ಎಸ್ ಎಸ್ ಎಲ್ ಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Thursday, January 6th, 2022
Karnataka PUBoard

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಪ್ರಕಟಿಸಿದೆ. ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆಗಳು ನಡೆಯಲಿದೆ ಎಂದು ತಾತ್ಕಾಲಿಕ ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ. ಮಾರ್ಚ್ 28 ರಂದು ಪ್ರಥಮ ಭಾಷೆ –ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ, ಮಾರ್ಚ್ 30 ದ್ವಿತೀಯ ಭಾಷೆ –ಇಂಗ್ಲಿಷ್, ಕನ್ನಡ, ಏಪ್ರಿಲ್ 1 ಕೋರ್ ಸಬ್ಜೆಕ್ಟ್, ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ಸಮಾಜ ವಿಜ್ಞಾನ, ಏಪ್ರಿಲ್ 8 […]

27ರಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

Saturday, September 25th, 2021
sslc exam

ಮಂಗಳೂರು : ಇದೇ ಸೆ. 27 ರಿಂದ 29ರ ವರೆಗೆ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗಳು ನಡೆಯಲಿರುವ ಹಿನ್ನಲೆಯಲ್ಲಿ ಆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಸೆ. 27 ರಿಂದ 29ರ ವರೆಗೆ ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ಸುಸೂತ್ರವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲು […]

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಸಚಿವ ಆರ್ ಅಶೋಕ್

Sunday, July 18th, 2021
R Ashoka

ಬೆಂಗಳೂರು  : ಕೋವಿಡ್-19 ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕಂದಾಯ ಸಚಿವ ಆರ್ ಅಶೋಕ್ ಧೈರ್ಯ ತುಂಬಿದರು. ಆ ವೇಳೆ ಮಾತನಾಡಿದ ಸಚಿವರು “ಯಾರನ್ನೂ ಫೇಲ್ ಮಾಡುವದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಆದ ಶ್ರೀ ಸುರೇಶ್ ಕುಮಾರ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಮಾಸ್ಕ್ ಗಳನ್ನು ನಾವೇ ಕೊಡುತ್ತೇವೆ, ಪರೀಕ್ಷಾ ಮೇಲ್ವಿಚಾರಕರಿಗೆ ಲಸಿಕೆ ಹಾಕಲಾಗಿದೆ. ಪ್ರತಿ ಬೆಂಚ್‍ಗೆ ಒಬ್ಬ ವಿದ್ಯಾರ್ಥಿ ಮಾತ್ರ, ಸರ್ಕಾರ ಎಲ್ಲ ರೀತಿಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡಿದೆ. […]

ಪಿಯುಸಿ ಸೀಟುಗಳ ಹೆಚ್ಚಳಕ್ಕೆ ಕ್ರಮ – ಸಚಿವ ಸುರೇಶ್ ಕುಮಾರ್

Friday, July 9th, 2021
suresh Kumar

ಬೆಂಗಳೂರು: ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪರೀಕ್ಷೆಗೆ ನೊಂದಾಯಿಸಿದ ಎಲ್ಲ ವಿದ್ಯಾರ್ಥಿಗಳನ್ನು ಪಿ.ಯು.ಸಿ ತರಗತಿಗಳ ಪ್ರವೇಶಕ್ಕೆ ಅವಕಾಶ ನೀಡಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಕುರಿತು ರಾಜ್ಯದ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಶುಕ್ರವಾರ ಡಿ.ಎಸ್.ಇ.ಆರ್.ಟಿ ಯಲ್ಲಿ “ಬನ್ನಿ ವಿದ್ಯಾರ್ಥಿಗಳೇ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಬರೆಯೋಣ” ಎಂಬ ಧ್ಯೇಯದೊಂದಿಗೆ ರಾಜ್ಯದ […]

ದ್ವಿತೀಯ ಪಿಯುಸಿ ಫಲಿತಾಂಶ ಮಾರ್ಗಸೂಚಿ ಪ್ರಕಟ: ಸುರೇಶ್ ಕುಮಾರ್

Tuesday, July 6th, 2021
Suresh Kumar

ಬೆಂಗಳೂರು: ಕೋವಿಡ್-19 ಸೋಂಕು ಪ್ರಸರಣದಿಂದಾಗಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳನ್ನು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಎಸ್ ಎಸ್ ಎಲ್ ಸಿಯಲ್ಲಿ ಪಡೆದ ಅಂಕಗಳು, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಅತಿ ಶೀಘ್ರದಲ್ಲಿ ಫಲಿತಾಂಶಗಳನ್ನು ಘೋಷಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಅಧಿಕೃತ ಸರ್ಕಾರದ ಆದೇಶ […]

ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಪರಿಗಣಿಸಲು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಯಣ್ ಅವರಿಗೆ ಮನವಿ

Sunday, June 6th, 2021
SureshKumar

ಬೆಂಗಳೂರು: ಈ ಬಾರಿಯ ದ್ವಿತೀಯ ಪಿ.ಯು.ಸಿ ಫಲಿತಾಂಶ ಘೋಷಣಾ ಪ್ರಕ್ರಿಯೆಯಲ್ಲಿ ಆಯಾ ವಿದ್ಯಾರ್ಥಿಗಳ ಪ್ರಥಮ ಪಿ.ಯು.ಸಿ. ಹಾಗೂ ಎಸ್.ಎಸ್.ಎಲ್.ಸಿ ಅಂಕಗಳನ್ನು ಮಾನದಂಡಗಳಾಗಿ ಪರಿಗಣಿಸಲಾಗುತ್ತಿದ್ದು, ವೃತ್ತಿಪರ ಕೋರ್ಸಿಗೆ ಪ್ರವೇಶ ಕಲ್ಪಿಸುವ ಸಿ.ಇ.ಟಿ. ಪರೀಕ್ಷೆಗೆ ಪಿ.ಯು.ಸಿ. ಫಲಿತಾಂಶವನ್ನು ಪರಿಗಣಿಸಿ ವೈಟೇಜ್ ನೀಡುವ ಪ್ರಕ್ರಿಯೆಯನ್ನು ಕೈಬಿಟ್ಟು, ಕೇವಲ ಸಿ.ಇ.ಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ರ್ಯಾಂಕಿಂಗ್‍ಗೆ ಪರಿಗಣಿಸುವ ತೀರ್ಮಾವನ್ನು ತೆಗೆದುಕೊಳ್ಳಬೇಕಾಗಿ ಸಚಿವ ಸುರೇಶ್ ಕುಮಾರ್ ಅವರು ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಅವರನ್ನು ಕೋರಿದ್ದಾರೆ. ಈ ಬಗ್ಗೆ […]

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಬಂಟ್ವಾಳ ಶಾಸಕರ ಉಸ್ತುವಾರಿಯಲ್ಲಿ ಸಿದ್ಧತಾ ಸಭೆ

Tuesday, June 2nd, 2020
Rajesh Naik

ಬಂಟ್ವಾಳ :  ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಜೂನ್ 25 ರಂದ ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ಧತಾ ಪೂರ್ವಬಾವಿ ಸಭೆಯು ಈ ದಿನ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಬಂಟ್ವಾಳ ತಾಲೂಕಿನಲ್ಲಿ5, 200 ವಿದ್ಯಾರ್ಥಿಗಳು 12 ಪರೀಕ್ಷಾಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದು ಶಿಕ್ಷಕರ ಜೊತೆ ಇತರ ಇಲಾಖಾಧಿಕಾರಿಗಳು ಸಹಕರಿಸುವಂತೆ ಶಾಸಕರು ಸೂಚಿಸಿದರು. ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆ, ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಚರ್ಚಿಸಲಾಯಿತು. ಪ್ರತಿಯೊಂದು […]

ಎಸ್.ಎಸ್.ಎಲ್.ಸಿ. ಪರೀಕ್ಷಾ ವೇಳಾಪಟ್ಟಿ ಇಲ್ಲಿದೆ ನೋಡಿ

Tuesday, May 19th, 2020
SSLC-Exam-Time-Table

ಬೆಂಗಳೂರು: ಕೋವಿಡ್ ಸಂಬಂಧಿತ ಲಾಕ್ ಡೌನ್ ಕಾರಣದಿಂದ ರಾಜ್ಯದಲ್ಲಿ  ಮುಂದೂಡಲ್ಪಟ್ಟಿದ್ದ ಎಸ್.ಎಸ್.ಎಲ್.ಸಿ.  ಪರೀಕ್ಷಾ ದಿನಾಂಕವನ್ನು ಮಂಡಳಿಯು ಪ್ರಕಟಿಸಿದೆ . ಈ ಪ್ರಕಾರ ಜೂನ್ 25ರಿಂದ ಜುಲೈ 3ನೇ ತಾರೀಖಿನವರೆಗೆ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಡೆಯಲಿವೆ. ಇದಕ್ಕೆ ಸಂಬಂಧಿಸಿದ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇದೀಗ ಪ್ರಕಟಿಸಿದ್ದು, ಪರೀಕ್ಷಾ ದಿನಾಂಕ ವಿವರಗಳು ಈ ಕೆಳಗಿನಂತಿವೆ. ಎಲ್ಲಾ ಪರೀಕ್ಷೆಗಳು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30ರ ಅವಧಿಯಲ್ಲಿ ನಡೆಯಲಿವೆ. ಎಸ್.ಎಸ್.ಎಲ್.ಸಿ.  ಪರೀಕ್ಷೆಯ ಪ್ರಾರಂಭದ ವಿಷಯವಾಗಿ ಜೂನ್ 25, […]

ಕುಕ್ಕೆ ಸುಬ್ರಹ್ಮಣ್ಯ ದ ವಿದ್ಯಾರ್ಥಿನಿಗೆ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ

Monday, May 7th, 2018
subramanya

ಮಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಕುಕ್ಕೆ ಸುಬ್ರಹ್ಮಣ್ಯ ದ ವಿದ್ಯಾರ್ಥಿನಿಗೆ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಬಂದಿದೆ. ಮಾಜಿ ಪ್ರಾಂಶುಪಾಲ, ಪತ್ರಕರ್ತ ದಿ.ವಿಠಲ ರಾವ್ ಅವರ ಪುತ್ರಿ ಅಭಿಜ್ಞಾ ರಾವ್ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ರಲ್ಲಿ 623 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಇವರಾಗಿದ್ದು, ಇವರ ಈ ಸಾಧನೆ ಶಾಲೆಗೆ, ಶಿಕ್ಷಕ ವೃಂದಕ್ಕೆ ಕೀರ್ತಿ ತಂದೊದಗಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ

Monday, April 30th, 2018
Ankitha

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ದಕ್ಷಿಣ ಕನ್ನಡ ಜಿಲ್ಲೆ ಮೊದಲ  ಸ್ಥಾನವನ್ನು ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಳೆದ ವರ್ಷ  ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಶೇ. 91.49 ಫಲಿತಾಂಶವನ್ನು ದಾಖಲಿಸಿರುವ ದಕ್ಷಿಣ ಕನ್ನಡ ಕಳೆದ ವರ್ಷ 89.92 ಫಲಿತಾಂಶವನ್ನು ದಾಖಲಿಸಿತ್ತು. ದ.ಕ. ಜಿಲ್ಲೆ ಈ ಹಿಂದಿನ ಸತತ ಮೂರು ವರ್ಷಗಳಿಂದ ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಹ್ಯಾಟ್ರಿಕ್ ಸಾಧನೆ  ಮಾಡಿತ್ತು.  ಶೇಕಡಾವಾರು ಫಲಿತಾಂಶದಲ್ಲಿಯೂ ಕಳೆದೆರಡು ವರ್ಷಗಳಿಂದ ಏರಿಕೆಯನ್ನು […]