ಮಂಗಳೂರು ; ಗಡಿನಾಡಿನಲ್ಲಿ ಸಂಭ್ರಮಿಸಿದ ಕನ್ನಡ ಜಾಗೃತಿ ಸಾಂಸ್ಕೃತಿಕ ಉತ್ಸವ

Tuesday, February 1st, 2022
Kannada Jagruti

ಉಳ್ಳಾಲ: ಸಾಮರಸ್ಯದ ಬಾಳಿಗೆ ಗಡಿನಾಡುಗಳೇ ಆಡಿಪಾಯವಾಗಿವೆ. ಆದುದರಿಂದ ಭಾಷೆಗಳ ಒಳಗಿನ ದ್ವೇಷ ಸಲ್ಲದು. ಗಡಿನಾಡಿನ ಭಾಗದಲ್ಲಿನ ಸಾಹಿತಿಗಳು, ಕಲಾವಿದರು, ಪತ್ರಕರ್ತರು ಅಲ್ಲದೆ ಎಲ್ಲಾ ಪ್ರತಿಭೆಗಳನ್ನು ಗುರುತಿಸುವಂತಾದಾಗ ನಮ್ಮ ಭಾಷೆಗಳು ತಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಆ ಮೂಲಕ ಇನ್ನೂ ಕನ್ನಡ ನಾಡು ನುಡಿಯ ಸೇವೆ ನಿರಂತರವಾಗಿ ನಡೆಯಬೇಕು ಎಂದು ಕರ್ನಾಟಕ ವಿಧಾನಸಭಾ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕ, ಮಾಜಿ ಸಚಿವ ಮತ್ತು ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಯು.ಟಿ ಖಾದರ್ ತಿಳಿಸಿದರು. ಕರ್ನಾಟಕ ಸರ್ಕಾರದ ಕರ್ನಾಟಕ […]

ಕೋವಿಡ್ 2ನೇ ಅಲೆ ಪ್ಯಾಕೇಜ್: 20,713 ಕಲಾವಿದರಿಗೆ 6.23 ಕೋಟಿ ರೂ. ನೆರವು ನೀಡಿಕೆಗೆ ಚಾಲನೆ

Tuesday, June 22nd, 2021
Artist help

ಬೆಂಗಳೂರು  : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ‘ಕೋವಿಡ್-19ರ 2ನೇ ಅಲೆಯಿಂದ ಸಂಕಷ್ಟದಲ್ಲಿರುವ ಕಲಾವಿದರುಗಳಿಗೆ ಸರ್ಕಾರದಿಂದ ಆರ್ಥಿಕ ನೆರವು ನೀಡಿಕೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕೋವಿಡ್ 2ನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ 3,000/- ರೂ.ಗಳ ಆರ್ಥಿಕ ನೆರವು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇಪ್ಪತ್ತು ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ಡಿ.ಬಿ.ಟಿ. ಮೂಲಕ ಒಟ್ಟು 6.23 ಕೋಟಿ ರೂ. ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು. ಕೋವಿಡ್-19ರ 2ನೇ ಅಲೆಯಿಂದ ಸಂಕಷ್ಟಕ್ಕೀಡಾದ ದುರ್ಬಲ […]

ಸಾಹಿತಿಗಳು, ಕಲಾವಿದರು, ಸಾಹಿತ್ಯಾಸಕ್ತರು, ಸಂಘಟಕರು ಅಕಾಡಮಿಗಳ ಮುಂದಾಳುತ್ವ ವಹಿಸಬೇಕು : ಬಿ.ಎ.ಮೊಹಿದಿನ್

Saturday, August 12th, 2017
Beary Academy

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಹೊರ ತಂದ ಅಕಾಡಮಿಯ ಮೂರು ವರ್ಷಗಳ ಸಾಧನೆಗಳ ಮಾಹಿತಿಯುಳ್ಳ ‘ಹಕೀಕತ್’ ಹಾಗೂ ಇತರ ಐದು ಬ್ಯಾರಿ ಭಾಷೆಯ ಕೃತಿಗಳನ್ನು ನಗರದ ಹೊಟೇಲ್ ಶ್ರೀನಿವಾಸ್ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಬಿ.ಎ.ಮೊಹಿದಿನ್,  ರಾಜ್ಯದಲ್ಲಿರುವ ಅಕಾಡಮಿಗಳು ಆಯಾ ಭಾಷೆ, ಸಂಸ್ಕೃತಿ, ಕಲೆ, ಸಾಹಿತ್ಯದ ಬೆಳವಣಿಗೆ, ಪೋಷಣೆಗೆ ಶ್ರಮಿಸಬೇಕು ಅದು  ರಾಜಕಾರಣಿಗಳಿಗೆ ಆಶ್ರಯ ತಾಣವಾಗಬಾರದು ಎಂದು  ಹೇಳಿದರು. ಅಕಾಡಮಿಗಳಿಗೆ ನೇಮಕ ಮಾಡುವಾಗ ಸಾಹಿತಿಗಳು, ಕಲಾವಿದರು, ಸಾಹಿತ್ಯಾಸಕ್ತರು, ಸಂಘಟಕರನ್ನು ಪರಿಗಣಿಸಬೇಕು ಎಂದು […]