ವಿಶ್ವಕಪ್‌ ಹಾಕಿ ಪಂದ್ಯಾವಳಿ-2023 : ಒಡಿಶಾ ಆತಿಥ್ಯ

Thursday, November 28th, 2019
Hockey

ಭುವನೇಶ್ವರ : ಪ್ರತಿಷ್ಠಿತ ವಿಶ್ವಕಪ್‌ ಹಾಕಿ ಪಂದ್ಯಾವಳಿಯ ಆತಿಥ್ಯ ಸತತ 2ನೇ ಸಲ ಭಾರತದ ಪಾಲಾಗಿದೆ. 2023ರ ಪುರುಷರ ವಿಭಾಗದ ವಿಶ್ವಕಪ್‌ ಪಂದ್ಯಗಳು ಒಡಿಶಾದ ಭುವನೇಶ್ವರ ಮತ್ತು ರೂರ್ಕೆಲಾದಲ್ಲಿ ನಡೆಯಲಿವೆ ಎಂದು ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಬುಧವಾರ ಘೋಷಿಸಿದರು. ಈ ಪಂದ್ಯಾವಳಿ 2023ರ ಜ. 13ರಿಂದ 29ರ ತನಕ ನಡೆಯಲಿದೆ. “ನಾವು 2018ರ ವಿಶ್ವಕಪ್‌ ಹಾಕಿ ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಿದ್ದೆವು. ಈಗ 2023ರಲ್ಲಿ ಮತ್ತೆ ಈ ಪ್ರತಿಷ್ಠಿತ ಕೂಟದ ಆತಿಥ್ಯ ಭಾರತದ್ದಾಗಿದೆ. ಈ ಸ್ಪರ್ಧೆಗಳು ಭುವನೇಶ್ವರ […]

ಕರ್ನಾಟಕ ಸೇರಿ 2 ಕಡೆ ಹೆಚ್ಚುವರಿ ಪೆಟ್ರೋಲಿಯಂ ಸಂಗ್ರಹಾಗಾರ ಸ್ಥಾಪನೆಗೆ ಅಸ್ತು

Thursday, June 28th, 2018
cabinet

ಮುಂಬೈ: ದೇಶದಲ್ಲಿ ಹೆಚ್ಚುವರಿಯಾಗಿ ಎರಡು ಪೆಟ್ರೋಲಿಯಂ ಸಂಗ್ರಹಾಗಾರ ಸ್ಥಾಪನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಕರ್ನಾಟಕ ಮತ್ತು ಒಡಿಶಾದಲ್ಲಿ 6.5 ಮಿಲಿಯನ್ ಮೆಟ್ರಿಕ್ ಟನ್ ಸಾಮರ್ಥ್ಯದ ಸಂಗ್ರಹಾಗಾರ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಕರ್ನಾಟಕದ ಪಾದೂರಿನಲ್ಲಿ 2.5 ಮಿಲಿಯನ್ ಮೆಟ್ರಿಕ್ ಟನ್ ಹಾಗೂ ಒಡಿಶಾದ ಚಂಡಿಕೋಲ್ನಲ್ಲಿ 4.4 ಮಿಲಿಯನ್ ಮೆಟ್ರಿಕ್ ಟನ್ ಪೆಟ್ರೋಲಿಯಂ ಸಂಗ್ರಹಾಗಾರ ಸ್ಥಾಪನೆ ಮಾಡಲಾಗುತ್ತಿದೆ. ಈಗಾಗಲೇ ಭಾರತ 5.33 ಮಿಲಿಯನ್ ಮೆಟ್ರಿಕ್ ಟನ್ ಸಾಮರ್ಥ್ಯದ ಮೂರು ಪೆಟ್ರೋಲಿಯಂ ಸಂಗ್ರಹಾಗಾರ ಹೊಂದಿದ್ದು, 10 ದಿನಗಳಿಗೆ […]

ಒಡಿಶಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

Wednesday, May 24th, 2017
Ganja

ಮಂಗಳೂರು : ಬರ್ಕೆ ಪೊಲೀಸರು ಒಡಿಶಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಮೊಬೈಲ್ , ನಗದು ವಶಪಡಿಸಿಕೊಂಡಿದ್ದಾರೆ. ನಗರದ ಮಂಗಳಾ ಕ್ರೀಡಾಂಗಣದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಒಡಿಶಾದ ಶಾಂತನುಕುಮಾರ್ ಶಾಹು (20) ಹಾಗೂ ಪಣಂಬೂರು ಮೀನಕಳಿಯದ ವಿಕ್ರಮ್ (27) ಎಂಬವರನ್ನು ಬಂಧಿಸಲಾಗಿದೆ. 2.5 ಲಕ್ಷ ಮೌಲ್ಯದ 5 ಕೆಜಿ ಗಾಂಜಾ ಹಾಗೂ ಗಾಂಜಾ ಸಾಗಾಟಕ್ಕೆ ಬಳಸಿದ್ದ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.