ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ ಎಂಇಪಿ ಅಭ್ಯರ್ಥಿ!

Wednesday, April 25th, 2018
ashraf

ಮಂಗಳೂರು: ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಮಂಗಳವಾರ ಉಮೇದುವಾರಿಕೆ ಸಲ್ಲಿಸಬೇಕಿದ್ದ ಅಭ್ಯರ್ಥಿಯೋರ್ವರು ಜೈಲುಪಾಲಾದ ಹಿನ್ನೆಲೆಯಲ್ಲಿ ಜೈಲಿನಲ್ಲಿದ್ದುಕೊಂಡೇ ನಾಮಪತ್ರ ಸಲ್ಲಿಸಿದ ಘಟನೆ ನಡೆದಿದೆ. ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಜೈಲು ಸೇರಿದ ಎಂಇಪಿ (ಮಹಿಳಾ ಎಂಪವರ್ ಪಾರ್ಟಿ) ಪಕ್ಷದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಸಿ.ರೋಡ್ ಸಮೀಪದ ಶಾಂತಿ ಅಂಗಡಿ ನಿವಾಸಿ ಶಮೀರ್ ಯಾನೆ ಜೈಲಿನಲ್ಲಿದ್ದುಕೊಂಡೆ ನಾಮಪತ್ರ ಸಲ್ಲಿಸಿದ್ದಾರೆ. ಶಮೀರ್ 2014ರಲ್ಲಿ ನಡೆದ ಬ್ರಹ್ಮರಕೂಟ್ಲು ಟೋಲ್ ಪ್ಲಾಝಾ ಧ್ವಂಸ ಆರೋಪದ ಪ್ರಕರಣ ಹಾಗೂ ಆಸ್ಪತ್ರೆಯಿಂದ ಪರಾರಿಯಾದ ಆರೋಪದ ಪ್ರಕರಣವೊಂದರ ಆರೋಪಿಯಾಗಿದ್ದರು. […]

ಎಂಇಪಿಗೆ ನರ್ಸ್ ಜಯಲಕ್ಷ್ಮೀ ಸೇರ್ಪಡೆ

Friday, April 6th, 2018
jayalakshmi

ಬೆಂಗಳೂರು: ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನು ಒಂದೆರಡು ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಎಂಇಪಿ ರಾಷ್ಟ್ರೀಯ ಅಧ್ಯಕ್ಷೆ ಡಾ. ನೌಹೀರಾ ಶೇಕ್ ಹೇಳಿದ್ದಾರೆ. ನಗರದ ಲೀಲಾ ಪ್ಯಾಲೆಸ್ ಹೋಟೆಲ್‌ನಲ್ಲಿ ಇಂದು ನಡೆದ ಸಮಾರಂಭದಲ್ಲಿ ನರ್ಸ್ ಜಯಲಕ್ಷ್ಮೀ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಬಳಿಕ ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ಮತ್ತಷ್ಟು ನಾಯಕರು ಪಕ್ಷ‌ ಸೇರಲಿದ್ದಾರೆ. ಅಲ್ಲದೆ ಈಗಾಗಲೇ ನಿರ್ಧರಿಸಿದಂತೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದ್ದು, ಶೇ. 35ರಷ್ಟು ಸ್ಥಾನಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಹಲವಾರು ಸಮಸ್ಯೆಗಳಾದ […]

ದೇಶವನ್ನು ಬಲಿಷ್ಠಗೊಳಿಸುವುದೇ ನನ್ನ ಗುರಿ: ನೌಹೀರಾ ಶೇಕ್

Friday, March 30th, 2018
nouhera-shiekh

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಕಂಡ ಕನಸನ್ನು ನನಸು ಮಾಡುವುದರ ಮೂಲಕ ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸುವುದೇ ತಮ್ಮ ಗುರಿಯಾಗಿದೆ ಎಂದು ಎಂಇಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ. ನೌಹೀರಾ ಶೇಕ್ ಹೇಳಿದ್ದಾರೆ. ಮುರುಗೇಶ್ ಪಾಳ್ಯದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ನಾರ್ತ್ ಈಸ್ಟ್ ಪೀಪಲ್ಸ್ ವಾಯ್ಸ್ ಜಂಟಿಯಾಗಿ ಆಯೋಜಿಸಿದ್ದ ಜನಶಕ್ತಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಎಲ್ಲ ಭಾರತೀಯರು ತಲೆ ಎತ್ತಿ ಗೌರವ, ಸ್ವಾಭಿಮಾನದಿಂದ ಬದುಕಬೇಕು ಎಂಬುದೇ ಅಂಬೇಡ್ಕರ್ ಅವರ […]