ಆಟೋರಿಕ್ಷಾ ಮುಂಬದಿ ಕವಚದ ಮೇಲೆ ಹಸಿರು ಬಣ್ಣದ ಪಟ್ಟಿ ಕಡ್ಡಾಯ

Friday, February 5th, 2021
yellow Auto

ಮಂಗಳೂರು : ಮಂಗಳೂರು ಗ್ರಾಮಾಂತರ ಪ್ರದೇಶಗಳಿಂದ ಮಂಗಳೂರು ನಗರ ವ್ಯಾಪ್ತಿಯೊಳಗೆ ತುರ್ತು ಸಂದರ್ಭದಲ್ಲಿ, ರೋಗಿಗಳನ್ನು ಹಾಗೂ ವಯೋ ವೃದ್ಧರನ್ನು ವೈದ್ಯಕೀಯ ತಪಾಸಣೆಗಾಗಿ ಕರೆದುಕೊಂಡು ಬಂದು ಹೋಗುವಾಗ ಮತ್ತು ನಗರದೊಳಗೆ ಪ್ರಯಾಣಿಕರನ್ನು ಅವರು ಹೇಳಿರುವ ಸ್ಥಳಗಳಿಗೆ ತಲುಪಿಸುವಂತಹಾ ಆಟೋರಿಕ್ಷಾಗಳನ್ನು ಸುಲಭವಾಗಿ ಗುರುತಿಸುವ ಸಲುವಾಗಿ ಈಗಾಗಲೇ ನಿರ್ಣಯಿಸಿರುವಂತೆ ಆಟೋರಿಕ್ಷಾ ಮುಂಬದಿ ಕವಚದ ಮೇಲೆ ಹಸಿರು ಬಣ್ಣದ ಪಟ್ಟಿ (ಬಜಾಜ್ ಗ್ರೀನ್) ಕಡ್ಡಾಯವಾಗಿ ಬಳಿದು ಪ್ರದರ್ಶಿಸಬೇಕೆಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ನಿರ್ದೇಶಿಸಿದೆ ಎಂದು ಮಂಗಳೂರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದೆ.

ಕದ್ದು ತಂದು 18 ಆಟೋರಿಕ್ಷಾಗಳನ್ನು ಗುಜಿರಿ ಅಂಗಡಿಯಲ್ಲಿಟ್ಟಿದ್ದ ವ್ಯಾಪಾರಿ

Wednesday, July 10th, 2019
stolen-auto

ಮಂಗಳೂರು: ಸೂರಲ್ಪಾಡಿಯಲ್ಲಿ 18 ಆಟೋರಿಕ್ಷಾಗಳನ್ನು ದಾಖಲೆ ರಹಿತವಾಗಿ ‌ಸಂಗ್ರಹಿಸಿಟ್ಟಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಉಳಾಯಿಬೆಟ್ಟು ನಿವಾಸಿ ಇರ್ಫಾನ್ (28) ಬಂಧಿತ ಆರೋಪಿ. ಬಜ್ಪೆ ಪೊಲೀಸ್ ಠಾಣಾ ಸರಿಹದ್ದಿನ ಬಡಗುಳಿಪ್ಪಾಡಿ ಗ್ರಾಮದ ಸೂರಲ್ಪಾಡಿ ಎಂಬಲ್ಲಿ, ಕಾಂಪ್ಲೆಕ್ಸ್ವೊಂದರ ಸಮೀಪದ ಗುಜರಿ ಅಂಗಡಿ ಮತ್ತು ಅದಕ್ಕೆ ಹೊಂದಿಕೊಂಡಂತಿರುವ ಜಾಗದಲ್ಲಿ ಯಾವುದೇ ದಾಖಲಾತಿ ಇಲ್ಲದ ಆಟೋರಿಕ್ಷಾಗಳನ್ನು ಇರ್ಫಾನ್ ಕಳವು ಮಾಡಿ ತಂದಿರಿಸಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸ್ ನಿರೀಕ್ಷಕ ಎಸ್. ಪರಶಿವಮೂರ್ತಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು […]

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಕೆ.ಜೆ.ಜಾರ್ಜ್

Sunday, June 23rd, 2013
Home Minister KJ George

ಉಡುಪಿ:  ಮಣಿಪಾಲದಲ್ಲಿ ಜೂನ್ 20 ರಂದು ನಡೆದ ಕೇರಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಗೃಹ ಸಚಿವ ಕೆ.ಜೆ.ಜಾರ್ಜ್  ಮಣಿಪಾಲ ಆಸ್ಪತ್ರೆಗೆ ಇಂದು ಬೆಳಿಗ್ಗೆ ಭೇಟಿ ನೀಡಿ ದೌರ್ಜನ್ಯಕ್ಕೊಳಗಾಗಿರುವ ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು  ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದು, ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಹೇಳಿದರು. ಪಶ್ಚಿಮ ವಲಯ ಐಜಿಪಿ ಪ್ರತಾಪ್ ರೆಡ್ಡಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ. ಎಂಟು […]

ಸದ್ಯದಲ್ಲೇ ದುಬಾರಿಯಾಗಲಿರುವ ಆಟೋರಿಕ್ಷಾ ಪ್ರಯಾಣ ದರ

Thursday, September 29th, 2011
Channappa-Gowda

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್‌.ಎಸ್‌. ಚನ್ನಪ್ಪ ಗೌಡ ಅವರ ಅಧ್ಯಕ್ಷತೆಯಲ್ಲಿ ಪೆಟ್ರೋಲ್‌ ಬೆಲೆ ಏರಿಕೆ ಹಿನ್ನಲೆಯಲ್ಲಿ ಆಟೋರಿಕ್ಷಾ ಪ್ರಯಾಣ ದರ ಪರಿಷ್ಕರಣೆ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಆಟೋರಿಕ್ಷಾ ಚಾಲಕರ ಸಂಘಟನೆಗಳ ಪ್ರತಿನಿಧಿಗಳು, ಅಟೋ ಚಾಲಕರು, ಮಾಲಕರು, ಹಾಗೂ ಬಳಕೆ ದಾರರು ಭಾಗವಹಿಸಿದ್ದರು. ಪೆಟ್ರೋಲ್‌ ದರ ಏರಿದೆ. ಖರ್ಚು ಶೇ. 40ರಷ್ಟು ಏರಿಕೆಯಾಗಿದೆ. ಕನಿಷ್ಠ ಪ್ರಯಾಣ ದರ ಮತ್ತು ಪ್ರತೀ ಕಿ.ಮೀ. ಗೆ ಈಗ ಇರುವ ದರವನ್ನು […]