ಡ್ರಗ್ ಪ್ರಕರಣ : ಕಿಶೋರ್ ನ ಹಳೆ ಮಿತ್ರ ಸ್ಯಾಮ್ ಫರ್ನಾಂಡಿಸ್‍ನನ್ನು ಬಂಧಿಸಿದ ಸಿಸಿಬಿ ಪೊಲೀಸರು

Friday, October 2nd, 2020
samu

ಮಂಗಳೂರು: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು  ಮತ್ತೊಬ್ಬ ಡ್ಯಾನ್ಸ್ ಕೊರಿಯೋಗ್ರಾಫರನ್ನು ಪೊಲೀಸರು ಬಂಧಿಸಿದ್ದಾರೆ. ಕಿಶೋರ್ ನ ಹಳೆ ಮಿತ್ರ ಸ್ಯಾಮ್ ಫರ್ನಾಂಡಿಸ್‍ನನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕಿಶೋರ್ ನಡೆಸುತ್ತಿದ್ದ ಪಾರ್ಟಿಗಳಲ್ಲಿ ಅನುಶ್ರೀಯನ್ನು ನೋಡಿರುವುದಾಗಿ ಸ್ಯಾಮ್ ಫರ್ನಾಂಡಿಸ್ ಪೊಲೀಸರ ಮುಂದೆ ಹೇಳಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಯಾಮ್ ವಿಚಾರಣೆ ಮಾಡಿದ ಬಳಿಕ ನಿರೂಪಕಿ ಅನುಶ್ರೀ ಬಗೆಗಿನ ಮತ್ತಷ್ಟು ಮಾಹಿತಿಗಳು ಸಿಸಿಬಿ ಪೊಲೀಸರಿಗೆ ಲಭ್ಯವಾಗಿವೆ. ಅನುಶ್ರೀ ಸೇರಿದಂತೆ ಬೆಳ್ಳಿತೆರೆ, ಕಿರುತೆರೆ ಹಾಗೂ ರಿಯಾಲಿಟಿ ಶೋನ ನಟ, ನಟಿಯರು […]

ಯುವತಿಯರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿಗಳು

Sunday, September 20th, 2020
kishor Shetty

ಮಂಗಳೂರು : ನಗರ ಅಪರಾಧ ಪತ್ತೆ ದಳ ಮತ್ತು ನಾರ್ಕೊಟಿಕ್ಸ್ ಪೊಲೀಸರು ಡ್ರಗ್ಸ್ ಸೇವನೆ ಹಾಗೂ ಸಾಗಾಟ ಆರೋಪದಲ್ಲಿ ಮಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಬಂಧಿತರಾಗಿದ್ದ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ನ್ಯಾಯಾಲಯ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ನಗರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಅಕೀಲ್ ನೌಶೀಲ್ (28) ಮತ್ತು ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ (30) ಎಂಬ ಆರೋಪಿಗಳನ್ನು ಬಂಧಿಸಲಾಗಿತ್ತು. ಆರೋಪಿಗಳನ್ನು  ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಆರೋಪಿಗಳನ್ನು ಕೋವಿಡ್ ತಪಾಸಣೆಗೊಳಪಡಿಸಿದ ಬಳಿಕ […]

ಜೋಕಟ್ಟೆ ಬಳಿ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Saturday, December 15th, 2018
railway

ಮಂಗಳೂರು: ಪಡೀಲ್-ಜೋಕಟ್ಟೆ ನಡುವಿನ ರೈಲು ಮಾರ್ಗದಲ್ಲಿ ಶುಕ್ರವಾರ ಮಧ್ಯಾಹ್ನ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ. ಜೋಕಟ್ಟೆ ಸಮೀಪದ ಬಬ್ಬರ್ಯ ದೇವಸ್ಥಾನ ಬಳಿಯ ನಿವಾಸಿ ಕಿಶೋರ್ (46) ಮೃತಪಟ್ಟಿದ್ದಾನೆ. ವೃತ್ತಿಯಲ್ಲಿ ಪೈಂಟರ್ ಆಗಿದ್ದ ಅವರು ಮಧ್ಯಾಹ್ನ ಊಟ ಮಾಡಿ ರೈಲು ಹಳಿ ದಾಟಲು ಯತ್ನಿಸುತ್ತಿದ್ದಾಗ ಮಂಗಳೂರಿನಿಂದ ಮುಂಬೈ ಕಡೆಗೆ ತೆರಳುತ್ತಿದ್ದ ಮತ್ಸಗಂಧಾ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರೈಲು ಅವರನ್ನು ಸುಮಾರು ದೂರಕ್ಕೆ ಎಳೆದೊಯ್ದಿದ್ದು, ತೀವ್ರ ಗಾಯಗೊಂಡ ಕಿಶೋರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅವರ ಶರ್ಟ್ […]

ಅಕ್ರಮ ಗಾಂಜಾ ಸಾಗಾಟ: ಮೂವರು ಆರೋಪಿಗಳ ಬಂಧನ

Saturday, November 10th, 2018
police-office

ಮಂಗಳೂರು: ಅಕ್ರಮ ಗಾಂಜಾ ಸಾಗಾಟಕ್ಕೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ನಗರದ ಉರ್ವ ಠಾಣಾ ವ್ಯಾಪ್ತಿಯ ಕೋಡಿಕಲ್ ಕ್ರಾಸ್ ಬಳಿ ರೌಡಿನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದ ಕರೆಪ್ಪ ಲಕ್ಷ್ಮಣ ಸುಣದೋಳಿ (50), ಬಿಜಾಪುರ ಜಿಲ್ಲೆಯ ಕೋಲಾರ ಕುರುಬರ ದಿನ್ನಿ ಗ್ರಾಮದ ಗಂಗೆಪ್ಪ ಮಾದೆರ (39), ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕಾನಸಗೇರಿ ಗ್ರಾಮದ ಸಿದ್ದರಾಯಪ್ಪ ಕೂರಿ ಹೋಲಿ (36) ಬಂಧಿತ ಆರೋಪಿಗಳು. ಬಂಧಿತರಿಂದ 7.100 ಕೆ.ಜಿ. ಗಾಂಜಾ, 3 ಮೊಬೈಲ್ […]

‘ಕಲೆಯಿಂದ ಸಹಜೀವನ ಸಾಧ್ಯ’

Tuesday, April 3rd, 2018
natyanikethana

ಮಂಗಳೂರು: ‘ಭಾರತೀಯ ಲಲಿತಕಲೆಗಳ ಅಭ್ಯಾಸ, ಅಸ್ವಾದನೆಯಿಂದ ಸಹಜೀವನ, ಸಹಬಾಳ್ವೆಗೆ ಸಹಕಾರಿ ಎಂದು ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ನಿರ್ದೇಶಕ ವಿದ್ವಾನ್ ಚಂದ್ರಶೇಖರ ನಾವಡ ಹೇಳಿದರು.ಮಂಗಳಾದೇವಿಯ ಮಾತೃ ಕೃಪಾ ಸಭಾಂಗಣದಲ್ಲಿ ಈಚೆಗೆ ನಡೆದ ಕೊಲ್ಯ ನಾಟ್ಯನಿಕೇತನ ಇದರ 60ರ ಸಂಭ್ರಮದ ಮಾಸಿಕ ನೃತ್ಯ ಮಾಲಿಕೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ‘ಬಡವ ಶ್ರೀಮಂತ ಎಂಬ ಭೇದವಿಲ್ಲದೆ ಎಲ್ಲಾ ಮಕ್ಕಳನ್ನು ಒಂದೇ ಸೂರಿನಡಿ ತಯಾರು ಮಾಡುವಾಗ ಅವರಲ್ಲಿ ಪರಸ್ಪರ ಪ್ರೀತಿ ಅನ್ಯೋನ್ಯತೆ ಬೆಳೆಯುತ್ತದೆ. ಆಗ ಸಮಾಜದಲ್ಲಿ ಸಾಮರಸ್ಯ ಉಂಟಾಗಲು ಸಾಧ್ಯ. […]

ವಿವಿಧ ಕಾಮಗಾರಿಗಳ ಶಿಲಾನ್ಯಾಸ, ಕಾಂಕ್ರಿಟ್ ರಸ್ತೆ ಉದ್ಘಾಟನೆ

Saturday, January 6th, 2018
kamagari

ಮಂಗಳೂರು: ತಾಲೂಕಿನ ಪುದು ಗ್ರಾಮದ ಕೋಡಿಮಜಲ್ ಕುಟ್ಟಿಕಳ ಕಾಂಕ್ರಿಟ್ ರಸ್ತೆಗೆ ಸುಮಾರು 50 ಲಕ್ಷ ರುಪಾಯಿ ವೆಚ್ಚದ ಕಾಮಗಾರಿಗೆ ಮತ್ತು ಫರಂಗಿಪೇಟೆಯಿಂದ ಕುಟ್ಟಿಕಳ ಸಂಪರ್ಕ ರಸ್ತೆಗೆ ಡಾಮರೀಕರಣ ಶಿಲಾನ್ಯಾಸ, ಸುಜೀರ್ ಬದಿಗುಡ್ದೆ ಕಾಂಕ್ರಿಟ್ ರಸ್ತೆಯ ಉದ್ಘಾಟನೆಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ಶನಿವಾರ ಶಿಲಾನ್ಯಾಸಗೈದರು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಉಮರ್ ಫಾರೂಕ್, ಮಾಜಿ ತಾಲೂಕು ಪಂಚಾಯತ್ ಸದಸ್ಯ ಇಕ್ಬಾಲ್ ದರ್ಬಾರ್, ಪುದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹಾಶಿರ್ ಪೇರಿಮಾರ್, ಸದಸ್ಯರಾದ ಝಹೀರ್ […]

ಬಜಪೆ ಮಕ್ಕಳ ಗ್ರಾಮ ಸಭೆ

Monday, December 25th, 2017
bajpe-village

ಬಜಪೆ: ಸರಕಾರ ಕೇವಲ ಸರಕಾರಿ ಶಾಲೆ ವಿದ್ಯಾರ್ಥಿಗಳಿಗೆ ಮಾತ್ರ ಸಮವಸ್ತ್ರ ನೀಡುತ್ತಿದೆ.ಅನುದಾನಿತ ಶಾಲೆಯಲ್ಲಿಯೂ ಬಡ ವಿದ್ಯಾರ್ಥಿಗಳು ಇದ್ದಾರೆ. ಶಿಕ್ಷಣ ಇಲಾಖೆ ಈ ಬಗ್ಗೆ ಗಮನಿಸಿ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರಗಳನ್ನು ಉಚಿತವಾಗಿ ನೀಡಬೇಕು. ಗ್ರಾಮ ಪಂಚಾಯತ್‌ ಈ ಬಗ್ಗೆ ನಿರ್ಣಯ ಕೈಗೊಂಡು ಸರಕಾರಕ್ಕೆ ಮನವಿ ಮಾಡಬೇಕು ಎಂದು ಬಜಪೆ ಗ್ರಾಮ ಪಂಚಾಯತ್‌ ಮಕ್ಕಳ ಗ್ರಾಮ ಸಭೆಯಲ್ಲಿ ವಿದ್ಯಾರ್ಥಿಗಳು ಒತ್ತಾಯಿಸಿದರು. ಬಜಪೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ 2017- 18ನೇ ಸಾಲಿನ ಮಕ್ಕಳ ಗ್ರಾಮ ಸಭೆಯು ಡಿ. 23ರಂದು ಗ್ರಾಮ […]

ಅಟ್ಟಹಾಸ

Friday, February 22nd, 2013
Attahaasa

ನೈಜ ಘಟನೆಗಳ ಸಿನಿಮಾ ಮಾಡುವುದರಲ್ಲಿ ಸಿದ್ಧ ಹಸ್ತರು ಎನ್ನುವುದು ಅಟ್ಟಹಾಸ ಚಿತ್ರದ  ನಿರ್ದೇಶಕ ಎಎಂಆರ್ ರಮೇಶ್ ಇನ್ನೊಮ್ಮೆ ಸಾಬೀತುಪಡಿಸಿದ್ದಾರೆ. ಈ ಹಿಂದೆ ಸೈನೈಡ್ ಚಿತ್ರ ನಿರ್ದೇಶಿಸಿ ಗೆದ್ದ ಎಎಂಆರ್ ರಮೇಶ್ ನಿರ್ದೇಶನದಲ್ಲಿ ಮೂಡಿ  ಬಂದ ಈ  ಚಿತ್ರ ಪ್ರಾರಭದಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿತ್ತು. ಆ ನಿರೀಕ್ಷೆಗಳು ಹುಸಿಯಾಗಿಲ್ಲ ಅನ್ನೋದು ಚಿತ್ರದ ಪ್ಲಸ್ ಪಾಯಿಂಟ್. ವೀರಪ್ಪನ್ ಹತ್ಯೆಯಾದ ಮೇಲೆ ಆತನ ಕುರಿತು ಯಾರೂ ಸಿನಿಮಾ ಮಾಡಿಯೇ ಇಲ್ಲ. ಈ ಬಗ್ಗೆ ಕನ್ನಡದಲ್ಲಿ  ಸ್ವಮೇಕ್ ಚಿತ್ರ ನಿರ್ಮಾಣವಾಗಿರುವುದು ನಿಜಕ್ಕೂ […]