ಶಾಲೆಗಳನ್ನು ತೆರೆಯಲು ಎಲ್ಲಾ ಸುರಕ್ಷತೆಗಳನ್ನ ತೆಗೆದುಕೊಳ್ಳಲಾಗಿದೆ: ಆರ್ ಅಶೋಕ

Saturday, August 21st, 2021
R Ashoka

ಬೆಂಗಳೂರು  : ಸರ್ಕಾರ ಆಗಸ್ಟ್ 23ರಿಂದ ಭೌತಿಕವಾಗಿ ಒಂಬತ್ತು ಮತ್ತು ಹತ್ತನೇ ತರಗತಿಗಳನ್ನ ಆರಂಭಿಸಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಈಗಾಗಲೇ ಕೈಗೊಂಡಿರುವ ತಯಾರಿಗಳ ಕುರಿತು ಕಂದಾಯ ಸಚಿವ ಆರ್ ಅಶೋಕ ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಸಚಿವರು,”ಬೆಂಗಳೂರಿನಲ್ಲಿ ಬಿಬಿಎಂಪಿ ಶಾಲೆಗಳನ್ನು ತೆರೆಯುತ್ತದೆ. ಶಾಲೆಗಳಿಂದ ಕೋವಿಡ್ ಹರಡದಂತೆ ತಡೆಯಲು ಅಗತ್ಯವಿರುವ ಎಲ್ಲ ತಯಾರಿಗಳನ್ನ ಈಗಾಗಲೇ ಮಾಡಿಕೊಳ್ಳಲಾಗಿದೆ. ಶಾಲಾ ತರಗತಿಗಳಲ್ಲಿ ಮತ್ತು ಆವರಣಗಳಲ್ಲಿ ಕೋವಿಡ್ ನಿಯಮಾವಳಿಗಳನ್ನ ಕಡ್ಡಾಯವಾಗಿ ಪಾಲಿಸಲು ಅಗತ್ಯ ಕ್ರಮಗಳನ್ನ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ತುಂಬ ಯೋಚಿಸಿ ಈ […]

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಶಾಸಕ ಡಾ.ಭರತ್ ಶೆಟ್ಟಿ ಕಿಟ್ ವಿತರಣೆ

Tuesday, July 20th, 2021
Bharath Shetty

ಮಂಗಳೂರು  : ಕರ್ನಾಟಕ ಸರಕಾರದ ಕಾರ್ಮಿಕ ಇಲಾಖೆಯ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಮುಚ್ಚೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮುಚ್ಚೂರು ಮಿಥಿಲಾ ಸಭಾಭವನದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರಿಂದ ಆಹಾರ ಸಾಮಾಗ್ರಿ ಕಿಟ್ ವಿತರಣೆ ಮಂಗಳವಾರ ನಡೆಯಿತು. ಜನಾರ್ಧನ ಗೌಡ, ನಿಕಟಪೂರ್ವ ಸದಸ್ಯರು ಜಿ. ಪ, ನಾಗೇಶ್ ಶೆಟ್ಟಿ ತಾಲೂಕು ಪಂಚಾಯತ್ ಸದಸ್ಯರು,ಮೋಹಿನಿ ಅಧ್ಯಕ್ಷರು ಗ್ರಾಮ […]

ಬಿಲ್ಲವರ ಎಸೋಸಿಯೇಷನ್ ಮುಂಬಯಿ ವತಿಯಿಂದ ಜೋಗೇಶ್ವರಿ ಕಚೇರಿಯಲ್ಲಿ ಕಿಟ್ ವಿತರಣೆ

Sunday, July 4th, 2021
Billavara Association

ಮುಂಬಯಿ : ಬಿಲ್ಲವರ ಅಶೋಸಿಯೇಶನ್ ಮುಂಬಯಿ ಅಧ್ಯಕ್ಷರಾದ ಹರೀಶ್ ಜಿ. ಅಮೀನ್ ಅವರ ನೇತೃತ್ವದಲ್ಲಿ ಸಮಾಜದ ದಾನಿಗಳ ಸಹಾಯದಿಂದ ಎಸೋಸಿಯೇಷನ್ 23 ಸ್ಥಳೀಯ ಕಚೇರಿಯಲ್ಲಿ ಸಮಾಜದ ಅಸಾಯಕ ಕುಟುಂಬಗಳಿಗೆ ಅಹಾರ ಕಿಟ್ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜುಲೈ 4 ರಂದು ಬಿಲ್ಲವರ ಎಸೋಸಿಯೇಷನ್ ಜೋಗೇಶ್ವರಿ ಸ್ಥಳೀಯ ಕಚೇರಿಯ ಕಾರ್ಯಾಲಯದಲ್ಲಿ ಸಮಾಜದ ಬಂಧುಗಳಿಗೆ ಕಿಟ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸಮಾಜದ ಅರ್ಹ ಕುಟುಂಬಗಳಿಗೆ ಕಿಟ್ ವಿತರಿಸುತ್ತಾ ಎಸೋಸಿಯೇಷನ್ ಉಪಾಧ್ಯಕ್ಷ ಶಂಕರ್ ಡಿ. ಪೂಜಾರಿಯವರು ಮಾತನಾಡುತ್ತಾ ಹಿಂದಿನಿಂದ ಪ್ರತಿ ಸ್ಥಳೀಯ […]

108 ಆಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಕಿಟ್ ವಿತರಣೆ

Tuesday, June 2nd, 2020
Ambulence

ಮಂಗಳೂರು: ಬಂಟ್ವಾಳ ತಾಲೂಕಿನ 108 ಆಂಬ್ಯುಲೆನ್ಸ್ ಚಾಲಕ ಮತ್ತು ಸಿಬ್ಬಂದಿಗಳಿಗೆ ಗೌರವಾರ್ಪಣೆ ಮತ್ತು ಮಾಣಿ ಬಂಟರ ಸಂಘದ ಪ್ರಾಯೋಜಕತ್ವದಲ್ಲಿ ಆಹಾರ ಸಾಮಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮವು ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಶಿಕಲಾ ಮಾತನಾಡಿ 108 ಆಂಬ್ಯುಲೆನ್ಸ್ ನಿರ್ವಾಹಕರ ಸೇವೆ ನಿಜಕ್ಕೂ ಅದ್ಭುತ. ತಾಲೂಕಿನ ಯಾವುದೇ ಮೂಲೆಯಿಂದ ಅನಾರೋಗ್ಯ ಪೀಡಿತರನ್ನು ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿರುವುದು ಮತ್ತು ಕತ್ಯರ್ವವನ್ನು ಪ್ರಾಮಾಣಿಕವಾಗಿ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ 108 ಆಂಬ್ಯುಲೆನ್ಸ್ ಚಾಲಕರು […]

ಗೃಹ ರಕ್ಷಕ ಕಮಾಂಡರ್ ಗಳಿಗೆ ಶಾಸಕ ಕಾಮತ್ ನೇತೃತ್ವದಲ್ಲಿ ಕಿಟ್ ವಿತರಣೆ

Saturday, May 2nd, 2020
Home Guard

ಮಂಗಳೂರು : ನಗರ ದಕ್ಷಿಣ ಕ್ಷೇತ್ರದಲ್ಲಿ ಕಾರ್ಯಪ್ರವೃತ್ತರಾಗಿರುವ ಗೃಹರಕ್ಷಕ ಕಮಾಂಡರ್ ಗಳಿಗೆ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಗೃಹರಕ್ಷಕ ದಳದ ಕಮಾಂಡೆಂಟ್ ಡಾಕ್ಟರ್ ಮುರಳಿ ಮೋಹನ ಅವರ ಮೂಲಕ ಉಚಿತ ಕಿಟ್ ವಿತರಿಸಲಾಯಿತು. ಇದೇ ಸಂಧರ್ಭದಲ್ಲಿ ಭಾರತೀಯ ಹೋಮಿಯೋಪತಿಕ್ ಡಾಕ್ಟರ್ ಸಂಘದಿಂದ ಭಾರತ ಸರಕಾರ ಆಯುಷ್ ಇಲಾಖೆಯಿಂದ ಅನುಮೋದಿಸಲ್ಪಟ್ಟ ಔಷಧಿಗಳನ್ನು ಕೂಡ ಉಚಿತವಾಗಿ ನೀಡಲಾಯಿತು. ಮಂಗಳೂರು ಮಹಾನಗರ ಪಾಲಿಕೆ ಪೂಜ್ಯ ಮೇಯರ್ ಶ್ರೀ ದಿವಾಕರ್, ಬಿಜೆಪಿ ದಕ್ಷಿಣದ ಅಧ್ಯಕ್ಷರಾಗಿರುವ ವಿಜಯ ಕುಮಾರ್ ಶೆಟ್ಟಿ ಮೂಲಕ ಈ […]

ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ‘ಕಿಟ್’ ವಿತರಣೆ

Wednesday, April 1st, 2020
Mithun-Rai

ಮಂಗಳೂರು : ಕೊರೋನ ವೈರಸ್ ಹಾವಳಿಯಿಂದ ತತ್ತರಿಸಿರುವ ಜನತೆಯ ದೈನಂದಿನ ಜೀವನ ನಿರ್ವಹಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಪಿಲಿನಳಿಕೆ ಪ್ರತಿಷ್ಠಾನದ ಗೌರವ ಅಧ್ಯಕ್ಷ ಮತ್ತು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯ ನೇತೃತ್ವದಲ್ಲಿ ಜಿಲ್ಲೆಯ 1 ಸಾವಿರ ಬಡ ಕುಟುಂಬಗಳಿಗೆ ನೆರವಾಗುವಂತೆ ಅಗತ್ಯ ಆಹಾರ ಸಾಮಗ್ರಿಗಳನ್ನು ಒಳಗೊಂಡ ‘ಕಿಟ್’ಅನ್ನು ಮೊದಲ ಹಂತದಲ್ಲಿ ಎ.2ರಿಂದ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.