ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೋವಿಡ್-19 ಪರಿಹಾರ ನಿಧಿಗೆ 30ಲಕ್ಷ ರೂ. ದೇಣಿಗೆ

Thursday, April 16th, 2020
mattaru rathnakara hegde

ಮಂಗಳೂರು  : ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮುಖ್ಯಮಂತ್ರಿ ಗಳ ಕೋವಿಡ್-19 ಪರಿಹಾರ ನಿಧಿಗೆ 30ಲಕ್ಷ ರೂ. ದೇಣಿಗೆ ನೀಡಿದೆ‌. 30ಲಕ್ಷ ರೂಪಾಯಿ ಚೆಕ್ಕನ್ನು ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆಯವರು ಗುರುವಾರ , ಏಪ್ರಿಲ್ 16 ರಂದು  ದ.ಕ. ಜಿಲ್ಲಾಧಿಕಾರಿ ಸಿಂಧು ರೂಪೇಶ ರವರಿಗೆ ಹಸ್ತಾಂತರಿಸಿದರು. ಈ ಸಂಧರ್ಭ ಶಾಸಕ ಡಿ.ವೇದವ್ಯಾಸ ಕಾಮತ್, ಪ್ರದೀಪ್ ಡಿಸೋಜ,ಕಾರ್ಯದರ್ಶಿ,ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ರಾಘವೇಂದ್ರ ಎಂ, ವಲಯಾಧಿಕಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಸುದರ್ಶನ್ .ಎಂ, ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷರು, ರಾಮದಾಸ್ ಪ್ರದಾನ ಕಾರ್ಯದರ್ಶಿ […]

ವೇದವ್ಯಾಸ್ ಕಾಮತ್ ರಿಂದ ಅಧಿಕಾರಿಗಳೊಂದಿಗೆ ವಿವಿಧ ಇಲಾಖೆಗಳ ಕಾಮಗಾರಿಯ ಪ್ರಗತಿ ಪರಿಶೀಲನೆ

Thursday, December 12th, 2019
vidhavyas

ಮಂಗಳೂರು :ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ ವಿವಿಧ ಇಲಾಖೆಗಳ ಕಾಮಗಾರಿಯ ಕುರಿತು ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಲೋಕೋಪಯೋಗಿ ಇಲಾಖೆ,ಪ್ರವಾಸೋದ್ಯಮ ಇಲಾಖೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಮೂಲಭೂತ ಅಭಿವೃದ್ಧಿ ನಿಗಮ, ಅಲ್ಪ ಸಂಖ್ಯಾತ ಇಲಾಖೆ ಹಾಗೂ ಮತ್ತಿತರ ಅಧಿಕಾರಿಗಳೊಂದಿಗೆ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಚರ್ಚಿಸಿ, ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಾದ ಲಕ್ಷ್ಮಣ ಪೂಜಾರಿ, ರಮೇಶ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಉದಯ್ ಶೆಟ್ಟಿ, ಕರಾವಳಿ […]

ಪ್ರದೀಪ್ ಡಿ’ಸೋಜ ಮಂಗಳಾ ಸ್ಟೇಡಿಯಂ ಯುವ ಸಬಲೀಕರಣದ ಹೆಚ್ಚುವರಿ ಉಪನಿರ್ದೇಶಕರಾಗಿ ನೇಮಕ

Saturday, August 13th, 2016
Pradeep D souza

ಮಂಗಳೂರು : ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ‍್ಯದರ್ಶಿ ಪ್ರದೀಪ್ ಡಿ’ಸೋಜ ಅವರು ಮಂಗಳಾ ಸ್ಟೇಡಿಯಂ ಯುವ ಸಬಲೀಕರಣದ ಮತ್ತು ಕ್ರೀಡಾ ಇಲಾಖೆಯ ಹೆಚ್ಚುವರಿ ಉಪನಿರ್ದೇಶಕರಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಇರುವ ಜಿಲ್ಲೆಯ ಯುವ ಪ್ರತಿಭೆಗಳಿಗೆ ಸರಕಾರದ ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಲು ಪ್ರಯತ್ನಿಸಲಾಗುವುದು ಎಂದು ಪ್ರದೀಪ್ ಡಿ’ಸೋಜ ಅವರು ಮೆಗಾಮೀಡಿಯಾದೊಂದಿಗೆ ಮಾತನಾಡುತ್ತಾ ತಿಳಿಸಿದರು. ಪ್ರದೀಪ್ ಡಿ’ಸೋಜ ಸ್ವತ: ಉತ್ತಮ ಕ್ರೀಡಾಪಟುವಾಗಿದ್ದು ವಾಲಿಬಾಲ್ ಮತ್ತು ಪುಟ್ಬಾಲ್ ಕ್ರೀಡೆಯಲ್ಲಿ ಚಾಂಪಿಯನ್ ಆಗಿದ್ದರು. ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಹೊಂದಿದ […]

ಮಂಗಳೂರಿನ ಪುರಭವನಕ್ಕೆ ‘ಕುದ್ಮುಲ್ ರಂಗರಾವ್ ಸ್ಮಾರಕ’ ಹೆಸರಿಡಲು ಒಪ್ಪಿಗೆ ಸೂಚನೆ

Saturday, July 30th, 2016
MCC

ಮಂಗಳೂರು: ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯು ಮೇಯರ್ ಹರಿನಾಥ್ ಅಧ್ಯಕ್ಷತೆಯಲ್ಲಿ ಮಂಗಳಾ ಸಭಾಂಗಣದಲ್ಲಿ ನಡೆಯಿತು. ಮಂಗಳೂರಿನ ಹೃದಯ ಭಾಗದಲ್ಲಿರುವ ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರ ತಾಣ ಪುರಭವನಕ್ಕೆ ದಲಿತೋದ್ಧಾರಕ ‘ಕುದ್ಮುಲ್ ರಂಗರಾವ್ ಸ್ಮಾರಕ’ ಎಂದು ಹೆಸರಿಡಲು ಸಭೆಯಲ್ಲಿ ನಿರ್ಣಯಿಸಲಾಯಿತು. ಮುಖ್ಯ ಸಚೇತಕ ಶಶಿಧರ ಹೆಗ್ಡೆ ಕಾರ್ಯಸೂಚಿ ಮಂಡಿಸಿದ್ದು, ಒಪ್ಪಿಗೆ ಸೂಚಿಸಲಾಯಿತು. ಪುರಭವನದ ಎದುರಿನ ಮೈದಾನ ರಸ್ತೆಯಲ್ಲಿ ಪಾದಾಚಾರಿ ಮೇಲ್ಸೇತುವೆ (ಸ್ಕೈವಾಕ್) ನಿರ್ಮಾಣಕ್ಕೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿರುವ ಕುರಿತು ಸಭೆಯ ಕಾರ್ಯಸೂಚಿಯಲ್ಲಿ ವಿಷಯ […]

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಅಧಿಕಾರ ಸ್ವೀಕಾರ

Tuesday, January 1st, 2013
Tingale Vikramarjuna Hegde

ಮಂಗಳೂರು : ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಉಡುಪಿ ಜಿಲ್ಲೆಯ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಸೋಮವಾರ ಮಂಗಳೂರಿನ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮೂರು ಜಿಲ್ಲೆಯಲ್ಲಿ 2013-14ನೇ ಸಾಲಿನಲ್ಲಿ ಯಾವ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಬಹುದು ಎಂಬುದರ ಬಗ್ಗೆ ಪ್ರಾಧಿಕಾರದ ಸದಸ್ಯರ ಜತೆ ಚರ್ಚಿಸಿ ಆ ಬಳಿಕ ನೀಲ ನಕಾಶೆಯನ್ನು ಸಿದ್ಧಪಡಿಸಿ ಸರಕಾರಕ್ಕೆ ಶೀಘ್ರದಲ್ಲಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು. ಗುಜರಾತ್ ನಲ್ಲಿ ಗೃಹ […]