ಪಿಎಂ ಜನಮನ್ ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಸೂಚನೆ

Friday, January 5th, 2024
DC- Mullai Muhilan

ಮಂಗಳೂರು : ದುರ್ಬಲ ಬುಡಕಟ್ಟು ಸಮುದಾಯದವರ ಸಾಮಾಜಿಕ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಅಭಿಯಾನ (ಪಿಎಂ ಜನಮನ್) ಯೋಜನೆಯಡಿ ಅಭಿವೃದ್ಧಿ ಮಿಷನ್ ಪ್ರಾರಂಭಿಸಲಾಗಿದ್ದು, ಇದರ ಯಶಸ್ವಿಗೆ ಎಲ್ಲ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಕುಮಾರ್ ತಿಳಿಸಿದ್ದಾರೆ. ಅವರು ಈ ಸಂಬಂಧ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್ಲ ಇಲಾಖೆಗಳು ಪರಿಶಿಷ್ಟ ಪಂಗಡದ ಕೊರಗ ಸಮುದಾಯಕ್ಕೆ ಸಂಬಂಧಿಸಿದ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಹುಡುಕಿ ಯೋಜನೆಯ […]

ಕೊರಗ ಸಮುದಾಯದ ಮೆಹಂದಿಯಲ್ಲಿ ಡಿ.ಜೆ ವಿವಾದ, ಮಂಜುನಾಥ್ ಭಂಡಾರಿ ಭೇಟಿ

Friday, December 31st, 2021
Manjunath Bhandary

ಉಡುಪಿ : ಕುಂದಾಪುರ ತಾಲೂಕಿನ ಕೋಟ ಎನ್ನುವ ಗ್ರಾಮದಲ್ಲಿ ಕೊರಗ(ಪರಿಶಿಷ್ಟ ಪಂಗಡ) ಸಮುದಾಯಕ್ಕೆ ಸೇರಿದ ರಾಜೇಶ್ ಎನ್ನುವ ಯುವಕನ ಮದುವೆ (ಮೆಹಂದಿ) ಸಂಭ್ರಮದಲ್ಲಿ ಡಿ.ಜೆ ಹಾಕಿದ್ದರು ಎನ್ನುವ ಕಾರಣಕ್ಕೆ ನಡೆದ ಕೃತ್ಯ ಖಂಡನೀಯ . ಈ ಘಟನೆಯಿಂದ ನೊಂದ ಕೊರಗ ಪರಿವಾರದ ಮನೆಗೆ ವಿಧಾನ ಪರಿಷತ್ತಿ ಗೆ ನೂತನ ಸದಸ್ಯರಾಗಿ ಆಯ್ಕೆಯಾದ  ಮಂಜುನಾಥ್ ಭಂಡಾರಿಯವರು ಭೇಟಿ ನೀಡಿ ಸಾಂತ್ವಾನದ ಮಾತುಗಳನ್ನಾಡಿ ಘಟನೆಯಿಂದ ನೊಂದ ಪರಿವಾರಕ್ಕೆ ನ್ಯಾಯ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದರು. ನಂತರ ಉಡುಪಿ ಜಿಲ್ಲಾ ಪೋಲಿಸ್ […]

ಕೊರಗರು ತಮ್ಮ ಕೀಳರಿಮೆ ಬಿಟ್ಟು ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕು : ಸಚಿವ ಎಸ್.ಅಂಗಾರ

Sunday, September 12th, 2021
Angara

ಪುತ್ತೂರು  : ಸರಕಾರದ ಸೌಲ್ಯಭ್ಯಗಳಿಂದ ಇಂದಿಗೂ ವಂಚಿತರಾಗಿರುವ ಕೊರಗ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದ್ದು, ಈ ಕುರಿತು ಆಯಾಯ ತಾಲೂಕುಗಳಲ್ಲೇ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಬಂದರು, ಮೀನುಗಾರಿಕೆ, ಒಳನಾಡು ಮತ್ತು ಜಲಸಾರಿಗೆ ಸಚಿವ ಎಸ್.ಅಂಗಾರ ಮಾಹಿತಿ ನೀಡಿದರು. ಪುತ್ತೂರಿನಲ್ಲಿ ನಡೆದ ಕೊರಗ ಸಮುದಾಯದ ಮುಖಂಡರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸಚಿವರು ಈ ಮಾಹಿತಿ ನೀಡಿದರು. ಕೊರಗ ಸಮುದಾಯಗಳು ಜಮೀನು ಹಕ್ಕು ಪತ್ರ, […]