ನೇಜಾರು ಕೊಲೆ ಪ್ರಕರಣ: ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Friday, November 17th, 2023
Hebbalkar-Udupi

ಉಡುಪಿ : ಉಡುಪಿ ಜಿಲ್ಲೆಯ ನೇಜಾರು ಸಂತ್ರಸ್ತ ಕುಟುಂಬದ ಮನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಭೇಟಿ ನೀಡಿದರು. ಕಳೆದ ಭಾನುವಾರ ತಾಯಿ, ಮಗಳು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಅಮಾನುಷವಾಗಿ ಕೊಲೆ ಮಾಡಲಾಗಿತ್ತು. ಮೃತ ಹಸೀನಾ ಪತಿ ನೂರ್ ಮೊಹಮದ್ ಹಾಗೂ ಅವರ ಮಗ ಆಸಾದ್ ಹಾಗೂ ಕುಟುಂಬದ ಇತರ ಸದಸ್ಯರನ್ನು ಭೇಟಿಯಾದ ಸಚಿವರು ಅವರಿಗೆ ಸಾಂತ್ವನ ಹೇಳಿದರು. ಕುಟುಂಬ ಸದಸ್ಯರಿಗೆ ನ್ಯಾಯಕುಟುಂಬದ ನಾಲ್ಕ […]

ಕೆವಿಜಿ ಮೆಡಿಕಲ್ ಕಾಲೇಜಿನ ಪ್ರೊ.ಎ.ಎಸ್.ರಾಮಕೃಷ್ಣ ಕೊಲೆ ಐದು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Thursday, October 5th, 2023
Ramakrishna-R

ಮಂಗಳೂರು : ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಪ್ರೊ.ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದ ಆರೋಪಿಗಳಾದ ಡಾ. ರೇಣುಕಾ ಪ್ರಸಾದ್ ಸಹಿತ ಐದು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ರಾಜ್ಯ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ಪುತ್ತೂರಿನ ಐದನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಡಾ. ರೇಣುಕಾ ಪ್ರಸಾದ್ ಸಹಿತ ಏಳು ಮಂದಿ ಆರೋಪಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಏಳು ವರ್ಷದ ಹಿಂದೆ ತೀರ್ಪು ನೀಡಿತ್ತು. ಅದರ ವಿರುದ್ಧ ಸರಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಶ್ರೀನಿವಾಸ್ […]

ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌ ಪ್ರಾಂಶುಪಾಲ ಪ್ರೊ. ಎ.ಎಸ್‌ ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ, 6 ಮಂದಿ ದೋಷಿ ಎಂದು ಕೋರ್ಟ್ ತೀರ್ಪು

Thursday, September 28th, 2023
Ramakrishna-R

ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌ ಪ್ರಾಂಶುಪಾಲರಾಗಿದ್ದ ಪ್ರೊ. ಎ.ಎಸ್‌ ರಾಮಕೃಷ್ಣ ಅವರ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಪ್ರೊ. ಎ. ಎಸ್. ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪು ರದ್ದುಗೊಳಿಸಿರುವ ಹೈಕೋರ್ಟ್ ಅವರನ್ನು ದೋಷಿಗಳೆಂದು ತೀರ್ಪು ನೀಡಿದೆ. ಪ್ರಕರಣದಲ್ಲಿ ರೇಣುಕಾ ಪ್ರಸಾದ್‌ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಈ […]

ಬಿಜೆಪಿ ಕಾರ್ಯಕರ್ತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Tuesday, February 15th, 2022
jyotish

ಕಾಸರಗೋಡು : ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಾಸರಗೋಡಿನಲ್ಲಿ ಪತ್ತೆಯಾಗಿದೆ. ಅಣ೦ಗೂರು ಜೆ.ಪಿ.ಕಾಲನಿ ನಿವಾಸಿ ಜ್ಯೋತಿಷ್ (35) ಮೃತ ಯುವಕ. ಮನೆ ಸಮೀಪದ ಮರ ವೊಂದರ ರೆಂಬೆಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಮೃತದೇಹ  ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದ ಜ್ಯೋತಿಷ್ ಇಂದು ಬೆಳಗ್ಗೆ ಮನೆಯವರು ಗಮನಿಸಿದಾಗ ನಾಪತ್ತೆ ಯಾಗಿದ್ದು, ಹುಡುಕಾಡಿದಾಗ ಮೃತದೇಹ ಪತ್ತೆಯಾಗಿದೆ. ಬಿಜೆಪಿ ಕಾರ್ಯಕರ್ತನಾಗಿದ್ದ ಜ್ಯೋತಿಷ್ ಬಂಗ್ರಗುಡ್ಡೆ ಯ ಸಿನಾನ್, ಸೂರ್ಲು ವಿನ ರಿಷಾದ್ ಹಾಗೂ ಕೊಲೆ ಪ್ರಕರಣದ […]

ಕಲಬುರಗಿ : ಶಿವಲಿಂಗ ಭಾವಿಕಟ್ಟಿ ಕೊಲೆ ಪ್ರಕರಣ; ಐವರು ಆರೋಪಿಗಳ ಬಂಧನ

Wednesday, November 13th, 2019
Kalaburagi

ಕಲಬುರಗಿ : ಶಿವಲಿಂಗ ಭಾವಿಕಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರಿಗೆ ಕಾರಿನ ಮೂಲಕ ಡಿಕ್ಕಿ ಹೊಡೆಸಿ ಸಿನಿಮಿಯ ರೀತಿಯಲ್ಲಿ ನವೆಂಬರ್ 4 ರಂದು ಹಡಗಿಲ್ ಬಳಿ ಶಿವಲಿಂಗ ಭಾವಿಕಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈಯಲಾಗಿತ್ತು. ಹಳೆ ವೈಷಮ್ಯದ ಹಿನ್ನೆಲೆ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಇನ್ನು ತಲೆಮರೆಸಿಕೊಂಡಿರುವ ಮತ್ತಷ್ಟು ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರವಿ ಹೊಸಮನಿ, ರಾಜಕುಮಾರ ಮಯೂರ, ರೋಹಿತ್ ಹೊಸಮನಿ, ಲೋಹಿತ್ […]

ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದ ಆರೋಪಿ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

Tuesday, August 30th, 2016
PFI-activists

ಮಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದ ಆರೋಪಿ ಬಿಡುಗಡೆಗೆ ಆಗ್ರಹಿಸಿ ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪಿಎಫ್ಐ ಕಾರ್ಯಕರ್ತರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಜಿಲ್ಲೆಯ ವಾಮಂಜೂರಿನಲ್ಲಿ ಕೊಲೆಗೀಡಾದ ಚರಣ್ ಪೂಜಾರಿ ಕೊಲೆ ವಿಚಾರಣೆಯ ಸಲುವಾಗಿ ಸೈಫುಲ್ಲಾ ಎಂಬಾತನನ್ನು ಬಂಧಿಸಲಾಗಿತ್ತು. ಆರೋಪಿಯು ಪಿಎಫ್ಐ ಸಂಘಟನೆ ನಾಯಕನಾಗಿದ್ದು, ಆತನ ಬಿಡುಗಡೆಗಾಗಿ ಭಾನುವಾರ ಪಿಎಫ್ಐ ಸಂಘಟನೆಯವರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲೆತ್ನಿಸಿದರು. ಪ್ರತಿಭಟನೆ ವೇಳೆ ಹೆಲ್ಮೆಟ್ ರಹಿತವಾಗಿ ಮತ್ತು ಒನ್‌ವೇನಲ್ಲಿ ಸಂಚರಿಸುತ್ತಿದ್ದ […]

ನರೇಶ್ ಶೆಣೈ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಧಿಶರು

Wednesday, August 10th, 2016
Naresh Shenoy

ಮಂಗಳೂರು: ನಗರದಲ್ಲಿ ಸಾಕಷ್ಟು ಸಂಚಲನ ಮೂಡಿಸಿದ್ದ ಆರ್‌‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನರೇಶ್ ಶೆಣೈ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಮಂಗಳವಾರ ನರೇಶ್ ಶೆಣೈ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧಿಶರು ತಿರಸ್ಕರಿಸಿದ್ದಾರೆ. ಕೊಲೆ ನಡೆದ ಕೆಲ ತಿಂಗಳುಗಳಾದ ಬಳಿಕ ಪೊಲೀಸರಿಗೆ ಶರಣಾದ ನರೇಶ್, ತಲೆಮರೆಸಿಕೊಂಡಿದ್ದ ವೇಳೆ ಜಿಲ್ಲಾ ಮತ್ತು ಹೈಕೋರ್ಟ್‍ನಲ್ಲಿ ಜಾಮೀನು ಪಡೆಯಲು ಪ್ರಯತ್ನಿಸಿದ್ದರೂ ದೊರೆತಿರಲಿಲ್ಲ. ಬಂಧಿತ 7 ಮಂದಿ ಪೈಕಿ […]