸೇರಿದಂತೆ ಮರ್ಕಂಜ, ಪಂಬೆತ್ತಾಡಿ, ಕಲ್ಮಡ್ಕ, ಪಂಜ, ಕರಿಕಳ, ಎಣ್ಮೂರು ಸಹಿತ ಹಲವೆಡೆ ಮಂಗಳವಾರ ಸಂಜೆ ಭಾರೀ ಮಳೆ ಸುರಿದಿದ್ದು, ಭೂಮಿಗೆ ತಂಪೆರೆದಿದೆ. ಮಂಗಳವಾರ ಸಂಜೆಯಾಗುತ್ತಿದ್ದಂತೆ ವಾತಾವರಣದಲ್ಲಿ ಬದಲಾವಣೆಗೊಂಡು ಜಿಲ್ಲೆಯ ಘಟ್ಟದ ತಪ್ಪಲು […]

‘ಕ್ಯಾರ್’ ಚಂಡಮಾರುತ ಭೀತಿ : ಇಂದು ಕರಾವಳಿಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

Friday, October 25th, 2019
cyar

ಮಂಗಳೂರು : ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾದ ‘ಕ್ಯಾರ್’ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆ ಗೋಚರಿಸಿದ್ದು, ಮುಂದಿನ 48 ಗಂಟೆ ಕಾಲ ಭಾರಿ ಮಳೆ ಕರಾವಳಿಯನ್ನು ಅಪ್ಪಳಿಸುವ ಮುನ್ಸೂಚನೆ ದೊರೆತಿದೆ. ಗುರುವಾರ 15.4 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 70.4 ಡಿಗ್ರಿ ಪೂರ್ವ ರೇಖಾಂಶದಲ್ಲಿ ವಾಯುಭಾರ ಕುಸಿತ ಪ್ರದೇಶವಿದ್ದು ಮಹಾರಾಷ್ಟ್ರದ ರತ್ನಗಿರಿಯಿಂದ 360 ಕಿ.ಮೀ. ಪಶ್ಚಿಮ-ನೈಋತ್ಯ ಮತ್ತು 490 ಕಿ.ಮೀ. ನೈಋತ್ಯ ಹಾಗೂ ಓಮನ್‌ನ ಸಲಾಹ್‌ನಿಂದ 1750 ಕಿ.ಮೀ. ಪೂರ್ವ-ಆಗ್ನೇಯ ದಿಕ್ಕಿನಲ್ಲಿ ಕೇಂದ್ರೀಕೃತವಾಗಿದೆ. ಚಂಡಮಾರುತ ಅ.25ರಂದು ಸಾಯಂಕಾಲದ ವರೆಗೆ ಪೂರ್ವ-ಈಶಾನ್ಯದತ್ತ […]

ಭಟ್ಕಳ : ಯಾಂತ್ರಿಕ ದೋಣಿ ಮುಳುಗಡೆ : ಐದು ಮಂದಿ ಮೀನುಗಾರರ ರಕ್ಷಣೆ

Monday, September 16th, 2019
bhatkala

ಭಟ್ಕಳ : ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳಗಡೆಗೊಂಡಿದ್ದು ಐದು ಮಂದಿ ಮೀನುಗಾರರನ್ನು ರಕ್ಷಿಸಿದ ಘಟನೆ ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಭಾನುವಾರ ಸಂಭವಿಸಿದೆ. ಶ್ರೀ ಲಕ್ಷ್ಮೀವೆಂಕಟೇಶ ಹೆಸರಿನ ಈ ದೋಣಿ ರಾಘವೇಂದ್ರ ಖಾರ್ವಿ ಎಂಬುವವರಿಗೆ ಸೇರಿದ್ದು. ರಾಘವೇಂದ್ರ, ಚೇತನ, ಉದಯಕುಮಾರ, ಶನಿಯಾರ, ಸುಬ್ರಹ್ಮಣ್ಯ ಎಂಬವರನ್ನು ಅಪಾಯದಿಂದ ರಕ್ಷಿಸಲಾಗಿದೆ. ಭಾನುವಾರ ಬೆಳಿಗ್ಗೆ ತಾಲೂಕಿನ ಕರಿಕಾಲ್ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದು ಅಲೆಗಳ ಅಬ್ಬರಕ್ಕೆ ಸಿಲುಕಿ ದೋಣಿ, ಬುಡದಿಂದ ನೀರು ತುಂಬಿಕೊಂಡ ಪರಿಣಾಮ ಈ ದುರ್ಘಟನೆ […]