ಜಿಲ್ಲಾಧಿಕಾರಿಯಾಗಿ ಆತ್ಮಸಾಕ್ಷಿಗನುಗುಣವಾಗಿ ಕೆಲಸ ಮಾಡುವ ಪ್ರಯತ್ನ ಮಾಡಿದ್ದೇನೆ: ಎ.ಬಿ. ಇಬ್ರಾಹಿಂ

Monday, August 1st, 2016
K-G-Jagadeesh

ಮಂಗಳೂರು: ಆಡಳಿತದ ಲಾಭ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂಬ ಆಶಯದೊಂದಿಗೆ ಜಿಲ್ಲಾಧಿಕಾರಿಯಾಗಿ ಆತ್ಮಸಾಕ್ಷಿಗನುಗುಣವಾಗಿ ಕೆಲಸ ಮಾಡುವ ಪ್ರಯತ್ನ ಮಾಡಿದ್ದೇನೆ ಎಂದು ನಿರ್ಗಮನ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಹೇಳಿದರು. ದ.ಕ. ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಈಗ ಕರ್ನಾಟಕ ಸರಕಾರದ ಸಾರಿಗೆ ಆಯುಕ್ತರಾಗಿ ಭಡ್ತಿ ಪಡೆದು ವರ್ಗಾವಣೆಗೊಂಡಿರುವ ಎ.ಬಿ. ಇಬ್ರಾಹಿಂ ಅವರು ಶನಿವಾರ ಜಿ.ಪಂ.ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಅಧಿಕಾರ ಹಸ್ತಾಂತರಿಸಿದ ಬಳಿಕ ದ.ಕ. ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾದ ಬೀಳ್ಕೊಡುಗೆ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದರು. ಆಡಳಿತದ ಅನುಷ್ಠಾನದ ಸಂದರ್ಭಗಳಲ್ಲಿ ಕೆಲವು […]

ಬದಿಯಡ್ಕದಲ್ಲಿ ಕನ್ನಡ ಚಿಂತನೆ ಕಾರ್ಯಕ್ರಮ- ಕಯ್ಯಾರ ಕಾವ್ಯ ವಿಶೇಷೋಪನ್ಯಾಸ ಹಾಗೂ ಕಾವ್ಯಗಾಯನ

Tuesday, February 16th, 2016
Kyyara

ಬದಿಯಡ್ಕ: ಕವಿ ಕಯ್ಯಾರರಿಗೆ ಬದುಕು ಮತ್ತು ಕಾವ್ಯ ಬೇರೆಯಾಗಿರಲಿಲ್ಲ.ಅವರ ಕೃತಿಗಳೆಲ್ಲವು ಜೀವನಾನುಭವಗಳ ತಿರುಳುಗಳಾಗಿದ್ದವು.ಇವು ಕಯ್ಯಾರರ ಜೀವನ್ಮುಖಿ ಚಿಂತನೆಗಳನ್ನು ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದೆಯೆಂದು ಅಧ್ಯಾಪಿಕೆ,ಕವಯಿತ್ರಿ ದಿವ್ಯಗಂಗಾ ಪಿ.ಅಭಿಪ್ರಾಯ ವ್ಯಕ್ತಪಡಿಸಿದರು. ಬೆಂಗಳೂರಿನ ಕನ್ನಡ ಆಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಾಸರಗೋಡಿನ ಅಪೂವ ಕಲಾವಿದರು ಇದರ ಸಹಯೋಗದಲ್ಲಿ ಬದಿಯಡ್ಕದ ಅಂಬೇಡ್ಕರ್ ವಿಚಾರ ವೇದಿಕೆಯ ಸಹಕಾರದಲ್ಲಿ ಬದಿಯಡ್ಕದ ಸಂಸ್ಕೃತಿ ಭವನದಲ್ಲಿ ಆಯೋಜಿಸಲಾಗಿದ್ದ ಮೂರನೇ ಕನ್ನಡ ಚಿಂತನ ಕಾರ್ಯಕ್ರಮದಲ್ಲಿ ಅವರು ಕಯ್ಯಾರರ ಕಾವ್ಯಗಳಲ್ಲಿ ಜೀವನ ದೃಷ್ಟಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡುತ್ತಿದ್ದರು. ಕಯ್ಯಾರರ […]