ನಾಲ್ಕು ದಶಕದಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Friday, March 8th, 2019
Avil d souza

ಮಂಗಳೂರು : ನಾಲ್ಕು ದಶಕದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಗಣೇಶ್ ಶೆಟ್ಟಿ ಎಂಬವರಿಗೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಆರೋಪಿಯನ್ನು ಜಪ್ಪಿನಮೊಗರು ನಿವಾಸಿ ಅವಿಲ್ ಡಿಸೋಜ (56) ಎಂದು ಎಂದು ಗುರುತಿಸಲಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1980ರಲ್ಲಿ ಆರೋಪಿ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ನಂತರ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 39 ವರ್ಷಗಳಿಂದ ತಲೆಮರೆಸಿಕೊಂಡು ವಿದೇಶದಲ್ಲಿದ್ದ ಎಂದು ತಿಳಿದುಬಂದಿದೆ. ಆರೋಪಿಯ ಪತ್ತೆಯ ಬಗ್ಗೆ ನ್ಯಾಯಾಲಯವು […]