ನರೇಗಾ ಯೋಜನೆಯಡಿ 9 ಲಕ್ಷ ಜನಕ್ಕೆ ಉದ್ಯೋಗ ಕೊಟ್ಟಿದ್ದೇವಲ್ಲ : ಈಶ್ವರಪ್ಪ

Tuesday, May 26th, 2020
eswarappa

ಹುಬ್ಬಳ್ಳಿ : ಕೊರೋನಾ ಸಂಕಷ್ಟದಲ್ಲಿ ಸಿಲುಕಿರುವ ರಾಜ್ಯದ ಗ್ರಾಮೀಣ ಭಾಗದ ಜನತೆಗೆ ಇದುವರೆಗೂ ನರೇಗಾ ಯೋಜನೆಯಡಿ 9 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಕೆ.ಎಸ್‌ .ಈಶ್ವರಪ್ಪ ಹೇಳಿದರು. ಅವರು ಮೇ. 26 ಮಂಗಳವಾರದಂದು ನಗರದಲ್ಲಿ ಜಿಲ್ಲಾ ಪಂಚಾಯಿತಿ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿ, ಲಾಕ್‌ ಡೌನ್‌ ಸಡಿಲಿಕೆಯಿಂದ ಹೊರ ರಾಜ್ಯಗಳಿಂದ ಹೆಚ್ಚಿನ ಜನ ನಮ್ಮ ಕನ್ನಡಿಗರು ಆಗಮಿಸುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ […]

ಶಿವಮೊಗ್ಗ : ಪ್ರವಾಹ ಪರಿಹಾರ ಸಭೆಯಲ್ಲಿ ಸಿಎಂ ಭಾಗಿ

Saturday, August 31st, 2019
shivamugga

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಕೆ ಎಸ್ ಈಶ್ವರಪ್ಪರನ್ನು ಸಿಎಂ ಬಿ ಎಸ್ ಯಡಿಯೂರಪ್ಪನವರು ಘೋಷಣೆ ಮಾಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಜಿಲ್ಲಾ ಪ್ರವಾಹ ಪರಿಹಾರ ಸಭೆಯಲ್ಲಿ ಭಾಗಿಯಾಗಿ ಸಿಎಂ ಈ ಘೋಷಣೆ ಮಾಡಿದರು. ಇನ್ನು ಮುಂದೆ ಈಶ್ವರಪ್ಪ ಜಿಲ್ಲೆಯ ಎಲ್ಲಾ ಸಭೆಗಳನ್ನು ನಡೆಸಲಿದ್ದು, ಅವರಿಗೆ ಎಲ್ಲಾ ಅಧಿಕಾರಿಗಳು ಸಹಕಾರ ನೀಡಬೇಕು ಎಂದರು. ಇದೇ ವೇಳೆ ನೆರೆ ಪರಿಹಾರದ ಕುರಿತು ಅಧಿಕಾರಿಗಳಿಂದ ಮಾಹಿತಿ […]

ಜಾಮೀನು ರಹಿತ ವಾರೆಂಟ್.. ಸಂಕಷ್ಟದಲ್ಲಿ ಈಶ್ವರಪ್ಪ

Monday, October 29th, 2018
ishwarappa

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪಗೆ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. 2011ರ ಜನವರಿ‌ 22 ಯಡಿಯೂರಪ್ಪ ಖುರ್ಚಿಯಿಂದ ಇಳಿದಾಗ ರಾಜಕೀಯ ಪಕ್ಷಗಳು ಬಂದ್ಗೆ ಕರೆ ನೀಡಬಾರದು ಎಂದು ಕೋರ್ಟ್ ತೀರ್ಪು ನೀಡಿತ್ತು. ಇದರ ನಡುವೆಯೂ ಈಶ್ವರಪ್ಪ ಬಂದ್ಗೆ ಕರೆ ಮಾಡಿದ್ದರು. ಈ ಕಾರಣದಿಂದ ಬಂದ್ ವೇಳೆ ಸುಮಾರು 5 ಕೋಟಿ ನಷ್ಟವುಂಟಾಗಿತ್ತು. ಘಟನೆ ಹಿನ್ನೆಲೆ ಬಂದ್ ಪ್ರಶ್ನೆ‌ ಮಾಡಿ ವಕೀಲ ಧರ್ಮಪಾಲ್ ಖಾಸಗಿ ದೂರು ಸಲ್ಲಿಸಿದ್ದರು. ಸರ್ಕಾರದ ಬೊಕ್ಕಸಕ್ಕೆ ನಷ್ಟ […]

ಮಹಾನಗರ ಪಾಲಿಕೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ ಈಶ್ವರಪ್ಪ

Tuesday, August 14th, 2018
ishwarappa

ಶಿವಮೊಗ್ಗ: ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ಬಿಡುಗಡೆ ಮಾಡಿದರು. ನಗರದ ಬಿಜೆಪಿ ಕಚೇರಿಯಲ್ಲಿ ಪಟ್ಟಿ ಬಿಡುಗಡೆ ಮಾಡಿದ ಶಾಸಕ ಕೆ.ಎಸ್. ಈಶ್ವರಪ್ಪ 35 ವಾರ್ಡ್ಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಿದರು. ಆಗಸ್ಟ್ 31 ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಲ್ಲೂ ಅಸಮಾಧಾನ ವ್ಯಕ್ತವಾಗಿದ್ದು, ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ ಗೈರಾಗಿದ್ದರು.

ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟ: ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಗರಂ

Tuesday, June 5th, 2018
eshwarappa

ಬೆಂಗಳೂರು: ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದೆ. ಶಿವಮೊಗ್ಗದ ಹಿಡಿತ ಸಾಧಿಸುವ ಸಲುವಾಗಿಯೇ ಈ ಬಾರಿಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕೆ.ಎಸ್.ಈಶ್ವರಪ್ಪ ಮತ್ತೊಮ್ಮೆ ಸಿಡಿದು ನಿಂತಿದ್ದಾರೆ. ಹೌದು, ರಾಜ್ಯ ಬಿಜೆಪಿಯಲ್ಲಿ ತಲೆದೂರುವ ಭಿನ್ನಮತದ ಮೂಲ ಹುಡುಕಿಕೊಂಡು ಹೊರಟರೆ ಅದು ತಲುಪುವುದು ಶಿವಮೊಗ್ಗಕ್ಕೆ. ಒಂದಲ್ಲ ಒಂದು ಕಾರಣದಿಂದ ಶಿವಮೊಗ್ಗ ನಾಯಕರಿಂದಲೇ ಭಿನ್ನಮತೀಯ ಚಟುವಟಿಕೆಗಳಿಗೆ ಚಾಲನೆ ಸಿಕ್ಕಿರುತ್ತದೆ, ಈಗಲೂ ಹಾಗೆಯೇ ಆಗಿದೆ. ವಿಧಾನಸಭೆ ಚುನಾವಣೆಗೂ ಮುನ್ನ ಶಿವಮೊಗ್ಗ ಟಿಕೆಟ್ ಈಶ್ವರಪ್ಪ ಕೈತಪ್ಪಲಿದೆ ಎನ್ನುವ ಮಾತುಗಳು […]

ದೇವರ, ರೈತರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಿಎಸ್‌ವೈ

Thursday, May 17th, 2018
yedeyurappa

ಬೆಂಗಳೂರು: ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ದೇವರ ಮತ್ತು ರೈತರ ಹೆಸರಲ್ಲಿ ಬಿಎಸ್‌ವೈ ಪದಗ್ರಹಣ ಮಾಡಿದರು. ರಾಜ್ಯಪಾಲ ವಜುಭಾಯ್ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಜಗದೀಶ್ ಶೆಟ್ಟರ್, ಈಶ್ವರಪ್ಪ, ಶ್ರೀರಾಮುಲು, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಮುಖ್ಯಮಂತ್ರಿಯಾಗಿ ಬಿಎಸ್‌ವೈ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತು.

ಯಡಿಯೂರಪ್ಪ – ನಾನು ರಾಮ-ಲಕ್ಷ್ಮಣರಂತೇ ಸಹೋದರರು: ಈಶ್ವರಪ್ಪ

Wednesday, March 28th, 2018
eshwarappa

ಶಿವಮೊಗ್ಗ: ಕಳೆದ ಚುನಾವಣೆ ಸಂದರ್ಭದಲ್ಲಿ ಹಲವಾರು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ಅಹಿಂದ ವರ್ಗಕ್ಕೆ ದ್ರೋಹ ಎಸಗಿದೆ. ಬಿಜೆಪಿ ಸರ್ಕಾರ ಹಾಗೂ ಸಿದ್ದರಾಮಯ್ಯ ಸರ್ಕಾರ ಈ ವರ್ಗದ ಜನರಿಗೆ ಎಷ್ಟು ಅನುದಾನ ನೀಡಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕಳೆದ ನಾಲ್ಕೂವರೆ ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಸಮಾಜದಲ್ಲಿ ಗೊಂದಲ ಮೂಡಿಸುವ ಅನೇಕ ಪ್ರಯತ್ನ ನಡೆಸಿದ್ದಾರೆ. ಹಿಂದುಳಿದ […]

ಈಶ್ವರಪ್ಪರವರೊಂದಿಗೆ ಯಾವುದೇ ಭಿನ್ನಮತವಾಗಲಿ, ಗೊಂದಲವಾಗಲಿ ಇಲ್ಲ: ಯಡಿಯೂರಪ್ಪ

Monday, August 22nd, 2016
Yadiyoorappa

ಮಂಗಳೂರು: ದೆಹಲಿಯಲ್ಲಿ ಆ. 23ರಂದು ಎಲ್ಲಾ ರಾಜ್ಯಗಳ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು ಅದರಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಏತನ್ಮಧ್ಯೆ ಕೆ.ಎಸ್. ಈಶ್ವರಪ್ಪರವರೊಂದಿಗೆ ಯಾವುದೇ ಭಿನ್ನಮತವಾಗಲಿ, ಗೊಂದಲವಾಗಲಿ ಇಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದಿದ್ದಾರೆ. ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ನನ್ನ ಹಾಗೂ ಈಶ್ವರಪ್ಪ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಈಗಾಗಲೇ ಎಲ್ಲ ವಿಷಯವನ್ನು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ. ಪಕ್ಷದ ಚೌಕಟ್ಟಿನ ಹೊರಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡರೆ ಅಭ್ಯಂತರ ಇಲ್ಲ. ಆದರೆ ಈ […]

ಬಿಎಸ್‌ವೈಗೆ ಸಡ್ಡು : ಈಶ್ವರಪ್ಪ ಬ್ರಿಗೇಡ್‌ ಅಸ್ತಿತ್ವಕ್ಕೆ

Saturday, August 20th, 2016
Eshwarappa

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಸಲಹೆ-ಸೂಚನೆಗೆ ಕ್ಯಾರೆ ಎನ್ನದ ಪಕ್ಷದ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಅವರು ಗುರುವಾರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಸಭೆ ನಡೆಸುವ ಮೂಲಕ ಹಿಂದುಳಿದ ಮತ್ತು ದಲಿತ ವರ್ಗಗಳ ಸಂಘಟನೆಗೆ ದಾಪುಗಾಲು ಇಟ್ಟಿದ್ದಾರೆ. ಆದರೆ ಯಡಿಯೂರಪ್ಪ ಅವರ ಭಯದ ಕಾರಣವೋ ಏನೋ ಎಂಬಂತೆ ಈ ಬಾರಿ ಈಶ್ವರಪ್ಪ ಅವರು ಎಚ್ಚರಿಕೆಯ ಹೆಜ್ಜೆ ಇಟ್ಟಿದ್ದು, ಬ್ರಿಗೇಡ್‌ನ‌ ನೂತನ ಪದಾಧಿಕಾರಿಗಳ ಪಟ್ಟಿಯಿಂದ ಅಧಿಕೃತವಾಗಿ ಹೊರಗುಳಿದಿದ್ದಾರೆ. ಬ್ರಿಗೇಡ್‌ಗೆ 22 ರಾಜ್ಯ ಸಂಚಾಲಕರನ್ನು ನೇಮಿಸಿದ್ದು, ಇದರಲ್ಲಿ […]