ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ಕೇಂದ್ರದಿಂದ ನೆರವು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Saturday, July 31st, 2021
Bommai-meets-Health-minister

ನವದೆಹಲಿ  : ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಶ್ರೀ ಮನ್ ಸುಖ್ ಮಾಂಡವೀಯ, ಕೇಂದ್ರ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. […]

ಕ್ಯಾಪ್‍ಜೆಮಿನಿ ವತಿಯಿಂದ ವೈದ್ಯಕೀಯ ಸಲಕರಣೆಗಳ ಪೂರೈಕೆ:ಮುಖ್ಯಮಂತ್ರಿಗಳ ಶ್ಲಾಘನೆ

Tuesday, July 20th, 2021
CM

ಬೆಂಗಳೂರು : ಕ್ಯಾಪ್‍ಜೆಮಿನಿ ಟೆಕ್ನಾಲಜಿ ಸರ್ವಿಸಸ್ ಇಂಡಿಯಾ ಲಿಮಿಟೆಡ್ ವತಿಯಿಂದ ಇಂದು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ವಿಕ್ಟೋರಿಯಾ ಹಾಗೂ ಚರಕ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ 400 ಎಲ್‍ಎಂಪಿ ಆಕ್ಸಿಜನ್ ಘಟಕಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಕೋವಿಡ್ 19 ಎರಡನೇ ಅಲೆಯ ನಿಯಂತ್ರಣ ಹಾಗೂ ಚಿಕಿತ್ಸೆಗೆ ಖಾಸಗಿ ವಲಯ ಸರ್ಕಾರದೊಂದಿಗೆ ಕೈಜೋಡಿಸಿರುವುದು ಶ್ಲಾಘನೀಯ ಎಂದರು. ಕಾರ್ಪೋರೇಟ್ ಸಂಸ್ಥೆಗಳು ತಮ್ಮ ಸಾಂಸ್ಥಿಕ ಜವಾಬ್ದಾರಿ ಕಾರ್ಯಕ್ರಮದ ಭಾಗವಾಗಿ ಇಂತಹ ಕ್ರಮಗಳನ್ನು ಕೈಗೊಂಡಿರುವುದು ಅನುಕರಣೀಯ. […]

ಈ ವರ್ಷದೊಳಗೆ ದೇಶದ ಎಲ್ಲ ನಾಗರಿಕರಿಗೂ ಕೋವಿಡ್ ಲಸಿಕೆ – ಸದಾನಂದ ಗೌಡ

Friday, June 4th, 2021
DVS

  ಬೆಂಗಳೂರು :  ಕಪ್ಪುಶಿಲಿಂದ್ರ ರೋಗದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಬೇರೆ ಬೇರೆ ರಾಜ್ಯಗಳಿಗೆ ಇಂದು ಒಟ್ಟು 1.21 ಲಕ್ಷ ವಯಲ್ಸ್ ಎಂಫೊಟೆರಿಸಿನ್-ಬಿ ಹಂಚಿಕೆ ಮಾಡಿದ್ದು ಕರ್ನಾಟಕಕ್ಕೆ 9750 ವಯಲ್ಸ್ ಒದಗಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದಗೌಡ ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಹೇಳಿಕೆಯೊಂದರಲ್ಲಿ ಈ ವಿಷಯ ತಿಳಿಸಿದ ಕೇಂದ್ರ ಸಚಿವರು – ಸ್ವದೇಶಿಯವಾಗಿಯೂ ಈ ಚುಚ್ಚುಮದ್ದಿನ ಉತ್ಪಾದನೆ ಹೆಚ್ಚಾಗುತ್ತಿದೆ, ಅದೇ ರೀತಿ ಆಮದಿನ ಪ್ರಮಾಣವನ್ನು ಕೂಡಾ ಹೆಚ್ಚಿಸಲಾಗುತ್ತಿದೆ. ಇನ್ನು ಕೆಲವೇ […]

ಆಕ್ಸಿಜನ್ ಉತ್ಪಾದಕ ಘಟಕ ಸ್ಥಾಪಿಸಿದ ಸೋನು!

Sunday, May 23rd, 2021
sonuSood

ಮುಂಬೈ : ಮಹಾಮಾರಿ ಕೊರೊನಾ ಮನುಷ್ಯನ ಉಸಿರು ನಿಲ್ಲಿಸಿ ಕೃತಕ ಆಕ್ಸಿಜನ್ ಅಭಾವ ಸೃಷ್ಠಿಸಿದೆ. ಈ ವಿಷಮ ಪರಿಸ್ಥಿತಿಯಲ್ಲಿ ಅನೇಕ ನಟರು ಸಾಕಷ್ಟು ಸಹಾಯ ಸಹಕಾರ ಮಾಡಿದ್ದಾರೆ. ಸದ್ಯ ಬಾಲಿವುಡ್ ನಟ ಸೋನು ಸೂದ್ ಸೋಂಕಿತರಿಗೆ ಬೆಡ್, ಆಕ್ಸಿಜನ್, ವೆಂಟಿಲೇಟರ್, ಚಿಕಿತ್ಸೆಗೆ ನೆರವು ನೀಡುತ್ತಿರುವುದು ಮಾತ್ರವಲ್ಲ, ನಿರ್ಗತಿಕರಿಗೆ ಆರ್ಥಿಕ ಸಹಾಯ, ಆಹಾರ ಕಿಟ್ ನೀಡೋ ಮೂಲಕ ಅಗತ್ಯ ನೆರವು ನೀಡಿದ್ದಾರೆ. ಇದೀಗ ಸೋನು ಸೂದ್ ಆಂಧ್ರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪಿಸಿದ್ದಾರೆ. ಆಂಧ್ರ […]

ಚಾಮರಾಜನಗರ ದುರಂತ ಸಂತ್ರಸ್ತರಿಗೆ ಪರಿಹಾರ ಮಂಜೂರು

Saturday, May 22nd, 2021
chamaraja Nagar

ಬೆಂಗಳೂರು : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಸರ್ಕಾರ ಪರಿಹಾರ ಧನ ಮಂಜೂರು ಮಾಡಿದೆ. ಕೋವಿಡ್ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 24 ಜನ ಆಮ್ಲಜನಕದ ಅಭಾವದಿಂದ ಸಾವು ಸಂಭವಿಸಿರಬಹುದಾದ ಹಿನ್ನೆಲೆಯಲ್ಲಿ ಸರ್ಕಾರವು ನ್ಯಾಯಾಲಯಕ್ಕೆ ವಾಗ್ದಾನ ನೀಡಿದಂತೆ ದುರಂತ ಸಂತ್ರಸ್ತರಿಗೆ ತಲಾ ರೂ.2 ಲಕ್ಷದಂತೆ ಒಟ್ಟು 24 ವ್ಯಕ್ತಿಗಳ ಕುಟುಂಬಸ್ಥರಿಗೆ ರೂ. 48 ಲಕ್ಷಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಚಾಮರಾಜನಗರ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲು ಮಂಜೂರಾತಿ ನೀಡಿ ಆದೇಶಿಸಲಾಗಿದೆ. ವರದಿ : ಶಂಭು. ಮೆಗಾಮೀಡಿಯಾ […]

ಪದ್ಮನಾಭನಗರ ಕ್ಷೇತ್ರದಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಬ್ಯಾಂಕ್ ಉದ್ಘಾಟನೆ

Saturday, May 22nd, 2021
R Ashoka

ಬೆಂಗಳೂರು : ಆಕ್ಸಿಜನ್ ಅಭಾವ ನೀಗಿಸುವ ನಿಟ್ಟಿನಲ್ಲಿ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿನ ಶಾಸಕರ ಕಚೇರಿಯಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಗಳ ಬ್ಯಾಂಕ್‍ನ್ನು ಕಂದಾಯ ಸಚಿವ ಹಾಗೂ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕ ಆರ್ ಅಶೋಕ ಉದ್ಘಾಟನೆ ಮಾಡಿದರು. ಕ್ಷೇತ್ರದ ನಿವಾಸಿಗಳಿಗೆ ಅನುಕೂಲವಾಗಲೆಂದು ಕೈಗೊಳ್ಳಲಾದ ಈ ಸೌಲಭ್ಯವು ಅತ್ಯಧಿಕವಾಗಿ ನೆರವಾಗಲಿದೆ ಎಂದು ಸಚಿವರು ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಎನ್. ಲಕ್ಷ್ಮೀಕಾಂತ, ಕಬ್ಬಾಳು ಉಮೇಶ್, ಆಂಜನಪ್ಪ ಮತ್ತು ಪದ್ಮನಾಭನಗರ ಮಂಡಲ ಪ್ರಧಾನ ಕಾರ್ಯದರ್ಶಿ ವಿಜಯ್ ಉಪಸ್ಥಿತರಿದ್ದರು. ನಂತರದಲ್ಲಿ ವಿಧಾನಸಭಾ […]

ಕೇಂದ್ರದ ಪ್ಯಾಕೇಜ್ ಗಳನ್ನು ರಾಜ್ಯ ಸರ್ಕಾರ ಯಾಕೆ ನೀಡುತ್ತಿಲ್ಲ, ನಿಮ್ಮ ಮಂತ್ರಿಗಳು ಕತ್ತೆ ಕಾಯುತ್ತಿದ್ದಾರಾ? ಸದಾನಂದ ಗೌಡ

Friday, May 14th, 2021
Sadananda Gowda Call

ಮಂಗಳೂರು : ಕೇರಳ, ಆಂಧ್ರದಲ್ಲಿ ಬಡವರಿಗೆ ಪ್ಯಾಕೇಜ್ ಘೋಷಣೆ ಆಗಿ, ಅದರ ಉಪಯೋಗವನ್ನು ಬಡವರು ಪಡೆದುಕೊಳ್ಳುತ್ತಿದ್ದಾರೆ, ಆದರೆ ಕರ್ನಾಟಕದಲ್ಲಿ ಪ್ಯಾಕೇಜ್ ಘೋಷಣೆ ಯಾಕೆ ಆಗಲಿಲ್ಲ? ದಯವಿಟ್ಟು ಬಡವರಿಗೆ ಪ್ಯಾಕೇಜ್ ಘೋಷಣೆ ಮಾಡಿ ಎಂದು ಮನವಿ ಮಾಡಿದಕ್ಕೆ ಕೇಂದ್ರ ಸಚಿವ ಸದಾನಂದ ಗೌಡರು ಕೇಂದ್ರದಿಂದ ಕೊಡಬೇಕಾದುದನ್ನೆಲ್ಲ ಕೊಟ್ಟಿದ್ದೇವೆ ರಾಜ್ಯದ ಮಂತ್ರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ದಕ್ಷಿಣ ಕನ್ನಡದ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ರೈ ಎಂದು ಪರಿಚಯಿಸಿಕೊಂಡು ಪೋನ್ ಕರೆ ಮಾಡಿ ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರು […]