ಕೋವಿಡ್ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳಲ್ಲಿ ತರಬೇತಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Friday, July 16th, 2021
Sudhakar

  ಬೆಂಗಳೂರು :  ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ಇತರೆ ಸಿಬ್ಬಂದಿಗೆ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ನಿರ್ವಹಣೆ ಸಂಬಂಧ ವೈದ್ಯರಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 18 ವರ್ಷ ಮೇಲಿನವರೆಲ್ಲರಿಗೂ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಇದಕ್ಕಿಂತ ಕೆಳ ವಯಸ್ಸಿನ ಮಕ್ಕಳಿಗೆ ಸೋಂಕು ತಗುಲಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ಮಧ್ಯಮ, ಹಿರಿಯ ವಯಸ್ಸಿನವರಿಗೆ ನೀಡುವ […]

ದಾವಣಗೆರೆಯಲ್ಲಿ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Sunday, July 11th, 2021
Davanagere Hospital

ದಾವಣಗೆರೆ :  ದಾವಣಗೆರೆಯಲ್ಲಿ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡಬೇಕೆಂಬ ಉದ್ದೇಶವಿದ್ದು, ಇದಕ್ಕಾಗಿ ಪರಿಶೀಲನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ದಾವಣಗೆರೆ ಜಿಲ್ಲಾ ಪ್ರವಾಸದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಬೇಕೆಂಬ ಉದ್ದೇಶವಿದೆ. ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದ್ದೇನೆ. ಪಿಪಿಪಿ ಮಾದರಿಯಲ್ಲಿ ಆಸ್ಪತ್ರೆ ನಿರ್ಮಿಸುವ ಬಗ್ಗೆ ಚರ್ಚೆಯಾಗಿದೆ. 9 ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸುವ ಉದ್ದೇಶವಿದೆ. ರಾಜ್ಯದಲ್ಲಿ 18 […]

ಪ್ರತಿಬಂಧಕಾಜ್ಞೆ ಜಾರಿ ಮುಂದುವರಿಕೆ : ಮುಖಗವಸು ಧರಿಸದಿದ್ದರೆ ರೂ.250 ದಂಡ

Monday, May 24th, 2021
Gadag mask

ಗದಗ : ಜಿಲ್ಲೆಯಾದ್ಯಂತ ಕೋವಿಡ್-19 ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ದಂಡ ಪ್ರಕ್ರಿಯೆ ಸಂಹಿತೆ 1973 , ಸಾಂಕ್ರಾಮಿಕ ರೋಗ ಕಾಯ್ದೆ 1897 ದಿ ಕರ್ನಾಟಕ ಎಪಿಡಮಿಕ್ ಡಿಸೀಸ್ ಕೋವಿಡ್-19 ರೆಗ್ಯುಲೇಷನ್ 2020 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುಖಗವಸುಗಳನ್ನು ಧರಿಸುವಿಕೆ, ಕೈಗಳನ್ನು ಶುಚಿಯಾಗಿಡುವಿಕೆ, ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಕೋವಿಡ್-19 ಸರಪಳಿಯನ್ನು ತುಂಡಿರಿಸಲು ಆದೇಶದಲ್ಲಿ ಅವಕಾಶ ನೀಡಿದ ಚಟುವಟಿಕೆಗಳಿಗೆ […]

ಕೋವಿಡ್-19 ರ ಎರಡನೇ ಅಲೆ ನಿರೀಕ್ಷೆಗೂ ಮೀರಿ ಎಲ್ಲೆಡೆ ಸಂದಿಗ್ದತೆಯನ್ನು ಹುಟ್ಟು ಹಾಕಿದೆ : ಬಿ ಎಸ್ ಯಡಿಯೂರಪ್ಪ

Saturday, May 15th, 2021
BS Yediturappa

ಬೆಂಗಳೂರು : ಕೋವಿಡ್-19 ರ ಮೊದಲನೇ ಅಲೆಗಿಂತಲೂ ಎರಡನೇ ಅಲೆ ನಿರೀಕ್ಷೆಗೂ ಮೀರಿ ಎಲ್ಲೆಡೆ ಸಂದಿಗ್ದತೆಯನ್ನು ಹುಟ್ಟು ಹಾಕಿದೆ. ಅಲ್ಲದೆ, ವೈದ್ಯ, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರ ಮೇಲೆ ಹೆಚ್ಚಿನ ಒತ್ತಡ ಹೇರಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಲ್ಲಿ ಇಂದು ಅಭಿಪ್ರಾಯಪಟ್ಟರು. ಕೋವಿಡ್ ಚಿಕಿತ್ಸಾ ಕಾರ್ಯದಲ್ಲಿ ತೊಡಗಿರುವ ರಾಜ್ಯದ ವಿವಿಧ ಜಿಲ್ಲಾ ಹಾಗೂ ತಾಲ್ಲೂಕು ವೈದ್ಯರೊಂದಿಗೆ ವೀಡಿಯೋ ಸಂವಾದ ನಡೆಸಿ ವೈದ್ಯರ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ಪಡೆದರಲ್ಲದೆ, ವೈದ್ಯರು ಸೇವೆಯಲ್ಲಿ […]

ಬೀದಿ ಬದಿಯಲ್ಲಿ ತಿಂಡಿ ತಿನಿಸು ನೀಡಿ ಜನರ ಆರೋಗ್ಯ ಕೆಡಿಸುವ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ತುರವೇ ಮನವಿ

Tuesday, February 2nd, 2021
TRV

ಮಂಗಳೂರು : ನಗರದ ಬೀದಿ ಬದಿ ಯಲ್ಲಿ ಅನಧಿಕೃತ ವ್ಯಾಪಾರ ಮಾಡುವರ ಮೇಲೆ ಕ್ರಮ ಜರುಗಿಸಬೇಕೆಂದು ತುರವೇ ಹೋಟೆಲ್ ಮಾಲೀಕರ ಘಟಕ ಆಗ್ರಹಿಸಿದೆ. ಮಂಗಳೂರಿನ ಹೋಟೆಲ್ ಉದ್ಯಮಿದಾರರು ಸರ್ಕಾರದ ಪರವಾನಿಗೆ ತೆಗೆದುಕೊಂಡು ಹೋಟೆಲ್ ಉದ್ಯೋಗವನ್ನು ನಡೆಸುತ್ತಿದ್ದು G.S.T.ಕಟ್ಟಿ ಹೋಟೆಲ್ ಉದ್ಯೋಗವನ್ನು ನಡೆಸುತ್ತಿದ್ದೇವೆ. ಆದರೆ ಬೀದಿ ಬದಿಯಲ್ಲಿ ಪರಿಶುದ್ಧ ನೀರು ಉಪಯೋಗಿಸದೆ ರೋಗ ರುಜ್ಜಿನ ಗಳಿಗೆ ಕಾರಣವಾಗುವ ತಿಂಡಿ ತಿನಿಸು ತಯಾರಿಕೆ ಮತ್ತು ಮಾರಾಟ ಮಾಡುವ ವ್ಯಾಪಾರಿಗಳು ಸರ್ಕಾರದ ಯಾವುದೇ ಆದೇಶ ಪರವಾನಿಗೆ ಇಲ್ಲದೆ ಹೋಟೆಲ್ ಉದ್ಯೋಗವನ್ನು ನಡೆಸುತ್ತಿದ್ದಾರೆ. […]

ಕೊರೋನ ಯೋಧರು ಎಂದು ಆಸ್ಪತ್ರೆ ಗಳಲ್ಲಿ ದುಡಿಸಿಕೊಳ್ಳಲಾಗುತ್ತಿದೆಯೇ ಹೊರತು, ನಮಗೆ ಸೌಲಭ್ಯ ನೀಡುತ್ತಿಲ್ಲ

Monday, October 5th, 2020
contract doctors

ಮಂಗಳೂರು : ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಹೊರಗುತ್ತಿಗೆ ನೌಕರರ ಪ್ರತಿಭಟನೆ 12 ದಿನಕ್ಕೆ ಕಾಲಿಟ್ಟಿದ್ದು ನಗರದ ಮನಪಾ ಗಾಂಧಿ ಪ್ರತಿಮೆಯ ಬಳಿ ಸೋಮವಾರ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನಾ ಪ್ರದರ್ಶನ ನಡೆಯಿತು. ಸರಕಾರದ ಆಸ್ಪತ್ರೆಯಲ್ಲಿ 15ರಿಂದ 18 ವರ್ಷಗಳಿಂದ ದುಡಿಯುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಇನ್ನೂ ಜಾರಿಯಾಗಿಲ್ಲ. ತಾನು ಕೂಡಾ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ. ಗುತ್ತಿಗೆ, ಹೊರಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ನಮಗೆ ಕಾರ್ಮಿಕ […]

ಆರೋಗ್ಯ ಸಚಿವ ಬಿ. ಶ್ರೀರಾಮುಲು ಗೆ ಮಾತೃ ವಿಯೋಗ

Friday, August 21st, 2020
Ramulu mother

ಬಳ್ಳಾರಿ: ಕೋವಿಡ್ ಸೋಂಕಿಗೆ ತುತ್ತಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿ ಬಳ್ಳಾರಿಯ ಮನೆಗೆ ಹಿಂದಿರುಗಿ ದ  ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (95) ಬುಧವಾರ ತಡರಾತ್ರಿ ವಯೋಸಹಜ ಕಾರಣದಿಂದ ನಿಧನರಾದರು. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾದ ಬಳಿಕ ಬಳ್ಲಾರಿಯ ತಮ್ಮ ನಿವಾಸಕ್ಕೆ ತೆರಳಿದ್ದರು. ತಾಯಿಯ ನಿಧನದ ಬಗೆಗೆ ಸಚಿವ ಶ್ರೀರಾಮುಕು ಟ್ವೀಟ್ ಮಾಡಿದ್ದು “ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ನಿನ್ನೆ ತಡ ರಾತ್ರಿ ವಯೋಸಹಜ […]

ಹುಬ್ಬಳ್ಳಿ : ಕೋರೊನಾ ನಿಯಂತ್ರಣಕ್ಕೆ ಸ್ವಯಂ ಸೇವಕರ ನೇಮಕಾತಿ

Monday, July 20th, 2020
corona warriors

ಹುಬ್ಬಳ್ಳಿ : ಕೊರೊನಾ ಮಹಾಮಾರಿ ತಡೆಗೆ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಹೊಸ ತಂತ್ರ ಕಂಡುಕೊಂಡಿದೆ. ನಗರದ ಯುವ ಹಾಗೂ ಉತ್ಸಾಹಿ ಸ್ವಯಂ ಸೇವಕರ ತಂಡ ಕಟ್ಟಿಕೊಂಡು ಕೋವಿಡ್-19 ನಿಯಂತ್ರಣಕ್ಕೆ ಮುಂದಾಗಿದೆ. ಸೋಂಕು ತಡೆ ಸಲುವಾಗಿ ಧಾರವಾಡ ಜಿಲ್ಲಾಡಳಿತ ಹಾಗೂ ಪಾಲಿಕೆಯೊಂದಿಗೆ ಕೈಜೋಡಿಸುವ ಸಲುವಾಗಿ ಕೋವಿಡ್ ನಿಯಂತ್ರಣಕ್ಕೆ ಸ್ವಯಂ ಸೇವಕರ ತಂಡ ರಚಿಸಲಾಗುತ್ತಿದೆ. ಪಾಲಿಕೆಯ ಎಲ್ಲ ವಾರ್ಡ್ ಮಟ್ಟದ ಕಾರ್ಯಪಡೆಗಳನ್ನು ರಚಿಸಿ, ಜನರಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಕೆ, ಜೈವಿಕ ತ್ಯಾಜ್ಯ ವಿಲೇವಾರಿ ಕುರಿತು […]

ಸಚಿವ ಪ್ರಹ್ಲಾದ್​​ ಜೋಶಿಗೆ ಸಮಸ್ಯೆ ಹೇಳಿಕೊಳ್ಳಲು ವಾಟ್ಸ್​ಆ್ಯಪ್ ನಂಬರ್‌

Sunday, July 19th, 2020
pralhad-joshi

ಹುಬ್ಬಳ್ಳಿ : ಸಾರ್ವಜನಿಕರು ಸೇವೆಗಳನ್ನು ಪಡೆಯಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಚೇರಿಗೆ ಬರುತ್ತಿರುವುದರಿಂದ ಸಾರ್ವಜನಿಕರ ಹಾಗೂ ಕಚೇರಿ ಸಿಬ್ಬಂದಿ ಆರೋಗ್ಯ ದೃಷ್ಟಿಯಿಂದ ಕಚೇರಿ ನಿರ್ವಹಣೆಗೆ ವಾಟ್ಸ್ಆ್ಯಪ್ ನಂಬರ್ ಕೊಡಲಾಗಿದೆ. ಅವಳಿ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ. ವಾಟ್ಸ್ಆ್ಯಪ್ ನಂ. 9449491444 ಹಾಗೂ ಸ್ಥಿರ ದೂರವಾಣಿ ಸಂಖ್ಯೆ 0836 2251055, 2258955 ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತ ಅರ್ಜಿಯನ್ನು ಕಳುಹಿಸಿದ್ರೆ ಕಚೇರಿ ಸಿಬ್ಬಂದಿ ಅದರ ಬಗ್ಗೆ ನಿಗಾವಹಿಸಿ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುತ್ತಾರೆ.ಇಮೇಲ್ ಮೂಲಕವೂ […]

ವೃತಾಚರಣೆಗಳು ಜೀವನದ ಆರೋಗ್ಯ ವರ್ಧನೆಗೆ ಪೂರಕ : ಪಲಿಮಾರು ಶ್ರೀ

Tuesday, January 21st, 2020
palimaru

ಮಂಗಳೂರು : ಏಕಾದಶಿ ಉಪವಾಸ ವೃತಾಚರಣೆಯು, ದೈಹಿಕ ಆರೋಗ್ಯ ಹಾಗೂ ಮಾನಸಿಕ ಆರೋಗ್ಯ, ಜೀವನೋತ್ಸಾಹ ವೃದ್ಧಿಗೆ ಪೂರಕವಾಗಿದೆ ಎಂದು ನಿಕಟ ಪೂರ್ವ ಪರ್ಯಾಯ ಪೂರೈಸಿರುವ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀ ಶ ತೀರ್ಥ ಸ್ವಾಮೀಜಿಯವರು ನುಡಿದರು. ಪರ್ಯಾಯ ಪೂರೈಸಿದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ಪೂಜ್ಯರನ್ನು ಕಲ್ಕೂರ ಪ್ರತಿಷ್ಠಾನದ ವತಿಯಿಂದ ಗೌರವಿಸಲಾಯಿತು. ಪ್ರತಿಷ್ಠಾನದ ಅಧ್ಯ ಕ್ಷಎಸ್. ಪ್ರದೀಪ ಕುಮಾರ ಕಲ್ಕೂರ, ಶ್ರೀಮತಿ ವಿನೋದ ಪಿ. ಕಲ್ಕೂರ, ನಿತ್ಯಾನಂದ ಕಾರಂತ ಪೊಳಲಿ, ಕದ್ರಿ ನವನೀತ […]