ಪುತ್ತೂರು ಬಿಜೆಪಿ ನಾಯಕರ ಪ್ರಬಲ ವಿರೋಧದಿಂದ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ತಡೆ

Saturday, March 16th, 2024
Arun-Kumar-Puttila

ಪುತ್ತೂರು: ಬಿಜೆಪಿಗೆ ಬಂಡಾಯವಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು 3ನೇ ಸ್ಥಾನಕ್ಕೆ ತಳ್ಳಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಲು ಪುತ್ತೂರು ಬಿಜೆಪಿ ಮುಖಂಡರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಬಿಜೆಪಿ ಸೇರ್ಪಡೆ ತಡೆಹಿಡಿಯಲಾಗಿದೆ. ಪುತ್ತಿಲ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧೆ ನಡೆಸಿದ ಬಳಿಕ ಪುತ್ತಿಲ ಪರಿವಾರವನ್ನು ಸ್ಥಾಪಿಸಿಕೊಂಡು ತನ್ನ ಅಸ್ತಿತ್ವವನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸಿಕೊಳ್ಳುವ ಪ್ರಯತ್ನ ನಡೆಸಿದ್ದರು. ಇದಕ್ಕೆ ಕಡಿವಾಣ ಹಾಕಲು ಅವರನ್ನು ಮತ್ತೊಮ್ಮೆ ಬಿಜೆಪಿಗೆ ಸೇರ್ಪಡೆಗೊಳಿಸಲು […]

ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಅರುಣ್ ಕುಮಾರ್ ಅಧಿಕಾರ ಸ್ವೀಕಾರ

Wednesday, March 6th, 2024
ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಅರುಣ್ ಕುಮಾರ್ ಅಧಿಕಾರ ಸ್ವೀಕಾರ

ಮಂಗಳೂರು : ಮಂಗಳೂರಿನ ಇತಿಹಾಸ ಪ್ರಸಿದ್ಧ ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮಂಗಳಾದೇವಿಯ ಐತಾಳ ಮನೆತನದ ಅರುಣ್ ಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಶ್ರೀ ಮಂಗಳಾದೇವಿ ದೇವಸ್ಥಾನವು ನಾಲ್ವರು ಅನುವಂಶಿಕ ಮೊಕ್ತೇಸರರಿಂದ ಆಡಳಿತ ನಿರ್ವಹಣೆಯಾಗುತ್ತಿದ್ದು, ಖಾಲಿ ಇದ್ದ ಅನುವಂಶಿಕ ಮೊಕ್ತೇಸರ ಹುದ್ದೆಗೆ ಐತಾಳ ಮನೆತನದ ಹರೀಶ್ ಕುಮಾರ್ ಐತಾಳ್ ಹಾಗೂ ಅರುಣ್ ಕುಮಾರ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿತ್ತು. ದೇವಳದಲ್ಲಿ ಈಗಾಗಲೇ ರಘುರಾಮ ಉಪಾಧ್ಯಾಯ ಅವರು ಅನುವಂಶಿಕ ಮೊಕ್ತೇಸರರಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದಾರೆ. ದೇವಳದ ಅನುವಂಶಿಕ ಮೊಕ್ತೇಸರರ […]

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅನ್ನದಾನ ನಿಧಿಗೆ 10 ಲಕ್ಷ ರೂ. ದೇಣಿಗೆ ನೀಡಿದ ದೇವಸ್ಥಾನ ತಮಿಳು ನಿರ್ಮಾಪಕ

Saturday, July 24th, 2021
Arun Kumar

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳು ಚಿತ್ರರಂಗದ ನಿರ್ಮಾಪಕ, ನಿರ್ದೇಶಕ ಅರುಣ್ ಕುಮಾರ್(ಅಟ್ಲೀ) ದಂಪತಿ ಶುಕ್ರವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಅವರು ದೇವಳದ ಅನ್ನದಾನ ನಿಧಿಗೆ 10 ಲಕ್ಷ ರೂ. ದೇಣಿಗೆ ನೀಡಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಅವರಿಗೆ ದೇಣಿಗೆಯ ಚೆಕ್ ಅನ್ನು ಹಸ್ತಾಂತರಿಸಿದರು. ದೇವಳದ ಕಚೇರಿ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಸುಬ್ರಹ್ಮಣ್ಯ ಗ್ರಾಪಂ ಸದಸ್ಯ ಹರೀಶ್ ಇಂಜಾಡಿ, ಮಾಜಿ ಸದಸ್ಯ ಸುರೇಶ್ ಭಟ್ ಉಪಸ್ಥಿತರಿದ್ದರು.

ಹೊಸವರ್ಷದ ಸಂಭ್ರಮಾಚರಣೆ ಪಾರ್ಟಿಗೆ ಹೋದ ಯುವಕ ಕಲ್ಲುಕ್ವಾರಿ ಹೊಂಡಕ್ಕೆ ಬಿದ್ದು ಮೃತ್ಯು

Wednesday, January 1st, 2020
sakaleshpura

ಸಕಲೇಶಪುರ : ತಾಲೂಕಿನ ಹೊಸಗದ್ದೆ ಮೀಸಲು ಅರಣ್ಯದಲ್ಲಿ ಹೊಸವರ್ಷದ ಸಂಭ್ರಮಾಚರಣೆ ವೇಳೆ ಯುವಕನೊಬ್ಬ ನೀರಿನ ಹೊಂಡಕ್ಕೆ ಬಿದ್ದು ಮೃತ ಪಟ್ಟಿದ್ದಾನೆ. ಜಮ್ಮನಹಳ್ಳಿ ಗ್ರಾಮದ ಅರುಣ್ ಕುಮಾರ್ (28) ಮೃತ ಯುವಕ. ಗ್ರಾಮದ ನಾಗೇಶ್ ಎಂಬವನೊಂದಿಗೆ ಪಾರ್ಟಿ ಗೆ ತೆರಳಿದ್ದ ವೇಳೆ ಮೀಸಲು ಅರಣ್ಯದಲ್ಲಿನ ಕಲ್ಲುಕ್ವಾರಿಯಲ್ಲಿನ ಹೊಂಡಕ್ಕೆಬಿದ್ದು ಮೃತ ಪಟ್ಟಿದ್ದಾನೆ. ರಾತ್ರಿ ಕತ್ತಲಿನಲ್ಲಿ ಅವಘಡ ಸಂಭವಿಸಿದ್ದರಿಂದ ಆತನನ್ನು ರಕ್ಷಿಸಲು ಸ್ನೇಹಿತರು ಮಾಡಿದ ಪ್ರಯತ್ನ ಫಲ ನೀಡಲಿಲ್ಲ. ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.  

ಡಿ.ವಿ ಸದಾನಂದ ಗೌಡರ ನಿವಾಸಕ್ಕೆ ಭೇಟಿ ನೀಡಿದ ನಳಿನ್ ಕುಮಾರ್

Thursday, September 5th, 2019
DV-sadananda

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಗುರುವಾರ ಬೆಂಗಳೂರಿನಲ್ಲಿರುವ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನಳಿನ್ ಕುಮಾರ್ ರವರನ್ನು ಡಿ.ವಿ ಸದಾನಂದರವರು ಅಭಿನಂಧಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ವಿಭಾಗ ಸಂಘಟನಾ ಕಾರ್ಯದರ್ಶಿ ಶ್ರೀ ದಶರಥ ಉಪಸ್ಥಿತರಿದ್ದರು.    

ಬಿಜೆಪಿ ಪ್ರಶಿಕ್ಷಣ ಶಿಬಿರ ಉದ್ಘಾಟಿಸಿದ ರಮೇಶ್​ ಜಿಗಜಿಣಗಿ

Monday, December 3rd, 2018
bharatiya-party

ಬೆಂಗಳೂರು: ದಕ್ಷಿಣ ರಾಜ್ಯಗಳ ಬಿಜೆಪಿ ಶಾಸಕರು, ಸಂಸತ್ ಸದಸ್ಯರುಗಳ ಆಪ್ತ ಸಹಾಯಕರುಗಳ ಪ್ರಶಿಕ್ಷಣ ಶಿಬಿರವನ್ನು ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಇಂದು ಬೆಂಗಳೂರಿನಲ್ಲಿ ಉದ್ಘಾಟಿಸಿದರು. ಬಿಜೆಪಿ ಕೇಂದ್ರೀಯ ಪ್ರಶಿಕ್ಷಣ ಪ್ರಕೋಷ್ಠದ ಸದಸ್ಯರಾದ ರವೀಂದ್ರ ಸಾಠೆ, ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯ ಬಿಜೆಪಿ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯೆ ಮಧುಶ್ರೀ ಈ ಸಂದರ್ಭದಲ್ಲಿ ಹಾಜರಿದ್ದರು. ಸಭೆಯಲ್ಲಿ ಹಿರಿಯ ಬಿಜೆಪಿ ನಾಯಕರಾದ ರಾಮಚಂದ್ರ ಗೌಡ ಮಾತನಾಡಿ, ದಕ್ಷಿಣ ರಾಜ್ಯದಲ್ಲಿ […]

ಬಿಲ್ ಕೇಳಿದಕ್ಕೆ ಎಂಪೈರ್ ಹೊಟೇಲ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ

Saturday, October 27th, 2018
attacked

ಬೆಂಗಳೂರು: ಬಿಲ್ ಕೇಳಿದಕ್ಕೆ ಎಂಪೈರ್ ಹೊಟೇಲ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಆಡುಗೋಡಿ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಅಜಿತ್ ಹಾಗೂ ಆಂಥೋನಿ ಹಲ್ಲೆಗೊಳಗಾದ ಸಿಬ್ಬಂದಿಗಳು. ಕೋರಮಂಗಲ ಬಳಿ ವಾಸವಿರುವ ಶಂಕರಗೌಡ ಆನ್ ಲೈನ್ ಮೂಲಕ ಎಂಪೈರ್ ಹೋಟೆಲ್ನಲ್ಲಿ ಪುಡ್ ಆರ್ಡರ್ ಮಾಡಿದ್ದಾರೆ. ಇದನ್ನ ಡೆಲಿವರಿ ಕೊಡಲು ಡೆಲಿವರಿ ಬಾಯ್ ಅಜಿತ್ ಎಂಬುವವ ಶಂಕರೇಗೌಡ ಮನೆಗೆ ಆಗಮಿಸಿದ್ದಾನೆ. ಈ ವೇಳೆ ಪಾರ್ಟಿ ಮಾಡುತ್ತಿದ್ದ ಶಂಕರೇಗೌಡ ಹಾಗೂ ಸಹಚರರು ದಾಲ್ ಟೇಸ್ಟ್ ನೋಡಿ ಚೆನ್ನಾಗಿಲ್ಲ ಅಂತಾ ಹೇಳಿ […]

ಪುತ್ತೂರು ನಗರದಲ್ಲಿ ಬಿಜೆಪಿಯಿಂದ ರೋಡ್ ಶೋ..!

Thursday, May 10th, 2018
putturu

ಪುತ್ತೂರು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಪುತ್ತೂರು ನಗರದಲ್ಲಿ ಬಿಜೆಪಿಯಿಂದ ರೋಡ್ ಶೋ ನಡೆಯಿತು. ನಗರದ ಬೊಳುವಾರ ಆಂಜನೇಯ ಮಂತ್ರಾಲಯದ ಬಳಿಯಲ್ಲಿ ಉತ್ತರ ಪ್ರದೇಶದ ಗ್ರಾಮೀಣಾಭಿವೃದ್ಧಿ ಸಚಿವ ಡಾ. ಮಹೇಂದ್ರ ಸಿಂಗ್ ಪಕ್ಷದ ಧ್ವಜವನ್ನು ಹಿರಿಯ ಕಾರ್ಯಕರ್ತ ಗೋಪಾಲ್ ನಾಯ್ಕಿ ಅವರಿಗೆ ಹಸ್ತಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೊಳವಾರಿನಿಂದ ಹೊರಟು ಮುಖ್ಯ ರಸ್ತೆಯಲ್ಲಿ ಸಾಗಿ ದರ್ಬೆಯ ತನಕ ರೋಡ್ ಶೋ ನಡೆಸಲಾಯಿತು. ಪಕ್ಷದ ಅಭ್ಯರ್ಥಿ ಸಂಜೀವ ಮಠಂದೂರು, ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಮಾಜಿ […]

ಭಕ್ತಿ ಗೀತೆಯನ್ನು ಚುನಾವಣಾ ಪ್ರಚಾರಕ್ಕೆ ಬಳಸಿದ ಆರೋಪ: ಬಾವ ವಿರುದ್ಧ ಪೊಲೀಸ್ ದೂರು

Saturday, March 10th, 2018
bakti-geethe

ಮಂಗಳೂರು: ಅಯ್ಯಪ್ಪ ಸ್ವಾಮಿ‌ಭಕ್ತಿ ಗೀತೆಯನ್ನು ಚುನಾವಣಾ ಪ್ರಚಾರಕ್ಕೆ ಬಳಕೆ ಮಾಡಿದ ಆರೋಪದ ಹಿನ್ನೆಲೆ ಶಾಸಕ‌ ಮೊಯಿದ್ದೀನ್ ಬಾವ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಪುತ್ತೂರು ನಗರ ಠಾಣೆಯಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ದೂರು ನೀಡಿದ್ದಾರೆ. ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ದೂರು ದಾಖಲಾಗಿದೆ. “ಪಳ್ಳಿಕಟ್ಟು ಶಬರಿಮಲೈಕ್ಕ್” ಹಾಡಿನ ಸಾಹಿತ್ಯವನ್ನು ಚುನಾವಣಾ ಪ್ರಚಾರಕ್ಕೆ ಬಳಕೆ ಮಾಡಿದ್ದರು ಎನ್ನಲಾಗಿದೆ.

ಪುತ್ತೂರಿನಲ್ಲಿ ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿ ಯಾರೆಂದೇ ಗೊತ್ತಿಲ್ಲ

Saturday, February 3rd, 2018
puttur

ಮಂಗಳೂರು: ಕರಾವಳಿಯ ರಾಜಕೀಯ ವಲಯದಲ್ಲಿ ಚುನಾವಣಾ ಕಾವು ಏರ ತೊಡಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ವಿಶಿಷ್ಟ ಕೂತೂಹಲ ಕೆರಳಿಸಿರುವ ಕ್ಷೇತ್ರ ಪುತ್ತೂರು ವಿಧಾನ ಸಭಾ ಕ್ಷೇತ್ರ. ಬಿಜೆಪಿ ಹಾಗೂ ಕಾಂಗ್ರೆಸ್ ನ ನಡುವೆ ಇಲ್ಲಿ ಭಾರೀ ಜಿದ್ದಾಜಿದ್ದಿಯ ಹೋರಾಟ ನಡೆಯುತ್ತಲೇ ಬಂದಿದೆ. ಪ್ರಸ್ತುತ ಪುತ್ತೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಹಿಡಿತದಲ್ಲಿದ್ದು ಶಕುಂತಲಾ ಶೆಟ್ಟಿ ಇಲ್ಲಿನ ಶಾಸಕಿಯಾಗಿದ್ದಾರೆ. ಒಟ್ಟು ಎರಡು ಬಾರಿ ಈ ಕ್ಷೇತ್ರದಿಂದ ಶಕುಂತಲಾ ಶೆಟ್ಟಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ […]