8 ವರ್ಷದ ಬಾಲಕಿಯ ಅತ್ಯಾಚಾರ ಗೈದು ಚರಂಡಿಗೆಸೆದ ನಾಲ್ವರ ಬಂಧನ

Wednesday, November 24th, 2021
Parari Murder

ಮಂಗಳೂರು : ಉಳಾಯಿಬೆಟ್ಟು ಪರಾರಿ ಎಂಬಲ್ಲಿನ ಟೈಲ್ಸ್ ಫ್ಯಾಕ್ಟರಿಯ ಆವರಣದಲ್ಲಿ ರವಿವಾರ ನಡೆದ 8 ವರ್ಷದ ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆಗೈದಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಜಯ್ ಸಿಂಗ್(21), ಮುಕೇಶ್ ಸಿಂಗ್(20), ಮನೀಶ್ ತಿರ್ಕಿ(33) ಹಾಗೂ ಮುನೀಮ್ ಸಿಂಗ್ (20) ಬಂಧಿತ ಆರೋಪಿಗಳಾಗಿದ್ದಾರೆ. ಜಯ್ ಸಿಂಗ್, ಮುಕೇಶ್ ಸಿಂಗ್ ಹಾಗೂ ಮನೀಶ್ ತಿರ್ಕಿ ಪರಾರಿಯಲ್ಲಿರುವ […]

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕ ಬಂಧನ

Saturday, September 21st, 2019
Pradeep-poojari

ಬೆಳ್ತಂಗಡಿ : ಇಲ್ಲಿನ ಗಂಗೋತ್ರಿ ವಸತಿ ಗ್ರಹದ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕನನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು, ಮಂಗಳೂರಿನ ಉಳಾಯಿಬೆಟ್ಟು ನಿವಾಸಿ ಪ್ರದೀಪ್ ಪೂಜಾರಿ (26) ಎಂದು ಗುರುತಿಸಲಾಗಿದೆ. ವಸತಿ ಗ್ರಹದ ಬಳಿ ತನ್ನ ದ್ವಿಚಕ್ರ ವಾಹನದೊಂದಿಗೆ ಅನುಮಾನಸ್ಪದವಾಗಿ ನಿಂತಿದ್ದ ಯುವಕನನ್ನು ಪೊಲೀಸರು ಪರಿಶೀಲನೆ ನಡೆಸಿದರು. ಈ ವೇಳೆ ಆತನ ದ್ವಿಚಕ್ರ ವಾಹನದಲ್ಲಿದ್ದ ಸುಮಾರು 6೦ ಗ್ರಾಂ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಮೇತ ಆರೋಪಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಮಂಗಳೂರು ಸಬ್ ಜೈಲ್ […]

ತಲೆಮರೆಸಿಕೊಂಡು ವಿದೇಶಕ್ಕೆ ಪರಾರಿಯಾಗಿದ್ದ ಆರೋಪಿಯ ಬಂಧನ

Saturday, December 22nd, 2018
arrest

ಮಂಗಳೂರು: ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಮುಖ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡು ವಿದೇಶಕ್ಕೆ ಪರಾರಿಯಾಗಿದ್ದ ಪ್ರಮುಖ ಆರೋಪಿಯನ್ನು ಬಜ್ಪೆಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಉಳಾಯಿಬೆಟ್ಟುವಿನ ಮೂಡುಜೆಪ್ಪುಮನೆಯ ಮಹಮ್ಮದ್ ಅಶ್ರಫ್ (25) ಬಂಧಿತ ಆರೋಪಿ. ಈ ಹಿಂದೆ ಆರೋಪಿಯ ಪತ್ತೆಗೆ ಎಲ್.ಓ.ಸಿ ಪ್ರಕಟಣೆ ಹೊರಡಿಸಿದ ಮೇರೆಗೆ ಆರೋಪಿಯು ದುಬೈನಿಂದ ಮಂಗಳೂರು ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಾಗ ವಶಕ್ಕೆ ಪಡೆದುಕೊಂಡು, ಕಾನೂನು ಕ್ರಮ ಜರುಗಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಮೂರು ಲಾರಿ ವಶ

Saturday, December 22nd, 2018
tempo

  ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಮೂರು ಟಿಪ್ಪರ್ ಲಾರಿಗಳನ್ನು ತಿರುವೈಲು ಗ್ರಾಮದ ಪರಾರಿ ಜಂಕ್ಷನ್ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಟಿಪ್ಪರ್ನಲ್ಲಿ ತುಂಬಿದ್ದ ಮರಳಿನ ಒಟ್ಟು ಅಂದಾಜು ಮೌಲ್ಯ 25 ಲಕ್ಷದ 15 ಸಾವಿರ ಆಗಬಹುದು ಎಂದು ಅಂದಾಜಿಸಲಾಗಿದೆ . ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಆದೇಶದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಪಿಎಸ್ಐ ಮತ್ತು ಸಿಬ್ಬಂದಿ ಹಾಗೂ ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹದಳದ ತಂಡದೊಂದಿಗೆ ಎಎಸ್ಐ ಮೋಹನ್ ವಿಶೇಷ ಕರ್ತವ್ಯದಲ್ಲಿದ್ದಾಗ, […]

ಉಳಾಯಿಬೆಟ್ಟು ಗಲಭೆ ಪ್ರಕರಣ: ವಜ್ರದೇಹಿ ಸ್ವಾಮೀಜಿಗೆ ಸಮನ್ಸ್‌

Thursday, January 18th, 2018
rajashekarananda-swami

ಮಂಗಳೂರು: ಉಳಾಯಿಬೆಟ್ಟು ಗಲಭೆ ಪ್ರಕರಣದ ಸಂಬಂಧ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಯವರಿಗೆ ಎರಡನೇ ಜೆಎಂಎಫ್‍ಸಿ ನ್ಯಾಯಾಲಯ ಸಮನ್ಸ್ ಹೊರಡಿಸಿದೆ. ಡಿಸೆಂಬರ್ 14, 2014 ರಂದು ಉಳಾಯಿಬೆಟ್ಟುವಿನಲ್ಲಿ ದತ್ತಮಾಲಾಧಿಕಾರಿಗಳ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ವೇಳೆ ಗಲಭೆಯೂ ಸಂಭವಿಸಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸ್ವಾಮೀಜಿಯವರಿಗೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ.

ಹೆಜ್ಜೇನು ದಾಳಿಗೆ ತುತ್ತಾಗಿ ಮಹಿಳೆಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಸಾವು

Saturday, January 28th, 2017
Kamala

ಮಂಗಳೂರು: ಹೆಜ್ಜೇನು ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ನಿಟ್ಟೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿ.8ರಂದು ಉಳಾಯಿಬೆಟ್ಟು ನಿವಾಸಿ ಕಮಲ, ಪಿಲಾರ್ ನಿವಾಸಿ ಶ್ರೀಧರ್, ಪತ್ನಿ ಲೀಲಾವತಿ ಪಿಲಾರ್ ಹಾಗೂ ಲಕ್ಷ್ಮಿ ಎಂಬುವರು ಹೆಜ್ಜೇನು ದಾಳಿಗೆ ತುತ್ತಾಗಿದ್ದರು. ಈ ಪೈಕಿ ಕಮಲ (65) ಹೆಜ್ಜೇನು ದಾಳಿಗೊಳಗಾದ ದಿನವೇ ಮೃತಪಟ್ಟಿದ್ದರು. ಇನ್ನು ಚಿಂತಾಜನಕ ಸ್ಥಿತಿಯಲ್ಲಿದ್ದ ಲೀಲಾವತಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.