ವಿಶೇಷವಾಗಿ ವಿನ್ಯಾಸದ ಪಾದರಕ್ಷೆಯಲ್ಲಿ ಚಿನ್ನ ಸಾಗಾಟ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

Monday, March 29th, 2021
Gold

ಮಂಗಳೂರು : ದುಬೈನಿಂದ  ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್‌ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಕಾಸರಗೋಡು ನಿವಾಸಿ ಸುಕ್ಕುರ್ ಮೊಯಿದ್ದೀನ್ ಕುನ್ಹಿ (48) ಹಾಗೂ ಭಟ್ಕಳದ ಮಿಸ್ರಿ ನಸೀಮುಲ್ ಗನಿ (44) ಎಂಬವರು ವಿಶೇಷವಾಗಿ ವಿನ್ಯಾಸದ ಪಾದರಕ್ಷೆಯ ಒಳಗೆ ಚಿನ್ನವನ್ನಿಟ್ಟು ಸಾಗಾಟ ಮಾಡುತ್ತಿದ್ದರು. ಆರೋಪಿಗಳಿಂದ 18.75 ಲಕ್ಷ ರೂ ಮೌಲ್ಯದ 405 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ವಿಭಾಗದ ಅಧಿಕಾರಿಗಳಾದ ಡಾ. ಕಪಿಲ್ ಗಡೆ, ರಾಕೇಶ್ ಕುಮಾರ್, ಸಂದೀಪ್ […]

ದುಬೈನಿಂದ ಬಂದ ವಿಮಾನದ ಸೀಟಿನ ಅಡಿಯಲ್ಲಿ ಸಾಗಿಸುತ್ತಿದ್ದ ಚಿನ್ನದ ಬಿಸ್ಕತ್ತು ವಶ

Sunday, September 27th, 2020
gold Biscut

ಮಂಗಳೂರು : ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ರವಿವಾರ ದುಬೈನಿಂದ ಬಂದಿಳಿದ ಪ್ರಯಾಣಿಕನಿಂದ  33.88 ಲಕ್ಷ ರೂ. ಮೌಲ್ಯದ 671 ಗ್ರಾಂ ತೂಕದ 6 ಚಿನ್ನದ ಬಿಸ್ಕತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ದುಬೈ- ಮಂಗಳೂರು- ಹೈದರಾಬಾದ್ ವಿಮಾನದಲ್ಲಿ ಚಿನ್ನದ ಬಿಸ್ಕತ್ತುಗಳನ್ನು ಒಳಗೆ ಸೀಟಿನ ಅಡಿಯಲ್ಲಿ ಅಡಗಿಸಿಡಲಾಗಿತ್ತು. ದುಬೈನಿಂದ ಮಂಗಳೂರು ತನಕ ಅಂತಾರಾಷ್ಟ್ರೀಯ ಯಾನವಾಗಿ ಹಾಗೂ ಮಂಗಳೂರು- ಹೈದರಾಬಾದ್ ನಡುವೆ ದೇಶೀಯ ವಿಮಾನವಾಗಿ ಕಾರ್ಯಾಚರಿಸುತ್ತಿದ್ದು, ಮಂಗಳೂರಿನಿಂದ ಹೈದರಾಬಾದ್‌ಗೆ ಪ್ರಯಾಣಿಸುವ ಪ್ರಯಾಣಿಕ ಈ ಚಿನ್ನವನ್ನು ಸಂಗ್ರಹಿಸಿ ಕೊಂಡೊಯ್ಯುವ ಉದ್ದೇಶ ಹೊಂದಿದ್ದ ಎನ್ನಲಾಗಿದೆ. ದೇಶೀಯ […]

ಮಂಜೇಶ್ವರ ನಿವಾಸಿಗಳಿಂದ ಕಣ್ಣೂರು ವಿಮಾನ ನಿಲ್ದಾಣದಲ್ಲಿ 45 ಲಕ್ಷ ರೂ. ವೌಲ್ಯದ ಚಿನ್ನಾಭರಣ ವಶ

Thursday, August 13th, 2020
gold

ಕಾಸರಗೋಡು :  ಕಣ್ಣೂರು ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಅಕ್ರಮವಾಗಿ ಚಿನ್ನಾಭರಣ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮಂಜೇಶ್ವರ ನಿವಾಸಿಗಳಾದ ಸತ್ತಾರ್ ಮತ್ತು ಸಮೀರ್ ಬಂಧಿತ ಆರೋಪಿಗಳು. ಬಂಧಿತರಿಂದ 45 ಲಕ್ಷ ರೂ. ವೌಲ್ಯದ ಚಿನ್ನಾಭರಣ ವಶಪಡಿಸಿ ಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇವರು ಶಾರ್ಜಾ ಮತ್ತು ದುಬೈಯಿಂದ ಆಗಮಿಸಿದವರೆನ್ನಲಾಗಿದೆ. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇತ್ತೀಚಿನ ದಿನಗಳಿಂದ ಅಕ್ರಮ ಚಿನ್ನಾಭರಣ ಸಾಗಾಟ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಸ್ಟಮ್ಸ್ ತಪಾಸಣೆ ತೀವ್ರಗೊಳಿಸಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳ ನಿರಂತರ ಕಿರುಕುಳ : ದೂರು

Saturday, August 3rd, 2019
Kerala-pravasi

ಮಂಜೇಶ್ವರ:  ಮಲಯಾಳಿ ಪ್ರವಾಸಿಗಳಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಫಲಪ್ರದವಾಗಲಿಲ್ಲ, ಎಮಿಗ್ರೇಶನ್, ಕಸ್ಟಮ್ಸ್ ಸೇರಿದಂತೆ ಇತರ ವಿಭಾಗಗಳಲ್ಲಿ ಇತರ ಅಧಿಕಾರಿಗಳು ಕೂಡಾ ಮಲಯಾಳಿಗಳನ್ನು ಹುಡುಕಿ ಕಿರುಕುಳ ನೀಡುತ್ತಿರುವುದಾಗಿ ಕೇರಳ ಪ್ರವಾಸಿ ಸಂಘದ ಮಂಜೇಶ್ವರ ಏರಿಯಾ ಕಮಿಟಿ ಆರೋಪಿಸಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ನಿರಂತರವಾಗಿ ನೀಡುತ್ತಿರುವ ಕಿರುಕುಳದ ವಿರುದ್ಧ ಕೇರಳ ಪ್ರವಾಸಿ ಸಂಘದ ಮಂಜೇಶ್ವರ ಏರಿಯಾ ಕಮಿಟಿ ಅಧ್ಯಕ್ಷ ಬಶೀರ್ ದೇವಕಾನ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಲಯಾಳಿಗಳಿಗೆ ಕಿರುಕುಳ ನೀಡುತ್ತಿರುವುದು ನಿತ್ಯ ವರದಿಯಾಗಿದೆ […]