ಕನ್ಹಯ್ಯ ಕುಮಾರ್ ಮಂಗಳೂರು ಆಗಮನಕ್ಕೆ ಎಬಿವಿಪಿ ಪ್ರತಿರೋಧ

Saturday, August 10th, 2019
Kannaya kumar

ಮಂಗಳೂರು :  ಶನಿವಾರ ನಗರದ ಬಲ್ಮಠದ ಸಹೋದಯ ಸಭಾಂಗಣದಲ್ಲಿ ಬಿ.ವಿ.ಕಕ್ಕಿಲ್ಲಾಯರ ಜನ್ಮ ಶತಾಬ್ದಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಕನ್ಹಯ್ಯ ಕುಮಾರ್ ಭಾಗವಹಿಸಿದ್ದನ್ನು ವಿರೋಧಿಸಿ ಪ್ರತಿಭಟನೆಗೆ ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಹಿರಿಯ ಸ್ವಾತಂತ್ರ ಹೋರಾಟ, ಕರ್ನಾಟಕ ಏಕೀಕರಣ ಚಳವಳಿಯ ಧುರೀಣ ಬಿ.ವಿ.ಕಕ್ಕಿಲ್ಲಾಯರ ಜನ್ಮ ಶತಾಬ್ದಿ ಅಂಗವಾಗಿ ಸಹೋದಯ ಸಭಾಂಗಣದಲ್ಲಿ ಇಂದಿನಿಂದ ಎರಡು ದಿನಗಳ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರಲ್ಲಿ ಭಾಷಣಕಾರರಾಗಿ ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಭಾಗವಹಿಸಿದ್ದಾರೆ. ಕನ್ಹಯ್ಯ ಕುಮಾರ್ […]

ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯಾ, ಶೀಘ್ರ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Monday, February 4th, 2013
Drugs mafia DK

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೇಕ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳಿದ್ದು,  ಇಡೀ ರಾಜ್ಯದಲ್ಲಿಯೇ ಜಿಲ್ಲೆ  ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ದೆ. ಇಲ್ಲಿ  ಹೊರದೇಶ ಹಾಗೂ ಹೊರರಾಜ್ಯಗಳಿಂದ ಅನೇಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಆಗಮಿಸುತ್ತಿದ್ದು ಇವರನ್ನು ಕೇಂದ್ರವಾಗಿರಿಸಿಕೊಂಡು ಡ್ರಗ್ ಮಾಫಿಯಾಗಳು ಕಾರ್ಯಾಚರಿಸುತ್ತಿದ್ದು ಅಮಾಯಕ ವಿದ್ಯಾರ್ಥಿಗಳು ಇದಕ್ಕೆ ಬಲಿಯಾಗುತ್ತಿದ್ದಾರೆ. ಶೀಘ್ರವೇ ಡ್ರಗ್ಸ್ ಮಾಫಿಯಾವನ್ನು ನಮ್ಮ ಜಿಲ್ಲಾಡಳಿತ ಹಾಗೂ ಸರಕಾರಗಳು ನಿಯಂತ್ರಿಸದೇ ಹೋದಲ್ಲಿ ಯುವಜನತೆ ಅಡ್ಡದಾರಿ ಹಿಡಿಯುವ ಸಾಧ್ಯತೆ ಇದೆ ಎಂದು  ಎಬಿವಿಪಿ ರಾಜ್ಯ ಕಾರ್ಯದರ್ಶಿ ರಮೇಶ್ ಕೆ. ಹೇಳಿದರು. ಡ್ರಗ್ಸ್ […]

ನಗರದಲ್ಲಿ ಎನ್ ಇಇಟಿ ಪರೀಕ್ಷೆ ಜಾರಿ ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ವತಿಯಿಂದ ಪ್ರತಿಭಟನೆ

Wednesday, November 7th, 2012
NEET Exams

ಮಂಗಳೂರು :ಕರ್ನಾಟಕ ರಾಜ್ಯಸರ್ಕಾರ ಪ್ರಸಕ್ತ ವರ್ಷದಿಂದಲೇ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯಲು NEET (National Eligibility Entrance Test) ಪರೀಕ್ಷೆ ಬರೆಯುದನ್ನು ಜಾರಿಗೆ ತಂದಿರುವುದನ್ನು ಅಂತ್ಯತ ಅವೈಜ್ಞಾನಿಕ ಕ್ರಮ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ವತಿಯಿಂದ ನಗರದ ಬಂಟ್ಸ್ ಹಾಸ್ಟೆಲ್ ವೃತ್ತದ ಬಳಿ ಇಂದು ಪ್ರತಿಭಟನೆಯನ್ನು ನಡೆಸಲಾಯಿತು. ಎ.ಬಿ.ವಿ.ಪಿ. ರಾಜ್ಯ ಕಾರ್ಯದರ್ಶಿ ರಮೇಶ್ ಕೆ ಮಾತನಾಡಿ ರಾಜ್ಯ ಸರಕಾರವು ಈ ಪರೀಕ್ಷೆಯ ಕುರಿತಂತೆ ಕೇಂದ್ರ ಸರಕಾರದ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಪ್ರಸಕ್ತ ಸಾಲಿನಲ್ಲೇ ಪರೀಕ್ಷೆಯನ್ನು ನಡೆಸುವುದಾಗಿ […]