ಮಂಗಳೂರಿನಲ್ಲಿ 68ನೆಯ ಕನ್ನಡ ರಾಜ್ಯೋತ್ಸವ ಆಚರಣೆ

Thursday, November 2nd, 2023
Kannada-Rajyotsava

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲಾಡಳಿತ ವತಿಯಿಂದ ನೆಹರು ಮೈದಾನದಲ್ಲಿ ಏರ್ಪಡಿಸಿದ್ದ 68 ನೆಯ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸುವುದರ ಜೊತೆಗೆ ತುಳು, ಕೊಂಕಣಿ ಮತ್ತು ಬ್ಯಾರಿ ಭಾಷೆಗಳ ಸಾಹಿತ್ಯ ಹಾಗೂ ಸಂಸ್ಕೃತಿಗಳಿಗೂ ಸರ್ಕಾರ ಉತ್ತೇಜನ ನೀಡಲಿದೆ ಎಂದು ಹೇಳಿದರು.  ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ದ.ಕ. ಜಿಲ್ಲೆಯಲ್ಲಿ 3.44 ಲಕ್ಷ ಫಲಾನುಭವಿಗಳು ನೋಂದಣಿಯಾಗಿದ್ದಾರೆ. […]

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಅಹ್ವಾನ

Friday, October 6th, 2023
Rajyotsava 2023

ಮಂಗಳೂರು : 2023-24ನೇ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತ ಕಲೆಗಳು ಸಮಾಜ ಸೇವೆ, ಜನಪದ, ಪರಿಸರ-ವಿಜ್ಞಾನ, ವೈದ್ಯಕೀಯ ಸಂಶೋಧನೆ, ಪತ್ರಿಕೋದ್ಯಮ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ತಮ್ಮ ಸೇವೆ ಅಥವಾ ಸಾಧನೆಯ ಕ್ಷೇತ್ರ ಹಾಗೂ ಸಂಕ್ಷಿಪ್ತ ದಾಖಲೆ ವಿವರಣೆಗಳೊಂದಿಗೆ ಇದೇ ಅ.25ರಂದು ಸಂಜೆ 5 ಗಂಟೆಯೊಳಗೆ ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡವನ್ನು ಬಿಟ್ಟುಕೊಡುವುದಿಲ್ಲ ಎನ್ನುವ ಸ್ಪೂರ್ತಿ ಇರಲಿ : ಬಸವರಾಜ ಬೊಮ್ಮಾಯಿ ಕರೆ

Monday, November 1st, 2021
Kannada Rajyotsava Bommai

ಬೆಂಗಳೂರು : ಕನ್ನಡವನ್ನು ಬಿಟ್ಟುಕೊಡುವುದಿಲ್ಲ ಎನ್ನುವ ಸ್ಪೂರ್ತಿ ಕನ್ನಡಿಗರಿಗಿರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು. ಮೈಸೂರು ಬ್ಯಾಂಕ್ ಬಳಿ ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಉತ್ಸವ ಹಾಗೂ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕನ್ನಡವನ್ನು ಬೆಳೆಸಿ ಕರ್ನಾಟಕವನ್ನು ಉಳಿಸಬೇಕು. ಕನ್ನಡಿಗರು ಈ ಕೆಲಸ ಮಾಡಬೇಕು. ಕನ್ನಡ ಬಳಕೆ, ಇತರರಿಗೆ ಕಲಿಸುವುದು, ಸಾಹಿತ್ಯ, ಸಂಸ್ಕೃತಿಯಲ್ಲಿ ನಿರಂತರವಾಗಿ ಬೆಳೆಸಲು ಪರಿಶ್ರಮ ಅಗತ್ಯ. ಕನ್ನಡಕ್ಕೆ ಆಡಳಿತದಲ್ಲಿ ಹಾಗೂ ಬದುಕಿನಲ್ಲಿ ಅಗ್ರಮಾನ್ಯ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿಗಳು […]

ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ

Monday, October 18th, 2021
kannada Rajyotsava

ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್ ಸೋಂಕು ತಹಬದಿಗೆ ಬಂದಿದೆ, ಆದರೆ, ಸಂಪೂರ್ಣವಾಗಿ ಹೋಗಿಲ್ಲ. ಈ ಅಂಶವನ್ನು ಪರಿಗಣನೆಗೆ ತೆಗೆದುಕೊಂಡು ಮುಂಬರುವ ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವವನ್ನು ಎಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನೊಳಗೊಂಡಂತೆ ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಅವರು ಅ.18ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ […]

ಮಂಗಳೂರು ನೆಹರೂ ಮೈದಾನಿನಲ್ಲಿ 65ನೇ ಕನ್ನಡ ರಾಜ್ಯೋತ್ಸವ

Sunday, November 1st, 2020
Kannada Rajyotsava

ಮಂಗಳೂರು : ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಂಗಳೂರು  ನೆಹರೂ ಮೈದಾನದಲ್ಲಿ  65ನೇ ಕನ್ನಡ ರಾಜ್ಯೋತ್ಸವದ  ಧ್ವಜಾರೋಹಣ ನೆರವೇರಿಸಿ ಬಳಿಕ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ  ಅವರ ಪೂರ್ತಿ ಸಂದೇಶ ಇಲ್ಲಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ, ಈ ದಿನ ಆಚರಿಸುತ್ತಿರುವ 65ನೇ ಕನ್ನಡ ರಾಜ್ಯೋತ್ಸವದ ಸುಸಂದರ್ಭದಲ್ಲಿ, ತಮ್ಮೆಲ್ಲರಿಗೂ ಜಿಲ್ಲಾಡಳಿತದ ಪರವಾಗಿ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡವೇ ಧನ ಧಾನ್ಯ, ಕನ್ನಡವೇ ಮನೆ ಮಾನ್ಯ, ಕನ್ನಡವೇ ಎನಗಾಯ್ತು ಕಣ್ಣು –ಕಿವಿ-ಬಾಯಿ.. ಇದು ಮುತ್ಸದ್ಧಿ ನೇತಾರ, ಸಂವಿಧಾನ […]

ಕನ್ನಡ ರಾಜ್ಯೋತ್ಸವದ ದಿನ ಬೆಳ್ತಂಗಡಿಯ ಕೆಲವೆಡೆ ತುಳುನಾಡಿನ ಧ್ವಜ ಹಾರಾಟ

Friday, November 1st, 2019
Tulu flag

ಬೆಳ್ತಂಗಡಿ : ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಎರಡು ಕಡೆ ಪ್ರತ್ಯೇಕ ಧ್ವಜ ಕಾಣಿಸಿಕೊಂಡಿದೆ. ಇದು ತುಳುನಾಡಿನ ಧ್ವಜವೆಂದು ಎಂದು ಹೇಳಲಾಗಿದೆ. ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯ ಗೇಟಿನ ಮೇಲೂ ಇದೇ ಧ್ವಜ ಹಾರಾಡುತ್ತಿತ್ತು. ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿರುವ ಧ್ವಜಸ್ತಂಭದಲ್ಲಿದ್ದ ಕನ್ನಡ ಧ್ಜವನ್ನು ಕೆಳಗಿಳಿಸಿ ಈ ‘ತುಳು’ ಬೆಂಬಲಿತ ಧ್ವಜವನ್ನು ಹಾಕಲಾಗಿದೆ. ಈ ಕೃತ್ಯದ ವಿರುದ್ಧ ಸರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಪ್ರತ್ಯೇಕ ಧ್ವಜ ಹಾರಾಟ ಕೃತ್ಯವು ಕಳೆದ ರಾತ್ರಿ ನಡೆದಿದೆ. ಇದೀಗ ಮಾಹಿತಿ ತಿಳಿದ ಕನ್ನಡ ಸಂಘಟನೆಗಳು […]

ದೆಹಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ

Friday, November 1st, 2019
Dehali-karnataka-sanga

ನವದೆಹಲಿ : 64 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 1ರಂದು ಬೆಳಿಗ್ಗೆ ದೆಹಲಿ ಕರ್ನಾಟಕ ಸಂಘದಿಂದ ಕನ್ನಡ ಭುವನೇಶ್ವರಿಗೆ ಪೂಜೆ ಮತ್ತು ರಾಷ್ಟ್ರೀಯ ಧ್ವಜಾರೋಹಣ ಮಾಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಡಾ.ವೆಂಕಟಾಚಲ ಹೆಗಡೆ, ಉಪಾಧ್ಯಕ್ಷೆ ಜಮುನಾ ಸಿ.ಮಠದ, ಕಾರ್ಯದರ್ಶಿ ಸಿ.ಎಂ.ನಾಗರಾಜ, ಜಂಟೀ ಕಾರ್ಯದರ್ಶಿ ರಾಧಾಕೃಷ್ಣ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಡಾ.ಎಂ.ಎಸ್.ಶಶಿಕುಮಾರ್, ಸವಿತಾ ನೆಲ್ಲಿ, ಸುಮಿತಾ ಮುರಗೋಡ ಹಾಗೂ ಇನ್ನೂ ಅನೇಕ ಕನ್ನಡಿಗರು ಪಾಲ್ಗೊಂಡಿದ್ದರು. ರಾಜ್ಯೋತ್ಸವ ಸಂಭ್ರಮವನ್ನು ನವೆಂಬರ್ ತಿಂಗಳ ಪ್ರತೀ ಭಾನುವಾರದಂದು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು.  

ದ.ಕ.ದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

Friday, November 1st, 2019
Srinivas-Poojary

ಮಂಗಳೂರು : ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕನ್ನಡದ ಅಭಿವೃದ್ಧಿಗೆ ಆಶಾದಾಯಕ ಎಂದು ನಗರದ ನೆಹರು ಮೈದಾನದಲ್ಲಿ ನಡೆದ ಶುಕ್ರವಾರ ಬೆಳಗ್ಗೆ ನಡೆದ ದ.ಕ. ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ  ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ  ಮಾತನಾಡುತ್ತಿದ್ದರು. ಪ್ರಸ್ತಾವಿತ ನೂತನ ಶಿಕ್ಷಣ ನೀತಿಯಿಂದ ರಾಜ್ಯದ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಕನ್ನಡದಲ್ಲಿ ಅನುಷ್ಠಾನ ಮಾಡಲು ಅವಕಾಶವುಂಟಾಗಿದೆ ಎಂದು ಸಚಿವರು ಹೇಳಿದರು. ಮನಾಪ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾ […]

ಕಾಪು : ಪ್ರಪ್ರಥಮವಾಗಿ ಸರಕಾರಿ ಪ್ರಾಯೋಜತ್ವದಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆ

Friday, November 1st, 2019
Kapu

ಕಾಪು : ಪ್ರಪ್ರಥಮವಾಗಿ ಸರಕಾರಿ ಪ್ರಾಯೋಜತ್ವದಡಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆಯು ಕಾಪು ಪೇಟೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕ ಲಾಲಾಜಿ ಆರ್. ಮೆಂಡನ್, ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ.‌ ಶೆಟ್ಟಿ, ಜಿ.ಪಂ. ಸದಸ್ಯರಾದ ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಸುವರ್ಣ, ತಹಶಿಲ್ದಾರ್ ಮಹಮ್ಮದ್ ಇಸಾಕ್, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ, ಪುರಸಭೆ ಸದಸ್ಯರಾದ ಅನಿಲ್ ಕುಮಾರ್‌, ಕಿರಣ್ ಆಳ್ವ, ರಮಾ ವೈ. ಶೆಟ್ಟಿ, ಶಾಂಭವಿ ಕುಲಾಲ್, ಮಮತಾ ಸಾಲ್ಯಾನ್, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ […]

ನೆಹರು ಮೈದಾನದಲ್ಲಿ 63 ನೇ ಕನ್ನಡ ರಾಜ್ಯೋತ್ಸವ ಆಚರಣೆ..!

Thursday, November 1st, 2018
Kannada-Rajyotsava43

ಮಂಗಳೂರು: ಕನ್ನಡ ರಾಜ್ಯೋತ್ಸವ ಈ ಶುಭ ಸಂದರ್ಭದಲ್ಲಿ ಸೇರಿರುವ ಕನ್ನಡಾಭಿಮಾನಿಗಳಿಗೆ, ಗಣ್ಯರಿಗೆ, ಸಾರ್ವಜನಿಕ ಬಂಧುಗಳಿಗೆ, ಅಧಿಕಾರಿಗಳಿಗೆ, ವಿದ್ಯಾರ್ಥಿಗಳಿಗೆ ಹಾಗೂ ಮಾಧ್ಯಮ ಸ್ನೇಹಿತರಿಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳುತ್ತಾ ಯು.ಟಿ.ಖಾದರ್ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಎಂಟು ಜ್ಞಾನಪೀಠ ಪ್ರಶಸ್ತಿ ಗಳಿಸಿರುವ ಕನ್ನಡ ನಾಡಿನಲ್ಲಿ ಕುವೆಂಪು ಅವರ ‘ಕನ್ನಡ ನಾಡಿಗೆ ಕೈ ಎತ್ತು, ನಿನ್ನ ಕೈ ಕಲ್ಪವೃಕ್ಷವಾಗುತ್ತದೆ’ ಎಂಬ ಕರೆಗೆ ಓಗೊಟ್ಟು ನಾವೆಷ್ಟು ಮಂದಿ ಕನ್ನಡಕ್ಕಾಗಿ ಕೈ ಎತ್ತಿದ್ದೇವೆ? ಕನ್ನಡಕ್ಕಾಗಿ ಕೊರಳೆತ್ತಿದ್ದೇವೆ? ವರ್ಷಕ್ಕೊಮ್ಮೆ ಬರುವ ಕನ್ನಡ ರಾಜ್ಯೋತ್ಸವದ ಒಂದು ದಿನ […]