ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊವೀಡ್ -19 ಸೋಂಕು ದೃಢ

Tuesday, July 21st, 2020
Sugunendra Thirtha swamy

ಉಡುಪಿ :  ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ  ಕೊವೀಡ್ -19 ಸೋಂಕು ತಗುಲಿರುವುದು ದೃಢವಾಗಿದೆ. ಸೋಮವಾರ ರಾತ್ರಿ  ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸೋಮವಾರ ರಾತ್ರಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಮಂಗಳವಾರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿದೆ. ಸ್ವಾಮೀಜಿಗಳು ಇಂದಿನಿಂದ ಪಾಡಿಗಾರು ಮಠದಲ್ಲಿ ಚಾರ್ತುಮಾಸ […]

ಪೇಜಾವರ ಶ್ರೀಗಳ ಆರೋಗ್ಯ ಚೇತರಿಕೆಗಾಗಿ ಇನ್ನಷ್ಟು ಕಾಲಾವಕಾಶ ಬೇಕು : ಕೆಎಂಸಿ ವೈದ್ಯರು

Tuesday, December 24th, 2019
KMC

ಉಡುಪಿ : ಉಸಿರಾಟದ ಸಮಸ್ಯೆಯಿಂದ ಶುಕ್ರವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಉಡುಪಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿರುವ ಕೆಎಂಸಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್, ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಆರೋಗ್ಯ ಸಾಕಷ್ಟು ಸುಧಾರಿಸಿದೆ. ಪ್ರತಿ ಹಂತದಲ್ಲಿ ಈ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ. ಬೆಂಗಳೂರಿನಿಂದ ತಜ್ಞ ವೈದ್ಯರು ಬಂದಿದ್ದಾರೆ. ಏಮ್ಸ್ ವೈದ್ಯರ ಜೊತೆಗೂ ನಿರಂತರ […]

ಡೆಂಗ್ಯೂ ಪೀಡಿತರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ.

Thursday, June 13th, 2013
ಡೆಂಗ್ಯೂ ಪೀಡಿತರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ.

ಮಂಗಳೂರು : ಕೆಎಂಸಿ ಅತ್ತಾವರ ಆಸ್ಪತ್ರೆಯಲ್ಲಿ ಡೆಂಗ್ಯೂ ಪೀಡಿತರನ್ನು ಇಂದು ಜಿಲ್ಲಾಧಿಕಾರಿ ಶ್ರೀ ಎನ್. ಪ್ರಕಾಶ್ ಅವರು ಭೇಟಿ ಮಾಡಿ, ಸಾಂತ್ವಾನ ಹೇಳಿದರು. ಜ್ವರ ಪೀಡಿತರ ಬಗ್ಗೆ ವಿಶೇಷ ಮುತುವರ್ಜಿವಹಿಸಿ ಶುಶ್ರೂಸೆ ನೀಡಿ ಎಂದು ಜಿಲ್ಲಾಧಿಕಾರಿಗಳು ವೈದ್ಯರಿಗೆ ಸೂಚನೆ ನೀಡಿದರು. ನಗರದ ಅತ್ತಾವರದಲ್ಲಿ ಒಟ್ಟು ಏಳು ಜನರು  ಡೆಂಗ್ಯೂ ಪೀಡಿತರಾಗಿದ್ದಾರೆ ಎಂಬ ಮಾಹಿತಿಯ ಹಿನ್ನಲೆಯಲ್ಲಿ ಅವರನ್ನು ವೀಕ್ಷಿಸಲು ತೆರಳಿದ ಜಿಲ್ಲಾಧಿಕಾರಿ ರೋಗ ಪೀಡಿತರಿಗೆ ನೀಡಿರುವ  ಚಿಕಿತ್ಸೆಯ ಬಗ್ಗೆ ಪರಿಶೀಲನೆ ನಡೆಸಿದರು.  ಇಬ್ಬರನ್ನು ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದ್ದು, ಪುತ್ತೂರಿನ […]