ಚಾಮುಂಡಿ ಬೆಟ್ಟದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ಎಸ್‌.ಎಂ.ಕೃಷ್ಣ

Thursday, October 7th, 2021
Mysuru Dasara

ಮೈಸೂರು :  ವಿಶ್ವ ವಿಖ್ಯಾತ ಮೈಸೂರು ದಸರಾಗೆ ಚಾಮುಂಡಿ ಬೆಟ್ಟದಲ್ಲಿ ರಾಜಕೀಯ ಮುತ್ಸದ್ದಿ ಎಸ್‌.ಎಂ.ಕೃಷ್ಣ ಅವರು ನಾಡದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ವೈಭವವನ್ನು ಉದ್ಘಾಟಿಸಿದರು. ಗುರುವಾರ  (ಅ.7) ಬೆಳಗ್ಗೆ 7.30ಕ್ಕೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಎಸ್.ಎಂ. ಕೃಷ್ಣ ಅವರು 8.15 ರಿಂದ 8.45ರ ಶುಭ ಮುಹೂರ್ತದಲ್ಲಿ ನಾಡದೇವಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ 411ನೇ ನಾಡಹಬ್ಬ ದಸರಾಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪತ್ನಿ ಚೆನ್ನಮ್ಮ , […]

ಹಿರಿಯ ಮುತ್ಸದ್ಧಿ ಎಸ್ ಎಂ ಕೃಷ್ಣ ಅವರಿಗೆ ದಸರಾ ಉದ್ಘಾಟನೆಗೆ ಅಧಿಕೃತ ಆಹ್ವಾನ

Saturday, October 2nd, 2021
SM-Krishna

ಮೈಸೂರು : ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಸರ್ಕಾರದ ಪರವಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್ ಅಶೋಕ ಅಧಿಕೃತ ಆಹ್ವಾನ ನೀಡಿದರು. ಈ ವೇಳೆ ಮಾತನಾಡಿದ ಸಚಿವ ಆರ್.ಅಶೋಕ್ “ಎಸ್ ಎಂ ಕೃಷ್ಣ ಅವರದ್ದು ಸರ್ವಸಮ್ಮತ ಆಯ್ಕೆ. ಅವರೊಬ್ಬ ಸುಸಂಸ್ಕøತ ಮುತ್ಸದ್ದಿ ರಾಜಕಾರಣಿ. ಅವರದ್ದು ಆಕರ್ಷಕ ವ್ಯಕ್ತಿತ್ವ. ರಾಜಕಾರಣದಲ್ಲಿ ಅತ್ಯಂತ ಶ್ರೇಷ್ಠ ಚಿಂತನೆ ಅಳವಡಿಸಿಕೊಂಡು, ಎಲ್ಲರಿಗೂ ಮಾದರಿಯಾದವರು. “ದಿ ಸ್ಟೇಟ್ಸ್ ಮನ್” ಅಂತ ಯಾರಿಗಾದರೂ ಹೇಳಬಹುದಾದರೆ […]

ದಸರಾ ಉದ್ಘಾಟನೆಗೆ ಎಸ್. ಎಂ. ಕೃಷ್ಣ ಅವರಿಗೆ ಆಹ್ವಾನ

Tuesday, September 28th, 2021
SM Krishana

ಬೆಂಗಳೂರು  : ಈ ಬಾರಿ ಮೈಸೂರು ದಸರಾ ಉದ್ಘಾಟಕರನ್ನಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಾಧ್ಯಮದವರಿಗೆ ಈ ವಿಷಯ ತಿಳಿಸಿದ ಮುಖ್ಯಮಂತ್ರಿಯವರು, ದಸರಾ ದಿನದಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ದಸರಾ ಉದ್ಘಾಟನೆ ಮಾಡಲು ಹಿರಿಯ ಮುತ್ಸದ್ದಿ ಎಸ್.ಎಂ. ಕೃಷ್ಣ ಅವರನ್ನು ಆಹ್ವಾನಿಸಲಾಗುವುದು. ಅವರು ಮುಖ್ಯಮಂತ್ರಿಯಾಗಿ ಹಾಗೂ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ನಾಡಿನ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಆಹ್ವಾನಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು […]

ಡಿ.ಕೆ. ಶಿವಕುಮಾರ್‌ ಪುತ್ರಿ ನಿಶ್ಚಿತಾರ್ಥ ಎಸ್‌.ಎಂ.ಕೃಷ್ಣ ಅವರ ಅಳಿಯನ ಜೊತೆ ನೆರವೇರಿತು

Thursday, November 19th, 2020
Amartya

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಿರಿಯ ಪುತ್ರಿ ಐಶ್ವರ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ.ಸಿದ್ದಾರ್ಥ ಹೆಗ್ಡೆ ಅವರ ಹಿರಿಯ ಪುತ್ರ ಅಮಾರ್ತ್ಯ ಹೆಗ್ಡೆ ಅವರ ವಿವಾಹ ನಿಶ್ಚಿತಾರ್ಥವು ನವೆಂಬರ್ 19ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಖಾಸಗಿ ಹೋಟೆಲ್‍ವೊಂದರಲ್ಲಿ ನೆರವೇರಿತು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಸಚಿವರಾದ ಡಾ ಕೆ ಸುಧಾಕರ್, ಆರ್. ಅಶೋಕ್, ವಿ.ಸೋಮಣ್ಣ ಸೇರಿದಂತೆ ಹಲವು ಗಣ್ಯರು ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಎರಡೂ […]

ಶ್ರೀರಂಗಪಟ್ಟಣ ದಸರಾ ವಿಜೃಂಭಣೆ ಆರಂಭ

Friday, October 4th, 2019
srirangapattana

ಶ್ರೀರಂಗಪಟ್ಟಣ : ಶತಮಾನಗಳ ಹಿನ್ನೆಲೆಯನ್ನು ಹೊಂದಿರುವ ಶ್ರೀರಂಗಪಟ್ಟಣ ದಸರಾ ವಿಜೃಂಭಣೆಯಿಂದ ಆರಂಭಗೊಂಡಿತು. ನಾಡ ದೇವತೆ ಶ್ರೀ ಚಾಮುಂಡೇಶ್ವರಿ ವಿಗ್ರಹಕ್ಕೆ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಪುಷ್ಪಾರ್ಚನೆ ನೆರವೇರಿಸಿ ಜಂಬೂಸವಾರಿ ಮೆರವಣಿಗೆಗೆ ವಿದ್ಯುಕ್ತ ಚಾಲನೆ ನೀಡಿದರು. ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಇಲ್ಲಿನ ಕಿರಂಗೂರು ವೃತ್ತದ ಬನ್ನಿ ಮಂಟಪದ ಬಳಿ ವೇದಿಕೆ ನಿರ್ಮಿಸಲಾಗಿತ್ತು. ಜಂಬೂಸವಾರಿ ಮೆರವಣಿಗೆ ಕಣ್ತುಂಬಿಕೊಳ್ಳಲು ಜನಸಾಗರವೇ ನೆರೆದಿತ್ತು. ಸಂಜೆ 4 ಗಂಟೆಗೆ ಅಭಿಜಿನ್‌ ಮುಹೂರ್ತ ಹಾಗೂ ಮಕರ ಲಗ್ನದಲ್ಲಿ ಅಭಿಮನ್ಯು ಹೊತ್ತಿದ್ದ ಅಂಬಾರಿಯಲ್ಲಿ ವಿರಾಜಿತೆಯಾದ ಶ್ರೀ ಚಾಮುಂಡೇಶ್ವರಿಗೆ […]

ಆರು ತಿಂಗಳ ಹಿಂದೆ ಭಾರೀ ಮೊತ್ತದ ಸಾಲ ಪಡೆದಿರುವುದೇ ಸಿದ್ಧಾರ್ಥ ನಾಪತ್ತೆಗೆ ಕಾರಣ

Tuesday, July 30th, 2019
siddharth

ಮಂಗಳೂರು : ಮಾಜಿ ಸಚಿವ, ಮಾಜಿ ಸಿಎಂ ಎಸ್ ಎಂ ಕೃಷ್ಣ ಅಳಿಯ, ಕಾಫಿ ಡೇ ಆಡಳಿತ ನಿರ್ದೇಶಕ ಸಿದ್ಧಾರ್ಥ ನೇತ್ರಾವತಿ ನದಿ ತೀರದ ಸಮೀಪ ನಿಗೂಢವಾಗಿ ನಾಪತ್ತೆಯಾಗಿದ್ದು, ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಏತನ್ಮಧ್ಯೆ ಸಿದ್ಧಾರ್ಥ ಎರಡು ದಿನಗಳ ಹಿಂದೆ ನೌಕರರಿಗೆ, ಆಡಳಿತ ಮಂಡಳಿ ನಿರ್ದೇಶಕರಿಗೆ ಬರೆದಿರುವ ಪತ್ರದಲ್ಲಿ ಹಲವಾರು ಅಂಶಗಳನ್ನು ಬಿಚ್ಚಿಟ್ಟಿದ್ದಾರೆ. 37 ವರ್ಷಗಳ ಕಾಲ ಕಂಪನಿಯ ಯಶಸ್ವಿಗಾಗಿ ಪ್ರಾಮಾಣಿಕವಾಗಿ ದುಡಿದಿದ್ದೇನೆ. ಆದರೆ ನನ್ನಿಂದ ಯಶಸ್ವಿ ಉದ್ಯಮಿಯಾಗಲು ಸಾಧ್ಯವಾಗಿಲ್ಲ. ಆರು ತಿಂಗಳ ಹಿಂದಷ್ಟೇ ಭಾರೀ […]

ಶಾಶ್ವತ ಸೂರು ನೀಡುವ ಕಾರ್ಯದಲ್ಲಿ ಯಶಸ್ವಿ: ಮೊದಿನ್ ಬಾವಾ

Wednesday, March 21st, 2018
mohaiddin-bava

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬಡ ವರ್ಗಕ್ಕೆ ಭೂಮಿಯ ಹಕ್ಕು ನೀಡುವ ಮೂಲಕ ಶಾಶ್ವತ ಸೂರು ನೀಡುವ ಕಾರ್ಯದಲ್ಲಿ ಯಶಸ್ವಿಯಾಗಿದೆ ಎಂದು ಶಾಸಕ ಮೊದಿನ್ ಬಾವಾ ಹೇಳಿದರು. ಇಂದು ನಾನಾ ಸೌಲಭ್ಯದ ಫಲಾನುಭವಿಗಳಿಗೆ ಚೆಕ್ ಹಾಗೂ ಹಕ್ಕುಪತ್ರ ವಿತರಣೆಯ ಬಳಿಕ ಅವರು ಮಾತನಾಡುತ್ತಿದ್ದರು. ಮಾಜಿ ಮುಖ್ಯ ಮಂತ್ರಿಗಳಾದ ಗುಂಡೂರಾವ್ ಮತ್ತು ಎಸ್.ಎಂ. ಕೃಷ್ಣ ಅವಧಿಯಲ್ಲಿ ಹಕ್ಕು ಪತ್ರ ನೀಡಿದ ಕಾಂಗ್ರೆಸ್ ಸರಕಾರ ಇದೀಗ ಹಕ್ಕು ಪತ್ರ ನೀಡುವ ಕೆಲಸ ಮಾಡಿದೆ. ಹಕ್ಕುಪತ್ರ ನೀಡುವ ಕಾನೂನು ಜಾರಿಗೊಳಿಸಿದ ರಾಜ್ಯ […]

ವರ್ಷಾಂತ್ಯದ ವೇಳೆಗೆ ಹೊಸ ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ!

Wednesday, December 13th, 2017
siddarmaiah

ಬೆಂಗಳೂರು: ಇಂದಿನಿಂದ ‘ನವ ಕರ್ನಾಟಕ ನಿರ್ಮಾಣ’ ಯಾತ್ರೆಯನ್ನು ಆರಂಭಿಸಲಿರುವ ಸಿಎಂ ಸಿದ್ದರಾಮಯ್ಯ ವರ್ಷಾಂತ್ಯದ ವೇಳೆಗೆ ಅಪರೂಪದ ದಾಖಲೆಯೊಂದನ್ನು ಸೃಷ್ಟಿಸಲಿದ್ದಾರೆ. ಸಿದ್ದರಾಮಯ್ಯನವರ ಹೊಸ ದಾಖಲೆ ಏನಿರಬಹುದು ಎಂಬ ಕುತೂಹಲವೇ.? ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ ಅವರ ನಂತರ ಅತ್ಯಂತ ಸುದೀರ್ಘ ಕಾಲ ಮುಖ್ಯಮಂತ್ರಿಯಾಗಿದ್ದ ಎಸ್.ಎಂ. ಕೃಷ್ಣ ಅವರ ದಾಖಲೆಯನ್ನು ಸಿದ್ದರಾಮಯ್ಯ ಮುರಿಯಲಿದ್ದಾರೆ. 1999 ರ ಅಕ್ಟೋಬರ್ 11 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಎಸ್.ಎಂ. ಕೃಷ್ಣ ಅವರು 2004 ರ ಮೇ 28 ರ ತನಕ ಕರ್ನಾಟಕದ […]

ಎಸ್. ಎಂ. ಕೃಷ್ಣ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದು ದೇಶದಲ್ಲಿ ಪಕ್ಷಕ್ಕೆ ದೊಡ್ಡ ಹೊಡೆತ ಆಗಲಿದೆ: ಜನಾರ್ದನ ಪೂಜಾರಿ

Monday, January 30th, 2017
Janardhana-Poojary

ಮಂಗಳೂರು: ಮಾಜಿ ಸಿಎಂ ಎಸ್. ಎಂ. ಕೃಷ್ಣ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರಿಂದ ಪಕ್ಷಕ್ಕೆ ಭಾರಿ ನಷ್ಟವಾಗಿದ್ದು, ದೇಶದಲ್ಲಿ ಪಕ್ಷಕ್ಕೆ ದೊಡ್ಡ ಹೊಡೆತ ಆಗಲಿದೆ ಎಂದು ಕಾಂಗ್ರೆಸ್‌‌ನ ಹಿರಿಯ ನಾಯಕ ಜನಾರ್ದನ ಪೂಜಾರಿ ಪ್ರತಿಕ್ರಿಯಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೃಷ್ಣ ಅವರ ರಾಜೀನಾಮೆಯಿಂದ ಪಕ್ಷಕ್ಕೆ ಮುಂದೆ ದೊಡ್ಡ ಗಂಡಾಂತರ ಬರಲಿದೆ ಎಂದರು. ಕೃಷ್ಣ ಮುತ್ಸದ್ದಿ, ಸಮಾಧಾನಿ, ಒಳ್ಳೆಯ ಮನುಷ್ಯ, ಇಂತಹ ವ್ಯಕ್ತಿಯನ್ನು ಪಕ್ಷ ನಡೆಸಿಕೊಂಡ ರೀತಿ ಸರಿ ಇಲ್ಲ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ […]

ಗಣಿ ಹಗರಣ: ಧರಂ, ಎಚ್‌ಡಿಕೆ ವಿರುದ್ಧ ತನಿಖೆಗೆ ಹಸಿರು ನಿಶಾನೆ

Wednesday, March 5th, 2014
S.M.-Krishna

ನವದೆಹಲಿ: ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಿರುವ ಆರೋಪ ಕುರಿತು ಲೋಕಾಯುಕ್ತ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಪ್ರಕರಣಕ್ಕೆ ಸೀಮಿತವಾಗಿ ತಡೆಯಾಜ್ಞೆ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿದೆ. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಧರಂಸಿಂಗ್ ಅವರ ವಿರುದ್ಧ ಇರುವ ಆರೋಪ ಕುರಿತು ಲೋಕಾಯುಕ್ತ ಪೊಲೀಸರು ತಮ್ಮ ತನಿಖೆ ಮುಂದುವರಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಪ್ರಕರಣದಲ್ಲಿ ಹೆಸರಿಸಲಾಗಿರುವ ಐವರು ಐಎಎಸ್ ಅಧಿಕಾರಿಗಳ ವಿರುದ್ಧವೂ ತನಿಖೆ ಮುಂದುವರೆಸುವಂತೆ ಸುಪ್ರೀಂ […]