ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಕುರಿತ ಸ್ಫೋಟಕ ಮಾಹಿತಿ ಬಹಿರಂಗ

Thursday, January 6th, 2022
Deepthi Marla

ಬೆಂಗಳೂರು :  ಉಳ್ಳಾಲದಲ್ಲಿ ರಾಷ್ಟ್ರೀಯ ತನಿಖಾ ದಳ ಬಂಧಿಸಿರುವ ದಂತ ವೈದ್ಯೆ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಕುರಿತ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಪ್ರಕರಣದಲ್ಲಿ ಹನಿಟ್ರ್ಯಾಪ್, ಮತಾಂತರ ಹಾಗೂ ಉಗ್ರ ಸಂಘಟನೆಯ ಒಡನಾಟವಿರುವ ಮಾಹಿತಿ ಹೊರಬಿದ್ದಿದೆ. ಮಾಜಿ ಶಾಸಕ ಇದನಬ್ಬರ ಮೊಮ್ಮಗನ ಮದುವೆ ಆದ ಬಳಿಕ ಇಸ್ಲಾಂಗೆ ಮತಾಂತರವಾಗಿದ್ದ ದೀಪ್ತಿ ಮಾರ್ಲ ಕ್ರೋನಿಕಲ್ ಫೌಂಡೇಶನ್ ಎಂಬ ಇನ್ಸ್ಟಾಗ್ರಾಂ ಪೇಜ್‌ನಲ್ಲಿ ಯುವಕರನ್ನ ಮತಾಂತರಕ್ಕೆ ಪ್ರೇರೇಪಿಸುತ್ತಿದ್ದಳಂತೆ. ಬಳಿಕ ಮತಾಂತರಗೊಂಡ ಯುವಕರನ್ನ ಇಸ್ಲಾಮಿಕ್‌ ಸ್ಟೇಟ್‌ ಉಗ್ರ ಸಂಘಟನೆಗೆ ಸೇರಿಸುತ್ತಿದ್ದಳು ಎಂದು ಎನ್‌ಐಎ ಪ್ರಾಥಮಿಕ‌ […]

ಮುರುಡೇಶ್ವರ ಶಿವನ ವಿಗ್ರಹ ದ ಶಿರವನ್ನು ಕತ್ತರಿಸಿದ ಫೋಟೊ ವೈರಲ್, ದೇವಸ್ಥಾನದ ಭದ್ರತೆ ಇನ್ನಷ್ಟು ಬಿಗಿ

Tuesday, November 23rd, 2021
Murudeshwara-Shiva-Statue

ಭಟ್ಕಳ  : ಅತ್ಯಂತ ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಕರ್ನಾಟಕದ ಪ್ರಸಿದ್ಧ ಯಾತ್ರಾತಾಣಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರ ದ ಬೃಹತ್ ಈಶ್ವರ ಪ್ರತಿಮೆ ಚಿತ್ರ  ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇದು ಉಗ್ರ ಸಂಘಟನೆಯ ದಾಳಿ ಸಂಚು ಎಂದು ಹೇಳಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರ ಶಿವನ ವಿಗ್ರಹ ದ ಶಿರವನ್ನು ಕತ್ತರಿಸಿದಂತೆ ಎಡಿಟ್ ಮಾಡಲಾದ ಫೋಟೊವನ್ನು ಉಗ್ರ ಸಂಘಟನೆ ‘ಐಸಿಸ್’(ISIS)ನ ಪತ್ರಿಕೆಯಲ್ಲಿ ಪ್ರಕಟಿಸಲಾಗಿದ್ದು, ಈ ಚಿತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ […]

ಮಂಗಳೂರು : ದುಬೈಯಲ್ಲಿದ್ದ ಪತ್ನಿಗೆ ಉಗ್ರರ ನಂಟು, ಪತಿಯಿಂದ ಪೊಲೀಸರಿಗೆ ದೂರು

Thursday, September 2nd, 2021
chidananda

ಮಂಗಳೂರು : ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ವ್ಯಕ್ತಿಯೊಬ್ಬರು ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟು ಇದೆ ಎಂದು ಆರೋಪಿಸಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ದೂರು ನೀಡಿದ್ದಾರೆ. ಪೊಲೀಸರಿಗೆ ನೀಡಿದ ದೂರಿನಂತೆ  ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ  ಚಿದಾನಂದ ಎಂಬವರು  ತನ್ನ ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟು ಇದ್ದು, ಸದ್ಯ ನಾಪತ್ತೆಯಾಗಿದ್ದಾಳೆ. ಈ ಹಿನ್ನೆಲೆ ದ.ಕ. ಜಿಲ್ಲಾ ಎಸ್ಪಿಗೆ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಪತ್ನಿ‌ ರಾಜಿ ರಾಘವನ್ ಗೆ ಉಗ್ರ ಸಂಘಟನೆಯೊಂದಿಗೆ ನಂಟಿದೆ. ಕಳೆದ 11 ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿದ್ದಾಳೆ. […]

ಲವ್ ಬ್ರೇಕಪ್ : ಪ್ರತೀಕಾರ ತೀರಿಸಲು ಉಗ್ರ ಸಂಘಟನೆ ಸೇರಿದ ಯುವಕ

Wednesday, November 27th, 2019
Love-Breckup

ನವದೆಹಲಿ : ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದು, ಅದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿ ನಮ್ಮ ಸಂಬಂಧವನ್ನು ಬಲವಂತವಾಗಿ ಮುರಿದು ಬೀಳುವಂತೆ ಮಾಡಿದ್ದು, ಅದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಉಗ್ರಗಾಮಿ ಸಂಘಟನೆ ಸೇರಿಕೊಂಡಿದ್ದೇನೆ. ಇದು ಸೋಮವಾರ ಅಸ್ಸಾಂನ ಗೋಲಾಪುರಲ್ಲಿ ಸಿಕ್ಕಿಬಿದ್ದಿರುವ ಮೂವರು ಶಂಕಿತ ಉಗ್ರರ ಪೈಕಿ ಒಬ್ಬಾತ ಪೊಲೀಸರಿಗೆ ತನಿಖೆ ವೇಳೆ ತಿಳಿಸಿರುವುದಾಗಿ ವರದಿಯಾಗಿದೆ. ಐಸಿಸ್ ನಿಂದ ಪ್ರೇರಿತಗೊಂಡ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆಂಬ ಮಾಹಿತಿ ಪಡೆದಿದ್ದ ಅಸ್ಸಾಂ ಪೊಲೀಸರು ಕಾರ್ಯಾಚರಣೆ ನಡೆಸುವ ಮೂಲಕ ಗ್ರೆನೇಡ್ ಸಹಿತ ಮೂವರು ಶಂಕಿತ […]

ಉಗ್ರ ಸಂಘಟನೆಗೆ ಹಣಕಾಸಿನ ನೆರವು ನೀಡಿದ ಆರೋಪ, ಆಸ್ತಿ ಮುಟ್ಟುಗೋಲು

Monday, October 16th, 2017
havala money

ಮಂಗಳೂರು : ದೇಶಾದ್ಯಂತ ಸಂಚಲನ ಮೂಡಿಸಿದ್ದ ಉಗ್ರರಿಗೆ ಹಣಕಾಸು ನೆರವಿನ ಹವಾಲಾ ಪ್ರಕರಣ ಮತ್ತೆ ಸುದ್ದಿಯಲ್ಲಿದೆ. ಉಗ್ರ ಸಂಘಟನೆಗೆ ಹಣಕಾಸಿನ ನೆರವು ನೀಡಿದ ಆರೋಪದ ಮೇಲೆ ಮಂಗಳೂರಿನಲ್ಲಿ 5 ಲಕ್ಷ ರೂಗಳಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಅಕ್ರಮ ಹಣ ಸಾಗಾಟ ಆರೋಪದ ಮೇಲೆ ಮಂಗಳೂರಿನ ಪಂಜಿಮೊಗರು ಎಂಬಲ್ಲಿನ ಮನೆಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಧೀರಜ್‌ ಸಾವೋ ಎಂಬಾತನ ಹಣದ ವ್ಯವಹಾರವನ್ನು ಗಮನಿಸಿದ ಜಾರಿ ನಿರ್ದೇಶನಲಯ, ಆತನಿಗೆ ಸೇರಿದ ಆಸ್ತಿಯನ್ನು […]

ಮಂಗಳೂರು: ಉಗ್ರ ಸಂಘಟನೆಗೆ ಹಣಕಾಸಿನ ನೆರವು ನೀಡುತ್ತಿದ್ದ ಆರೋಪ, ಆಸ್ತಿ ಮುಟ್ಟುಗೋಲು

Saturday, October 14th, 2017
pravarthan nirdeshanalay

ಮಂಗಳೂರು: ಇಂಡಿಯನ್ ಮುಜಾಹಿದ್ದೀನ್ (ಐಎಂ) ಉಗ್ರ ಸಂಘಟನೆಗೆ ಹಣಕಾಸಿನ ನೆರವು ನೀಡುತ್ತಿದ್ದ ಆರೋಪದಡಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳೂರಿನ ಪಂಜಿಮೊಗರಿನಲ್ಲಿ 5 ಲಕ್ಷ ರೂ. ಮೌಲ್ಯದ ಸೊತ್ತನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇಲ್ಲಿನ ನಿವಾಸಿ ಧೀರಜ್ ಸಾಹು ಸೇರಿದಂತೆ ಹಲವರಿಗೆ ಸೇರಿದ 5 ಲಕ್ಷ ರೂ. ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ. ಧೀರಜ್ ಸಾಹು ಹಾಗೂ ಮತ್ತಿತರರು ಉಗ್ರರಿಗೆ ಆರ್ಥಿಕ ನೆರವು ಹಾಗೂ ಪಾಕಿಸ್ತಾನಿ ಪ್ರಜೆಯೊಬ್ಬನ ಜೊತೆ ನಿರಂತರ ಸಂಪರ್ಕ ಹೊಂದಿದ್ದರು ಎಂದು ಎನ್ನಲಾಗಿದೆ. ಇದೇ ಆರೋಪದಡಿ ಇಡಿ ಅಧಿಕಾರಿಗಳು ಧೀರಜ್ […]

ಸಿರಿಯಾದಲ್ಲಿರುವ ಐಸಿಸ್ ಉಗ್ರ ಸಂಘಟನೆಯ ಶಿಬಿರಕ್ಕೆ ಕೇರಳದಿಂದ ತೆರಳಿದ ಮಂಗಳೂರು ಮೂಲದವಳು

Thursday, July 28th, 2016
ISIS

ಮಂಗಳೂರು: ಸಿರಿಯಾದಲ್ಲಿರುವ ಐಸಿಸ್ ಉಗ್ರ ಸಂಘಟನೆಯ ಶಿಬಿರಕ್ಕೆ ಕೇರಳದಿಂದ ತೆರಳಿದವರ ಪೈಕಿ ಒಬ್ಬಾಕೆ ಮಂಗಳೂರು ಮೂಲದವಳು ಎಂಬುದು ದೃಢಪಟ್ಟಿದೆ. ಈಕೆ ಉಳ್ಳಾಲದ ಮಾಜಿ ಶಾಸಕ, ಕನ್ನಡದ ಕಟ್ಟಾಳು ಎಂದೇ ಹೆಸರಾದ ಬಿ.ಎಂ. ಇದಿನಬ್ಬರ ಮರಿಮಗಳು ಎನ್ನಲಾಗಿದೆ. ದಿ. ಇದಿನಬ್ಬರ ಪುತ್ರ ಬಿ.ಎಂ. ಬಾಷಾರ ಪುತ್ರಿಯ ಮಗಳೇ ನಾಪತ್ತೆಯಾದಾಕೆ. ಈಕೆಯ ಹೆಸರು ಅಜ್ಮಲ್(24). ತಾಯಿಯ ಅನಾರೋಗ್ಯದ ಕಾರಣದಿಂದ ಈಕೆಯೂ ತಾಯಿಯೊಂದಿಗೆ ಅಜ್ಜ ಇದಿನಬ್ಬರ ಮನೆಯಲ್ಲಿ ಇರುತ್ತಿದ್ದಳು. ಉಳ್ಳಾಲದಿಂದಲೇ ಮಂಗಳೂರಿನ ಕೆಎಂಸಿ ವೈದ್ಯಕೀಯ ಕಾಲೇಜಿನಲ್ಲಿ ಡಿಪ್ಲೋಮಾ ಕೋರ್ಸ್ ಮಾಡಿದ್ದಳು. 2015ರಲ್ಲಿ […]

ಅನಧಿಕೃತವಾಗಿ ಸಾಗಿಸಲಾಗುತಿದ್ದ 15 ಲಕ್ಷ ರೂ. ಮೌಲ್ಯದ ಬೆಳ್ಳಿ ಹಾಗೂ 94 ಸಾವಿರ ರೂ. ನಗದು ಪತ್ತೆ

Saturday, February 6th, 2016
Cash and Silver

ಮಂಜೇಶ್ವರ: ಕರ್ನಾಟಕ ಸಾರಿಗೆ ಬಸ್ಸಿನಲ್ಲಿ ಯಾವುದೇ ದಾಖಲೆ ಪತ್ರಗಳಿಲ್ಲದೆ ಸಾಗಿಸಲಾಗುತಿದ್ದ ಸುಮಾರು 15ಲಕ್ಷ ರೂ. ಮೌಲ್ಯದ ಬೆಳ್ಳಿ ಹಾಗೂ 94 ಸಾವಿರ ರೂ. ನಗದನ್ನು ಮಂಜೆಶ್ವರ ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ತಮಿಳ್ನಾಡು ಚೆನ್ನೈ ನಿವಾಸಿ ಮಹಾಲಿಂಗ (50) ಎಂಬಾತನನ್ನು ಸೆರೆ ಹಿಡಿಯಲಾಗಿದೆ. ಶನಿವಾರದಂದು ಬೆಳಿಗ್ಗೆ ಸುಮಾರು ಹನ್ನೊಂದು ಘಂಟೆಗೆ ವಾಹನ ತಪಾಸಣೆಯಲ್ಲಿ ನಿರತರಾಗಿದ್ದ ವಾಮಂಜೂರು ಚೆಕ್ ಪೋಸ್ಟ್ ಅಬಕಾರಿ ಪೊಲೀಸರು ಆ ದಾರಿಯಾಗಿ ಬಂದ ಮಂಗಳೂರಿನಿಂದ ಕಾಸರಗೋಡಿಗೆ ತೆರಳುತಿದ್ದ ಕರ್ನಾಟಕ ಸಾರಿಗೆ ಬಸ್ಸನ್ನು […]