ಇಡ್ಯಾ ದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ಅಷ್ಟಪವಿತ್ರ ನಾಗಮಂಡಲೋತ್ಸವ ಮತ್ತು ಪಿಲಿಚಾಮುಂಡಿ ದೈವದ ಧರ್ಮ ನೇಮೋತ್ಸವ

Tuesday, January 21st, 2020
idyaa

ಸುರತ್ಕಲ್ : ಇಡ್ಯಾ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜನವರಿ 30 ರಿಂದ 9ರ ವರೆಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ಅಷ್ಟಪವಿತ್ರ ನಾಗಾಮಂಡಲೋತ್ಸವ, ಶ್ರೀ ಪಿಲಿಚಾಮುಂಡಿ ದೈವದ ಧರ್ಮನೇಮೋತ್ಸವ ಜರಗಲಿದೆ ಎಂದು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿಯವರು ಹೇಳಿದರು. ಫೆಬ್ರವರಿ 7ರಂದು ಶುಕ್ರವಾರ ಪೂರ್ವಾಹ್ನ 9.30ರಿಂದ 9.45ರ ಮೀನ ಲಗ್ನ ಸುಮುಹೂರ್ತದಲ್ಲಿ ಶ್ರೀ ವಿದ್ಯಾಧರ ಮುನಿ ಪ್ರತಿಷ್ಠಾಪಿತ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮಶ್ರೀ ಕುಡುಪು ನರಸಿಂಹ […]

ಮಾಣಿಲ ಶ್ರೀಧಾಮದಲ್ಲಿ ಅಷ್ಟಪವಿತ್ರ ನಾಗಮಂಡಲೋತ್ಸವದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Monday, February 19th, 2018
Manila

ವಿಟ್ಲ:  ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಫೆ.25ರ ವರೆಗೆ ನಡೆಯಲಿರುವ ಅಷ್ಟಪವಿತ್ರ ನಾಗಮಂಡಲೋತ್ಸವ, ಶ್ರೀನಿವಾಸ ಕಲ್ಯಾಣೋತ್ಸವ, ಪ್ರತಿಷ್ಠಾ ವರ್ಧಂತ್ಯುತ್ಸವ, ಶ್ರೀ ದೈವಗಳ ನೇಮೋತ್ಸವದ ಉದ್ಘಾಟನೆಯನ್ನು ಪ್ರಥಮ ದಿನವಾದ ಫೆ.18ರಂದು ಶ್ರೀಧಾಮದ ಶ್ರೀ ನಿತ್ಯಾನಂದ ವೇದಿಕೆಯಲ್ಲಿ ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಮ್‌ನ ಶ್ರೀ ಗುರುದೇವಾನಂದ ಸ್ವಾಮೀಜಿಯವರು  ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಎಲ್ಲಿ ತನ್ಮಯತೆ ಇದೆಯೋ ಅಲ್ಲಿ ಉನ್ನತಿ ಇದೆ.  ತ್ಯಾಗ ತುಂಬಿದ ಸೇವೆ ಭಗವಂತನಿಗೆ ಪ್ರಿಯವಾದುದು. ಧರ್ಮದಲ್ಲಿ ರಾಜಕೀಯ ಬೇಡ, ರಾಜಕೀಯದಲ್ಲಿ ಧರ್ಮಬೇಕು. ಸಾಮರ್ಥ್ಯ ಸಹಕಾರವಾಗುವುದು ಅವಕಾಶ […]