ಎಲ್ಲ ಅಭ್ಯರ್ಥಿಗಳಿಗೂ ಪಿಯು ಪ್ರವೇಶ ಲಭ್ಯ: ಸುರೇಶ್ ಕುಮಾರ್

Thursday, July 22nd, 2021
Suresh Kumar

ಬೆಂಗಳೂರು: ಈ ಬಾರಿ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣರಾಗುತ್ತಿರುವುದರಿಂದ ಪಿಯುಸಿ ಸೇರಬಯಸುವ ಎಲ್ಲರಿಗೂ ಪ್ರವೇಶಾವಕಾಶ ಕಲ್ಪಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಗುರುವಾರ ಕೊನೆದಿನದ ಪರೀಕ್ಷೆಯ ನಂತರ ನಗರದ ಹಲವಾರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಕೊನೆದಿನ ದಿನದ ಪರೀಕ್ಷೆಗೆ ಸಂಬಂಧಿಸಿದ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ವಿವರಿಸಿದ ಅವರು, ಯಾವುದೇ ವಿದ್ಯಾರ್ಥಿಗೂ ತೊಂದರೆಯಾಗದಂತೆ ಎಲ್ಲರಿಗೂ ಪ್ರಥಮ ಪಿಯುಸಿ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುವುದು ಎಂದರು. […]

ಮೊದಲ ದಿನದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ: ಸುರೇಶ್ ಕುಮಾರ್

Monday, July 19th, 2021
Suresh Kumar

ಬೆಂಗಳೂರು: ಮೊದಲ ದಿನ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುರಕ್ಷಿತ ವಾತಾವರಣದಲ್ಲಿ ಅತ್ಯಂತ ಉತ್ಸಾಹ ಮತ್ತು ಲವಲವಿಕೆಯಿಂದ ಪರೀಕ್ಷೆ ಬರೆದಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಸೋಮವಾರ ಪರೀಕ್ಷೆಯ ನಂತರ ನಗರದ ಹಲವಾರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮೊದಲ ದಿನದ ಪರೀಕ್ಷೆಗೆ ಸಂಬಂಧಿಸಿದ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ವಿವರಿಸಿದ ಅವರು, ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಪ್ರಶಾಂತ ವಾತಾವರಣದಲ್ಲಿ ನಡೆದವು. ಇಂದು ಮೂರು ಕೋರ್ ವಿಷಯಗಳ ಪರೀಕ್ಷೆಗಳು […]

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ಪೂರ್ಣ: ಸಚಿವ ಸುರೇಶ್ ಕುಮಾರ್

Thursday, July 15th, 2021
suresh Kumar

ಬೆಂಗಳೂರು : ಜುಲೈ 19 ಮತ್ತು 22ರಂದು ನಿಗದಿಯಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈಗಾಗಲೇ ಸಿದ್ಧತೆಗಳ ಕುರಿತಂತೆ ಪರಿಶೀಲನೆ ನಡೆಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಸಿದ್ಧತೆ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ದೇಶಕರ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾರ್ಗದರ್ಶನ ನೀಡಿದ ಸಚಿವರು, […]

ಎಸ್ಸೆಸ್ಸೆಲ್ಸಿ: ಭರವಸೆ ಮೂಡಿಸಿದ ತೀರ್ಪು-ಸುರೇಶ್ ಕುಮಾರ್

Tuesday, July 13th, 2021
Suresh-Kumar

ಬೆಂಗಳೂರು: ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮೂಲಕ ರಾಜ್ಯ ಉಚ್ಚ ನ್ಯಾಯಾಲಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದ್ದು, ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪರೀಕ್ಷೆ ಸಂಬಂಧದಲ್ಲಿ ಈ ವರ್ಷ ಕೈಗೊಂಡಿರುವ ಸರಳೀಕೃತ ಪರೀಕ್ಷಾ ವ್ಯವಸ್ಥೆ […]

ಜುಲೈ 19, 22ರಂದು ಎಸ್ಸೆಸ್ಸಲ್ಸಿ ಪರೀಕ್ಷೆ: ಸುರೇಶ್ ಕುಮಾರ್

Monday, June 28th, 2021
Suresh-Kumar

ಬೆಂಗಳೂರು: ರಾಜ್ಯದ 10ನೇ ತರಗತಿ ವಿದ್ಯಾರ್ಥಿಗಳ ಹಾಗೂ ಪೋಷಕರ ಬಹುದಿನಗಳ ನಿರೀಕ್ಷೆಯಾಗಿದ್ದ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ. ಪರೀಕ್ಷೆಗಳಿಗೆ ದಿನಾಂಕ ನಿಗದಿಪಡಿಸಲಾಗಿದ್ದು, ಜುಲೈ 19 ಮತ್ತು 22ರಂದು ಎರಡು ದಿನಗಳ ಕಾಲ ಈ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಸೋಮವಾರ ಪರೀಕ್ಷೆ ಸಿದ್ಧತೆ ಕುರಿತು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್‍ಪಿ, ಡಿಎಚ್‍ಒ, ಖಜಾನಾಧಿಕಾರಿಗಳು ಹಾಗೂ ಶಿಕ್ಷಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್‍ನಲ್ಲಿ ಮಾರ್ಗದರ್ಶನ ನೀಡಿದ ನಂತರ ಸುದ್ದಿಗೋಷ್ಠಿಯಲ್ಲಿ […]

ಎಸ್.ಎಸ್.ಎಲ್.ಸಿ. ಪರೀಕ್ಷೆ – ವಿದ್ಯಾರ್ಥಿಗಳ ಜವಾಬ್ದಾರಿ ಸರ್ಕಾರದ್ದು: ಸಚಿವ ಕೋಟ 

Monday, June 22nd, 2020
sslc

ಮಂಗಳೂರು : ವಿದ್ಯಾರ್ಥಿಗಳು ಸುರಕ್ಷಿತವಾಗಿ ಪರೀಕ್ಷೆ ಬರೆಯುವುದಕ್ಕೆ ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಸರ್ಕಾರ ಮತ್ತು ಜಿಲ್ಲಾಡಳಿತದಿಂದ ಕೈಗೊಂಡಿದ್ದು  ವಿದ್ಯಾರ್ಥಿಗಳು ಭಯ ಪಡುವ ಅಗತ್ಯವಿಲ್ಲ. ಪರಿಕ್ಷೆಗೆ ಹಾಜರಾಗುವ ಪತ್ರಿಯೊಬ್ಬ ವಿದ್ಯಾರ್ಥಿಯ ಜವಬ್ದಾರಿ ಸರ್ಕಾರದ ಮೇಲೆಯಿದ್ದು, ಪೋಷಕರು ಅಂತಕ ಒಳಗಾಗುವುದು ಬೇಡ. ಅವಶ್ಯಕತೆವಿದ್ದಲ್ಲಿ ಒಬ್ಬ ವಿದ್ಯಾರ್ಥಿ ಪರೀಕ್ಷೆ ಬರೆಯಲು ಒಂದು ಬಸ್ಸಿನ ವ್ಯವಸ್ಥೆ ಮಾಡಲೂ ಸರಕಾರ ಸಿದ್ದ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿಯಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವ ಸಿದ್ಧತಾ ಕ್ರಮಗಳ ಪರಿಶೀಲನಾ […]

ಕಾಸರಗೋಡು: ಎಸ್.ಎಸ್.ಎಲ್.ಸಿ ಪರೀಕ್ಷೆ ಬುಧವಾರ ಆರಂಭ

Tuesday, March 8th, 2016
kasagod SSLC

ಕಾಸರಗೋಡು: ರಾಜ್ಯದಲ್ಲಿ ಹತ್ತನೇ ತರಗತಿಯ ಪರೀಕ್ಷೆ ಬುಧವಾರ (ಇಂದು) ಆರಂಭಗೊಳ್ಳುತ್ತಿದೆ. ರಾಜ್ಯದ 4,76,857 ಮಂದಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಿ ಭವಿಷ್ಯ ನಿರ್ಧರಿಸುವರು. ಪರೀಕ್ಷೆಗೆ 2903 ಪರೀಕ್ಷಾ ಕೇಂದ್ರಗಳನ್ನು ಸಿದ್ದಗೊಳಿಸಲಾಗಿದೆ. ಮಲೆಯಾಳ ವಿಭಾಗದಲ್ಲಿ 3,20,854 ವಿದ್ಯಾರ್ಥಿಗಳು,ಕನ್ನಡ ವಿಭಾಗದಲ್ಲಿ 3135 ಮಂದಿ ವಿದ್ಯಾರ್ಥಿಗಳು,ತಮಿಳಿನಲ್ಲಿ 2163 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮೌಲ್ಯ ಮಾಪನ ಏಪ್ರಿಲ್ 1 ರಿಂದ 12ರ ವರೆಗೆ ನಡೆಯಲಿದೆ.

ಇಂದಿನಿಂದ ಪ್ರಾರಂಭವಾದ ಎಸ್.ಎಸ್.ಎಲ್.ಸಿ ಪರೀಕ್ಷೆ ;ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

Monday, April 1st, 2013
SSLC Exams

ಮಂಗಳೂರು : ಇಂದಿನಿಂದ ಆರಂಭಗೊಂಡಿರುವ ಎಸೆಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಯಲು ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಕೈಗೊಂಡಿದೆ. ಜಿಲ್ಲೆಯಲ್ಲಿ ಈ ಬಾರಿ ಒಟ್ಟು 35,061 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇದರಲ್ಲಿ  18,060 ಗಂಡು ಮತ್ತು 17,001 ಹೆಣ್ಮಕ್ಕಳಿದ್ದಾರೆ. ಇದುವರೆಗೂ  ಬೆಳಗ್ಗೆ 10:30ಕ್ಕೆ ಪರೀಕ್ಷೆಯು ಆರಂಭಗೊಳ್ಳುತ್ತಿತ್ತು. ಆದರೆ ಈ ಬಾರಿ 9:30ಕ್ಕೆ ಆರಂಭ ಗೊಂಡು, 12:45ಕ್ಕೆ ಮುಕ್ತಾಯಗೊಳ್ಳಲಿದೆ. ಪ್ರಸಕ್ತ ಸಾಲಿನ ಪರೀಕ್ಷೆಗೆ ಜಿಲ್ಲೆಯಲ್ಲಿ 96 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆಯ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ […]