ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೆ ಮೈಸೂರಿನ ಜಿಲ್ಲಾಧಿಕಾರಿ ಆಗಬೇಕೆಂದು ಸಹಿ ಸಂಗ್ರಹ

Sunday, June 13th, 2021
sindoori

ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಮೈಸೂರಿನ ಜಿಲ್ಲಾಧಿಕಾರಿಯನ್ನಾಗಿ ನೇಮಿಸಬೇಕು ಎಂದು ಆನ್ಲೈನ್ ಕ್ಯಾಂಪೇನ್ ಶುರುವಾಗಿದೆ. ‘ಚೇಂಜ್ ಆರ್ಗ್’ ಸಾಮಾಜಿಕ ಮಾಧ್ಯಮದಲ್ಲಿ “ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ” ಹೆಸರಲ್ಲಿ ಸಹಿ ಸಂಗ್ರಹ ಅಭಿಯಾನ ಆರಂಭವಾಗಿದ್ದು, ಈಗಾಗಲೇ ಸುಮಾರು 26 ಸಾವಿರ ಜನರಿಂದ ಸಹಿ ಸಂಗ್ರಹ ಆಗಿದೆ. ಮೈಸೂರಿನಲ್ಲಿ  ಭೂಮಿ ಒತ್ತುವರಿ ತೆರವು. ಕೆರೆಗಳ ಅಕ್ರಮ, ಸರ್ಕಾರಿ ಭೂಮಿ ಅಕ್ರಮ  ಮತ್ತು  ಭೂ ಮಾಫಿಯಾದ ಬುಡಕ್ಕೆ ಕೊಡಲಿ ಇಡುವ ಕೆಲಸವನ್ನು ರೋಹಿಣಿ ಸಿಂಧೂರಿ ಮಾಡಿದ್ದರು. ರೋಹಿಣಿ ಸಿಂಧೂರಿ ಮತ್ತು ಶಿಲ್ಪಾನಾಗ್  ಕಿತ್ತಾಟದಲ್ಲಿ  ಇಬ್ಬರನ್ನೂ ಸರ್ಕಾರ […]

ಮಂಗಳೂರು ನಗರ ಪಾಲಿಕೆಗೆ ನೂತನ ಆಯುಕ್ತರಾಗಿ ಐಎಎಸ್ ಅಧಿಕಾರಿ ಅಕ್ಷಯ್ ಶ್ರೀಧರ್

Tuesday, August 25th, 2020
Akshay Sudhir

ಮಂಗಳೂರು : ಮಂಗಳೂರು ನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿ ಅಕ್ಷಯ್ ಶ್ರೀಧರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಕ್ಷಯ್ ಶ್ರೀಧರ್ ಅವರು ಈ ಹಿಂದೆ ಸಹಾಯಕ ಆಯುಕ್ತರಾಗಿ, ಬೀದರ್ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದರು. ಎಲೆಕ್ಟ್ರಿಕಲ್ ಎಂಜಿನಿಯರ್ ನಲ್ಲಿ ಪದವಿ ಪಡೆದಿರುವ ಅಕ್ಷಯ್ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾಗುವ ಮುನ್ನ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು

ವೈಯಕ್ತಿಕ ಕಾರಣಗಳಿಂದಲೇ ಐಎಎಸ್‌ ಅಧಿಕಾರಿ ಡಿ.ಕೆ. ರವಿ ಆತ್ಮಹತ್ಯೆ

Friday, November 25th, 2016
D K Ravi

ಬೆಂಗಳೂರು: ಇಪ್ಪತ್ತು ತಿಂಗಳ ಹಿಂದೆ ರಾಷ್ಟ್ರ ಮಟ್ಟದಲ್ಲಿ ಬಹುಚರ್ಚಿತವಾಗಿದ್ದ ಐಎಎಸ್‌ ಅಧಿಕಾರಿ ಡಿ.ಕೆ. ರವಿ ನಿಗೂಢ ಸಾವಿನ ಬಗ್ಗೆ ಸುದೀರ್ಘಾವಧಿಯ ತನಿಖೆ ಮುಗಿಸಿರುವ ಕೇಂದ್ರ ತನಿಖಾ ದಳ (ಸಿಬಿಐ), ವೈಯಕ್ತಿಕ ಕಾರಣಗಳಿಂದಲೇ ಐಎಎಸ್‌ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಲ್ಲಿ ಹೇಳಿದೆ. ಐಎಎಸ್‌ ಅಧಿಕಾರಿ ಸಾವಿನ ಕುರಿತು ಬೆಂಗಳೂರು ದಕ್ಷಿಣ ವಲಯ ಉಪ ವಿಭಾಗಾಧಿಕಾರಿ ಡಿ.ಬಿ. ನಟೇಶ್‌ಗೆ ಸೋಮವಾರ 90 ಪುಟಗಳ ಅಂತಿಮ ವರದಿ ಸಿಬಿಐ ಅಧಿಕಾರಿಗಳಿಂದ ಸಲ್ಲಿಕೆಯಾಗಿದ್ದು, ಇದರಲ್ಲಿ ತೀರಾ ವೈಯಕ್ತಿಕ ಕಾರಣಗಳಿಂದಾಗಿ ಬೇಸರಗೊಂಡು ರವಿ […]

ಐ.ಎ.ಎಸ್. ಅಧಿಕಾರಿ ರಶ್ಮೀ ಮಹೇಶ್ ಹಲ್ಲೆಗೆ ಎಬಿವಿಪಿ ಖಂಡನೆ

Saturday, October 18th, 2014
abvp

ಮಂಗಳೂರು : ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದ ದಕ್ಷ ಐಎಎಸ್ ಅಧಿಕಾರಿ ರಶ್ಮಿ ಮಹೇಶ್ ಹಲ್ಲೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ. ಭ್ರಷ್ಟಾಚಾರವನ್ನು ನಿಯಂತ್ರಣದಲ್ಲಿ ಇಡಬೇಕಾದ ಸರ್ಕಾರವೇ ಭ್ರಷ್ಟಾಚಾರದ ಪರನಿಂತು ದಕ್ಷ ಅಧಿಕಾರಿಗೆ ಹಲ್ಲೆಯಾದಾಗ ಪೋಲೀಸ್ ಅಧಿಕಾರಿಗಳು ಇದ್ದರೂ ತಡೆಯಲಾಗದಿರುವುದು ವಿಷಾದನೀಯ. ಈ ವ್ಯವಸ್ಥೆಯನ್ನು ಸಾಮಾನ್ಯ ಜನರು ಸಹ ತಲೆ ತಗ್ಗಿಸುವಂತೆ ಮಾಡಿದೆ. ಈ ಘಟನೆಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರವು ಗಂಭೀರವಾಗಿ ತೆಗೆದುಕೊಂಡು ಹಲ್ಲೆ ನಡೆಸಿದ ವ್ಯಕ್ತಿಗಳ ಮೇಲೆ ಕ್ರಮ ಜರುಗಿಸಿ, ಮುಂದೆಂದೂ […]