ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಂದೇ ದಿನ 2062 ಕ್ಕೆ ಏರಿಕೆ

Thursday, July 9th, 2020
karnataka corona

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿ ದಾಟಿದ್ದು ಬುಧವಾರ 2062 ಮಂದಿಗೆ ಕೊರೋನಾ ತಗುಲಿದೆ ಇದರೊಂದಿಗೆ ರಾಜ್ಯದ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 28,877 ತಲುಪಿದೆ. ಅಲ್ಲದೆ ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಸೋಂಕಿನಿಂದಾಗಿ 54 ಮಂದಿ ಸಾವನ್ನಪ್ಪಿದ್ದಾರೆ. ಇದು ಕೊರೋನಾ ಪ್ರಾರಂಭವಾದಂದಿನಿಂದ ರಾಜ್ಯದಲ್ಲಿ ಒಂದೇ ದಿನ ಸಂಭವಿಸಿದ ಸಾವಿನ ಪ್ರಮಾಣದ ಅತಿ ದೊಡ್ಡ ಸಂಖ್ಯೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 1148 ಪ್ರಕರಣಗಳು ವರದಿಯಾಗಿದ್ದರೆ ಒಟ್ಟು ಸಂಖ್ಯೆ 12,509ಕ್ಕೆ ಏರಿಕೆಯಾಗಿದೆ. ಅಲ್ಲದೆ ದಕ್ಷಿಣ ಕನ್ನಡ 183, […]

ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನಕ್ಕೆ ಚಾಲನೆ

Wednesday, January 2nd, 2019
Kshaya roga

ಮಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜನವರಿ 2 ರಿಂದ 12 ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನವನ್ನು ಬುಧವಾರ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಉದ್ಘಾಟಿಸಿದರು. ನಗರದ ಕೋಡಿಕಲ್ ಕುದ್ಮುಲ್ ರಂಗರಾವ್ ಕೊರಗ ಸಮುದಾಯ ಭವನ ಸಚಿವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂರ್ಭದಲ್ಲಿ ಮಾತನಾಡಿದ ಸಚಿವ ಯು.ಟಿ.ಖಾದರ್, ನಮ್ಮ ಜೀವನ ಶೈಲಿ ಬದಲಾದಂತೆ ಆರೋಗ್ಯದಲ್ಲಿ ಬದಲಾವಣೆಗಳಾಗುತ್ತವೆ. ನಮ್ಮ ಸುತ್ತಮುತ್ತಲ […]

ಹದಿಹರೆಯದ ಮಕ್ಕಳನ್ನು ಪೋಷಕರು ಬಹಳ ಜಾಗರೂಕತೆಯಿಂದ ಪೋಷಿಸಬೇಕು : ರಾಮಕೃಷ್ಣ ರಾವ್

Wednesday, June 28th, 2017
drugs day

ಮಂಗಳೂರು  : ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಮಕ್ಕಳೇ ಮಾದಕ ವಸ್ತುಗಳಿಗೆ ಆಕರ್ಷಿತರಾಗುತ್ತಿರುವ ಪ್ರಕರಣಗಳು ಕಂಡು ಬರುತ್ತಿದ್ದು, ಈ ನಿಟ್ಟಿನಲ್ಲಿ ಪಾಲಕರು ತಮ್ಮ ಮಕ್ಕಳ ಬಾಹ್ಯ ಚಟುವಟಿಕೆಗಳ ಮೇಲೆ ನಿಗಾ ಇಡಬೇಕಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಕರೆ ನೀಡಿದ್ದಾರೆ. ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಮಾನಸಿಕ ವಿಭಾಗ) ನಗರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ […]

ಪ್ರಗತಿಗಾಗಿ ಜನಸಂಖ್ಯೆ ನಿಯಂತ್ರಿಸಿ : ಆಶಾ ತಿಮ್ಮಪ್ಪ

Friday, July 11th, 2014
population control

ಮಂಗಳೂರು : ನಮ್ಮ ಪ್ರಗತಿಯ ಯೋಜನೆಗಳನ್ನೆಲ್ಲಾ ಇತಿಮಿತಿಯಿಲ್ಲದ ಜನಸಂಖ್ಯಾ ಸ್ಪೋಟ ನುಂಗಿ ಹಾಕುತ್ತಿದೆ. ನಾವು ಪ್ರಗತಿ ಹೊಂದ ಬೇಕಾದರೆ ಮೊದಲು ನಾವು ಸಣ್ಣ ಪರಿವಾರದ ಆಯ್ಕೆ ಮಾಡಿಕೊಂಡು ನಮ್ಮ ಜನಸಂಖ್ಯೆ ನಿಯಂತ್ರಿಸುವುದೊಂದೇ ನಮಗಿರುವ ದಾರಿ ಎಂದು ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷ್ಯೆ ಆಶಾ ತಿಮ್ಮಪ್ಪ ಅವರು ಕರೆ ನೀಡಿದ್ದಾರೆ. ಅವರು ಇಂದು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯದ ಪುರುಷರ ವಸತಿಗೃಹ ಸಭಾ […]

ವಾಜಪೇಯಿ ಆರೋಗ್ಯ ಶ್ರೀ ಯೋಜನೆ ಅತ್ಯಂತ ಪ್ರಮುಖವಾದುದುಃ ಯು.ಟಿ.ಖಾದರ್

Friday, September 13th, 2013
Vajapeyee Arogya Sree

ಮಂಗಳೂರು : ವಾಜಪೇಯಿ ಆರೋಗ್ಯ ಶ್ರೀ ಯೋಜನೆ ಅತ್ಯಂತ ಪ್ರಮುಖವಾದ ಹಾಗೂ ಮಹತ್ವದ ಯೋಜನೆಗಳಲ್ಲಿ ಒಂದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಶುಕ್ರವಾರ ನಗರದ ಐ.ಎಂ.ಎ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಸಾರ್ವಜನಿಕ ಆರೋಗ್ಯ ಸೇವೆಗಾಗಿ ಹಲವಾರು ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ, ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ದುಬಾರಿ ವೆಚ್ಚದ ಮಾರಣಾಂತಿಕ ಕಾಯಿಲೆಗಳಾದ ಹೃದ್ರೋಗ, ಕ್ಯಾನ್ಸರ್, ನರರೋಗ ಮೂತ್ರಪಿಂಡದ ಕಾಯಿಲೆ ಮುಂತಾದ ಗಂಭೀರ ಸ್ವರೂಪದ ಆಘಾತಕಾರಿ ಕಾಯಿಲೆಗಳಿಂದ […]

ಶಾಲೆಗಳಲ್ಲಿ ಮಕ್ಕಳಿಗೆ ಡಬ್ಲ್ಯು.ಐ.ಎಫ್.ಎಸ್ ಮಾತ್ರೆಗಳನ್ನು ನೀಡುವ ಕಾರ್‍ಯಕ್ರಮಕ್ಕೆ ಚಾಲನೆ

Wednesday, July 17th, 2013
Folic and Iron tablet

ಮಂಗಳೂರು : ನಗರದ ಅತ್ತಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ, ಕಬ್ಬಿಣಾಂಶಯುಕ್ತ ಮಾತ್ರೆಗಳ(ಡಬ್ಲ್ಯು.ಐ.ಎಫ್.ಎಸ್.) ವಿತರಣಾ ಕಾರ್‍ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ಎನ್.ಪ್ರಕಾಶ್ ಉದ್ಘಾಟಿಸಿದರು. ಕಬ್ಬಿಣಾಂಶಯುತ ಮಾತ್ರೆಗಳನ್ನು ಸೇವಿಸುವುದರಿಂದ ಮಕ್ಕಳಲ್ಲಿ ಕಂಡು ಬರುವ ರಕ್ತ ಹೀನತೆ, ಕಲಿಕಾ ಏಕಾಗ್ರತೆ ಕುಂಠಿತ, ದೈಹಿಕ ತೊಂದರೆಗಳು ದೂರವಾಗುತ್ತದೆ ಎಂದು ಜಿಲ್ಲಾಧಿಕಾರಿ ಶ್ರೀ ಎನ್.ಪ್ರಕಾಶ್ ಅಭಿಪ್ರಾಯ ಪಟ್ಟರು. ಕಬ್ಬಿಣಾಂಶಯುತ ಮಾತ್ರೆಗಳ(ಡಬ್ಲ್ಯು.ಐ.ಎಫ್.ಎಸ್.) […]

ಪ್ರತಿಯೊಬ್ಬರಲ್ಲಿ ಜನಸಂಖ್ಯಾ ಸ್ಪೋಟದ ಬಗ್ಗೆ ಜಾಗೃತಿ ಇರಬೇಕು : ಬಿ.ರಮಾನಾಥ ರೈ

Thursday, July 11th, 2013
world population day

ಮಂಗಳೂರು: ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಮಂಗಳೂರಿನ ಜಿಲ್ಲಾ ವೆನ್ ಲಾಕ್ ಮಕ್ಕಳ ಆಸ್ಪತ್ರೆಯ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಂಯುಕ್ತ ಆಶ್ರಯದಲ್ಲಿ  ಆಚರಿಸಲಾಯಿತು. ಕಾರ್ಯಕ್ರಮದ  ಉದ್ಘಾಟನೆಯನ್ನು ಅರಣ್ಯ ಹಾಗೂ ಪರಿಸರ ಇಲಾಖೆ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಪ್ರತಿಯೊಬ್ಬರಲ್ಲಿ ಜನಸಂಖ್ಯಾ ಸ್ಪೋಟದ ಬಗ್ಗೆ ಜಾಗೃತಿ ಇರಬೇಕು, ಸರ್ಕಾರ ಜನಸಂಖ್ಯಾ ನಿಯಂತ್ರಣಕ್ಕೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯು […]

ಕಾನೂನು ಸಚಿವ ಎಂ.ವೀರಪ್ಪ ಮೊಲಿಯವರಿಂದ ನೂತನ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ

Friday, April 29th, 2011
ಕಾನೂನು ಸಚಿವ ಎಂ.ವೀರಪ್ಪ ಮೊಲಿಯವರಿಂದ ನೂತನ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ

ಮಂಗಳೂರು : ಮಂಜನಾಡಿ ಗ್ರಾಮದ ನಾಟೆಕಲ್ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಮಂಜನಾಡಿ, ರಕ್ಷಾ ಸಮಿತಿ ಪ್ರಾಥಮಿಕ ಆರೋಗ್ಯ ಕೇಂದ್ರ ನಾಟೆಕಲ್ ಇಲ್ಲಿ ಸುಮಾರು 1ಕೋಟಿ. ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡಕ್ಕೆ ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಲಿ ಶಂಕುಸ್ಥಾಪನೆಗೈದರು. ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ಸಮುದ್ರ ಸೇರುವ ನದಿ ನೀರಿಗೆ ಅಲ್ಲಲ್ಲಿ ಅಣೆಕಟ್ಟು ನಿರ್ಮಿಸಿ, ಸಂಗ್ರಹವಾದ ನೀರಿಂದ ಕುಡಿಯುವ ನೀರಿನ ಸಮಸ್ಯೆ ನೀಗಿಸಬಹುದು. ವ್ಯರ್ಥವಾಗಿ ಪೋಲಾಗುವ ನದಿ ನೀರನ್ನು […]