ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿದ್ದ ಲೈನ್‌ಮ್ಯಾನ್‌ ಮೃತ್ಯು

Friday, January 5th, 2024
Raghu-MR

ಕಡಬ : ಮೆಸ್ಕಾಂ ಲೈನ್‌ಮ್ಯಾನ್‌ ಒಬ್ಬರು ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಪಂಜ ಸೆಕ್ಷನ್‌ನ ಬಳ್ಪದ ಪಾದೆ ಎಂಬಲ್ಲಿ ವರದಿಯಾಗಿದೆ. ಹಾಸನ ಜಿಲ್ಲೆಯ ಹೊಳೆನರಸಿಪುರ ಸಿಗರನಹಳ್ಳಿ ನಿವಾಸಿ ಬಳ್ಪದಲ್ಲಿ ಪವರ್‌ಮ್ಯಾನ್ ಆಗಿದ್ದ ರಘು ಎಸ್.ಆರ್. (32) ಮೃತರು ಎಂದು ಗುರುತಿಸಲಾಗಿದೆ. ಬಳ್ಪದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಣೆ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಪೋಲಿಸರು […]

ಜನರು ತೋರಿಸಿದ  ಪ್ರೀತಿ,ವಿಶ್ವಾಸಕ್ಕೆ ನಾನು ಸದಾ ಖುಣಿ- ಹರೇಕಳ ಹಾಜಬ್ಬ

Tuesday, December 7th, 2021
Harekala-Hajabba

ಕಡಬ : ಜನರು ತೋರಿಸಿದ  ಪ್ರೀತಿ,ವಿಶ್ವಾಸಕ್ಕೆ ನಾನು ಸದಾ  ಖುಣಿಯಾಗಿದ್ದೇನೆ ಎಂದು  ಪದ್ಮಶ್ರೀ ವಿಜೇತ ಹರೇಕಳ ಹಾಜಬ್ಬ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ,ಕಡಬ ತಾಲೂಕು ಪತ್ರಕರ್ತ ಸಂಘ ,ಎಸ್.ಡಿ. ಎಂ.ಸಿ.ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆ ಪಿಜಕ್ಕಳ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದ ಲ್ಲಿಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶಿಕ್ಷಣ ಸಂತ ಹರೇಕಳ ಹಾಜಬ್ಬ ಅವರಿಗೆ ಸನ್ಮಾನ ಮತ್ತು ಸಂವಾದ ಕಾರ್ಯಕ್ರಮ , ಪಿಜಕಳ ಶಾಲೆಯ ಮಕ್ಕಳಿಗೆ ಕುದುರೆಮುಖ ಕಬ್ಬಿಣ ಹಾಗೂ ಅದಿರು […]

ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ ನೇಮಕ

Thursday, December 19th, 2019
Janardhana-gowda

ಕಡಬ : ನಿವೃತ್ತ ಶಿಕ್ಷಕ, ಧಾರ್ಮಿಕ, ಸಾಮಾಜಿಕ ಹಾಗೂ ಸಾಹಿತ್ಯಿಕ ಕ್ಷೇತ್ರದಲ್ಲಿ ಸಕ್ರಿಯರೂ ಆಗಿರುವ ಪಿ. ಜನಾರ್ದನಗೌಡ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕಡಬ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಶ್ರೀಯುತರು ಕಡಬ ತಾಲೂಕಿನ ವಿವಿಧ ಶಾಲೆಗಳಲ್ಲಿ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ ಮುಖ್ಯೋಪಧ್ಯಾಯರಾಗಿ ಪದೋನ್ನತಿ ಹೊಂದಿ ನಿವೃತ್ತರಾದರು. ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದ ಜನಾರ್ದನ ಗೌಡರು ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿರುವರು. ಈ ಹಿಂದೆಜರಗಿದ್ದ ಪುತ್ತೂರು ತಾಲೂಕು 5ನೇ ಕನ್ನಡ ಸಾಹಿತ್ಯ […]