ಅಕ್ಟೋಬರ್‌ 17ರಂದು ಬೆಳಗ್ಗೆ 7.03ಕ್ಕೆ ಕನ್ಯಾ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವ, ಭಕ್ತಾದಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

Tuesday, October 13th, 2020
Kaveri Thirtha

ಮಡಿಕೇರಿ : ಅಕ್ಟೋಬರ್ 17ರಂದು ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಜರುಗಲಿರುವ ಕಾವೇರಿ ಪವಿತ್ರ ತೀರ್ಥೋದ್ಭವ ವೀಕ್ಷಿಸಲು ಹೊರಜಿಲ್ಲೆ ಮತ್ತು ಹೊರರಾಜ್ಯದಿಂದ ಬರುವ ಭಕ್ತಾದಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಾಗಿದ್ದು, ನೆಗೆಟಿವ್ ವರದಿಯಿದ್ದರೆ ಮಾತ್ರ ಕ್ಷೇತ್ರದೊಳಕ್ಕೆ ಪ್ರವೇಶಕ್ಕೆ ಅನುಮತಿ ನೀಡಲು ತೀರ್ಮಾನಿಸಲಾಗಿದೆ. ಅಕ್ಟೋಬರ್‌ 17ರಂದು ಬೆಳಗ್ಗೆ 7.03ಕ್ಕೆ ಕನ್ಯಾ ಲಗ್ನ ಮೂಹೂರ್ತದಲ್ಲಿ ಕಾವೇರಿ ತೀರ್ಥೋದ್ಭವ ಜರುಗಲಿದೆ. ತಲಕಾವೇರಿ ತೀರ್ಥೋದ್ಭವ ಜಾತ್ರಾ ಮಹೋತ್ಸವವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ಮಾತ್ರವೇ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. ಮಡಿಕೇರಿ ನಗರದ […]

ಮರಾಟಿ ಸಂತ್ರಸ್ತರಿಗೆ ಚೆಕ್ ಹಸ್ತಾಂತರ : ನಿರಾಶ್ರಿತರಿಗೆ ಶೀಘ್ರ ಪುನರ್ ವಸತಿ; ಶಾಸಕ ಕೆ.ಜಿ.ಬೋಪಯ್ಯ ಭರವಸೆ

Monday, November 18th, 2019
Madikeri

ಮಡಿಕೇರಿ : ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ಮರಾಠ/ಮರಾಟಿ ಸಮಾಜ ಬಾಂಧವರಿಗೆ ಕೊಡಗು ಜಿಲ್ಲಾ ಮರಾಠ/ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ನೀಡಲಾದ ಪರಿಹಾರದ ಚೆಕ್‌ನ್ನು ಶಾಸಕ ಕೆ.ಜಿ.ಬೋಪಯ್ಯ ಹಸ್ತಾಂತರಿಸಿದರು. ಮಡಿಕೇರಿಯ ತಾಳತ್ತ್‌ಮನೆಯಲ್ಲಿರುವ ಸಂಘದ ಕಚೇರಿಯಲ್ಲಿ ಸಂತ್ರಸ್ತರಿಗೆ ಪರಿಹಾರದ ಚೆಕ್ ನೀಡಿ ಮಾತನಾಡಿದ ಅವರು 2018-19ರಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಜಿಲ್ಲೆಯ ಜನತೆ ಮನೆ, ಆಸ್ತಿ, ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ ಸರ್ಕಾರದಿಂದ ಕನಿಷ್ಟ ಸೌಲಭ್ಯವನ್ನು ತಕ್ಷಣ ನೀಡಲಾಗಿದೆ. ಮದೆನಾಡಿನಲ್ಲಿ 80 ಮನೆಗಳು ನಿರ್ಮಾಣವಾಗುತ್ತಿದೆ. ಪ್ರತಿಯೊಬ್ಬರು […]

ರಸ್ತೆ ವಿಸ್ತರಣೆಗೆ ವಿರೋಧ ಬೇಡ : ಶಾಸಕ ಕೆ.ಜಿ.ಬೋಪಯ್ಯ ಮನವಿ; ವಿರಾಜಪೇಟೆಯಲ್ಲಿ ರಸ್ತೆ ಅಭಿವೃದ್ಧಿಗೆ ಚಾಲನೆ

Thursday, November 14th, 2019
virajpete

ಮಡಿಕೇರಿ : ರಸ್ತೆ ವಿಸ್ತರಣೆಯಂತಹ ಅಭಿವೃದ್ಧಿ ಕಾರ್ಯಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕೆ ಹೊರತು ಅಡ್ಡಿ ಪಡಿಸಬಾರದೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಮನವಿ ಮಾಡಿದ್ದಾರೆ. ವಿರಾಜಪೇಟೆ ಸುಂಕದಕಟ್ಟೆ ತಿರುವಿನಲ್ಲಿ ಪಟ್ಟಣ ಪಂಚಾಯ್ತಿ ವತಿಯಿಂದ ಕೈಗೆತ್ತಿಕೊಂಡಿರುವ ರಸ್ತೆ ವಿಸ್ತರಣಾ ಕಾರ್ಯಕ್ಕೆ ಚಾಲನೆ ನೀಡಿ ಶಾಸಕರು ಮಾತನಾಡಿದರು. ದಿನದಿಂದ ದಿನಕ್ಕೆ ಪಟ್ಟಣ ಬೆಳೆಯುತ್ತಲೇ ಇದ್ದು, ವಾಹನದಟ್ಟಣೆಯೂ ಹೆಚ್ಚಾಗುತ್ತಿದೆ. ಕಳೆದ ಹಲವು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದೆ ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ. ರಸ್ತೆ ವಿಸ್ತರಣೆ ಅನಿವಾರ್ಯವಾಗಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು. […]

ಜೆಡಿಎಸ್ ಶಾಸಕ ಎಂ.ಸಿ.ಅಶ್ವತ್ಥ ರಾಜೀನಾಮೆ

Friday, October 15th, 2010
ಎಂ.ಸಿ.ಅಶ್ವತ್ಥ

ಬೆಂಗಳೂರು : ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಅಶ್ವತ್ಥ ಅವರು ಸ್ಪೀಕರ್ ಕೆ.ಜಿ.ಬೋಪಯ್ಯ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಚನ್ನಪಟ್ಟಣ ಶಾಸಕ ಎಂ.ಸಿ.ಅಶ್ವತ್ಥ ಗುರುವಾರ ಈ ನಿರ್ಧಾರ ಕೈಗೊಂಡಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ತಮಿಳುನಾಡು ಪ್ರವಾಸದಲ್ಲಿದ್ದೆ. ಹಾಗಾಗಿ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಪಕ್ಷದ ನಾಯಕರಿಂದ ತನಗೆ ಯಾವುದೇ ತೊಂದರೆ ಇಲ್ಲ. ಇದೀಗ ನನ್ನ ವೈಯಕ್ತಿಕ ಕಾರಣದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ. ಅ.11ರಂದು ನಡೆದ ವಿಶ್ವಾಸಮತ ಯಾಚನೆಗಾಗಲಿ, ಅ.14ರಂದು ನಡೆದು […]