ಕೊರೊನಾ ಹೆಚ್ಚಳ – ಗಡಿಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಬಂದ್

Tuesday, August 3rd, 2021
wine Shop

ಮಂಗಳೂರು : ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಕಟ್ಟುನಿಟ್ಟಿನ ನಿಬರ್ಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಅದರ ಕಣ್ಗಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ನಿರ್ದೇಶಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ […]

ಕೇರಳ ರಾಜ್ಯದಲ್ಲಿ ಮೇ 8 ರಿಂದ 9 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್

Saturday, May 8th, 2021
Kerala Bundh

ಕಾಸರಗೋಡು : ಕೇರಳ ರಾಜ್ಯ ದಲ್ಲಿ ಕೊರೋನ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಲ್ಲಿ ಶನಿವಾರದಿಂದ  9 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿಗೆ ತರಲಾಗಿದ್ದು, ಸೂಕ್ತ ದಾಖಲೆ ಅಥವಾ ಪ್ರಮಾಣ ಪತ್ರ ಇಲ್ಲದೆ ಸಂಚರಿಸಿದ್ದಲ್ಲಿ ವಾಹನ ಜಪ್ತಿ ಅಥವಾ ದಂಡ ವಸೂಲಿ ಮಾಡಲಾಗುತ್ತಿದೆ. ರಸ್ತೆಗಳಲ್ಲಿ ಬೆರಳೆಣಿಕೆಯ ವಾಹನಗಳು ಕಂಡು ಬರುತ್ತಿದ್ದು, ಅನಗತ್ಯವಾಗಿ ರಸ್ತೆಗಿಳಿದವರನ್ನು ಹಿಂದಕ್ಕೆ ಕಳುಹಿಸಲಾಗುತ್ತಿದೆ. ಪೊಲೀಸ್ ಪಾಸ್ ಹೊಂದಿದವರಿಗೆ ಮಾತ್ರ ಇನ್ನು ಮುಂದೆ ಸಂಚಾರಕ್ಕೆ ಅನುಮತಿ ನೀಡಲಾಗುವುದು. ತುರ್ತು ಸಂದರ್ಭದಲ್ಲಿ ಸಂಚರಿಸಲು ಪ್ರಮಾಣ ಪತ್ರ ಹೊಂದಿರಬೇಕು ಎಂದು […]

ಬಿಜೆಪಿ ಕಾರ್ಯಾಲಯಕ್ಕೆ ಬಾಂಬ್ ಎಸೆತ ಮಂಜೇಶ್ವರದಲ್ಲಿ ಕಾರ್ಯಕರ್ತರ ಪ್ರತಿಭಟನೆ

Friday, September 9th, 2016
manjeshwara-panchayath

ಮಂಜೇಶ್ವರ: ತಿರುವನಂತಪುರದಲ್ಲಿ ಬಿಜೆಪಿಯ ಕಾರ್ಯಾಲಯಕ್ಕೆ ಬಾಂಬೆಸೆದು ಹಾನಿಗೊಳಿಸಿದ ಘಟನೆಯನ್ನು ಪ್ರತಿಭಟಿಸಿ ಮಂಜೇಶ್ವರದಲ್ಲಿ ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಬಿಜೆಪಿಯ ರಾಜ್ಯ ಘಟಕ ಕಾರ್ಯಾಲಯಕ್ಕೆ ಬಾಂಬ್ ಎಸೆದು ಧ್ವಂಸಗೊಳಿಸಿ ಕೇರಳ ರಾಜ್ಯದಲ್ಲಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಿಣರಾಯಿ ವಿಜಯನ್ ನೇತೃತ್ವದ ಸರಕಾರದ ವಿರುದ್ಧ ಮಂಜೇಶ್ವರ ಹೊಸಂಗಡಿಯಲ್ಲಿ ಬಿಜೆಪಿ ಮಂಜೇಶ್ವರ ಪಂಚಾಯತ್ ಸಮಿತಿ ಪ್ರತಿಭಟನಾ ಮೆರವಣಿಗೆ ಹಾಗೂ ಖಂಡನಾ ಸಭೆ ಬುಧವಾರ ನಡೆಸಿತು. ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಹರಿಶ್ಚಂದ್ರ ಮಂಜೇಶ್ವರ ಉದ್ಘಾಟಿಸಿ ಬಾಂಬ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಿದರೆ ದೇಶದಾದ್ಯಂತ ಸಿಪಿಎಂ […]

ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

Monday, December 7th, 2015
Kota Poojary

ಮಂಗಳೂರು : ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಕ್ಷೇತ್ರದಿಂದ ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ಹಾಲಿ ಸದಸ್ಯ, ಮಾಜಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಇಂದು ಚುನಾವಣಾ ಅಧಿಕಾರಿಗಳಾದ ದ.ಕ.ಜಿಲ್ಲಾಧಿಕಾರಿಯವರಿಗೆ ತನ್ನ ನಾಮಪತ್ರವನ್ನು ಸಲ್ಲಿಸಿದರು. ಪಕ್ಷದ ಕೋಡಿಯಾಲಬೈಲ್ ಕಛೇರಿಯಲ್ಲಿ, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಸಭೆ ಮತ್ತು ವಿಧಾನಪರಿಷತ್ತಿನ ವಿರೋಧಪಕ್ಷದ ಮುಖ್ಯ ಸಚೇತಕರುಗಳಾದ ಶ್ರೀ ಸುನೀಲ್ ಕುಮಾರ್, ಕ್ಯಾ|ಗಣೇಶ್ ಕಾರ್ಣಿಕ್, ಶಾಸಕ ಎಸ್.ಅಂಗಾರ, ಜಿಲ್ಲಾಧ್ಯಕ್ಷರುಗಳಾದ ಕೆ.ಪ್ರತಾಪಸಿಂಹ ನಾಯಕ್, ತಿಂಗಳೆ […]