ಉಡುಪಿ : ಕೃಷ್ಣಮಠದಲ್ಲಿ ಸರ್ವಜ್ಞ ಪೀಠವೇರಿದ ಅದಮಾರು ಮಠದ ಈಶಪ್ರಿಯ ತೀರ್ಥರು

Saturday, January 18th, 2020
esha-preeya

ಉಡುಪಿ : ಅದಮಾರು ಮಠದ ಈಶಪ್ರಿಯ ತೀರ್ಥರು ಶನಿವಾರ ಬೆಳಗಿನ ಜಾವ ಕೃಷ್ಣಮಠದಲ್ಲಿ ಪವಿತ್ರ ಸರ್ವಜ್ಞ ಪೀಠಾರೋಹಣ ಮಾಡಿದರು. ಈ ಮೂಲಕ ಅದಮಾರು ಮಠದ ಪರ್ಯಾಯ ಆರಂಭಗೊಂಡಿತು. ಇದಕ್ಕೂ ಮೊದಲು ಸಂಪ್ರದಾಯದಂತೆ ಕಾಪುವಿನ ದಂಡತೀರ್ಥಕ್ಕೆ ತೆರಳಿ ಮಧ್ಯರಾತ್ರಿ 1.15ಕ್ಕೆ ಸ್ನಾನ ಮಾಡಿ, 1.20ಕ್ಕೆ ದೇವರಿಗೆ ಪೂಜೆ ಸಲ್ಲಿಸಿದರು. ಬಳಿಕ ಉಡುಪಿಯ ಜೋಡುಕಟ್ಟೆಯ ಮಂಟಪಕ್ಕೆ ಆಗಮಿಸಿದ ಶ್ರೀಗಳು ಪಟ್ಟದ ದೇವರಿಗೆ ಪೂಜೆ ಸಲ್ಲಿಸಿದರು. ಇದಾದ ಬಳಿಕ ನಸುಕಿನ 2.15ಕ್ಕೆ ಪರ್ಯಾಯ ಮಹೋತ್ಸವದ ವೈಭವದ ಮೆರವಣಿಗೆಗೆ ಚಾಲನೆ ದೊರೆಯಿತು. ಕರಾವಳಿಯ […]

ಶೀರೂರು ಸ್ವಾಮೀಜಿ ಶಿಷ್ಯ ಸ್ವೀಕಾರ..ಅಷ್ಟಮಠಾಧೀಶರ ಕೆಲವೊಂದು ನಿರ್ಣಯ!

Wednesday, July 4th, 2018
swamiji

ಉಡುಪಿ: ಶೀರೂರು ಮಠಾಧೀಶರ ಬಗ್ಗೆ ಕೆಲ ತಿಂಗಳ ಹಿಂದೆ ಆರಂಭವಾಗಿದ್ದ ಚರ್ಚೆ ಈಗ ಮತ್ತೆ ಜೀವ ಪಡೆದುಕೊಂಡಿದೆ. ಶೀರೂರು ಸ್ವಾಮೀಜಿ ಶಿಷ್ಯ ಸ್ವೀಕಾರ ಮಾಡಬೇಕೆಂಬ ವಿಚಾರದಲ್ಲಿ ಇತರ ಅಷ್ಟಮಠಾಧೀಶರು ಕೆಲವೊಂದು ನಿರ್ಣಯ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಭಾನುವಾರ ಸೇರಿದ್ದ ಐವರು ಮಠಾಧೀಶರು ಈ ಬಗ್ಗೆ ಚರ್ಚೆ ನಡೆಸಿದ್ದು ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ ಎಂದು ಪರ್ಯಾಯ ಪಲಿಮಾರು ಮಠಾಧೀಶರು ತಿಳಿಸಿದ್ದಾರೆ. ಅಷ್ಟಮಠಾಧೀಶರು ಪಾಲಿಸಬೇಕಾದ ನಿಯಮಗಳನ್ನು ಶೀರೂರು ಸ್ವಾಮೀಜಿ ಪಾಲಿಸುತ್ತಿಲ್ಲ ಎಂಬ ಬಗ್ಗೆ ಕೆಲ ತಿಂಗಳ ಹಿಂದೆ ಚರ್ಚೆ […]

ಉಡುಪಿಯ ಕೃಷ್ಣಮಠದಲ್ಲಿ ಪ್ರಧಾನಿಗೆ ಭದ್ರತೆ ಇಲ್ಲ ಎಂದರೆ ಶ್ರೀಕೃಷ್ಣನನ್ನೇ ಅವಮಾನಿಸಿದಂತೆ: ಮಧ್ವರಾಜ್

Thursday, May 3rd, 2018
pramod-madhwaraj

ಉಡುಪಿ: ಉಡುಪಿಯ ಕೃಷ್ಣಮಠದಲ್ಲಿ ಪ್ರಧಾನಿಗೆ ಭದ್ರತೆ ಇಲ್ಲ ಎಂದರೆ ಶ್ರೀಕೃಷ್ಣನನ್ನೇ ಅವಮಾನಿಸಿದಂತೆ. ಇದು ಉಡುಪಿ ಜಿಲ್ಲೆಯ ಜನತೆಗೂ ಮಾಡಿದ ಅವಮಾನ ಎಂದು ರಾಜ್ಯ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಅವರು ಸಂಸದೆ ಶೋಭಾಗೆ ಟಾಂಗ್ ನೀಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಪ್ರಮೋದ್ ಮಧ್ವರಾಜ್, ಭದ್ರತಾ ಕೊರತೆ ಹಿನ್ನೆಲೆ‌ಯಲ್ಲಿ ಪ್ರಧಾನಿ ಮೋದಿಯವರ ಕೃಷ್ಣಮಠ ಭೇಟಿ ರದ್ದಾಗಿದೆ ಎಂದು ಹೇಳಿಕೆ ನೀಡಿದ್ದ ಶೋಭಾ ಕರಂದ್ಲಾಜೆ ಅವರಿಗೆ ಟಾಂಗ್ ನೀಡಿದರು. ಕಾನೂನು‌‌ ಸುವ್ಯವಸ್ಥೆಯಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ನಂಬರ್ ವನ್ ಆಗಿದೆ. ಇದರ […]

ಕೃಷ್ಣಮಠದ ಆವರಣದಲ್ಲಿ ಮುಸ್ಲಿಮರಿಗೆ ನಮಾಝ್ ಸಲ್ಲಿಸಲು ಅವಕಾಶ ನೀಡಿದ್ದು ಸರಿಯಲ್ಲ : ಮುತಾಲಿಕ್

Monday, June 26th, 2017
Muthalik

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಜೂ. 24ರಂದು ಆಯೋಜಿಸಲಾಗಿದ್ದ ಇಫ್ತಾರ್ ಕೂಟವನ್ನು ವಿರೋಧಿಸಿ ಶ್ರೀರಾಮಸೇನೆ ಜು.2ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ಶ್ರೀರಾಮಸೇನೆಯ ಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ರೊಂದಿಗೆ ಸೋಮವಾರ ಬೆಳಗ್ಗೆ ಉಡುಪಿಗೆ ಧಾವಿಸಿ ಬಂದು ಚರ್ಚೆ ನಡೆಸಿ ವಿಫಲರಾಗಿದ್ದ ಮುತಾಲಿಕ್, ಅನಂತರ ಸೇನೆಯ ಮುಖಂಡರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ ಇದರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ ಎಂದು ಸಂಜೆ ಸುದ್ದಿಗಾರರಿಗೆ ತಿಳಿಸಿದರು. ಸ್ವಾಮೀಜಿ ಸಮಾಜಕ್ಕೆ ಶ್ರೀಮಠದಲ್ಲಿ ಇಫ್ತಾರ್ […]