ಬೃಂದಾವನಸ್ಥರಾದ ಎಡನೀರು ಶ್ರೀಕೇಶವಾನಂದ ಭಾರತೀ ಸ್ವಾಮೀಜಿ

Monday, September 7th, 2020
edaneeru Swamiji

ಕಾಸರಗೋಡು : ಎಡನೀರಿನ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಬೃಂದಾವನಸ್ಥರಾಗಿದ್ದಾರೆ. ಕಾಸರಗೋಡಿನ ಎಡನೀರಿನಲ್ಲಿ ಕೇಶವಾನಂದ ಭಾರತೀ ಶ್ರೀಗಳ ಅಂತ್ಯದ ವಿಧಿವಿಧಾನಗಳು ನಡೆದವು. ಮಠದ ಉತ್ತರ ಭಾಗದಲ್ಲಿರುವ ಬೃಂದಾವನದಲ್ಲಿ ಅಂತಿಮ ವಿಧಿವಿಧಾನ ನಡೆಸಲಾಯಿತು. ಮಠದ ಈ ಹಿಂದಿನ ಯತಿವರೇಣ್ಯರ ಸಮಾಧಿಗಳ ಪಕ್ಕದಲ್ಲಿ ಶ್ರೀಗಳ ಸಮಾಧಿ ಮಾಡಲಾಯಿತು. ವೇದ ವಿದ್ವಜ್ಜನರು, ತಂತ್ರಿಗಳು ಮತ್ತು ಧಾರ್ಮಿಕ ಪಂಡಿತರು ನೇತೃತ್ವವಹಿಸಿದ್ದರು. ಕೊರೋನಾ ಹಿನ್ನೆಲೆಯಲ್ಲಿ ಆಯ್ದ ಭಕ್ತರು ಮತ್ತು ಮಠದ ಆಡಳಿತ ಮಂಡಳಿಯವರಿಗಷ್ಟೇ ಅವಕಾಶ ಕಲ್ಪಿಸಲಾಗಿತ್ತು. ಎಡನೀರು ಮಠದ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ […]

ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಕೃಷ್ಣೈಕ್ಯ

Sunday, September 6th, 2020
keshavananda Bharati

ಕಾಸರಗೋಡು: ಎಡನೀರು ಮಠಾಧೀಶ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ  ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರು (79) ರಾತ್ರಿ 12.45ರ ಸುಮಾರಿಗೆ ಕೃಷ್ಣೈಕ್ಯರಾದರು.. ಸೆ.2ರಂದು ಚಾತುರ್ಮಾಸ್ಯವನ್ನು ಪೂರೈಸಿದ್ದ ಶ್ರೀಗಳು ಕಳೆದ ಕೆಲವು ದಿನಗಳಿಂದ ಅಲ್ಪ ಅಸೌಖ್ಯದಲ್ಲಿದ್ದರು. ಶನಿವಾರ ರಾತ್ರಿ ಪೂಜೆ ಮುಗಿಸಿ ಫಲಾಹಾರ ಸ್ವೀಕರಿಸಿದ್ದ ಶ್ರೀಗಳು ಮಧ್ಯರಾತ್ರಿಯ ವೇಳೆ ಅಸ್ತಂಗತರಾಗಿದ್ದಾರೆ. 1960, ನ.14ರಿಂದ ಎಡನೀರು ಮಠಾಧಿಶರಾಗಿ ಕಾರ್ಯನಿರ್ವಹಿಸಲು ಆರಂಭಿಸಿದ್ದ ಶ್ರೀಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ, ಸಂಗೀತ, ಯಕ್ಷಗಾನ, ಶಿಕ್ಷಣ, ಪ್ರವಾಸೋದ್ಯಮ ಸಹಿತ ಧಾರ್ಮಿಕ ಕ್ಷೇತ್ರಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ  ಅಪಾರ […]

ಸಂಸ್ಕೃತಿ ಸಂಸ್ಕಾರಗಳನ್ನು ಉಳಿಸುವಲ್ಲಿ ಶಿಬಿರ ಸಹಕಾರಿ: ಕೇಶವಾನಂದ ಭಾರತೀ ಶ್ರೀ

Friday, April 17th, 2015
edanirru

ಎಡನೀರು: ಭಾರತೀಯ ಸಂಸ್ಕೃತಿ,ಸಂಸ್ಕಾರಗಳನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಕಾರ್ಯನಡೆಯಬೇಕು. ಅಂತಹ ಉತ್ತಮ ಕಾರ್ಯಗಳನ್ನು ಕನ್ನಡ ಸಂಸ್ಕೃತಿ ಶಿಬಿರಗಳನ್ನು ನಡೆಸುವ ಮೂಲಕ ಭೂಮಿಕಾ ಪ್ರತಿಷ್ಠಾನ ಮಾಡುತ್ತಿದೆ ಎಂದು ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀಶ್ರೀ ಕೇಶವಾನಂದ ಭಾರತೀ ಮಹಾಸ್ವಾಮಿಗಳು ನುಡಿದರು. ಎಡನೀರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲೆಯ ಆವರಣದಲ್ಲಿ ಭೂಮಿಕಾ ಪ್ರತಿಷ್ಠಾನ ಉಡುಪುಮೂಲೆ(ರಿ.)ಆಶ್ರಯದಲ್ಲಿ ಯಕ್ಷತೂಣೀರ ಸಂಪ್ರತಿಷ್ಠಾನ ಕೋಟೂರು ಇದರ ಸಹಯೋಗದೊಂದಿಗೆ ಆಯೋಜಿಸಲಾದ ಐದು ದಿನಗಳ ಕಾಸರಗೋಡು ಜಿಲ್ಲಾ ಮಟ್ಟದ ಕನ್ನಡ ಸಂಸ್ಕೃತಿ ಶಿಬಿರ ಉದ್ಘಾಟಿಸಿ ಆಶೀರ್ವಚನ ನೀಡಿದರು. […]