ಕಾರ್ಕಳ : ಅರ್ಚಕ ನೇಣು ಬಿಗಿದು ಆತ್ಮಹತ್ಯೆ

Tuesday, September 14th, 2021
Sharma

ಕಾರ್ಕಳ : ದೇವಳವೊಂದರ ಅರ್ಚಕ ರವಳನಾಥ ಶರ್ಮ(32) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ನಗರದ ಸ್ಟೇಟ್‌ಬ್ಯಾಂಕ್ ಇಂಡಿಯಾ ಬಳಿಯ ಮಹಾಲಸ ನಿವಾಸಿಯಾಗಿರುವ ಅವರು ಎಂಬಿಎ ಪದವೀದಾರರಾಗಿದ್ದರು.  ಈ ಹಿಂದೆ ಕಾರ್ಕಳದ ಕಾಲೇಜುವೊಂದರಲ್ಲಿ ಅತಿಥಿ ಉಪನ್ಯಾಸಕರಾಗಿ ದುಡಿದಿದ್ದರು. ಮೃತರು ತಂದೆ,ತಾಯಿ,ತಮ್ಮ,ಪತ್ನಿ ಹಾಗೂ ಪುತ್ರಿಯರನ್ನು ಅಗಲಿದ್ದಾರೆ. ನಗರ ಠಾಣಾಧಿಕಾರಿ ಘಟನಾ ಸ್ಥಳಕ್ಕೆ ಅಗಮಿಸಿ ಮಹಜರು ನಡೆಸಿದ್ದಾರೆ. ಮಾನಸಿಕ ಖಿನ್ನತೆ ಘಟನೆಗೆ ಕಾರಣವೆನ್ನಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಕೇಸುದಾಖಲಾಗಿದೆ.

ರಾಜ್ಯದ ಅರ್ಚಕರಿಗೆ 3 ತಿಂಗಳುಗಳ ಮುಂಗಡ ಭತ್ಯೆ ಮತ್ತು ದಿನಸಿ ಕಿಟ್‌ಗಳ ಘೋಷಣೆ

Thursday, May 20th, 2021
purohith

ಬೆಂಗಳೂರು:  ರಾಜ್ಯ ಸರ್ಕಾರ  ರಾಜ್ಯದಲ್ಲಿನ  27000 ದೇವಾಲಯಗಳ ಅರ್ಚಕರಿಗೆ 3 ತಿಂಗಳುಗಳ ಮುಂಗಡ ಭತ್ಯೆ (ತಸ್ತಿಕ್) ಬಿಡುಗಡೆ ಮಾಡಿ ಆದೇಶಿಸಿದೆ. ಅಲ್ಲದೆ ‘ಸಿ’ ದರ್ಜೆ ದೇವಾಲಯಗಳ ಸಿಬ್ಬಂದಿಗಳಿಗೆ ದಿನಸಿ ಕಿಟ್‌ಗಳ ನೀಡುವಂತೆ ಆದೇಶ ಹೋರಡಿಸಲಾಗಿದೆ. ಅದರಂತೆ ರಾಜ್ಯದಲ್ಲಿನ 50 ಸಾವಿರ ಅರ್ಚಕರಿಗೆ ಫುಡ್ ಕಿಟ್ ವಿತರಿಸಲು ಮುಜರಾಯಿ ಇಲಾಖೆ ತೀರ್ಮಾನಿಸಿದ್ದು ಸರ್ಕಾರದಿಂದ ಒಟ್ಟು ನಾಲ್ಕೂವರೆ  ಕೋಟಿ ಹಣ ಬಿಡುಗಡೆಯಾಗದೆ ಎಂದು  ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕೋವಿಡ್ 19 ಹಿನ್ನೆಲೆಯಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ಬ್ರಾಹ್ಮಣ ಸಮುದಾಯದ […]

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಅರ್ಚಕ ನೇಣಿಗೆ ಶರಣು

Thursday, October 8th, 2020
sarpa samskaara

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸರ್ಪ ಸಂಸ್ಕಾರ ಕೆಲಸ ನಿರ್ವಹಿಸುತ್ತಿದ್ದ ಅರ್ಚಕರೊಬ್ಬರು ತಾನು ವಾಸವಿದ್ದ ಬಾಡಿಗೆ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ  ಗುರುವಾರ ಸಂಜೆ ವರದಿಯಾಗಿದೆ. ಉಪ್ಪಿನಂಗಡಿ ನಾಳ ನಿವಾಸಿಯಾದ ಕೃಷ್ಣ ಮಯ್ಯ ಭಟ್ (55) ಕಳೆದ ಐದು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಸರ್ಪಸಂಸ್ಕಾರ ಕ್ರಿಯಾಕರ್ತನಾಗಿ ಕೆಲಸ ನಿರ್ವಹಿಸುತ್ತಿದ್ದರು. ಗುರುವಾರ ತಾನು ವಾಸವಿದ್ದ ಬಾಡಿಗೆ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಕುಕ್ಕೆ ಸುಬ್ರಹ್ಮಣ್ಯ ಪೊಲೀಸರು […]

ಮಂಡ್ಯ: ಅರ್ಚಕರ ಕೊಲೆ ಆರೋಪಿಗಳನ್ನುಗುಂಡು ಹಾರಿಸಿ, ಬಂಧಿಸಿದ ಪೊಲೀಸರು

Monday, September 14th, 2020
Accused

ಮಂಡ್ಯ: ಗುತ್ತಲು ಅರಕೇಶ್ವರಸ್ವಾಮಿ ದೇಗುಲದ ಅರ್ಚಕರ ಕೊಲೆ ಆರೋಪಿಗಳನ್ನು ಪೊಲೀಸರು ಸೋಮವಾರ ನಸುಕಿನಲ್ಲಿ ಗುಂಡು ಹಾರಿಸಿ, ಬಂಧಿಸಿದ್ದಾರೆ. ಮೂವರು ಆರೋಪಿಗಳು ಮದ್ದೂರು ತಾಲ್ಲೂಕು ಸಾದೊಳಲು ಗೇಟ್‌ನ ಬಸ್ ತಂಗುದಾಣದಲ್ಲಿ ಮಲಗಿದ್ದರು. ಸೋಮವಾರ ನಸುಕಿನಲ್ಲಿ ಆರೋಪಿಗಳನ್ನು ಸುತ್ತುವರಿದ ಪೊಲೀಸರು ಶರಣಾಗಲು ಸೂಚನೆ ನೀಡಿದರು ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹರಿಸಿದ್ದಾರೆ. ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದರು. ಆರೋಪಿಗಳ ಕಾಲಿಗೆ ಗುಂಡು ಹಾರಿಸಿ, ಬಂಧಿಸಲಾಯಿತು. ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಆರೋಪಿಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊಲೆ ಆರೋಪಿಗಳು ನಡೆಸಿದ ಹಲ್ಲೆಯಿಂದ ಗಾಯಗೊಂಡ ಒಬ್ಬರು ಸಬ್ […]

ತಲಕಾವೇರಿಯಲ್ಲಿ ಗುಡ್ಡ ಜರಿದು ಅರ್ಚಕರ ಮನೆ ಸಮಾಧಿ, ಬಂಟ್ವಾಳದ ಅರ್ಚಕ ನಾಪತ್ತೆ

Thursday, August 6th, 2020
Archak

ಬಂಟ್ವಾಳ: ಕೊಡಗು ಜಿಲ್ಲೆಯ ತಲಕಾವೇರಿ ಭಾಗದಲ್ಲಿ ಗುಡ್ಡ ಜರಿದು ಅರ್ಚಕರ ಮನೆ ಸಮಾಧಿಯಾದ ದುರಂತ ಪ್ರಕರಣದಲ್ಲಿ ನಾಪತ್ತೆಯಾಗಿರುವ ನಾಲ್ವರಲ್ಲಿ ಬಂಟ್ವಾಳ ಮೂಲದ ಯುವ ಅರ್ಚಕರೊಬ್ಬರೂ ಸೇರಿದ್ದಾರೆ ಎಂಬ ಮಾಹಿತಿ ಇದೀಗ ಲಭಿಸಿದೆ. ಬಂಟ್ವಾಳ ಮೂಲದ ಕಳ್ಳಿಗೆ ಗ್ರಾಮದ ಕನಪಾಡಿ ನಿವಾಸಿ ರವಿಕಿರಣ್ ಈ ದುರಂತದಲ್ಲಿ ನಾಪತ್ತೆಯಾಗಿರಬಹುದೆಂದು ಇದೀಗ ಶಂಕಿಸಲಾಗುತ್ತಿದೆ. 24 ವರ್ಷದ ರವಿಕಿರಣ್ ಅವರು ರಾಮಕೃಷ್ಣ ಮತ್ತು ರೇಣುಕಾ ಭಟ್ (ಅಪ್ಪು ಭಟ್) ದಂಪತಿಯ ಪುತ್ರನಾಗಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಊರಿನಲ್ಲೇ ಇದ್ದ ರವಿಕಿರಣ್ ಅವರು ಬಳಿಕ […]

ಮುಜರಾಯಿ ಸಿಬ್ಬಂದಿಗೆ ಐದು ಲಕ್ಷ, ವಿಮೆ ಮತ್ತು 10 ಲಕ್ಷ ಜೀವ ವಿಮೆ : ಕೋಟಾ ಶ್ರೀನಿವಾಸ ಪೂಜಾರಿ

Sunday, July 26th, 2020
srinivas-poojary

ಮಂಗಳೂರು:  ರಾಜ್ಯದ ಸಹಸ್ರಾರು ಮುಜಾರಾಯಿ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಮಾರಕ ಕೊರೋನಾ ವರೈಸ್ ಸಾಂಕ್ರಾಮಿಕದ ಭದ್ರತೆಗೆ ವಿಮಾ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವ ಎಲ್ಲಾ ದೇವಾಲಯಗಳಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ದರ್ಜೆಯ ಸಿಬ್ಬಂದಿಗೆ ವಿಮಾ ಸೌಲಭ್ಯ ಒದಗಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ‘ಅರ್ಚಕರ ಮನವಿಗೆ ಸ್ಪಂದಿಸಿ ಮುಂದಿನ ದಿನಗಳಲ್ಲಿ ಐದು ಲಕ್ಷ ರೂ. ಮೊತ್ತದ ಆರೋಗ್ಯ ವಿಮೆ ಮತ್ತು […]

ಬಬ್ಬುಸ್ವಾಮಿ ದೈವಸ್ಥಾನ ಗಳ ಅರ್ಚಕರಿಗೆ ವಿಶೇಷ ಸಹಾಯಧನಕ್ಕೆ ಮನವಿ

Friday, June 5th, 2020
babbu swamy

ಮಂಗಳೂರು: ಲಾಕ್‌ಡೌನ್‌ನಿಂದಾಗಿ ರಾಜ್ಯಾದ್ಯಂತ ಸುಮಾರು ಒಂದು ಸಾವಿರ ಬಬ್ಬುಸ್ವಾಮಿ ದೈವಸ್ಥಾನ ಗಳು ಮುಚ್ಚಿದ್ದು, ಇದರಿಂದ ಅಲ್ಲಿ ಪೂಜೆ ಮಾಡಿಕೊಂಡು ಜೀವನ ನಡೆಸುತ್ತಿದ್ದ ಅರ್ಚಕರಿಗೆ ಆರ್ಥಿಕ ಸಂಕಷ್ಟ ಉಂಟಾಗಿದೆ. ಆದ್ದರಿಂದ ಸರಕಾರವು ಅವರಿಗೆ ವಿಶೇಷ ಸಹಾಯಧನ ಮಂಜೂರು ಮಾಡಬೇಕೆಂದು ಕೋರಿ ಕಣ್ಣೂರು ಶ್ರೀ ಮಾಲ್ತಿದೇವಿ ಶ್ರೀ ಬಬ್ಬುಸ್ವಾಮಿ ಮೂಲಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಗೋಕುಲ್‌ದಾಸ್‌ ಬಾರ್ಕೂರು ಅವರು ಸಂಸದ ನಳಿನ್‌ಕುಮಾರ್‌ ಕಟೀಲು ಅವರಿಗೆ ಮನವಿ ಸಲ್ಲಿಸಿದರು. ಉಡುಪಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ದಿನಕರ ಬಾಬು, ಕಚ್ಚಾರು ದೇಗುಲದ ಪದಾಧಿಕಾರಿಗಳಾದ […]

ಮನೆಗೆ ತೆರಳಿ ಪೂಜೆ ಮಾಡಿದ ಅರ್ಚಕನಿಗೆ ಬ್ಲಾಕ್‌ ಮೇಲ್‌ ಮಾಡಿ 20 ಲಕ್ಷ ರೂಪಾಯಿ ವಸೂಲಿ ಮಾಡಿದ ಐನಾತಿಗಳು

Thursday, November 14th, 2019
Purohith

ಮೈಸೂರು ; ಅರ್ಚಕ ವೃತ್ತಿ ನಡೆಸಿಕೊಂಡಿರುವ ವ್ಯಕ್ತಿಯೊಬ್ಬರಿಗೆ ಮೂವರು ಐನಾತಿಗಳು ಸೇರಿ ಬ್ಲಾಕ್‌ ಮೇಲ್‌ ಮಾಡಿ ಬರೋಬ್ಬರಿ 20 ಲಕ್ಷ ರೂಪಾಯಿ ವಸೂಲಿ ಮಾಡಿದ ಘಟನೆ ವರದಿ ಆಗಿದೆ. ಪೋಲೀಸರು ಆರೋಪಿಗಳ ಹೆಡೆಮುರಿ ಕಟ್ಟಿ 13.77 ಲಕ್ಷ ರೂಪಾಯಿಗಳನ್ನು ವಸೂಲಿ ಮಾಡಿದ್ದಾರೆ. ನಡೆದಿದ್ದೇನು ಗೊತ್ತಾ ? ಕೊಳ್ಳೇಗಾಲದಲ್ಲಿ ಆಂಜನೇಯ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾಗಿರುವ ರಾಘವನ್‌ ಭಕ್ತರ ಕೋರಿಕೆಯ ಮೇರೆಗೆ ವಿವಿಧ ಊರುಗಳಿಗೆ ತೆರಳಿ ಪೂಜಾ , ಹವನ ,ಹೋಮ ಕಾರ್ಯ ನಡೆಸಿಕೊಡುತಿದ್ದರು. ಅದರಂತೆ ಆರು ತಿಂಗಳ […]