ಮಂಗಳಾದೇವಿ ದೇವಸ್ಥಾನದಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಾಲ್ಕು ಜೋಡಿಗಳ ಮದುವೆ, ಜಂಟಿ ದಾಳಿ

Sunday, June 20th, 2021
Mangaladevi

ಮಂಗಳೂರು : ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ನಾಲ್ಕು ಜೋಡಿಗಳ ಮದುವೆ ಅದ್ದೂರಿಯಾಗಿ ನಡೆಯುತ್ತಿತ್ತು. ಸ್ಥಳಕ್ಕೆ ಮಂಗಳೂರು ಮಹಾನಗರ ಪಾಲಿಕೆ ( ಮನಪಾ) ಸಹಾಯಕ ಆಯುಕ್ತ ಮತ್ತು ಕಂದಾಯ ಇಲಾಖೆಯ ಉಪ ಆಯುಕ್ತ ಜಂಟಿ ದಾಳಿ ನಡೆಸಿ ಮದುವೆ ನಿಲ್ಲಿಸಿದ್ದಾರೆ. ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ, ಎಕ್ಕೂರಿನ ಭಾಸ್ಕರಚಂದ್ರ ಶೆಟ್ಟಿಯವರ ಪುತ್ರಿಯ ವಿವಾಹ ಸೇರಿದಂತೆ ನಾಲ್ಕು ಜೋಡಿಗಳ ಮದುವೆಯನ್ನು ಏರ್ಪಡಿಸಲಾಗಿತ್ತು. ಮದುವೆ ಹಿನ್ನೆಲೆ ದೇವಸ್ಥಾನದ ಮುಂಭಾಗದಲ್ಲಿ 40ಕ್ಕೂ ಹೆಚ್ಚು ಕಾರು […]

ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿ ಕೊರೊನಾ ವಾರಿಯರ್ಸ್ : ಮುಖ್ಯಮಂತ್ರಿ ಘೋಷಣೆ

Wednesday, May 26th, 2021
Yedyurappa

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ, ಕಂದಾಯ ಇಲಾಖೆ ಸಿಬ್ಬಂದಿಗೆ ನೀಡುತ್ತಿರುವ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಅವರು ಇಂದು ಬೆಳಗಾವಿ, ಬಳ್ಳಾರಿ, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳ ಆಯ್ದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಪಿಡಿಓ ಗಳೊಂದಿಗೆ ಸಂವಾದ ನಡೆಸಿದ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ವಿವಿಧ ಪಂಚಾಯಿತಿ ಅಧ್ಯಕ್ಷರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು ಈ ಘೋಷಣೆ ಮಾಡಿದರು. ಕೋವಿಡ್ […]

ಡಿಸಿ ಮನ್ನಾ ಭೂಮಿ ಒತ್ತುವರಿ ತೆರವುಗೊಳಿಸಲು ಕಂದಾಯ ಇಲಾಖೆಗೆ ಡಿಸಿ ಸೂಚನೆ

Monday, October 22nd, 2018
DC-Manna land

ಮಂಗಳೂರು : ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯದವರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಗಳಲ್ಲಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗುವಂತೆ ಸಮಾಜ ಕಲ್ಯಾಣ ಇಲಾಖೆಯು ಪ್ರಕರಣ ವಿಚಾರಣಾ ಹಂತದಲ್ಲಿ ನಿರಂತರವಾಗಿ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ. ಅವರು ಸೋಮವಾರ ತಮ್ಮ ಕಚೇರಿಯಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ದೌರ್ಜನ್ಯ ಪ್ರಕರಣಗಳ ದೂರುಗಳು ಬಂದಾಗ ವಿಳಂಭವಿಲ್ಲದೇ ದಾಖಲಿಸಬೇಕು. ಪ್ರಕರಣಗಳು ದಾಖಲಾದ ನಂತರ ವಿಚಾರಣೆಯಾಗಿ, ನೈಜ ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವುದು […]

ಸ್ಮಾರ್ಟ್ ಸಿಟಿ ಯೋಜನೆಯನ್ನು ದೇಶಕ್ಕೆ ಮಾದರಿಯಾಗುವಂತೆ ತಯಾರು ಮಾಡಲಾಗುತ್ತಿದೆ : ಸಚಿವ ಖಾದರ್

Monday, June 25th, 2018
UT Khader

ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯನ್ನು ಪರಿಪೂರ್ಣವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಯೋಜನೆಯ ಆಡಳಿತ ನಿರ್ದೇಶಕರಿ(ಎಂ.ಡಿ.)ಗೆ ಸಂಪೂರ್ಣ ಜವಾಬ್ದಾರಿ ವಹಿಸಲಾಗುತ್ತಿದೆ. ದೇಶಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ತಯಾರು ಮಾಡಲಾಗುತ್ತಿದೆ. ಇದಕ್ಕಾಗಿ ಜನರೂ ಸ್ಮಾರ್ಟ್ ಆಗಬೇಕಾಗಿದೆ. ಜನರ ಸಹಭಾಗಿತ್ವವೂ ಅಗತ್ಯವಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯನ್ನು ಯೋಜನೆಗೆ ಸಂಬಂಧಿಸಿದಂತೆ ಆಡಳಿತ ನಿರ್ದೇಶಕರು ಪ್ರತೀ 15 ದಿನಗಳಿಗೊಮ್ಮೆ ಪರಿಶೀಲನಾ ಸಭೆ ನಡೆಸಲು ಸೂಚಿಸಲಾಗಿದೆ ಎಂದು ಸಚಿವ ಖಾದರ್ ಹೇಳಿದರು. ನಗರದ ಮಲ್ಲಿಕಟ್ಟೆಯಲ್ಲಿರುವ ಕೆಯುಐಡಿಎಫ್‌ಸಿ ಕಚೇರಿಯಲ್ಲಿಂದು ಜನಪ್ರತಿನಿಧಿಗಳು ಹಾಗೂ ಉನ್ನತ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ […]

ತಾಲೂಕು ಕಚೇರಿಯ ಕಂದಾಯ ಇಲಾಖೆಯ ಕೆಲಸಗಳಲ್ಲಿ ವಿಳಂಬ, ಸೂಕ್ತ ಕ್ರಮಕ್ಕೆ ಆಗ್ರಹ

Wednesday, February 8th, 2017
tp meeting

ಮಂಗಳೂರು : ಮಂಗಳೂರು ತಾಲೂಕು ಕಚೇರಿಯ ಕಂದಾಯ ಇಲಾಖೆಯ ಕೆಲಸಗಳಲ್ಲಿ ವಿಳಂಬವಾಗುತ್ತಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುವ ಬಗ್ಗೆ ತಾಲೂಕು ಪಂಚಾಯತ್ ಸಭೆಯಲ್ಲಿ ಸದಸ್ಯರು ಅತೃಪ್ತಿ ಮತ್ತು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಅಲ್ಲದೆ ತಹಶೀಲ್ದಾರರ ನೇತೃತ್ವದಲ್ಲಿ ವಿಶೇಷ ಸಭೆ ಕರೆಯುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಅಧ್ಯಕ್ಷರು ಸಭೆಗೆ ತಿಳಿಸಿದರು. ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆರಂಭಗೊಂಡ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡು ಅವರು ಮಾತನಾಡುತ್ತಿದ್ದರು. ಈ ಹಿಂದಿನ […]

ಗ್ರಾಮಸ್ಥರ ಮನೆ ಬಾಗಿಲಿಗೆ ಕಂದಾಯ ಇಲಾಖೆ-ರಮಾನಾಥ.ರೈ

Tuesday, June 17th, 2014
Ramanatha Rai

ಮಂಗಳೂರು : ಗ್ರಾಮೀಣ ಪ್ರದೇಶಗಳ ಜನರು ಕಂದಾಯ ಇಲಾಖೆಗೆ ಸಂಬಂದಿಸಿದ ಕೆಲಸಕಾರ್ಯಗಳಿಗೆ ಸದಾ ಪಟ್ಟಣ ಪ್ರದೇಶದ ತಹಶೀಲ್ದಾರರ ಕಚೇರಿಗೆ ಕಂದಾಯ ನಿರೀಕ್ಷಕರ ಗ್ರಾಮಲೆಕ್ಕಾಧಿಕಾರಿಗಳ ಕಚೇರಿಗೆ ಆಗಿಂದಾಗ್ಗೆ ಅಲೆಯುವುದನ್ನು ತಪ್ಪಿಸಲು ದ.ಕ.ಜಿಲ್ಲೆಯಲ್ಲಿ ಜಿಲ್ಲಾಡಳಿತ ವಿನೂತನ ಕಾರ್ಯ ಕೈಗೊಂಡಿದ್ದು ಪ್ರತಿದಿನ ಒಂದೊಂದು ಗ್ರಾಮಪಂಚಾಯತ್ ನಲ್ಲಿ ಕಂದಾಯ ಅದಾಲತ್ ಗಳನ್ನು ಹಮ್ಮಿಕೊಳ್ಳುವ ಮೂಲಕ ಕಂದಾಯ ಇಲಾಖೆಯನ್ನು ಗ್ರಾಮಸ್ಥರ ಮನೆ ಬಾಗಿಲಿಗೆ ತಂದಿದೆ ಎಂದು ಅರಣ್ಯ, ಪರಿಸರ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ ಅವರು ತಿಳಿಸಿದ್ದಾರೆ. ಅವರು ಇಂದು ಬಂಟ್ವಾಳ […]

ಗ್ರಾಮ ಸಹಾಯಕವನ್ನು ‘ಡಿ’ ದರ್ಜೆ ನೌಕರರಾಗಿ ಖಾಯಂ ಗೊಳಿಸಲು ಒತ್ತಾಯಿಸಿ ಸಾಂಕೇತಿಕ ಮುಷ್ಕರ

Monday, October 7th, 2013
D-group-protest

ಮಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖಾ ಗ್ರಾಮ ಸಹಾಯಕರ.ರಿ. ದಕ್ಷಿಣ ಕನ್ನಡ ಜಿಲ್ಲಾ ಶಾಖೆ, ಮಂಗಳೂರು ಇವರ ವತಿಯಿಂದ ಸಾಂಕೇತಿಕ ಮುಷ್ಕರವನ್ನು   ಅಕ್ಟೋಬರ್ 7, 2013ನೇ  ಸೋಮವಾರ ಮಂಗಳೂರು ದ.ಕ.ಜಿಲ್ಲಾಧಿಕಾರಿಗಳ ಕಚೇರಿ ಬಳಿ ನಡೆಸಲಾಯಿತು. ಪರಮೇಶ್ವರ ನಾಯಕ್, ಕಂದಾಯ ಇಲಾಖೆ ನೌಕರರ ಸಂಘ ಅಧ್ಯಕ್ಷ ಮಾತನಾಡಿ ಸರಕಾರಿ ಆದೇಶ ಸಂಖ್ಯೆ : ಕಂ.ಇ.3.ಯು.ವಿ.ಎಸ್.77 ದಿನಾಂಕ 16/9/1998 ಮತ್ತು ಕಂ.ಇ.83.ಯು.ವಿ.ಎಸ್(1)82 ದಿನಾಂಕ 23/09/82ರ ಅನ್ವಯ ಸರಕಾರವು ರಾಜ್ಯದ 10,450 ಗ್ರಾಮ ಸಹಾಯಕರ ಹುದ್ದೆಗಳನ್ನು ಸೃಷ್ಟಿಸಲಾಗಿತ್ತು.  […]