ಅಹಿಂಸೆ, ಶಾಂತಿ ಸಂದೇಶ ಸಾರಲು ರಾಜ್ಯಪಾಲರ ಕರೆ

Monday, March 14th, 2022
Governer Gehlot

ಮಂಗಳೂರು : ವಿಶ್ವಕ್ಕೆ ಶಾಂತಿ ಹಾಗೂ ಅಹಿಂಸೆಯ ಸಂದೇಶ ಸಾರಿದ ಭಾರತದ ಕೀರ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪಟ್ಟಣದ 18 ಜೈನ ದೇವಾಲಯಗಳಲ್ಲಿ ಪ್ರಮುಖವಾದ ಸಾವಿರ ಕಂಬಗಳ ಬಸದಿಯಾದ ತ್ರಿಭುವನ ತಿಲಕ ಚೂಡಾಮಣಿ ದೇವಾಲಯಕ್ಕೆ ಮಾ.14ರ ಸೋಮವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ನಮ್ಮ ದೇಶ ಮಾನವೀಯ ಮೌಲ್ಯಗಳು, ಶಾಂತಿ, ಅಹಿಂಸೆಯ ಮಹತ್ವ […]

ಕುದ್ರೋಳಿ : 17 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ‘ಗೌರಿ ಮಂಟಪ’ ಸಮರ್ಪಣೆ

Friday, October 23rd, 2015
Gowri Mantapa

ಮಂಗಳೂರು: ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಹಾಗೂ ಮಾಲತಿ ಪೂಜಾರಿ ದಂಪತಿ ಪುತ್ರ ಸಂತೋಷ್‌ ಪೂಜಾರಿ ದಂಪತಿ ಸುಮಾರು 17 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿ, ತನ್ನ ತಾಯಿ ಹೆಸರಿನಲ್ಲಿ ದೇವರಿಗೆ ಅರ್ಪಿಸಿದ ‘ಗೌರಿ ಮಂಟಪ’ವನ್ನು ಮಾಜಿ ಸಚಿವ ಜನಾರ್ದನ ಪೂಜಾರಿ ಹಾಗೂ ಅವರ ಪತ್ನಿ ಬುಧವಾರ ಉದ್ಘಾಟಿಸಿದರು. ಕುದ್ರೋಳಿ ದೇವಸ್ಥಾನ ನವೀಕರಣಗೊಂಡು ಹಾಗೂ ಮಂಗಳೂರು ದಸರಾ ಪ್ರಾರಂಭವಾಗಿ 25 ವರ್ಷ ಸಂದ ಹಿನ್ನೆಲೆಯಲ್ಲಿ ‘ಗೌರಿ ಮಂಟಪ’ ನಿರ್ಮಿಸಲಾಗಿದೆ ಎಂದು ಪೂಜಾರಿ ಹೇಳಿದರು. ಜಯ ಸಿ. […]

ಕುದ್ರೋಳಿ ದೇವಸ್ಥಾನದಲ್ಲಿದ್ದ ಮಹಿಳಾ ಅರ್ಚಕಿಯರು ನಾಪತ್ತೆ

Monday, October 28th, 2013
Mahila Archakiyaru

ಮಂಗಳೂರು : ಕುದ್ರೋಳಿ ದೇಗುಲದಲ್ಲಿ ಮಹಿಳಾ ಅರ್ಚಕಿಯರಾಗಿ ನೇಮಕಗೊಂಡಿದ್ದ ಇಬ್ಬರು ವಿಧವೆಯರು  ಕಳೆದ ಒಂದು ವಾರದಿಂದ ದೇವಸ್ಥಾನದ ಆವರಣದಲ್ಲಿ ಕಾಣಿಸುತ್ತಿಲ್ಲದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ವಿಧವೆಯರನ್ನು ಅರ್ಚಕಿಯರನ್ನಾಗಿ ನೇಮಕ ಮಾಡುವ ಮೂಲಕ ದೊಡ್ಡ ಕ್ರಾಂತಿ ಮಾಡಿದ್ದೇನೆ ಎಂದು ಹೇಳಿದ್ದ ಜನಾರ್ದನ ಪೂಜಾರಿ ಇದರಿಂದ ಸಾಕಷ್ಟು ಮುಖಭಂಗ ಅನುಭವಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬಗ್ಗೆ ಹಲವಾರು ಮಂದಿ ಪತ್ರಿಕೆಗೆ ಮಾಹಿತಿ ನೀಡಿದ್ದು, ದೇವಸ್ಥಾನದಲ್ಲಿ ಮಹಿಳಾ ಅರ್ಚಕಿಯರು ಕಾಣಿಸುತ್ತಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ದೇವಸ್ಥಾನದ ಆಡಳಿತ […]

ಕುದ್ರೋಳಿ ದಸರಾ ಮೆರವಣಿಗೆ ವಾಹನ ಸಂಚಾರದಲ್ಲಿ ಬದಲಾವಣೆ

Wednesday, October 24th, 2012
Kudroli Temple

ಮಂಗಳೂರು: ಅ.24 ರಂದು ಸಂಜೆ 4 ಗಂಟೆಗೆ ಕುದ್ರೋಳಿ ದಸರಾ ಶೋಭಾಯಾತ್ರೆಯು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ಹೊರಡಲಿದೆ. ಮಣ್ಣಗುಡ್ಡೆ, ಲೇಡಿಹಿಲ್, ಲಾಲ್ ಬಾಗ್, ಪಿವಿಎಸ್, ನವಭಾರತ್ ವೃತ್ತ, ಕೆ.ಎಸ್.ರಾವ್ ರಸ್ತೆ, ಕೆ.ಬಿ.ವೃತ್ತ, ಗಣಪತಿ ಹೈಸ್ಕೂಲ್ ರಸ್ತೆ, ಮೋಹಿನಿ ವಿಲಾಸ, ಓಂ ಮಹಲ್ ಜಂಕ್ಷನ್, ರಥಬೀದಿ, ಲೋವರ್ ಕಾರ್ ಸ್ಟ್ರೀಟ್, ನ್ಯೂಚಿತ್ರ, ಅಳಕೆಯ ಮೂಲಕ ಕುದ್ರೋಳಿ ದೇವಳಕ್ಕೆ ಬಂದು  ದೇವಳದ ಕೆರೆಯಲ್ಲಿ ವಿಗ್ರಹ ಜಲಸ್ತಂಭನಗೊಳ್ಳಲಿದೆ. ಈ ಸಂದರ್ಭದಲ್ಲಿ 30,000 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಿರುವುದರಿಂದ […]