ಮಂಗಳೂರಿನ ಶಿವ ದೇವಾಲಯಗಳಲ್ಲಿ ಭಕ್ತಿ, ಸಂಭ್ರಮದಿಂದ ಶಿವ ಪೂಜೆ, ಜಲಾಭಿಷೇಕ

Monday, March 4th, 2019
shivaratri

ಮಂಗಳೂರು :ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಮಂಗಳೂರಿನ ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಮತ್ತು ಪಾಂಡೇಶ್ವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಗ್ಗಿನಿಂದ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆಗಳು ಭಕ್ತಿ, ಸಂಭ್ರಮದಿಂದ ನಡೆಯಿತು. ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವ ಹಾಗೂ ಶಿವರಾತ್ರಿ ಮಹೋತ್ಸವ ನಡೆಯುತ್ತದೆ.ಇಂದು ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಕ್ಷೇತ್ರದಲ್ಲಿ ಆರಂಭವಾಗಿವೆ.  ರುದ್ರ ಮಂತ್ರಗಳಿಂದ ಶಿವಲಿಂಗಕ್ಕೆ ಜಲಾಭಿಷೇಕ ಮಾಡಿ, ಶಿವತೀರ್ಥ ಸ್ವೀಕರಿ ಸಿ ಭಕ್ತರು ಪುನೀತರಾದರು. ಕದ್ರಿ […]

ಸೂಪರ್‌‌ ಮೂನ್‌ ಎಫೆಕ್ಟ್‌… ದ.ಕ ಜಿಲ್ಲೆಯ ದೇಗುಲಗಳ ದರ್ಶನ ಸಮಯ ಬದಲು

Wednesday, January 31st, 2018
super-moon

ಮಂಗಳೂರು: ಪೂರ್ಣ ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ದೇವಸ್ಥಾನದಲ್ಲಿ ದೇವರ ದರ್ಶನದಲ್ಲಿ ಸಮಯ ಬದಲಾವಣೆ ಮಾಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಬೆಳಗ್ಗೆ 6.30ರಿಂದ 9 ಗಂಟೆಯವರೆಗೆ ಪೂಜೆಗೆ ಅವಕಾಶ ಕಲ್ಪಿಸಲಾಗಿತ್ತು. ಬೆಳಗ್ಗೆ 9ರಿಂದ ರಾತ್ರಿ 8.30ರವರೆಗೆ ದೇವಸ್ಥಾನದ ಬಾಗಿಲು ಮುಚ್ಚಿರುತ್ತದೆ. ಸಾಮಾನ್ಯವಾಗಿ ನಡೆಯುವ ಮಧ್ಯಾಹ್ನದ ಪೂಜೆಯೂ ಗ್ರಹಣದಿಂದಾಗಿ ಬೆಳಗ್ಗೆಯೇ ದೇವರಿಗೆ ಸಮರ್ಪಣೆಗೊಂಡಿದೆ. ಧರ್ಮಸ್ಥಳದಲ್ಲೂ ಮಧ್ಯಾಹ್ನ 2.30ರಿಂದ ರಾತ್ರಿ 9 ಗಂಟೆಯವರೆಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ. ರಾತ್ರಿ […]

ಎತ್ತಿನಹೊಳೆ ಯೋಜನೆಗೆ ವಿರುದ್ಧವಾಗಿ ತೀರ್ಪು ಬರಲೆಂದು ಪ್ರಾರ್ಥನೆ

Thursday, September 15th, 2016
yetthinahole-project

ಮಂಗಳೂರು: ದೆಹಲಿಯ ರಾಷ್ಟ್ರೀಯ ಹಸಿರು ಪೀಠದಲ್ಲಿ ಸೆ. 21ರಂದು ನೇತ್ರಾವತಿ ನದಿ ತಿರುವು ಯೋಜನೆ ಕುರಿತು ವಿರುದ್ಧವಾಗಿ ತೀರ್ಪು ಬರಲೆಂದು ನೇತ್ರಾವತಿ ಸಂರಕ್ಷಣಾ ಸಂಯುಕ್ತ ಸಮಿತಿ ಸದಸ್ಯರು ನಗರದ ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು. ಆರಂಭದಲ್ಲಿ ಕದ್ರಿ ಮಂಜುನಾಥ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲೆಯವರು ಶಾಂತ ಸ್ವಭಾವದವರು. ಈವರೆಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದಾರೆ. ಆದರೆ, ಸರ್ಕಾರ ಇದನ್ನು ಅರ್ಥಮಾಡಿಕೊಂಡಿಲ್ಲ. ಸರ್ಕಾರ ಕಿವಿಗೊಡದೆ ಹೋದಾಗ […]