ಸೋಲುವ ಭೀತಿಯಿಂದ ಕಾಂಗ್ರೆಸ್ ಒಳಒಪ್ಪಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಟೀಕೆ

Friday, December 10th, 2021
Nalinkumar-Kateel

ಮಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15ಕ್ಕಿಂತಲೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸವಿದೆ. ಯಾವುದೇ ಪಕ್ಷದ ಜತೆ ಒಳ ಒಪ್ಪಂದ ಅಗತ್ಯ ಇಲ್ಲ. ಕಾಂಗ್ರೆಸ್ ಸೋಲಿನ ಭೀತಿಯಲ್ಲಿದೆ. ಹಾಗಾಗಿ ಒಳ ಒಪ್ಪಂದದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು. ಗುರುವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು `ಬಿಜೆಪಿ ಎಲ್ಲ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ ಸಂಘಟನಾತ್ಮಕವಾಗಿ ಎದುರಿಸಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆ ಸಹಿತ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ಮೇಲುಗೈ […]

ಜೂನ್ 8 ರಂದು ಶರಣು ಸಲಗಾರ್ ಹಾಗೂ ಬಸನಗೌಡ ತುರುವಿಹಾಳ್ ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ

Sunday, June 6th, 2021
Basavana Gowda

ಬೆಂಗಳೂರು : ರಾಜ್ಯದ ಏಪ್ರಿಲ್ 17 ರಂದು ಬಸವ ಕಲ್ಯಾಣ ವಿಧಾನ ಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಶರಣು ಸಲಗಾರ್ ಹಾಗೂ ಮಸ್ಕಿ ವಿಧಾನ ಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಬಸನಗೌಡ ತುರುವಿಹಾಳ್ ಅವರು ಜೂನ್ 8 ರಂದು ಬೆಳಿಗ್ಗೆ 11-00 ಗಂಟೆಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಜ್ಯ ವಿಧಾನ ಸಭಾ ಸಚಿವಾಲಯದ ಪ್ರಕಟಣೆ ತಿಳಿಸಿದೆ. ವರದಿ: […]

ಕಾಂಗ್ರೆಸ್ ಪಕ್ಷ ಸೋತಾಗ ಮಾತ್ರ ಮತಯಂತ್ರ ಕೆಟ್ಟಿರುತ್ತವೆ – ಕೋಟ ಶ್ರೀನಿವಾಸ ಪೂಜಾರಿ

Tuesday, November 17th, 2020
Kota Srinivasa

ಮಂಗಳೂರು : ಸಿದ್ಧರಾಮಯ್ಯ ಗೆದ್ದಾಗ ಮತಯಂತ್ರ ಸರಿ ಇತ್ತು ಎನ್ನುವ ಕಾಂಗ್ರೆಸ್ ಪಕ್ಷ. ಈಗ ಉಪ ಚುನಾವಣೆಯಲ್ಲಿ ಅವರ ಅಭ್ಯರ್ಥಿಗಳು ಸೋತಾಗ ಹಾಳಾಗಿದೆ ಎನ್ನುತ್ತಾರೆ. ಇಂತಹ ಮಾತುಗಳು  ಭೂಷಣವಲ್ಲ. ಮತಯಂತ್ರ ಕೆಟ್ಟಿಲ್ಲ, ಮನಸ್ಸು ಕೆಟ್ಟಿದೆ” ಯಾವುದೇ ರಾಜಕೀಯ ಪಕ್ಷವಿರಲಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ  ಹೇಳಿದ್ದಾರೆ. ಎಲ್ಲಾ ಆರೋಗ್ಯ ಇಲಾಖೆಗಳಲ್ಲಿ ಕೊರೊನಾ ಟೆಸ್ಟ್ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಲವು ಕಡೆಗಳಲ್ಲಿ ಏನಾದರೂ ಲೋಪಗಳಾಗಿದ್ದಲ್ಲಿ, ಸಾರ್ವಜನಿಕರಿಂದ ದೂರು ಬಂದಲ್ಲಿ, […]

ಶಿರಾ ಹಾಗೂ ಆರ್ ಆರ್ ನಗರ ಉಪ ಚುನಾವಣೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

Tuesday, November 10th, 2020
By election

ತುಮಕೂರು: ಶಿರಾ ಹಾಗೂ ಆರ್ ಆರ್ ನಗರ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದರೆ, ಶಿರಾದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಕ್ಷೇತ್ರದಲ್ಲಿ ಮೊದಲ ಬಾರಿಗೆ ಖಾತೆ ತೆರೆಯುವ ಮುನ್ಸೂಚನೆ ಇದೆ. ಶಿರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಎದುರಾಳಿ ಮಾಜಿ ಸಚಿವ ಜಯಚಂದ್ರ ವಿರುದ್ಧ 1,488 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದು, 14,206 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ. […]

ನಾನು ಮೊದಲೇ ಈ ಫಲಿತಾಂಶ ಹೇಳಿದ್ದೆ, ಅವರು ಗಮನ ಕೊಡಲಿಲ್ಲ : ಜರ್ನಾದನ ಪೂಜಾರಿ

Monday, December 9th, 2019
poojary

ಮಂಗಳೂರು : ಜನರ ಅಭಿಪ್ರಾಯಗಳಿಗೆ ಬೆಲೆ ನೀಡಬೇಕು, ಕಾಂಗ್ರೆಸ್ ನ ಕೆಲವು ನಾಯಕರು ದುರಹಂಕಾರ ಬಿಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಜರ್ನಾದನ ಪೂಜಾರಿ ಹೇಳಿದ್ದಾರೆ. ರಾಜ್ಯದ ಉಪ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ  ಅವರು, ನಾನು ಮೊದಲೇ ಹೇಳಿದ್ದೆ ಕಾಂಗ್ರೆಸ್ ನ ಕೆಲವರ ದುರಹಂಕಾರದಿಂದ ರಾಜ್ಯದ ಉಪ ಚುನಾವಣೆಯಲ್ಲಿ ಸೋಲಾಗುತ್ತದೆ ಎಂದು. ನನ್ನ ಭವಿಷ್ಯ ನಿಜವಾಗಿದೆ ಎಂದು ಅವರು ಹೇಳಿದರು. ಮತ್ತೆ ಗೆಲುವು ಸಾಧಿಸಬೇಕಾದರೆ ದುರಹಂಕಾರವನ್ನು ಕೆಲವು ನಾಯಕರು ಬಿಡಬೇಕು ಎಂದು ಸಲಹೆ ನೀಡಿದರು . ಪಕ್ಷವನ್ನು ಸರಿಪಡಿಸಿ ತಪ್ಪುಗಳನ್ನು ತಿದ್ದಿಕೊಂಡು […]

ಉಪ ಚುನಾವಣೆ : ಮೂರು ಸಾವಿರಕ್ಕೂ ಅಧಿಕ ಪೊಲೀಸರ ಕಣ್ಗಾವಲು

Tuesday, December 3rd, 2019
Baskar

ಬೆಂಗಳೂರು : ನಗರದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆಗೆ ಭಾರೀ ಪೊಲೀಸ್‌ ಬಂದೋಬಸ್ತ್ನಿ ಯೋಜಿಸಲಾಗಿದ್ದು, ಮೂರು ಸಾವಿರಕ್ಕೂ ಅಧಿಕ ಪೊಲೀಸ್‌ ಸಿಬ್ಬಂದಿ ಹಾಗೂ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಕುರಿತು ಸೋಮವಾರ ಮಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌, ನಗರ ಕಮಿಷನರೇಟ್‌ ವ್ಯಾಪ್ತಿಗೆ ಬರುವ ಕೆ.ಆರ್‌.ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್‌ ಹಾಗೂ ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ 28 ಪೊಲೀಸ್‌ ಠಾಣೆಗಳು ಬರಲಿದ್ದು, ಈ ವ್ಯಾಪ್ತಿಯಲ್ಲಿ ಡಿ.3ರಂದು ಸಂಜೆ 6 ಗಂಟೆಯಿಂದ ಡಿ.6ರಂದು […]

ಮಂಜೇಶ್ವರ ಉಪ ಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಗೆಲುವು

Thursday, October 24th, 2019
UDF

ಕಾಸರಗೋಡು : ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ರವೀಶ್ ತಂತ್ರಿ ಕುಂಟಾರು ಅವರನ್ನು 7,923 ಮತಗಳ ಅಂತರದಿಂದ ಸೋಲಿಸಿದ ಖಮರುದ್ದೀನ್, ಎಲ್‌ಡಿಎಫ್ ಅನ್ನು ಮತ್ತೊಮ್ಮೆ ತೃತೀಯ ಸ್ಥಾನಕ್ಕೆ ತಳ್ಳಿದ್ದಾರೆ. ಆರಂಭದಲ್ಲೇ ಮುನ್ನಡೆ ಸಾಧಿಸಿದ್ದ ಖಮರುದ್ದೀನ್ ಕೊನೆಯವರೆಗೂ ಅದನ್ನು ಕಾಯ್ದುಕೊಂಡರಲ್ಲದೇ, ಹಂತ ಹಂತವಾಗಿ ಮುನ್ನಡೆಯನ್ನು ಹೆಚ್ಚಿಸಿಕೊಳ್ಳುತ್ತಾ ಸಾಗಿದರು. ಅಂತಿಮವಾಗಿ  7,923 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಅವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ರವೀಶ್ […]

ಕನಿಷ್ಠ ಆರು ದಿನ ಅಧಿವೇಶನ ವಿಸ್ತರಿಸಲು ಸಿದ್ದರಾಮಯ್ಯ ಒತ್ತಾಯ

Friday, October 11th, 2019
siddaramaiah

ಬೆಂಗಳೂರು : ವಿಧಾನಸಭೆ ಕಲಾಪವನ್ನು ಇನ್ನೂ ಆರು ದಿನ ವಿಸ್ತರಿಸಬೇಕು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಚಳಿಗಾಲದ ಅಧಿವೇಶನವನ್ನು ಕೇವಲ ಮೂರು ದಿನ ಮಾತ್ರ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಮೂರು ದಿನ ನೆರೆ ಹಾಗೂ ಕನಿಷ್ಠ ಮೂರು ದಿನ ಬಜೆಟ್ ಕುರಿತು ಚರ್ಚೆ ನಡೆಯಬೇಕಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಇವೆಲ್ಲವೂ ಚರ್ಚೆಯಾಗುತ್ತಿತ್ತು, ನೀವು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿಲ್ಲ ಯಡಿಯೂರಪ್ಪನವರೇ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೀರ, ನಿಮಗೆಲ್ಲಾ ತಿಳಿದಿದೆ ಪಲಾಯನವಾದ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪ ಚುನಾವಣೆಯಿದ್ದ […]

ಉಪ ಚುನಾವಣೆಗೆ ಜೆಡಿಎಸ್​ ಸಿದ್ಧತೆ : ಮಾಜಿ ಸಿಎಂ ಕುಮಾರಸ್ವಾಮಿ

Monday, September 23rd, 2019
kumarswamy

ಬೆಂಗಳೂರು : ರಾಜ್ಯ ವಿಧಾನಸಭೆ ಉಪ ಚುನಾವಣೆ ಅಕ್ಟೊಬರ್ ನಲ್ಲಿ ನಡೆಯತ್ತಿರುವುದರಿಂದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಜೆಡಿಎಸ್ ಇಂದು ಸಂಜೆ ಮಹತ್ವದ ಸಭೆ ನಡೆಸಲಿದೆ. ನಗರದ ಜೆ.ಪಿ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಬೆಂಗಳೂರಿನ ಮಹಾಲಕ್ಷ್ಮಿಲೇಔಟ್ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರಗಳ ಸಭೆಗಳು ಪ್ರತ್ಯೇಕವಾಗಿ ನಡೆಯಲಿದೆ. ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಒಳಗೊಂಡಂತೆ ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಪಕ್ಷದ ಹಿರಿಯ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಭ್ಯರ್ಥಿಗಳ ಆಯ್ಕೆ, […]

ಕೊಪ್ಪಳ ಕರಡಿ ಸಂಗಣ್ಣ ವಿಜಯ

Thursday, September 29th, 2011
ಕೊಪ್ಪಳ ಕರಡಿ ಸಂಗಣ್ಣ ವಿಜಯ

ಕೊಪ್ಪಳ : ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ವಿಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಬಸವರಾಜ ಕೆ. ಹಿಟ್ನಾಳ್ ಎರಡನೇ ಸ್ಥಾನ ಗಳಿಸಿದ್ದರೆ. ಜೆಡಿಎಸ್ ಅಭ್ಯರ್ಥಿ ಪ್ರದೀಪ್ ಗೌಡ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಆರಂಭದಿಂದಲೂ ಮುನ್ನಡೆ ಕಾದಿರಿಸಿಕೊಂಡ ಮಾಜಿ ಜೆಡಿಎಸ್ ಶಾಸಕ ಕರಡಿ ಸಂಗಣ್ಣ ಪ್ರಸಕ್ತ ಬಿಜೆಪಿ ಪರ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತರ ವಿಜಯೋತ್ಸಾಹ ಎಲ್ಲೆಲ್ಲೂ ಕಂಡುಬಂದಿದೆ. ಜೆಡಿಎಸ್ ಪಕ್ಷಕ್ಕೆ ಫಲಿತಾಂಶ ತುಸು ಆಶ್ಚರ್ಯ ತಂದಿದೆ. ಏಕೆಂದರೆ ಜೆಡಿಎಸ್ಸನ್ನು […]