ಎಲ್ಲ ಅಭ್ಯರ್ಥಿಗಳಿಗೂ ಪಿಯು ಪ್ರವೇಶ ಲಭ್ಯ: ಸುರೇಶ್ ಕುಮಾರ್

Thursday, July 22nd, 2021
Suresh Kumar

ಬೆಂಗಳೂರು: ಈ ಬಾರಿ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣರಾಗುತ್ತಿರುವುದರಿಂದ ಪಿಯುಸಿ ಸೇರಬಯಸುವ ಎಲ್ಲರಿಗೂ ಪ್ರವೇಶಾವಕಾಶ ಕಲ್ಪಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಗುರುವಾರ ಕೊನೆದಿನದ ಪರೀಕ್ಷೆಯ ನಂತರ ನಗರದ ಹಲವಾರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಕೊನೆದಿನ ದಿನದ ಪರೀಕ್ಷೆಗೆ ಸಂಬಂಧಿಸಿದ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ವಿವರಿಸಿದ ಅವರು, ಯಾವುದೇ ವಿದ್ಯಾರ್ಥಿಗೂ ತೊಂದರೆಯಾಗದಂತೆ ಎಲ್ಲರಿಗೂ ಪ್ರಥಮ ಪಿಯುಸಿ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುವುದು ಎಂದರು. […]

ಮೊದಲ ದಿನದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ: ಸುರೇಶ್ ಕುಮಾರ್

Monday, July 19th, 2021
Suresh Kumar

ಬೆಂಗಳೂರು: ಮೊದಲ ದಿನ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುರಕ್ಷಿತ ವಾತಾವರಣದಲ್ಲಿ ಅತ್ಯಂತ ಉತ್ಸಾಹ ಮತ್ತು ಲವಲವಿಕೆಯಿಂದ ಪರೀಕ್ಷೆ ಬರೆದಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಸೋಮವಾರ ಪರೀಕ್ಷೆಯ ನಂತರ ನಗರದ ಹಲವಾರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮೊದಲ ದಿನದ ಪರೀಕ್ಷೆಗೆ ಸಂಬಂಧಿಸಿದ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ವಿವರಿಸಿದ ಅವರು, ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಪ್ರಶಾಂತ ವಾತಾವರಣದಲ್ಲಿ ನಡೆದವು. ಇಂದು ಮೂರು ಕೋರ್ ವಿಷಯಗಳ ಪರೀಕ್ಷೆಗಳು […]

ಸಚಿವರಿಂದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ: ಖುದ್ದು ಸಿದ್ಧತೆ ಪರಿಶೀಲನೆ

Saturday, July 17th, 2021
SureshKumar

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಈಗಾಗಲೇ ಮಕ್ಕಳು ತಮ್ಮ ಶಾಲೆಗಳಿಂದ ಪರೀಕ್ಷಾ ಪ್ರವೇಶಪತ್ರಗಳನ್ನು ಪಡೆದುಕೊಂಡಿದ್ದು, ಪರೀಕ್ಷೆಗೆ ಹಾಜರಾಗಲು ಉತ್ಸುಕರಾಗಿದ್ದಾರೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಸೋಮವಾರದಿಂದ ಆರಂಭವಾಗಲಿರುವ 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಿದ್ಧತೆಗಳನ್ನು ಮತ್ತು ಅಣಕು ಪರೀಕ್ಷೆಗಳನ್ನು ಪರಿಶೀಲಿಸಲು ಶನಿವಾರ ಬೆಂಗಳೂರು ನಗರದ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ಈ ಬಾರಿಯ […]

ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ: ಕರ್ನಾಟಕ ಮಾದರಿ – ಸುರೇಶ್ ಕುಮಾರ್

Tuesday, July 13th, 2021
Suresh-Kumar

ಬೆಂಗಳೂರು: ಇಡೀ ದೇಶದಲ್ಲಿ ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆಯನ್ನು ಹೊಂದಿದ ಮೊದಲ ರಾಜ್ಯ ಕರ್ನಾಟಕ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಮಂಗಳವಾರ ನಗರದ ತಲಘಟ್ಟಪುರ ಗ್ರಂಥಾಲಯದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದಿನ ಅವಶ್ಯಕತೆಗಳಿಗನುಗುಣವಾಗಿ ಡಿಜಿಟಲ್ ಗ್ರಂಥಾಲಯಗಳನ್ನು ರಾಜ್ಯಾದ್ಯಂತ ಸ್ಥಾಪಿಸಲು ಕ್ರಮ ವಹಿಸಲಾಗಿದೆ ಎಂದರು. ಒಂದು ವರ್ಷದ ಅವಧಿಯಲ್ಲಿ ರಾಜ್ಯದೆಲ್ಲೆಡೆ 372 ಡಿಜಿಟಲ್ ಗ್ರಂಥಾಲಯಗಳು ಕಾರ್ಯಾರಂಭ ಮಾಡಿದ್ದು, ಇಡೀ ದೇಶದಲ್ಲಿ […]

ಪಿಯುಸಿ ಸೀಟುಗಳ ಹೆಚ್ಚಳಕ್ಕೆ ಕ್ರಮ – ಸಚಿವ ಸುರೇಶ್ ಕುಮಾರ್

Friday, July 9th, 2021
suresh Kumar

ಬೆಂಗಳೂರು: ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪರೀಕ್ಷೆಗೆ ನೊಂದಾಯಿಸಿದ ಎಲ್ಲ ವಿದ್ಯಾರ್ಥಿಗಳನ್ನು ಪಿ.ಯು.ಸಿ ತರಗತಿಗಳ ಪ್ರವೇಶಕ್ಕೆ ಅವಕಾಶ ನೀಡಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಕುರಿತು ರಾಜ್ಯದ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಶುಕ್ರವಾರ ಡಿ.ಎಸ್.ಇ.ಆರ್.ಟಿ ಯಲ್ಲಿ “ಬನ್ನಿ ವಿದ್ಯಾರ್ಥಿಗಳೇ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಬರೆಯೋಣ” ಎಂಬ ಧ್ಯೇಯದೊಂದಿಗೆ ರಾಜ್ಯದ […]

ಸರ್ಕಾರಿ ಶಾಲೆಯಲ್ಲಿ ಹೆಚ್ಚುತ್ತಿರುವ ದಾಖಲಾತಿ: ಇಂದಿನ ದಿನಮಾನದ ಭರವಸೆ- ಸಚಿವ ಸುರೇಶ್ ಕುಮಾರ್

Thursday, July 8th, 2021
Suresh Kuamar

ಬೆಂಗಳೂರು: ಬೆಂಗಳೂರಿನಂತಹ ಮಹಾನಗರದಲ್ಲೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳು ಮುಖ ಮಾಡುತ್ತಿರುವುದು ಸರ್ಕಾರಿ ಶಾಲೆಗಳ ಮೇಲೆ ಸಾರ್ವಜನಿಕರು ಭರವಸೆ ಹೊಂದಿರುವುದರ ದ್ಯೋತಕ ವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್  ಅಭಿಪ್ರಾಯಪಟ್ಟಿದ್ದಾರೆ. ಗುರುವಾರ ಬೆಂಗಳೂರು ನಗರದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ನೆಲಗದೇರನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ  ಭೇಟಿ ನೀಡಿ ವಿದ್ಯಾರ್ಥಿಗಳ ಶಾಲಾ ದಾಖಲಾತಿ ಪ್ರಕ್ರಿಯೆಯನ್ನು ಪರಿಶೀಲಿಸಿದ ನಂತರ ಅವರು ಮಾತನಾಡಿದರು. ಅತ್ಯಂತ ಗುಣಮಟ್ಟದ ಶಿಕ್ಷಣ  ನೀಡುವ ನೆಲಗದೇರನಹಳ್ಳಿ […]

ಆ. 22: ಶಿಕ್ಷಕರ ಅರ್ಹತಾ ಪರೀಕ್ಷೆ- ಸುರೇಶ್ ಕುಮಾರ್

Saturday, July 3rd, 2021
Suresh Kumar

ಬೆಂಗಳೂರು:  ಒಂದರಿಂದ ಎಂಟನೇ ತರಗತಿಗಳ  ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2021) ಆಗಸ್ಟ್ 22ರಂದು ನಡೆಯಲಿದೆ ಎಂದು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಒಂದರಿಂದ ಐದನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ., ಉತ್ತೀರ್ಣರಾಗಿರಬೇಕು ಹಾಗೂ ಆರರಿಂದ ಎಂಟನೇ ತರಗತಿ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ., ಅಥವಾ ಪದವಿಯೊಂದಿಗೆ ಬಿಇಡಿ ಅಥವಾ ಬಿ.ಎ.ಇಡಿ/ ಬಿ.ಎಸ್.ಸಿ.ಇಡಿ ಯಲ್ಲಿ […]

ಶಿಕ್ಷಕರ ವರ್ಗಾವಣೆಗೆ ಚಾಲನೆ : ಸುರೇಶ್ ಕುಮಾರ್

Friday, July 2nd, 2021
Suresh-Kumar

ಬೆಂಗಳೂರು: ರಾಜ್ಯದ ಶಿಕ್ಷಕ ಸಮೂಹದ ಬಹುದಿನಗಳ ನಿರೀಕ್ಷೆಯಾಗಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಬುಧವಾರ ಅಧಿಸೂಚನೆ ಹೊರಡಿಸಲಾಗಿದ್ದು, ಶಿಕ್ಷಕರು ಕೌನ್ಸೆಲಿಂಗ್ ಮೂಲಕ ತಮಗೆ ಅನುಕೂಲವಾದ ಸ್ಥಳ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. 2019-20ನೇ ಸಾಲಿನ ಸಾಮಾನ್ಯ ವರ್ಗಾವಣೆಗಳಲ್ಲಿನ ಕಡ್ಡಾಯ ವರ್ಗಾವಣೆ, ವಲಯ ವರ್ಗಾವಣೆಯ ಮೇಲೆ ಅಥವಾ ಸಮರ್ಪಕ ಮರು ಹಂಚಿಕೆಯ ಮೇರೆಗೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಂಬಂಧಿಸಿದಂತೆ ತಾಲೂಕಿನ ಹೊರಗೆ ಅಥವಾ ಪ್ರೌಢಶಾಲಾ ಶಿಕ್ಷಕರಿಗೆ ಸಂಬಂಧಿಸಿದಂತೆ ಜಿಲ್ಲೆಯ […]

ಅಟ್ಲಂಟಾ ಸಂಸ್ಥೆಯಿಂದ 15 ಸಾವಿರ ಪುಸ್ತಕಗಳ ಕೊಡುಗೆ: ಸುರೇಶ್ ಕುಮಾರ್

Monday, June 28th, 2021
Suresh Kumar

ಬೆಂಗಳೂರು: ಅಮೇರಿಕಾದ ಅಟ್ಲಾಂಟಾ ವಿ-ಸ‌ರ್ವ್ ಇಂಟರ್ ನ್ಯಾಷನಲ್ ಫೌಂಡೇಷನ್ ಸಂಸ್ಥೆ ಬೆಂಗಳೂರು ನಗರದ ನಗರ ಕೇಂದ್ರ ಗ್ರಂಥಾಲಯಕ್ಕೆ ರೂಪಾಯಿ ಒಂದೂವರೆ ಕೋಟಿ ಮೌಲ್ಯದ‌ 15 ಸಾವಿರ ಅತ್ಯತ್ಕೃಷ್ಟ ಪುಸ್ತಕಗಳನ್ನು ನೀಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಪುಸ್ತಕಗಳನ್ನು ಇಲಾಖೆ ಪರವಾಗಿ ಸ್ವೀಕರಿಸಿ ಮಾತನಾಡಿದ ಅವರು, ವಿ-ಸರ್ವ್ ಇಂಟರ್ ನ್ಯಾಷನಲ್ ಫೌಂಡೇಷನ್ ಸಂಸ್ಥೆ ಅಧ್ಯಕ್ಷ ಡಾ. ವಿಜಯರಾಘವನ್ ಅವರು ತಮ್ಮ ಸಂಸ್ಥೆಯಿಂದ ನೀಡಿದ ಮೌಲ್ಯಯುತ ಪುಸ್ತಕಗಳನ್ನು ಬೆಂಗಳೂರು ನಗರ […]

ಎಸ್ಎಸ್ಎಲ್ ಸಿ ಪರೀಕ್ಷೆ ಹಿನ್ನಲೆ ಪೊಳಲಿ ರಾಜರಾಜೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್

Friday, July 10th, 2020
education minister

ಬಂಟ್ವಾಳ: ಕೋವಿಡ್-19 ಸೋಂಕು ಭೀತಿಯ ನಡುವೆಯೂ ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಕಾಲಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದ ಕೌಶಿಕ್ ನನ್ನು ದೇವಸ್ಥಾನದ ಪ್ರವೇಶ ದ್ವಾರದ ಬಳಿ ಭೇಟಿ ಆತನ ಜತೆ ಉಭಯ ಕುಶಲೋಪರಿ ವಿಚಾರಿಸಿದರು. ನೀನೇ ನಮಗೆ ಸ್ಪೂರ್ತಿ ಎಂದು […]