ಕುಷ್ಠರೋಗ ಆರೋಗ್ಯಾಧಿಕಾರಿಯ ಕಾಮದಾಟ, ಅದು ಬರೋಬ್ಬರಿ 9 ಮಹಿಳೆಯರೊಂದಿಗೆ

Friday, November 26th, 2021
Dr Ratnakara

ಮಂಗಳೂರು  : ಆಯುಷ್ಮಾನ್ ನೋಡೆಲ್ ಆಫೀಸರ್ ಹಾಗೂ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಡಾ.ರತ್ನಾಕರ್ ತನ್ನ ಕಚೇರಿಯ 9 ಮಹಿಳಾ ಸಿಬ್ಬಂದಿಯೊಂದಿಗೆ ಚಕ್ಕಂದವಾಡಿ ಸಿಕ್ಕಿಕೊಂಡಿದ್ದಾರೆ. ಅವರನ್ನು ಈಗ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕುಷ್ಠರೋಗ ವಿಭಾಗದ ಕಚೇರಿಯ ಸಿಬ್ಬಂದಿ ಜತೆ ವೈದ್ಯಾಧಿಕಾರಿ ತುಂಬಾ ಸಲುಗೆಯಿಂದಿರುವ ಫೋಟೋ ಮತ್ತು ವಿಡಿಯೋಗಳು 2021 ಜನವರಿ ತಿಂಗಳಲ್ಲಿ ಬಹಿರಂಗವಾಗಿತ್ತು, ಈ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ಈ ಕಾಮುಕ ವೈದ್ಯ ಮಹಿಳಾ ಸಿಬ್ಬಂದಿಗಳ ಜತೆ ನಿತ್ಯ ಚೆಲ್ಲಾಟ ನಡೆಸುತ್ತಿದ್ದ ಎಂದು ಆರೋಪಿಸಲಾಗಿದ್ದು. ಸಹಕಾರ ನೀಡದಿದ್ದರೆ […]

ಪತ್ರಕರ್ತರಿಗೆ, ಕುಟುಂಬ ಸದಸ್ಯರಿಗೆ ಲಸಿಕಾ ಕಾರ್ಯಕ್ರಮ

Wednesday, June 23rd, 2021
press-vacination

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾಡಳಿತದ ವತಿಯಿಂದ ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬ ಸದಸ್ಯರಿಗೆ ಕೋವಿಶಿಲ್ಡ್ ಲಸಿಕೆ ನೀಡುವ ಶಿಬಿರ ಬುಧವಾರ ಉರ್ವದ ಪತ್ರಿಕಾ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕೋವಿಡ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಸಲುವಾಗಿ ಎಲ್ಲರೂ ಕೋವಿಡ್ ನಿರೋಧಕ ಲಸಿಕೆಯನ್ನು ಪಡೆದುಕೊಳ್ಳಬೇಕು. ಲಸಿಕೆ ಉತ್ಪಾದನೆಯಾಗಿ ಹಂತ ಹಂತವಾಗಿ ಪೂರೈಕೆಯಾಗುತ್ತಿರುವ ಕಾರಣ 45 ವರ್ಷಕ್ಕಿಂತ […]

ಹಂತ ಹಂತವಾಗಿ ನೀರು ಬಿಡುಗಡೆ ಮಹಾರಾಷ್ಟ್ರ ಸಮ್ಮತಿ : ಕಾರಜೋಳ

Wednesday, June 23rd, 2021
Karajola

ಚಿಕ್ಕೋಡಿ : ಜಲಾಶಯ ಸಂಪೂರ್ಣ ಭರ್ತಿಯಾದಾಗ ಒಮ್ಮೆಲೆ ನೀರು ಬಿಡುಗಡೆ ಮಾಡಿದರೆ ತೊಂದರೆಯಾಗುತ್ತದೆ. ಆದ್ದರಿಂದ ಹಂತ ಹಂತವಾಗಿ ನೀರು ಬಿಡುಗಡೆ ಮಾಡಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ‌  ಗೋವಿಂದ ಕಾರಜೋಳ ತಿಳಿಸಿದರು. ಹಂತ ಹಂತವಾಗಿ ನೀರು‌ ಬಿಡುಗಡೆಗೆ ಮಹಾರಾಷ್ಟ್ರ ಸರಕಾರ ಕೂಡ ಸಹಮತ ವ್ಯಕ್ತಪಡಿಸಿದೆ. ಪ್ರವಾಹ ಪರಿಸ್ಥಿತಿ ಉದ್ಭವಿಸಿದರೆ ನದಿತೀರದ ಜನರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹ ಬಂದಾಗ ಸಂಪೂರ್ಣ ಜಲಾವೃತವಾಗುವ […]

ಆರೋಗ್ಯಾಧಿಕಾರಿ ಪ್ರಾಣಕಳ್ಕೊಂಡರೂ, ದಾರಿಯಲ್ಲೇ ಬಿಟ್ಟು ಹೋದ ತರೀಕೆರೆ ಶಾಸಕ

Thursday, May 27th, 2021
Tarikere MLA

ಚಿಕ್ಕಮಗಳೂರು :  ಆತ ಪ್ರಾಣ ಉಳಿಸಿಕೊಳ್ಳಲು ವಿಲವಿಲ ಎಂದು ಒದ್ದಾಡುತ್ತಿದ್ದಾಗ, ಅದೇ ದಾರಿಯಲ್ಲಿ ಹೋಗುತ್ತಿದ್ದ ಶಾಸಕ ಕ್ಯಾರೇ ಅನ್ನದೆ ಅಲ್ಲಿಂದ ಕಾಲ್ಕಿತ್ತ ಅಮಾನವೀಯ ಘಟನೆ ತರೀಕೆರೆಯ ಲಕ್ಕವಳ್ಳಿ ಕ್ರಾಸ್ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ. ಕೊರೋನಾ ಡ್ಯೂಟಿ ಮುಗಿಸಿ ತೆರಳುತ್ತಿದ್ದ ಹಿರಿಯ ಆರೋಗ್ಯಾಧಿಕಾರಿಗೆ ತರೀಕೆರೆಯ ಲಕ್ಕವಳ್ಳಿ ಕ್ರಾಸ್ ಬಳಿ ಅಪಘಾತವಾಗಿತ್ತು. ಆರೋಗ್ಯಾಧಿಕಾರಿ ರಮೇಶ್ ಅವರ ಬೈಕ್ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿತ್ತು. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲು ಸ್ಥಳೀಯರು ಆ್ಯಂಬುಲೆನ್ಸ್ಗೆ ಫೋನ್ ಮಾಡಿದ್ದರು. […]

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿಗೆ ನಿವೃತ್ತಿ

Thursday, April 1st, 2021
bayari

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಡಾ. ರಾಮಚಂದ್ರ ಬಾಯರಿ ಅವರು ಇಂದು ಸೇವೆಯಿಂದ ನಿವೃತ್ತಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾದಾಗ ಡಾ.ರಾಮಚಂದ್ರ ಬಾಯರಿ ಅವರನ್ನು ಸರ್ಕಾರ ದ.ಕ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ನೇಮಿಸಿತ್ತು. ರಾಮಚಂದ್ರ ಬಾಯರಿ ಅವರು ಆರೋಗ್ಯಾಧಿಕಾರಿಯಾದ ಬಳಿಕ ಜಿಲ್ಲೆಯಲ್ಲಿ ಹೆಚ್ಚುತ್ತಿದ್ದ ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಆರಂಭಿಸಿದ್ದರು. ಇದೇ ವೇಳೆ ಅವರಿಗೂ ಕೊರೊನಾ ಕಾಣಿಸಿತ್ತು. ಗುಣಮುಖರಾದ ಬಳಿಕ ಮತ್ತೆ ಸೇವೆಗೆ ಮರಳಿದ್ದರು. ಆರೋಗ್ಯ ಸಚಿವರ ನೇತೃತ್ವದಲ್ಲಿ ನಡೆದ ಆರೋಗ್ಯ […]

ʼಕೊವಿಡ್‌ ಲಸಿಕೆ, ಸರ್ಕಾರಿ ವ್ಯವಸ್ಥೆ ಬಗ್ಗೆ ನಂಬಿಕೆ ಇರಲಿʼ – ಡಾ. ಅಣ್ಣಯ್ಯ ಕುಲಾಲ್

Wednesday, March 24th, 2021
UCM

ಮಂಗಳೂರು: ಕೊವಿಡ್‌ ಲಸಿಕೆಯ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಮನಸ್ಸಿಂದ ಹೊರಹಾಕಿ ಅರ್ಹರು ಲಸಿಕೆ ಹಾಕಿಸಿಕೊಳ್ಳೋಣ. ಸಾಂಕ್ರಾಮಿಕ ಕಲಿಸಿರುವ ಪಾಠದಿಂದ ಎಚ್ಚೆತ್ತು ಎರಡನೇ ಅಲೆಯನ್ನು ತಡೆಯೋಣ, ಎಂದು ಶ್ರೀನಿವಾಸ ವಿಶ್ವವಿದ್ಯಾನಿಲಯದ ಮುಖ್ಯ ಆರೋಗ್ಯಾಧಿಕಾರಿ ಮತ್ತು ಪ್ರಾಧ್ಯಾಪಕ ಡಾ. ಅಣ್ಣಯ್ಯ ಕುಲಾಲ್‌ ಕರೆ ನೀಡಿದ್ದಾರೆ. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್‌ಕ್ರಾಸ್‌, ಎನ್‌ಸಿಸಿ, ಎನ್‌ಎಸ್‌ಎಸ್‌ ಮತ್ತು ಇತರ ಸಂಘಗಳ ಆಶ್ರಯದಲ್ಲಿ ರವೀಂದ್ರ ಸಭಾಭವನದಲ್ಲಿ ಬುಧವಾರ ನಡೆದ ಕೊವಿಡ್‌- 19 ಜಾಗೃತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಶಿಕ್ಷಕರು, ಎನ್‌ಸಿಸಿ, […]

ಶುದ್ಧೀಕರಿಸದೇ ನಗರಕ್ಕೆ ನೀರನ್ನು ಪೂರೈಸಿದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ ಆಯುಕ್ತರು

Tuesday, September 22nd, 2020
Palike sabhe

ಮಂಗಳೂರು:  ಚರ್ಚೆ ಗದ್ದಲಗಳ ನಡುವೆ ಮಂಗಳೂರು ಮಹಾ ನಗರ ಪಾಲಿಕೆ ಸಾಮಾನ್ಯ ಸಭೆ  ಇಂದು ಮೇಯರ್ ದಿವಾಕರ್ ಪಾಂಡೇಶ್ವರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕುಡಿವ ನೀರು ಸಂಸ್ಕರಣಾ ಘಟಕದ ನೀರಿನ ಗುಣಮಟ್ಟ 36.4 ಇದೆ ಎಂದು ವರದಿ ಬಂದ ಹಿನ್ನೆಲೆಯಲ್ಲಿ  ನೀರಿಗೆ ಅಗತ್ಯ ರಾಸಾಯನಿಕ ಬಳಸಿ ಶುದ್ಧೀಕರಿಸದೇ ನೀರನ್ನು ಪೂರೈಸಿರುವ ಕಾರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಪ್ರಸ್ತಾಪಿಸಿದರು. ಈ ಬಗ್ಗೆ ಹಿರಿಯ ಆರೋಗ್ಯಾಧಿಕಾರಿಗಳು ಈ ನೀರು ಸೇವನೆಯಿಂದ […]

ಕೋವಿಡ್ ರೋಗಿಗಳನ್ನು ವಾಪಾಸ್ ಕಳುಹಿಸುವಂತಿಲ್ಲ: ಖಾಸಗೀ ಆಸ್ಪತ್ರೆಗಳಿಗೆ ಉಸ್ತುವಾರಿ ಸಚಿವರ ನಿರ್ದೇಶನ 

Monday, July 20th, 2020
hospital

ಮಂಗಳೂರು :  ಖಾಸಗೀ ಆಸ್ಪತ್ರೆಗಳು ತಮ್ಮಲ್ಲಿಗೆ ಬಂದ ಕೋರೋನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡದೆ ಯಾವುದೇ ಕಾರಣಕ್ಕೂ ವಾಪಾಸು ಕಳುಹಿಸುವಂತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಸೋಮವಾರ ನಗರದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಕೋರೋನಾ ರೋಗಿಗಳ ನಿರ್ವಹಣೆ ಕುರಿತು ಸಭೆ ನಡೆಸಿ, ಬಳಿಕ ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯು ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರಿದಿದೆ. ಹೀಗಿರುವಾಗ, ಕೋವಿಡ್ ಸೋಂಕಿತರು ಅಥವಾ ಇತರೆ ಯಾವುದೇ ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ […]

ಉಡುಪಿ : ಆರೋಗ್ಯಾಧಿಕಾರಿಗೆ ನಗರಸಭಾ ಸದಸ್ಯ ನಿಂದ ಹಲ್ಲೆ

Tuesday, July 16th, 2019
udupi-attack

ಉಡುಪಿ : ತನ್ನ ವಾರ್ಡಿನ ಜನರಿಗೆ ಆರೋಗ್ಯ ಇಲಾಖೆಯ ಸವಲತ್ತುಗಳ ಸರಿಯಾದ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಉಡುಪಿ ನಗರಸಭಾ ಸದಸ್ಯ ಯೋಗೀಶ್ ವಡಬಾಂದೇಶ್ವರ ಅವರು ಉಡುಪಿ ಆರೋಗ್ಯಾಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಜುಲೈ 16 ರ ಮಂಗಳವಾರ ವಡಬಾಂದೇಶ್ವರ ವಾರ್ಡ್ ನ ನೂತನ ಸದಸ್ಯ ಯೋಗೀಶ್ ಸಾಲಿಯಾನ್ ಅವರು ತನ್ನ ವಾರ್ಡ್ ನ ಸಮಸ್ಯೆಯೊಂದನ್ನು ಸರಿಪಡಿಸಿಲ್ಲವೆಂದು ಉಡುಪಿ ಮುನ್ಸಿಪಾಲಿಟಿ ಆರೋಗ್ಯ ಇನ್ಸ್‌ಪೆಕ್ಟರ್ ಪ್ರಸನ್ನ ಅವರಿದ್ದ ಕಚೇರಿಗೆ ನುಗ್ಗಿ ವಾಗ್ವಾದ ನಡೆಸಿ ಮಾತಿಗೆ ಮಾತು ಬೆಳೆದು ಯೋಗೀಶ್ […]

ಜಿಲ್ಲೆಯಲ್ಲಿ ಮಂಗನಕಾಯಿಲೆ ಭೀತಿ, ಆರೋಗ್ಯಾಧಿಕಾರಿಯಿಂದ ಎಚ್ಚರಿಕೆ

Tuesday, January 8th, 2019
Health officer

ಮಂಗಳೂರು :  ದಕ್ಷಿಣ ಕನ್ನಡದ ಮಲೆನಾಡಿನ ತಪ್ಪಲಿನಲ್ಲಿರುವ ಹಳ್ಳಿಗಳಲ್ಲಿ ಮಂಗನಕಾಯಿಲೆ ಕುರಿತು ಜಾಗೃತಿ ಮೂಡಿಸಲು ಇಲಾಖೆಯ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ. ರಾಮಕೃಷ್ಣ ರಾವ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ತಂಡಗಳನ್ನು ರಚಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಅವರು, ಉಣ್ಣಿಗಳಿಂದ ಕಾಯಿಲೆ ಹರಡುವುದರಿಂದ ಕಾಡಂಚಿನ ಮಂದಿ ಕಾಡಿಗೆ ಹೋಗುವುದನ್ನು ಸ್ವಲ್ಪ ಕಾಲ ಸ್ಥಗಿತಗೊಳಿಸುವಂತೆ ಕರೆ ನೀಡಿದರು. ಎಮ್ಮೆ, ಆಕಳು ಮೊದಲಾದ ಸಾಕುಪ್ರಾಣಿಗಳನ್ನು ಕಾಡಿಗೆ ಬಿಡುತ್ತಾರೆ. ಸೌದೆ ಸಂಗ್ರಹಕ್ಕೆ ಕಾಡಿಗೆ […]