ಅಲ್ಪಸಂಖ್ಯಾತರು ವಾಸಿಸುತ್ತಿರುವ ಪ್ರದೇಶಗಳಲ್ಲಿ ಯೋಜನೆ, ಅನುದಾನ ಮಂಜೂರು : ತನ್ವೀರ್ ಸೇಠ್

Thursday, October 12th, 2017
thanvir-set

ಮಂಗಳೂರು: ಅಲ್ಪಸಂಖ್ಯಾತರು ವಾಸಿಸುತ್ತಿರುವ ಪ್ರದೇಶಗಳಲ್ಲಿ ರಸ್ತೆ ನಿರ್ಮಾಣಕ್ಕೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ವಿಶೇಷ ಯೋಜನೆಯೊಂದನ್ನು ರೂಪಿಸಲಾಗಿದ್ದು, ಮೊದಲ ಕಂತಿನಲ್ಲಿ ರೂ.400 ಕೋಟಿ ಅನುದಾನ ಮಂಜೂರಾಗಿದೆ. ಎರಡನೇ ಕಂತಿನಲ್ಲಿ ಇನ್ನೂ ರೂ.400 ಕೋಟಿ ಅನುದಾನ ಮಂಜೂರು ಮಾಡಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್ ಮತ್ತು ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದರು. ಅವರು ತಾಲ್ಲೂಕಿನ ಗುರುವಾಯನಕೆರೆಯ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಮತ್ತು ಜುಮಾ ಮಸೀದಿಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನದಿಂದ ನೂತನವಾಗಿ ನಿರ್ಮಿಸಲಾಗಿರುವ ಶಾದಿಮಹಲ್ ಸಭಾಭವನವನ್ನು […]

ಅಲ್ಪಸಂಖ್ಯಾತರು ಸೌಲಭ್ಯ ಪಡೆಯಲು ವಿಳಂಭ ಮಾಡಬಾರದು :ಶಾಸಕ ಜೆ.ಆರ್.ಲೋಬೊ

Wednesday, October 11th, 2017
jr lobo

ಮಂಗಳೂರು: ಸರ್ಕಾರವು ಅಲ್ಪಸಂಖ್ಯಾತರ ಸೌಲಭ್ಯಗಳನ್ನು ಪಡೆಯುವಲ್ಲಿ ವಿಳಂಭ ಮಾಡಬಾರದು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಬಲ್ಮಠ ಶಾಂತಿ ಕೆಥೋಡ್ರಲ್ ನಲ್ಲಿ ದ.ಕ.ಜಿಲ್ಲಾ ಅಲ್ಪಸಂಖ್ಯಾತರಿಗಾಗಿ ಸರ್ಕಾರಿ ಯೋಜನೆ ಹಾಗೂ ಸೌಲಭ್ಯಗಳ ಕುರಿತಾದ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಸರ್ಕಾರ ಅಲ್ಪಸಂಖ್ಯಾತರಿಗಾಗಿ ವಿವಿಧ ಸೇವಾ ಸೌಭ್ಯಗಳನ್ನು ಜಾರಿಗೆ ತಂದಿದೆ. ಅಧಿಕಾರಿಗಳು ಈ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ದೊರಕಿಸಿಕೊಡುವಲ್ಲಿ ವಿಳಂಭ ಮಾಡಬಾರದು ಎಂದು ಹೇಳಿದ ಅವರು ಸರ್ಕಾರ ಕೊಡಮಾಡಿದ ಈ ಯೋಜನೆಗಳನ್ನು ಪಡೆದು ಜೀವನವನ್ನು ಹದಗೊಳಿಸಿಕೊಳ್ಳಬೇಕು ಎಂದರು. ಶಾಸಕ ಜೆ.ಆರ್.ಲೋಬೊ ಅವರು […]

ಹಿಂದುಗಳು ಮುಸ್ಲಿಂ ಅಲ್ಪಸಂಖ್ಯಾತರನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ನೋಡುತ್ತಿದ್ದಾರೆ : ಸಿಪಿಐ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್

Monday, October 28th, 2013
ಹಿಂದುಗಳು ಮುಸ್ಲಿಂ ಅಲ್ಪಸಂಖ್ಯಾತರನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ನೋಡುತ್ತಿದ್ದಾರೆ : ಸಿಪಿಐ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್

ಮಂಗಳೂರು : ದೇಶದಲ್ಲಿ ಪ್ರಜಾಪ್ರಭುತ್ವವೆಂದರೆ ಬಹುಸಂಖ್ಯಾತರ ಆಳ್ವಿಕೆ ಎಂದಾಗಿದೆ. ಬಹುಸಂಖ್ಯಾತ ರಾಗಿರುವ ಕೋಮುವಾದಿ ಹಿಂದುಗಳು ಮುಸ್ಲಿಂ ಅಲ್ಪಸಂಖ್ಯಾತರನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ನೋಡುತ್ತಿದ್ದಾರೆ. ಬಿಜೆಪಿ ಹಾಗೂ ಆರ್‍ಎಸ್‍ಎಸ್ ಸಂಘಟನೆಗಳು ರಾಷ್ಟ್ರವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವಲ್ಲಿ ತೊಡಗಿರುವುದಾಗಿ ಸಿಪಿಐ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಆರೋಪಿಸಿದರು. ನಗರದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಮುಸ್ಲಿಂ ಸಮುದಾಯದ ಹಕ್ಕೊತ್ತಾಯ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರು ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಆರ್‍ಎಸ್‍ಎಸ್‍ನಂ ತಹ ಕೋಮುವಾದಿ ಹಿಂದುತ್ವ […]