ಪತಿಗೆ ಕೊರೋನ ಪಾಸಿಟಿವ್, ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಪತ್ನಿ

Saturday, June 5th, 2021
Udupi-Sucide

ಉಡುಪಿ : ಪತಿಯ ಅನಾರೋಗ್ಯದ ಕಾರಣ ಮನನೊಂದ ಪತ್ನಿ ವಸತಿ ಸಂಕೀರ್ಣದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಗಂಗಮ್ಮ (70) ಚಿತ್ರದುರ್ಗ ಮೂಲದವರು ಎಂದು ಗುರುತಿಸಲಾಗಿದೆ. ಮಗನ ಮನೆಯಲ್ಲಿ ಕೆಲವು ತಿಂಗಳುಗಳಿಂದ ವಾಸವಾಗಿದ್ದರು. ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಬಾಧಿತರಾಗಿ ಗುಣಮುಖರಾಗಿದ್ದರು. ಇವರ ಪತಿಯು ಕೊರೋನ ಪಾಸಿಟಿವ್ ಇರುವುದರಿಂದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಪತಿಯ ಅನಾರೋಗ್ಯದ ಕಾರಣ ಮನನೊಂದ ಗಂಗಮ್ಮ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು […]

ದ.ಕ.ಜಿಲ್ಲೆಯಲ್ಲಿ ಮಂಗಳವಾರ 486 ಕೊರೋನ ಪಾಸಿಟಿವ್ ಪ್ರಕರಣಗಳು, ಮೂವರು ಬಲಿ

Wednesday, April 28th, 2021
Corona

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಮಂಗಳವಾರ 486 ಕೊರೋನ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಇದರೊಂದಿಗೆ 42,065 ಪಾಸಿಟಿವ್ ಪ್ರಕರಣಗಳು ಕಂಡು ಬಂದಂತಾಗಿದೆ. ಮಂಗಳವಾರ 225 ಮಂದಿ ಚಿಕಿತ್ಸೆ ಪಡೆದು ಮನೆಗೆ ಮರಳುವುದರೊಂದಿಗೆ ಈವರೆಗೆ 37,024 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ. ಮಂಗಳವಾರ  ಕೊರೋನಕ್ಕೆ ಮೂವರು ಬಲಿಯಾಗಿದ್ದಾರೆ. ಇದರಲ್ಲಿ ಮಂಗಳೂರಿನ ಇಬ್ಬರು ಮತ್ತು ಸುಳ್ಯ ತಾಲೂಕಿನ ಒಬ್ಬರು ಸೇರಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 751ಕ್ಕೇರಿದೆ. ಕೇರಳದ ಮಲಪ್ಪುರಂ ನಿವಾಸಿ ಗರ್ಭಿಣಿ ವೈದ್ಯೆರೊಬ್ಬರು ಚಿಕಿತ್ಸೆಗಾಗಿ ಮಂಗಳೂರಿನ […]

ದ.ಕ.ಜಿಲ್ಲೆಯಲ್ಲಿ ಶುಕ್ರವಾರ 256 ಮಂದಿಗೆ ಕೊರೋನ ಪಾಸಿಟಿವ್

Friday, April 16th, 2021
Corona

ಮಂಗಳೂರು :  ದ.ಕ.ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗಿದ್ದು ಶುಕ್ರವಾರ 256 ಮಂದಿಗೆ ಕೊರೋನ ಪಾಸಿಟಿವ್ ಆಗಿದೆ. ಕಳೆದ 48 ಗಂಟೆಗಳ ಅವಧಿಯಲ್ಲಿ ಪರೀಕ್ಷೆ ಮಾಡಿದವರ ಪೈಕಿ 256 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈ ಏರಿಕೆಯು ಆತಂಕಕ್ಕೂ ಕಾರಣವಾಗಿದೆ. ಶುಕ್ರವಾರ ಜಿಲ್ಲೆಯಲ್ಲಿ 92 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 37,562 ಮಂದಿ ಕೊರೋನ ಸೋಂಕಿಗೊಳಗಾಗಿದ್ದು, ಈ ಪೈಕಿ 35,405 ಮಂದಿ ಗುಣಮುಖರಾಗಿದ್ದಾರೆ. ಸದ್ಯ 1,414 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರದ ಕಾನ್ವೆಂಟ್‌ವೊಂದರಲ್ಲಿ […]

ಶಾಸಕ ಎಸ್. ಅಂಗಾರ ಅವರಿಗೆ ಕೊರೋನ ಪಾಸಿಟಿವ್ ದೃಢ

Friday, August 28th, 2020
S Angara

ಸುಳ್ಯ : ಬೆಂಗಳೂರಿನಿಂದ ಆಗಮಿಸಿದ  ಶಾಸಕ ಎಸ್. ಅಂಗಾರ ಅವರಿಗೆ ಕೊರೋನ ಪಾಸಿಟಿವ್ ದೃಢವಾಗಿದ್ದು, ಹೊಮ್ ಕ್ವಾರಂಟೈನ್ ಗೆ ಒಳಗಾಗಿರುವುದಾಗಿ ಅವರು ತಿಳಿಸಿದ್ದಾರೆ. ಶಾಸಕರಿಗೆ ತಲೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಕೊವಿಡ್ ಪರೀಕ್ಷೆ ಮಾಡಿಕೊಂಡಿದ್ದು, ರಿಪೋರ್ಟ್ ನಲ್ಲಿ ಕೊರೋನ ಪಾಸಿಟಿವ್ ದೃಢವಾಗಿದ್ದು, ಕ್ವಾರಂಟೈನ್ ನಲ್ಲಿ ಇರುವುದಾಗಿ ತಿಳಿಸಿದ್ದಾರೆ.

ಕೊರೋನ ಪಾಸಿಟಿವ್ ಜುಲೈ 29 : ದಕ್ಷಿಣ ಕನ್ನಡ 208 , ಉಡುಪಿ 173

Wednesday, July 29th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 29 ರಂದು ಬುಧವಾರ 208 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಮತ್ತೆ ಏಳು ಮಂದಿ ಸೋಂಕಿತರು ಸಾವಿಗೀಡಾಗುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 142ಕ್ಕೆ ಏರಿದೆ. ಹೊಸದಾಗಿ ಪತ್ತೆಯಾದ 208 ಪಾಸಿಟಿವ್ ಪ್ರಕರಣಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 65 ಮಂದಿಗೆ ಕೊರೋನ ತಗುಲಿದ್ದರೆ, ತೀವ್ರ ಉಸಿರಾಟ ಸಮಸ್ಯೆ ಮತ್ತು ಶೀತ ಲಕ್ಷಣದ 85 ಪ್ರಕರಣಗಳಿವೆ. ಬರೋಬ್ಬರಿ 58 ಪ್ರಕರಣಗಳಲ್ಲಿ ಸೋಂಕು ಎಲ್ಲಿಂದ ಹರಡಿದೆ ಎನ್ನುವ ಮಾಹಿತಿಯೇ ಇಲ್ಲ. ಈ ಎಲ್ಲರನ್ನು […]

ಕೊರೋನ ಪಾಸಿಟಿವ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ186 , ಉಡುಪಿ ಜಿಲ್ಲೆಯಲ್ಲಿ 90

Saturday, July 11th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಮತ್ತೆ ಮೂವರು ಕೊರೋನ ಸೋಂಕಿಗೆ ಬಲಿಯಾಗಿದ್ದು, ಒಂದೇ ದಿನ ಬರೋಬ್ಬರಿ 186 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕೀತರ ಸಂಖ್ಯೆ 2034ಕ್ಕೆ ಏರಿಕೆಯಾಗಿದೆ. ಇದರಲ್ಲಿ 10 ಪ್ರಕರಣಗಳು ಹೊರ ಜಿಲ್ಲೆಯವು. ಸೋಂಕಿತರ ಸಂಪರ್ಕದಲ್ಲಿದ್ದ 37, ಐಎಲ್‌ಐ 64, ಎಸ್‌ಎಆರ್‌ಐ 17, ಕತರ್ ಮತ್ತು ದುಬೈನಿಂದ ಬಂದಿದ್ದ 10 ಮಂದಿ, 56 ಮಂದಿಗೆ ಸೋಂಕು ಯಾರಿಂದ ತಗುಲಿದೆ ಎನ್ನುವುದೇ ತಿಳಿದಿಲ್ಲ. ಇಬ್ಬರು ಬೆಂಗಳೂರಿನಿಂದ […]

ಕೊರೋನ ಪಾಸಿಟಿವ್ ಪ್ರಕರಣಗಳು : ದಕ್ಷಿಣ ಕನ್ನಡ ಜಿಲ್ಲೆ-139 , ಉಡುಪಿ ಜಿಲ್ಲೆ-34, ಕಾಸರಗೋಡು ಜಿಲ್ಲೆ-17

Friday, July 10th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿತ ಪಾಸಿಟಿವ್ ಪ್ರಕರಣಗಳು ಒಂದೇದಿನ ಬರೋಬ್ಬರಿ 139 ದೃಢಪಟ್ಟಿವೆ. ಈ  ಪ್ರಕರಣಗಳಲ್ಲಿ ಸೋಂಕಿನ ಮೂಲವೇ ಪತ್ತೆಯಾಗಿಲ್ಲ.  ಆಸ್ಪತ್ರೆಗೆ ದಾಖಲಾಗಿದ್ದ 51 ಮಂದಿ ಸೋಂಕು ಮುಕ್ತರಾಗಿ ಮನೆಗೆ ಮರಳಿದ್ದಾರೆ. 15 ಪ್ರಕರಣಗಳಲ್ಲಿ ಸೋಂಕು ಮೂಲ ಇನ್ನೂ ಪ್ರಗತಿಯಲ್ಲಿದ್ದರೆ, ಉಳಿದವು ಹೆಚ್ಚಿನರು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುವವರಾಗಿದ್ದಾರೆ. ಮಂಗಳೂರು ನಗರದ ಸುತ್ತಮುತ್ತಲಿನಲ್ಲಿ ಪ್ರದೇಶದಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಕೊರೋನ ಸೋಂಕು ಪ್ರಕರಣಗಳು ಕಂಡುಬಂದಿವೆ. ಇದರಿಂದ ಸಹಜವಾಗಿಯೇ ಸಾರ್ವಜನಿಕರಲ್ಲಿ ಭೀತಿ ಮೂಡಿದೆ. ನಗರದ ಕಂಕನಾಡಿ, ಕುದ್ರೋಳಿ, […]

ದ.ಕ. ಜಿಲ್ಲೆಯಲ್ಲಿ ಒಂದೇ ದಿನ 183 ಕೊರೋನ ಪಾಸಿಟಿವ್ ಪ್ರಕರಣಗಳು, ಉಡುಪಿಯಲ್ಲಿ 31

Wednesday, July 8th, 2020
DK Udupi Corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಒಂದೇ ದಿನ 183 ಕೊರೋನ ಪಾಸಿಟಿವ್ ಪ್ರಕರಣಗಳು ದೃಢ ಪಟ್ಟಿವೆ. ಸೋಂಕಿತರ ಮೂಲ ಪತ್ತೆಯಾಗದವರ ಸಂಖ್ಯೆ ಯೇ ಗಣನೀಯವಾಗಿ ಏರಿಕೆಯಾಗುತ್ತಿರುವುದು ಜನರನ್ನು ಆತಂಕ ಗೊಳಿಸಿದೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅತಿಹೆಚ್ಚು ಕೇಸ್‌ಗಳು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 1542ಕ್ಕೆ ಏರಿಕೆಯಾಗಿದೆ. ಇದರಲ್ಲಿ 10 ಮಂದಿ ಹೊರಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಜೊತೆಗೆ ಕೊರೋನಕ್ಕೆ ಬಲಿಯಾಗುವವರ ಸಂಖ್ಯೆಯೂ ಏರುಗತಿಯಲ್ಲಿದೆ. ಮೂಲ ಪತ್ತೆಯಾಗದಿರುವ ಪ್ರಕರಣಗಳು ಹೆಚ್ಚುತ್ತಿರುವುದು ಇನ್ನಷ್ಟು […]

ಹರೇಕಳ ಗ್ರಾಮ ಹತ್ತು ದಿನ ಸಂಪೂರ್ಣ ಲಾಕ್ ಡೌನ್

Friday, July 3rd, 2020
Harekala

ಕೊಣಾಜೆ: ಮಂಗಳೂರು ತಾಲೂಕಿನ ಹರೇಕಳ ಗ್ರಾಮದಲ್ಲಿ ಈಗಾಗಲೇ 5 ಕೊರೋನ ಪಾಸಿಟಿವ್ ಪ್ರಕರಣ ದಾಖಲಾಗಿರುವಂತೆ ಆತಂಕಗೊಂಡಿರುವ ಗ್ರಾಮಸ್ಥರು, ಇನ್ನು ಮುಂದಕ್ಕೆ ಸಾಮುದಾಯಿಕವಾಗಿ ರೋಗ ಹರಡದಂತೆ ತಡಯಲು ಶುಕ್ರವಾರ ಸಭೆ ಸೇರಿ ಇಡೀ ಗ್ರಾಮವನ್ನು ಹತ್ತು ದಿನಗಳ ತನಕ ಸಂಪೂರ್ಣ ಲಾಕ್ ಡೌನ್ ಮಾಡಲು ತೀರ್ಮಾನಿಸಿದ್ದಾರೆ. ಹರೇಕಳ ಪಂಚಾಯತ್ ಅಧ್ಯಕ್ಷರಾದ ಅನಿತಾ ಡಿಸೋಜ ಉಪಾಧ್ಯಕ್ಷರಾದ ಮಹಾಬಲ ಹೆಗ್ಡೆ ಡೆಬ್ಬೇಲಿ, ಬಿಜೆಪಿಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಮೋಹನ್ ದಾಸ್ ಶೆಟ್ಟಿ ಉಳಿದೊಟ್ಟು ಮತ್ತು ಪಂಚಾಯತ್ ನ ಇತರ ಸದಸ್ಯರು, ಊರಿನ […]

ದ.ಕ. ಜಿಲ್ಲೆಯಲ್ಲಿ ರವಿವಾರ 97 ಮಂದಿಗೆ ಕೊರೋನ ಪಾಸಿಟಿವ್ ದೃಢ

Sunday, June 28th, 2020
corona virus

ಮಂಗಳೂರು : ದ.ಕ. ಜಿಲ್ಲೆಯಲ್ಲಿ ರವಿವಾರ 97 ಮಂದಿಗೆ ಕೊರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯಲ್ಲಿ ಈ ದಿನ ಅತಿಹೆಚ್ಚು ಕೇಸ್‌ಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ. ರವಿವಾರ ಒಂದೇ ದಿನ ಮೂವರು ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆಯಲ್ಲೂ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡುಬರುತ್ತಿದೆ. ಮೂಲ ಪತ್ತೆಯಾಗದೇ ಪಾಸಿಟಿವ್ ಕಾಣಿಸಿಕೊಳ್ಳುತ್ತಿರುವುದು ಕೊರೋನವು ಸಮುದಾಯಕ್ಕೆ ಹಬ್ಬುತ್ತಿರುವ ಲಕ್ಷಣವೇ ಎನ್ನುವ ಆತಂಕ ಮನೆ ಮಾಡಿದೆ. ಕೊರೋನವು ಸರಣಿ ರೂಪದಲ್ಲಿ ವ್ಯಾಪಕಗೊಳ್ಳುತ್ತಿರುವುದು ಸಾರ್ವಜನಿಕ ಕಳವಳಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ರವಿವಾರ […]